Ezra · chapter 2 · verse 1
Ezra 2:1 in Kannada
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
Baabelina arasanaada nebookadnechcharanu baabelige sereyaagi hidukondu hodantha yeroosalemigoo yehoodadalliruva tamma tamma pattanagaligoo sereyinda tirugidantha
Ezra 2:1 in English
- King James Version (KJV)
- Now these [are] the children of the province that went up out of the captivity, of those which had been carried away, whom Nebuchadnezzar the king of Babylon had carried away unto Babylon, and came again unto Jerusalem and Judah, every one unto his city;
- World English Bible (WEB)
- Now these are the children of the province who went up out of the captivity of those who had been carried away, whom Nebuchadnezzar the king of Babylon had carried away to Babylon, and who returned to Jerusalem and Judah, everyone to his city;
- American Standard Version (ASV)
- Now these are the children of the province, that went up out of the captivity of those that had been carried away, whom Nebuchadnezzar the king of Babylon had carried away unto Babylon, and that returned unto Jerusalem and Judah, every one unto his city;
- Bible in Basic English (BBE)
- Now these are the people of the divisions of the kingdom, among those who had been made prisoners by Nebuchadnezzar, king of Babylon, and taken away to Babylon, who went back to Jerusalem and Judah, everyone to his town;
- Darby Translation (DBY)
- And these are the children of the province, that went up out of the captivity of those that had been carried away, whom Nebuchadnezzar the king of Babylon had carried away to Babylon, and who came again to Jerusalem and to Judah, every one to his city,
- Webster's Bible (WBS)
- Now these [are] the children of the province that went up from the captivity, of those who had been carried away, whom Nebuchadnezzar the king of Babylon had carried away to Babylon, and came again to Jerusalem and Judah, every one to his city;
- Young's Literal Translation (YLT)
- And these [are] sons of the province who are going up — of the captives of the removal that Nebuchadnezzar king of Babylon removed to Babylon, and they turn back to Jerusalem and Judah, each to his city —
Read in context
- 1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
- 2ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
- 3ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು.
Cross references
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- 2 Kings 24:14–16 2 ಅರಸುಗಳು 24:14–16ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.
- Nehemiah 7:6–73 ನೆಹೆಮೀಯ 7:6–73ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ ತಮ್ಮ ತಮ್ಮ ಪಟ್ಟಣಕ್ಕೂ ಜೆರುಬ್ಬಾಬೆಲಿನ ಸಂಗಡ ಬಂದ ದೇಶದ ಮಕ್ಕಳು ಯಾರಂದರೆ ಯೇಷೂವನು, ನೆಹೆವಿಾಯನು, ಅಜ ರ್ಯನು, ರಗಮ್ಯನು, ನಹಮಾನೀಯನು, ಮೊರ್ದೆಕೈ ಯನು, ಬಿಲ್ಷಾನನು, ಮಿಸ್ಪೆರೆತನು, ಬಿಗ್ವೈಯು, ನೆಹೂಮನು, ಬಾಣನು, ಇಸ್ರಾಯೇಲ್ ಜನರ ಲೆಕ್ಕವು: ಪರೋಷನ ಮಕ್ಕಳು ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. ಶೆಫಟ್ಯನ ಮಕ್ಕಳು ಮುನ್ನೂರ ಎಪ್ಪತ್ತೆರಡು ಮಂದಿಯು. ಆರಹನ ಮಕ್ಕಳು ಆರು ನೂರ ಐವತ್ತೆರಡು ಮಂದಿಯು. ಯೇಷೂವನು ಯೋವಾಬನು ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ಮಕ್ಕಳು ಎರಡು ಸಾವಿರ ಎಂಟುನೂರ ಹದಿನೆಂಟು ಮಂದಿಯು. ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕುಮಂದಿಯು. ಜತ್ತೂವಿನ ಮಕ್ಕಳು ಎಂಟು ನೂರನಾಲ್ಪತ್ತೈದು ಮಂದಿಯು. ಜಕ್ಕೈಯ ಮಕ್ಕಳು ಏಳು ನೂರ ಅರವತ್ತು ಮಂದಿಯು. ಬಿನ್ನೂಯ ಮಕ್ಕಳು ಆರು ನೂರ ನಾಲ್ವತ್ತೆಂಟು ಮಂದಿಯು. ಬೇಬೈಯ ಮಕ್ಕಳು ಆರು ನೂರ ಇಪ್ಪತ್ತೆಂಟು ಮಂದಿಯು. ಅಜ್ಗಾದನ ಮಕ್ಕಳು ಎರಡು ಸಾವಿರದ ಮುನ್ನೂರ ಇಪ್ಪತ್ತೆರಡು ಮಂದಿಯು. ಅದೋನೀಕಾಮನ ಮಕ್ಕಳು ಆರು ನೂರ ಅರವತ್ತೇಳು ಮಂದಿಯು. ಬಿಗ್ವೈಯ ಮಕ್ಕಳು ಎರಡು ಸಾವಿರದ ಅರವತ್ತೇಳು ಮಂದಿಯು. ಆದೀ ನನ ಮಕ್ಕಳು ಆರುನೂರ ಐವತ್ತೈದು ಮಂದಿಯು. ಹಿಜ್ಕೀಯನ ಮಗನಾದ ಅಟೇರನ ಮಕ್ಕಳು ತೊಂಭತ್ತೆಂಟು ಮಂದಿಯು. ಹಾಷುಮನ ಮಕ್ಕಳು ಮುನ್ನೂರ ಇಪ್ಪತ್ತೆಂಟು ಮಂದಿಯು. ಬೇಚೈಯ ಮಕ್ಕಳು ಮುನ್ನೂರ ಇಪ್ಪತ್ತನಾಲ್ಕು ಮಂದಿಯು. ಹಾರಿಫನ ಮಕ್ಕಳು ನೂರ ಹನ್ನೆರಡು ಮಂದಿಯು. ಗಿಬ್ಯೋನನ ಮಕ್ಕಳು ತೊಂಭತ್ತೈದು ಮಂದಿಯು. ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು. ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು. ಬೇತಜ್ಮಾವೆ ತಿನವರು ನಾಲ್ವತ್ತೆರಡು ಮಂದಿಯು. ಕಿರ್ಯಾ ತ್ಯಾರೀಮ್ ಕೆಫೀರವು ಬೇರೋತು ಎಂಬ ಪಟ್ಟಣಗಳ ಮನುಷ್ಯರು ಏಳು ನೂರ ನಾಲ್ವತ್ತ ಮೂರುಮಂದಿಯು. ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು. ಮತ್ತೊಂದು ನೆಬೋ ವಿನವರು ಐವತ್ತೆರಡು ಮಂದಿಯು. ಮತ್ತೊಬ್ಬ ಏಲಾಮನ ಮಕ್ಕಳು ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. ಹಾರೀಮನ ಮಕ್ಕಳು ಮುನ್ನೂರ ಇಪ್ಪತ್ತು ಮಂದಿಯು. ಯೆರಿಕೋವಿನ ಮಕ್ಕಳು ಮುನ್ನೂರ ನಾಲ್ವತ್ತೈದು ಮಂದಿಯು. ಲೋದು ಹಾದೀದು ಓನೋನು ಎಂಬವರ ಮಕ್ಕಳು ಏಳುನೂರ ಇಪ್ಪತ್ತೊಂದು ಮಂದಿಯು. ಸೇನಾಹಯನ ಮಕ್ಕಳು ಮೂರು ಸಾವಿರದ ಒಂಭೈನೂರು ಮೂವತ್ತು ಮಂದಿಯು. ಯಾಜಕರು ಯಾರಂದರೆ; ಯೇಷೂವನ ಮನೆಯವನಾದ ಯೆದಾಯನ ಮಕ್ಕಳು ಒಂಭೈನೂರ ಎಪ್ಪತ್ತು ಮೂರು ಮಂದಿಯು. ಇಮ್ಮೇ ರನ ಮಕ್ಕಳು ಸಾವಿರದ ಐವತ್ತೆರಡು ಮಂದಿಯು. ಪಷ್ಹೂರನ ಮಕ್ಕಳು ಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. ಹಾರಿಮನ ಮಕ್ಕಳು ಸಾವಿರದ ಹದಿ ನೇಳು ಮಂದಿಯು. ಲೇವಿಯರು: ಕದ್ಮೀಯೇಲನ ಮನೆಯವನಾದ ಯೇಷೂವನ ಮಕ್ಕಳು ಹೋದವ್ಯನ ಮಕ್ಕಳೂ ಎಪ್ಪತ್ತು ನಾಲ್ಕು ಮಂದಿಯು. ಹಾಡು ಗಾರರು; ಆಸಾಫನ ಮಕ್ಕಳು ನೂರ ನಾಲ್ವತ್ತೆಂಟು ಮಂದಿಯು. ದ್ವಾರಪಾಲಕರಾದ ಶಲ್ಲೂಮನ ಮಕ್ಕಳು ಅಟೇರನ ಮಕ್ಕಳು ಟಲ್ಮೋನನ ಮಕ್ಕಳು ಅಕ್ಕೂಬನ ಮಕ್ಕಳು ಹಟೀಟನ ಮಕ್ಕಳು ಶೋಬೈಯ ಮಕ್ಕಳೂ ನೂರ ಮೂವತ್ತೆಂಟು ಮಂದಿಯು. ನೆತಿನಿಯರು: ಜೀಹನ ಮಕ್ಕಳು, ಹಸೂಫನ ಮಕ್ಕಳು, ಟಬ್ಬಾವೋತನ ಮಕ್ಕಳು, ಕೇರೋಸನ ಮಕ್ಕಳು, ಸೀಯನ ಮಕ್ಕಳು, ಪಾದೋನನಮಕ್ಕಳು, ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು, ಹಾನಾನನ ಮಕ್ಕಳು, ಗಿದ್ದೇಲನ ಮಕ್ಕಳು ಗಹರನ ಮಕ್ಕಳು ರೆವಾಯನ ಮಕ್ಕಳು, ರೆಚೀನನ ಮಕ್ಕಳು, ನೆಕೋದನ ಮಕ್ಕಳು, ಗಜ್ಜಾಮನ ಮಕ್ಕಳು, ಉಜ್ಜನ ಮಕ್ಕಳು, ಪಾಸೇಹನ ಮಕ್ಕಳು, ಬೇಸೈನ ಮಕ್ಕಳು, ಮೆಯನೀಮ್ರ ಮಕ್ಕಳು, ನೆಫೀಷೆಸೀಮನ ಮಕ್ಕಳು, ಬಕ್ಬೂಕನ ಮಕ್ಕಳು, ಹಕೂಫನ ಮಕ್ಕಳು, ಹರ್ಹೂರನ ಮಕ್ಕಳು, ಬಚ್ಲೂತನ ಮಕ್ಕಳು, ಮೆಹೀದನ ಮಕ್ಕಳು, ಹರ್ಷನ ಮಕ್ಕಳು, ಬರ್ಕೋ ಸನ ಮಕ್ಕಳು ಸೀಸೆರನ ಮಕ್ಕಳು, ತೆಮಹನ ಮಕ್ಕಳು, ನೆಚೀಹನ ಮಕ್ಕಳು, ಹಟೀಫನ ಮಕ್ಕಳು. ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು, ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು, ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು. ತೇಲ್ಮೆ ಲಹ ಗುಡ್ಡವು, ತೇಲ್ಹರ್ಷ ಗುಡ್ಡವು, ಕೆರೂಬದ್ದೋನ್, ಇಮ್ಮೇರ್ ಎಂಬ ಸ್ಥಳಗಳಿಂದ ಹೊರಟು ತಾವು ಇಸ್ರಾಯೇಲ್ಯರು ಹೌದೋ ಅಲ್ಲವೋ ಎಂದು ತಮ್ಮ ತಂದೆಗಳ ಮನೆಯನ್ನಾದರೂ ತಮ್ಮ ಸಂತಾನವನ್ನಾ ದರೂ ತೋರಿಸಲಾರದೆ ಇದ್ದವರು ಯಾರಂದರೆ ದೆಲಾಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ ಆರು ನೂರ ನಾಲ್ವತ್ತೆರಡು ಮಂದಿಯು. ಯಾಜಕರಲ್ಲಿ -- ಹೋಬಾಯನ ಮಕ್ಕಳೂ ಬರ್ಜಿಲ್ಲೈಯನ ವಂಶಸ್ಥನಾದ ಹಕ್ಕೋಚನ ಮಕ್ಕಳೂ; ಇವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಕುಮಾರ್ತೆಯರಲ್ಲಿ ಒಬ್ಬಳನ್ನು ತಕ್ಕೊಂಡ ಕಾರಣ ಅವರ ಹೆಸರಿನಿಂದ ಕರೆಯಲ್ಪಟ್ಟವನಾದನು. ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು. ಇದಲ್ಲದೆ ತಿರ್ಷತನು ಅವರಿಗೆ ಊರಿಮ್ ತುವ್ಮೆಾಮ್ ಉಳ್ಳ ಒಬ್ಬ ಯಾಜಕನು ನಿಲ್ಲುವ ವರೆಗೆ ಮಹಾಪರಿಶುದ್ಧವಾದವುಗಳನ್ನು ತಿನ್ನಬಾರದೆಂದು ಹೇಳಿದನು. ಈ ಸಭೆಯವರೆಲ್ಲಾ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿದ್ದರು. ಇವರ ಹೊರತಾಗಿ ಇವರ ದಾಸರೂ ದಾಸಿಗಳೂ ಏಳು ಸಾವಿ ರದ ಮುನ್ನೂರ ಮೂವತ್ತೇಳು ಮಂದಿಯೂ ಇವರ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರ ನಾಲ್ವತ್ತೈದು ಮಂದಿಯೂ ಇದ್ದರು. ಇವರ ಕುದುರೆ ಗಳು ಏಳು ನೂರಮೂವತ್ತಾರು, ಇವರ ಹೇಸರಕತ್ತೆಗಳು ಇನ್ನೂರ ನಾಲ್ವತ್ತೈದು; ಒಂಟೆಗಳು ನಾನೂರ ಮೂವತ್ತೈದು; ಕತ್ತೆಗಳು ಆರು ಸಾವಿರದ ಏಳು ನೂರ ಇಪ್ಪತ್ತು ಇದ್ದವು. ಪಿತೃಗಳಲ್ಲಿ ಮುಖ್ಯರಾದ ಕೆಲವರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ತಿರ್ಷತನು ಬೊಕ್ಕಸಕ್ಕೆ ಸಾವಿರ ಬಂಗಾರದ ಪವನುಗಳನ್ನು ಐವತ್ತು ಪಾತ್ರೆ ಗಳನ್ನೂ ಐನೂರ ಮೂವತ್ತು ಯಾಜಕರ ಅಂಗಿಗ ಳನ್ನೂ ಕೊಟ್ಟನು. ಇದಲ್ಲದೆ ಪಿತೃಗಳಲ್ಲಿ ಮುಖ್ಯ ರಾದ ಕೆಲವರು ಕೆಲಸದ ಬೊಕ್ಕಸಕ್ಕೆ ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನೂ ಎರಡು ಸಾವಿರದ ಇನ್ನೂರು ತೊಲೆ ಬೆಳ್ಳಿಯನ್ನೂ ಕೊಟ್ಟರು. ಮಿಕ್ಕಾದ ಜನರು ಕೊಟ್ಟದ್ದೇನಂದರೆ, ಇಪ್ಪತ್ತು ಸಾವಿರ ಬಂಗಾರದ ಪವನುಗಳನ್ನು ಎರಡುಸಾವಿರ ತೊಲೆ ಬೆಳ್ಳಿಯನ್ನೂ ಅರುವತ್ತೇಳು ಯಾಜಕರ ಅಂಗಿಗಳನ್ನೂ ಕೊಟ್ಟರು.ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು. ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- Esther 1:8 ಎಸ್ತೇರಳು 1:8ಕುಡಿಯು ವದು ಆಜ್ಞಾನುಸಾರವಾಗಿತ್ತು; ಯಾರೂ ಬಲವಂತ ಮಾಡಲಿಲ್ಲ; ಹೀಗೆ ಅರಸನು ತನ್ನ ಮನೆ ವಾರ್ತೆಯ ವರಿಗೆಲ್ಲಾ ಪ್ರತಿ ಮನುಷ್ಯನ ಇಷ್ಟದ ಪ್ರಕಾರ ಮಾಡುವಂತೆ ಅವರಿಗೆ ನೇಮಿಸಿದ್ದನು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- 2 Chronicles 36:1–23 2 ಪೂರ್ವಕಾಲವೃತ್ತಾಂತ 36:1–23ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು, ತಕ್ಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದ ಲಾಗಿ ಅವನನ್ನು ಅರಸನಾಗಿ ಮಾಡಿದರು. ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಐಗುಪ್ತದ ಅರಸನು ಯೆರೂಸಲೇ ಮಿನಲ್ಲಿ ಅವನನ್ನು ತೆಗೆದುಹಾಕಿ ದೇಶದಿಂದ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರ ವನ್ನೂ ದಂಡ ತಕ್ಕೊಂಡನು. ಇದಲ್ಲದೆ ಐಗುಪ್ತದ ಅರಸನು ಅವನ ಸಹೋದರನಾದ ಎಲ್ಯಾಕೀಮ ನನ್ನು ಯೆಹೂದದ ಯೆರೂಸಲೇಮಿನ ಮೇಲೆ ಅರಸ ನಾಗಿ ಮಾಡಿ ಯೆಹೋಯಾಕೀಮನೆಂಬ ಬದಲು ಹೆಸರನ್ನು ಅವನಿಗೆ ಇಟ್ಟನು. ನೆಕೋ ಅವನ ಸಹೋ ದರನಾದ ಯೆಹೋವಾಹಾಜನನ್ನು ತಕ್ಕೊಂಡು ಐಗುಪ್ತಕ್ಕೆ ಒಯ್ದನು. ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು. ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು. ಅವನು ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಕರ್ತನ ಬಾಯಿ ಮಾತು ಹೇಳಿದ ಪ್ರವಾದಿ ಯಾದ ಯೆರೆವಿಾಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು. ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿ ಬಿದ್ದನು. ಹೇಗಂದರೆ ಅವನು ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರುಗದೆಯೂ ತನ್ನ ಕುತ್ತಿಗೆ ಯನ್ನು ಬೊಗ್ಗಿಸದೆಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು. ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು. ಇದಲ್ಲದೆ ದೊಡ್ಡವೂ ಸಣ್ಣವೂ ಆದ ಕರ್ತನ ಮನೆಯ ಎಲ್ಲಾ ಸಾಮಾನುಗಳು ಕರ್ತನ ಆಲಯದ ಬೊಕ್ಕಸಗಳು ಅರಸನ ಬೊಕ್ಕಸಗಳು ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬೆಲಿಗೆ ತರಿಸಿದನು. ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು. ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು. ದೇಶವು ಎಪ್ಪತ್ತು ವರುಷ ತೀರುವ ಪರ್ಯಂತರ ಹಾಳಾಗಿದ್ದು ಸಬ್ಬತ್ತನ್ನು ಅನುಭವಿಸುತ್ತಾ ಇತ್ತು. ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು. ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Zephaniah 2:7 ಚೆಫನ್ಯ 2:7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- Ezra 6:2 ಎಜ್ರನು 6:2ಮೇದ್ಯರ ದೇಶದಲ್ಲಿರುವ ಅಹ್ಮೆತಾ ಪಟ್ಟಣದಲ್ಲಿ ಬರೆ ಯಲ್ಪಟ್ಟ ಜ್ಞಾಪಕಾರ್ಥದ ಒಂದು ಸುರಳಿಯು ಅದರಲ್ಲಿ ಸಿಕ್ಕಿತು.
- Lamentations 1:3 ಪ್ರಲಾಪಗಳು 1:3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.
- Ezra 5:8 ಎಜ್ರನು 5:8ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ.
- Esther 1:1 ಎಸ್ತೇರಳು 1:1ಅಹಷ್ವೇರೋಷನ ದಿವಸಗಳಲ್ಲಿ ಆದದ್ದುಆ ಅಹಷ್ವೇರೋಷನು ಭಾರತ ಮೊದ ಲ್ಗೊಂಡು ಕೂಷಿನವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತ್ಯಗಳನ್ನು ಆಳಿದನು;
- Jeremiah 39:1–18 ಯೆರೆಮೀಯ 39:1–18ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು. ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಹಾಕ ಲ್ಪಟ್ಟಿರುವಾಗ ಕರ್ತನ ವಾಕ್ಯವು ಅವನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ ಹೇಳತಕ್ಕದ್ದೇನಂದರೆ --ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಒಳ್ಳೇದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ; ಅವು ಆ ದಿವಸದಲ್ಲಿ ನಿನ್ನ ಮುಂದೆಯೇ ಉಂಟಾಗುವವು. ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ. ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.
Original words (Hebrew)
- children · H1121בֵּן bên
- province · H4082מְדִינָה mᵉdîynâh
- up · H5927עָלָה ʻâlâh
- captivity · H7628שְׁבִי shᵉbîy
- away · H1473גּוֹלָה gôwlâh
- Nebuchadnezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- away · H1540גָּלָה gâlâh
- Babylon · H894בָּבֶל Bâbel
- again · H7725שׁוּב shûwb
- Jerusalem · H3389יְרוּשָׁלַ͏ִם Yᵉrûwshâlaim
- Judah · H3063יְהוּדָה Yᵉhûwdâh
- one · H376אִישׁ ʼîysh
- city · H5892עִיר ʻîyr