Ezra · chapter 10 · verse 4
Ezra 10:4 in Kannada
ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
Neenu elu; yaakandare ee kaarya ninage sambandhiside. Naavu ninna sangada iruvevu; dhairyadindiru, adannu maadu andaru.
Ezra 10:4 in English
- King James Version (KJV)
- Arise; for [this] matter [belongeth] unto thee: we also [will be] with thee: be of good courage, and do [it].
- World English Bible (WEB)
- Arise, for the matter belongs to you and we are with you. Be courageous, and do it.”
- American Standard Version (ASV)
- Arise; for the matter belongeth unto thee, and we are with thee: be of good courage, and do it.
- Bible in Basic English (BBE)
- Up, now! for this is your business, and we are with you; take heart and do it.
- Darby Translation (DBY)
- Arise, for this matter is incumbent on thee, and we will be with thee: be of good courage, and do [it].
- Webster's Bible (WBS)
- Arise; for [this] matter [belongeth] to thee: we also [will be] with thee: be of good courage, and do [it] .
- Young's Literal Translation (YLT)
- rise, for on thee [is] the matter, and we [are] with thee; be strong, and do.'
Read in context
- 2ಆಗ ಎಲಾಮನ ಕುಮಾರರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕೆನ್ಯನು ಎಜ್ರನಿಗೆ ಪ್ರತ್ತ್ಯುತ್ತರವಾಗಿ--ನಾವು ದೇಶದ ಜನಗಳಲ್ಲಿ ಅನ್ಯ ಸ್ತ್ರೀಯರನ್ನು ತೆಗೆದು ಕೊಂಡದ್ದರಿಂದ ನಮ್ಮ ದೇವರಿಗೆ ವಿರೋಧವಾಗಿ ಅಕೃತ್ಯಮಾಡಿದ್ದೇವೆ. ಆದಾಗ್ಯೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲ್ಯರಲ್ಲಿ ನಿರೀಕ್ಷೆ ಉಂಟು.
- 3ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
- 4ನೀನು ಏಳು; ಯಾಕಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ಇರುವೆವು; ಧೈರ್ಯದಿಂದಿರು, ಅದನ್ನು ಮಾಡು ಅಂದರು.
- 5ಆಗ ಎಜ್ರನು ಎದ್ದು, ಪ್ರಧಾನಯಾಜಕರೂ ಲೇವಿಯರೂ ಸಮಸ್ತ ಇಸ್ರಾ ಯೇಲ್ಯರೂ ಈ ಮಾತಿನ ಪ್ರಕಾರವಾಗಿ ಮಾಡಲು ಅವರು ಆಣೆ ಇಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.
- 6ಎಜ್ರನು ದೇವರ ಆಲಯದ ಮುಂದಿ ನಿಂದ ಎದ್ದು ಎಲ್ಯಾಷೀಬಿನ ಮಗನಾದ ಯೆಹೋಹಾ ನಾನನ ಕೊಠಡಿಯಲ್ಲಿ ಪ್ರವೇಶಿಸಿ ಅಲ್ಲಿಗೆ ಬಂದಾಗ ರೊಟ್ಟಿಯನ್ನು ತಿನ್ನದೆ ನೀರನ್ನು ಕುಡಿಯದೆ ಇದ್ದನು; ಯಾಕಂದರೆ ಸೆರೆಯಾಗಿ ಒಯ್ಯಲ್ಪಟ್ಟವರ ಅಕೃತ್ಯಕ್ಕೋಸ್ಕರ ದುಃಖಿಸಿದನು.
Cross references
- 1 Chronicles 28:10 1 ಪೂರ್ವಕಾಲವೃತ್ತಾಂತ 28:10ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
- 1 Chronicles 22:19 1 ಪೂರ್ವಕಾಲವೃತ್ತಾಂತ 22:19ನಿಮ್ಮ ದೇವರಾದ ಕರ್ತನನ್ನು ಹುಡು ಕಲು ನಿಮ್ಮ ಹೃದಯವನ್ನೂ ಪ್ರಾಣವನ್ನೂ ಒಪ್ಪಿಸಿ ಕರ್ತನ ಒಡಂಬಡಿಕೆಯ ಮಂಜೂಷದ ದೇವರ ಪರಿ ಶುದ್ಧ ಪಾತ್ರೆಗಳನ್ನು ಕರ್ತನ ನಾಮಕ್ಕೆ ಕಟ್ಟಿಸಲ್ಪಡುವ ಮನೆಯೊಳಗೆ ತರುವ ಹಾಗೆ ಎದ್ದು ಕರ್ತನಾದ ದೇವ ರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ ಅಂದನು.
- Hebrews 10:24 ಇಬ್ರಿಯರಿಗೆ 10:24ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.
- Hebrews 12:12–13 ಇಬ್ರಿಯರಿಗೆ 12:12–13ಹೀಗಿರುವದ ರಿಂದ ಜೋಲು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ನೆಟ್ಟಗೆ ಮಾಡಿರಿ. ನಿಮ್ಮ ಪಾದ ಗಳಿಗೆ ನೀಟಾದ ದಾರಿಗಳನ್ನು ಮಾಡಿರಿ; ಹೀಗೆ ಮಾಡಿದರೆ ಕುಂಟಕಾಲು ಉಳುಕಿ ಹೋಗದೆ ವಾಸಿಯಾಗುವದು.
- Isaiah 35:3–4 ಯೆಶಾಯ 35:3–4ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ ನಿತ್ರಾಣವಾದ ಮೊಣಕಾಲುಗಳನ್ನು ದೃಢಪಡಿಸಿರಿ. ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.
- 1 Chronicles 22:16 1 ಪೂರ್ವಕಾಲವೃತ್ತಾಂತ 22:16ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ ಲೆಕ್ಕವಿಲ್ಲದಷ್ಟು ಇದೆ. ಎದ್ದು ಕೆಲಸಮಾಡು; ಕರ್ತನು ನಿನ್ನ ಸಂಗಡ ಇರಲಿ.
- Ezra 7:23–28 ಎಜ್ರನು 7:23–28ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ. ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು. ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು. ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು. ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Mark 13:34 ಮಾರ್ಕನು 13:34ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
- 1 Chronicles 28:21 1 ಪೂರ್ವಕಾಲವೃತ್ತಾಂತ 28:21ಇಗೋ, ಕರ್ತನ ಮನೆಯ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲ ಸಕ್ಕೂ ಎಲ್ಲಾ ಸೇವೆಗೂ ಪೂರ್ಣ ಮನಸ್ಸುಳ್ಳಂಥ ಜ್ಞಾನವುಳ್ಳಂಥ ಪ್ರತಿ ಮನುಷ್ಯನು ನಿನ್ನ ಸಂಗಡ ಇರುವನು. ಇದಲ್ಲದೆ ಪ್ರಧಾನರೂ ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ಕಿವಿಗೊಡುತ್ತಾರೆ.
- Joshua 7:10–26 ಯೆಹೋಶುವ 7:10–26ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ. ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು. ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು. ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು. ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು. ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Joshua 1:16–18 ಯೆಹೋಶುವ 1:16–18ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು. ನಾವು ಎಲ್ಲಾದರಲ್ಲಿ ಮೋಶೆಯ ಮಾತು ಕೇಳಿದ ಹಾಗೆ ನಿನ್ನ ಮಾತನ್ನೂ ಕೇಳುವೆವು. ಆದರೆ ನಿನ್ನ ದೇವರಾದ ಕರ್ತನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು. ನೀನು ಆಜ್ಞಾಪಿಸುವ ಎಲ್ಲಾದರಲ್ಲಿ ನಿನ್ನ ಮಾತುಗಳನ್ನು ಕೇಳದೆ ನಿನ್ನ ಬಾಯಿಮಾತಿಗೆ ಎದುರು ಬೀಳುವವನು ಸಾಯಲೇಬೇಕು; ಆದರೆ ನೀನು ಮಾತ್ರ ಬಲವಾಗಿರು, ಒಳ್ಳೆ ಧೈರ್ಯದಿಂದಿರು ಅಂದರು.