Ezra · chapter 10 · verse 11
Ezra 10:11 in Kannada
ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
Aadadarinda neevu nimma pitrugala devaraagiruva kartana munde arikemaadi, aatana chittada prakaara maadi, ee deshada janarindaloo anyastreeya rindaloo nimmannu pratyekisikolliri andanu.
Ezra 10:11 in English
- King James Version (KJV)
- Now therefore make confession unto the LORD God of your fathers, and do his pleasure: and separate yourselves from the people of the land, and from the strange wives.
- World English Bible (WEB)
- Now therefore make confession to the LORD, the God of your fathers and do his pleasure. Separate yourselves from the peoples of the land and from the foreign women.”
- American Standard Version (ASV)
- Now therefore make confession unto Jehovah, the God of your fathers, and do his pleasure; and separate yourselves from the peoples of the land, and from the foreign women.
- Bible in Basic English (BBE)
- So now, give praise to the Lord, the God of your fathers, and do his pleasure; and make yourselves separate from the peoples of the land and from the strange women.
- Darby Translation (DBY)
- And now make confession to Jehovah the God of your fathers, and do his pleasure, and separate yourselves from the peoples of the land, and from the foreign wives.
- Webster's Bible (WBS)
- Now therefore make confession to the LORD God of your fathers, and do his pleasure: and separate yourselves from the people of the land, and from the foreign wives.
- Young's Literal Translation (YLT)
- and, now, make confession to Jehovah, God of your fathers, and do His good pleasure, and be separated from the peoples of the land, and from the strange women.'
Read in context
- 9ಆಗ ಯೆಹೂದ ಮತ್ತು ಬೆನ್ಯಾವಿಾನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿ ದರು. ಅದು ಒಂಭತ್ತನೇ ತಿಂಗಳ ಇಪ್ಪತ್ತನೇ ದಿವಸ ವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೊಸ್ಕರವೂ ಮಳೆಗೋಸ್ಕರವೂ ನಡುಗಿ ಕೂತುಕೊಂಡಿದ್ದರು.
- 10ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
- 11ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
- 12ಆಗ ಸಭೆಯೆಲ್ಲಾ ಪ್ರತ್ಯುತ್ತರವಾಗಿ ದೊಡ್ಡ ಶಬ್ದ ದಿಂದ--ನೀನು ಹೇಳಿದ ಪ್ರಕಾರವೇ ನಾವು ಮಾಡ ಬೇಕು,
- 13ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
Cross references
- Romans 12:2 ರೋಮಾಪುರದವರಿಗೆ 12:2ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Joshua 7:19 ಯೆಹೋಶುವ 7:19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.
- Isaiah 1:16–18 ಯೆಶಾಯ 1:16–18ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ; ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Deuteronomy 7:3–4 ಧರ್ಮೋಪದೇಶಕಾಂಡ 7:3–4ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು. ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Leviticus 26:40–42 ಯಾಜಕಕಾಂಡ 26:40–42ಆಗ ಅವರು ನನಗೆ ಮಾಡಿದ ತಮ್ಮ ಅಕ್ರಮವನ್ನೂ ತಮ್ಮ ಪಿತೃಗಳಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದು ಕೊಂಡದ್ದರಿಂದ ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Ezra 10:3 ಎಜ್ರನು 10:3ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Jeremiah 3:13 ಯೆರೆಮೀಯ 3:13ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- Nehemiah 13:3 ನೆಹೆಮೀಯ 13:3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- Colossians 1:10 ಕೊಲೊಸ್ಸೆಯವರಿಗೆ 1:10ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ