Ezra · chapter 3 · verse 1
Ezra 3:1 in Kannada
ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
Elane tingalu banda taruvaaya israayel makkalu pattanagalalli iruvaaga janaru obba manushyane embante yeroosaleminalli koodikondaru.
Ezra 3:1 in English
- King James Version (KJV)
- And when the seventh month was come, and the children of Israel [were] in the cities, the people gathered themselves together as one man to Jerusalem.
- World English Bible (WEB)
- When the seventh month had come, and the children of Israel were in the cities, the people gathered themselves together as one man to Jerusalem.
- American Standard Version (ASV)
- And when the seventh month was come, and the children of Israel were in the cities, the people gathered themselves together as one man to Jerusalem.
- Bible in Basic English (BBE)
- And when the seventh month came, and the children of Israel were in the towns, the people came together like one man to Jerusalem.
- Darby Translation (DBY)
- And when the seventh month came, and the children of Israel were in the cities, the people gathered together as one man to Jerusalem.
- Webster's Bible (WBS)
- And when the seventh month had come, and the children of Israel [were] in the cities, the people assembled themselves as one man at Jerusalem.
- Young's Literal Translation (YLT)
- And the seventh month cometh, and the sons of Israel [are] in the cities, and the people are gathered, as one men, unto Jerusalem.
Read in context
- 1ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
- 2ಆಗ ಯೋಚಾದಾಕನ ಮಗನಾದ ಯೇಷೂವನೂ ಅವನ ಸಹೋದರರಾದ ಯಾಜಕರೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಸಹೋದರರೂ ಎದ್ದು ದೇವರ ಮನುಷ್ಯನಾದ ಮೋಶೆಯ ನ್ಯಾಯ ಪ್ರಮಾಣದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.
- 3ಬಲಿಪೀಠವನ್ನು ಅದರ ಅಧಾರಗಳ ಮೇಲೆ ಇಟ್ಟರು; ಯಾಕಂದರೆ ಆ ದೇಶದ ಜನರಿ ಗೋಸ್ಕರ ಅವರಿಗೆ ಹೆದರಿಕೆ ಇತ್ತು. ಅವರು ಅದರ ಮೇಲೆ ದಹನಬಲಿಗಳನ್ನು ಉದಯದಲ್ಲಿಯೂ ಸಾಯ ಂಕಾಲದಲ್ಲಿಯೂ ಅರ್ಪಿಸಿದರು.
Cross references
- Acts 4:32 ಅಪೊಸ್ತಲರ ಕೃತ್ಯಗಳು 4:32ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
- 1 Corinthians 1:10 1 ಕೊರಿಂಥದವರಿಗೆ 1:10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
- Leviticus 23:24 ಯಾಜಕಕಾಂಡ 23:24ಇಸ್ರಾಯೇಲ್ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.
- Exodus 23:14–17 ವಿಮೋಚನಕಾಂಡ 23:14–17ವರುಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡ ಬೇಕು. ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು; (ಅಬೀಬ್ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳ ವರೆಗೆ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಯಾಕಂದರೆ ನೀನು ಆ ತಿಂಗಳಲ್ಲೇ ಐಗುಪ್ತ ದಿಂದ ಹೊರಗೆ ಬಂದಿದ್ದಿ. ಒಬ್ಬರೂ ಬರೀಗೈಯಿಂದ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬಾರದು.) ನಿನ್ನ ಹೊಲದಲ್ಲಿ ಬಿತ್ತಿದ ಬೆಳೆಯ ಪ್ರಥಮ ಫಲಗಳ ಸುಗ್ಗಿ ಹಬ್ಬವನ್ನೂ ನಿನ್ನ ಬೆಳೆಯನ್ನು ಹೊಲದಿಂದ ಕೂಡಿಸಿದ ಮೇಲೆ ವರುಷದ ಅಂತ್ಯದಲ್ಲಿ ಕೂಡಿಸುವ ಹಬ್ಬವನ್ನೂ ಆಚರಿಸಬೇಕು. ವರುಷಕ್ಕೆ ಮೂರು ಸಾರಿ ನಿಮ್ಮ ಲ್ಲಿರುವ ಎಲ್ಲಾ ಪುರುಷರು ದೇವರಾದ ಕರ್ತನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
- Leviticus 16:29 ಯಾಜಕಕಾಂಡ 16:29ನೀವು ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮಲ್ಲಿ ಒಬ್ಬ ಸ್ವದೇಶದವನಾಗಲಿ ಪ್ರವಾಸಿಯಾಗಿರುವ ಪರಕೀಯನಾಗಲಿ ನಿಮ್ಮ ಆತ್ಮಗಳನ್ನು ಕುಂದಿಸಿ ಯಾವ ಕೆಲಸವನ್ನೂ ಮಾಡದಂತೆ ಇದು ನಿಮಗೆ ಶಾಶ್ವತವಾದ ಒಂದು ನಿಯಮವಾಗಿರುವದು.
- Leviticus 23:27–44 ಯಾಜಕಕಾಂಡ 23:27–44ಇದಲ್ಲದೆ ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿ ರುವದು; ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು. ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಕರ್ತನ ಸನ್ನಿಧಿಯಲ್ಲಿ ಪ್ರಾಯ ಶ್ಚಿತ್ತಮಾಡುವದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿ ರುವದು. ಆ ದಿವಸದಲ್ಲಿ ಯಾವನಾದರೂ ಕುಂದಿಸಿಕೊಳ್ಳದಿದ್ದರೆ ಅವನು ತನ್ನ ಜನರ ಮಧ್ಯ ದೊಳಗಿನಿಂದ ತೆಗೆದುಹಾಕಲ್ಪಡಬೇಕು. ಆ ದಿವಸ ದಲ್ಲಿ ಯಾವನಾದರೂ ಯಾವದೇ ಕೆಲಸವನ್ನು ಮಾಡಿ ದರೆ ಅವನನ್ನು ನಾನು ಅವನ ಜನರ ಮಧ್ಯದಿಂದ ನಾಶಮಾಡುವೆನು. ನೀವು ಯಾವ ತರದ ಕೆಲಸ ವನ್ನು ಮಾಡಬಾರದು; ಇದು ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರ ಬೇಕು. ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ. ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು--ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳ ವರೆಗೆ ಕರ್ತನಿಗೆ ಗುಡಾರಗಳ ಹಬ್ಬವಾಗಿರುವದು. ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವದು; ನೀವು ಅದರಲ್ಲಿ ಕಷ್ಟಕರವಾದ ಕೆಲಸ ವನ್ನು ಮಾಡಬಾರದು. ಏಳು ದಿವಸ ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ಕರ್ತನಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿ ಶುದ್ಧ ಕೂಟವಾಗಿರುವದು; ನೀವು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಕರ್ತನಿಗೆ ಅರ್ಪಿಸಬೇಕು; ಅದೊಂದು ಗಂಭೀರ ಸಭೆಯಾಗಿರುವದು; ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು. ನೀವು ಪರಿಶುದ್ಧ ಸಭೆಯಾಗಿ ಪ್ರಕಟಿಸಬೇಕಾದ ಕರ್ತನ ಹಬ್ಬಗಳು ಇವೇ: ಇವುಗಳ ಒಂದೊಂದು ದಿವಸದಲ್ಲಿ ಕರ್ತನಿಗೆ ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವನ್ನೂ ಪಾನಕ ಸಮರ್ಪಣೆ ಗಳನ್ನೂ ಅರ್ಪಿಸಬೇಕು. ಕರ್ತನ ಸಬ್ಬತ್ತುಗಳ ಹೊರ ತಾಗಿಯೂ ನೀವು ಕರ್ತನಿಗೆ ಸಮರ್ಪಿಸುವ ನಿಮ್ಮ ದಾನ ಪ್ರಮಾಣಗಳ ನಿಮ್ಮ ಎಲ್ಲಾ ಸ್ವಇಷ್ಟವಾದ ಕಾಣಿಕೆಗಳ ಹೊರತಾಗಿಯೂ ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ಭೂಮಿಯ ಫಲವನ್ನು ಕೂಡಿಸಿದಾಗ ನೀವು ಕರ್ತನಿಗೆ ಏಳು ದಿವಸಗಳ ಹಬ್ಬ ವನ್ನು ಕೈಕೊಳ್ಳಬೇಕು. ಮೊದಲನೆಯ ದಿವಸವು ಸಬ್ಬತ್ತಾ ಗಿರಬೇಕು ಮತ್ತು ಎಂಟನೆಯ ದಿವಸವು ಸಬ್ಬತ್ತಾಗಿರ ಬೇಕು. ಮೊದಲನೆಯ ದಿವಸದಲ್ಲಿ ನೀವು ಸುಂದರ ವಾದ ಮರಗಳ ಕೊಂಬೆಗಳನ್ನೂ ಖರ್ಜೂರ ಮರಗಳ ಕೊಂಬೆಗಳನ್ನೂ ದಟ್ಟವಾದ ಮರಗಳ ಕೊಂಬೆಗಳನ್ನೂ ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳ ವರೆಗೆ ನಿಮ್ಮ ದೇವರಾಗಿರುವ ಕರ್ತನ ಎದುರಿನಲ್ಲಿ ಸಂತೋಷಪಡಬೇಕು. ಆ ವರುಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಕರ್ತನಿಗಾಗಿ ಕೈಕೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು; ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು. ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು. ನಾನು ಇಸ್ರಾಯೇಲ್ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Acts 2:46 ಅಪೊಸ್ತಲರ ಕೃತ್ಯಗಳು 2:46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Zephaniah 3:9 ಚೆಫನ್ಯ 3:9ಆಗ ನಾನು ಶುದ್ಧ ಭಾಷೆಯನ್ನು ಜನಾಂಗಗಳಿಗೆ ತಿರುಗಿ ಕೊಡುವೆನು; ಅವರೆಲ್ಲರು ಕರ್ತನ ಹೆಸರಿನಲ್ಲಿ ಮೊರೆಯಿಟ್ಟು ಏಕ ಮನಸ್ಸಿನಿಂದ ಆತನಿಗೆ ಸೇವೆ ಮಾಡು ವರು.
- Nehemiah 8:14 ನೆಹೆಮೀಯ 8:14ಆಗ ಅವರು ಏಳನೇ ತಿಂಗಳ ಹಬ್ಬದಲ್ಲಿ ಇಸ್ರಾಯೇಲಿನ ಮಕ್ಕಳು ಗುಡಾರಗಳಲ್ಲಿ ವಾಸವಾಗಿರಬೇಕೆಂದು ಕರ್ತ ನು ಮೋಶೆಯ ಮುಖಾಂತರ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದದ್ದನ್ನು ಕಂಡರು.
- Numbers 29:1–40 ಅರಣ್ಯಕಾಂಡ 29:1–40ಏಳನೇ ತಿಂಗಳಿನ ಮೊದಲನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿರಬೇಕು; ಕಷ್ಟಕರವಾದ ಕೆಲಸವನ್ನು ನೀವು ಮಾಡಬಾರದು; ಅದು ನಿಮಗೆ ತುತೂರಿಗಳನ್ನು ಊದುವ ದಿವಸ ವಾಗಿರುವದು. ನೀವು ಕರ್ತನಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೇ ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ದಹನ ಬಲಿಯಾಗಿ ಅರ್ಪಿಸಬೇಕು. ಅವುಗಳ ಆಹಾರ ಸಮ ರ್ಪಣೆಯು ಎಣ್ಣೆಯಿಂದ ಕಲಸಿದ ಹಿಟ್ಟು, ಹೋರಿಗೆ ಮೂರು ದಶಾಂಶಗಳು, ಟಗರಿಗೆ ಎರಡು ದಶಾಂಶ ಗಳು, ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೆ ಪಾಪಬಲಿಗಾಗಿ ಒಂದು ಮೇಕೆಮರಿ. ಇದಲ್ಲದೆ ತಿಂಗಳಿನ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ನಿತ್ಯವಾದ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ಬೆಂಕಿಯಿಂದ ಮಾಡ ಲ್ಪಟ್ಟು ಕರ್ತನಿಗೆ ಸುವಾಸನೆಗಾಗಿ ಅವುಗಳಿಗೆ ತಕ್ಕಂತೆ ಅರ್ಪಿಸಬೇಕು. ಈ ಏಳನೇ ತಿಂಗಳಿನ ಹತ್ತನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಅದರಲ್ಲಿ ನಿಮ್ಮ ಪ್ರಾಣಗಳನ್ನು ವ್ಯಥೆಪಡಿಸಿ ಯಾವ ಕೆಲಸವನ್ನಾದರೂ ಮಾಡಬಾರದು. ಆದರೆ ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ದೋಷವಿಲ್ಲದ ಒಂದು ಎಳೇ ಹೋರಿ ಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿ ಗಳನ್ನೂ ಅವುಗಳ ಆಹಾರ ಸಮರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿ ಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನೂ ಪಾಪ ಬಲಿಗಾಗಿ ಒಂದು ಮೇಕೆ ಮರಿಯಲ್ಲದೆ ಪ್ರಾಯಶ್ಚಿತ್ತದ ಪಾಪ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಆಹಾರ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ತಿಂಗಳಿನ ಹದಿನೈದನೇ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಬೇಕು; ಕಷ್ಟಕರವಾದ ಕೆಲಸವನ್ನು ಮಾಡಬಾರದು. ಕರ್ತನಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು. ಕರ್ತನಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ಬಲಿಯನ್ನು ಅರ್ಪಿಸಬೇಕು; ಏನಂದರೆ, ಹದಿಮೂರು ಎಳೇ ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ; ಅವು ದೋಷವಿಲ್ಲದ್ದಾಗಿರಬೇಕು; ಅವುಗಳ ಆಹಾರ ಸಮರ್ಪಣೆಯು ಎಣ್ಣೇ ಕಲಸಿದ ಹಿಟ್ಟು; ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಮೂರು ದಶಾಂಶಗಳು; ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎರಡು ದಶಾಂಶಗಳು; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶ; ಪಾಪಬಲಿಗೆ ಒಂದು ಮೇಕೆಮರಿ; ಇದಲ್ಲದೆ ನಿತ್ಯ ದಹನ ಬಲಿಯನ್ನೂ ಅದರ ಆಹಾರ ಸಮರ್ಪಣೆ ಯನ್ನೂ ಪಾನದ ಅರ್ಪಣೆಯನ್ನೂ ಅರ್ಪಿಸಬೇಕು. ಎರಡನೇ ದಿವಸದಲ್ಲಿ ಮಚ್ಚೆಯಿಲ್ಲದ ಹನ್ನೆರಡು ಎಳೇ ಹೋರಿಗಳನ್ನೂ ಎರಡು ಟಗರುಗಳನ್ನೂ ವರು ಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಮೂರನೇ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿ ಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ನಾಲ್ಕನೇ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನಗಳ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಐದನೇ ದಿವಸದಲ್ಲಿ ಮಚ್ಚೆಯಿಲ್ಲದ ಒಂಭತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರಪಾನ ಬಲಿ ಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿ ಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಆರನೇ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪಬಲಿಯಾಗಿ ಒಂದು ಮೇಕೆ ಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಏಳನೇ ದಿವಸದಲ್ಲಿ ದೋಷವಿಲ್ಲದ ಏಳು ಹೋರಿ ಗಳನ್ನೂ ಎರಡು ಟಗರುಗಳನ್ನೂ ವರುಷದ ಹದಿನಾಲ್ಕು ಕುರಿಮರಿಗಳನ್ನೂ ಹೋರಿಗಳಿಗೆ ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಎಂಟನೇ ದಿವಸದಲ್ಲಿ ನಿಮಗೆ ಹಬ್ಬದ ಸಭೆಯಾಗ ಬೇಕು. ಕಷ್ಟಕರವಾದ ಕೆಲಸವನ್ನು ನೀವು ಮಾಡ ಬಾರದು. ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಹೋರಿಗೆ ಟಗರಿಗೆ ಮತ್ತು ಕುರಿ ಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಆಹಾರ ಪಾನದ ಅರ್ಪಣೆಗಳನ್ನೂ ಪಾಪ ಬಲಿಯಾಗಿ ಒಂದು ಮೇಕೆಮರಿಯನ್ನೂ ಅಲ್ಲದೆ ನಿತ್ಯ ದಹನಬಲಿಯನ್ನೂ ಅದರ ಆಹಾರ ಪಾನದ ಅರ್ಪಣೆಗಳನ್ನೂ ಅರ್ಪಿಸಬೇಕು. ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದುಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು. ಕರ್ತನು ತನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಹೇಳಿದನು.