Ezra · chapter 3 · verse 10
Ezra 3:10 in Kannada
ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
Kattuvavaru kartana mandirakke astivaara haakuvaaga israa yelina arasanaada daaveedana kattaleya prakaara kartanannu stutisuvadakke vastragalannu dharisikondava raagi tutoorigalannooduva yaajakarannoo taalaga lannu badiyuva aasaaphana makkalaada leviyarannoo ittaru.
Ezra 3:10 in English
- King James Version (KJV)
- And when the builders laid the foundation of the temple of the LORD, they set the priests in their apparel with trumpets, and the Levites the sons of Asaph with cymbals, to praise the LORD, after the ordinance of David king of Israel.
- World English Bible (WEB)
- When the builders laid the foundation of the LORD’s temple, they set the priests in their vestments with trumpets, with the Levites the sons of Asaph with cymbals, to praise the LORD, according to the directions of David king of Israel.
- American Standard Version (ASV)
- And when the builders laid the foundation of the temple of Jehovah, they set the priests in their apparel with trumpets, and the Levites the sons of Asaph with cymbals, to praise Jehovah, after the order of David king of Israel.
- Bible in Basic English (BBE)
- And when the builders put in position the base of the Temple of the Lord, the priests, dressed in their robes, took their places with horns, and the Levites, the sons of Asaph, with brass instruments, to give praise to the Lord in the way ordered by David, king of Israel.
- Darby Translation (DBY)
- And when the builders laid the foundation of the temple of Jehovah, they set the priests in their apparel, with trumpets, and the Levites the sons of Asaph, with cymbals, to praise Jehovah according to the directions of David king of Israel.
- Webster's Bible (WBS)
- And when the builders laid the foundation of the temple of the LORD, they set the priests in their apparel with trumpets, and the Levites the sons of Asaph with cymbals, to praise the LORD, after the ordinance of David king of Israel.
- Young's Literal Translation (YLT)
- And those building have founded the temple of Jehovah, and they appoint the priests, clothed, with trumpets, and the Levites, sons of Asaph, with cymbals, to praise Jehovah, by means of [the instruments of] David king of Israel.
Read in context
- 8ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
- 9ಆಗ ಯೇಷೂವನೂ ಅವನ ಮಕ್ಕಳೂ ಅವನ ಸಹೋದರರೂ ಕದ್ಮೀಯೇಲನೂ ಅವನ ಮಕ್ಕಳೂ ಯೆಹೂದನ ಮಕ್ಕಳೂ ಹೇನಾದಾ ದನ ಮಕ್ಕಳೂ ಅವರ ಮಕ್ಕಳೂ ಅವರ ಸಹೋದರ ರಾದ ಲೇವಿಯರೂ ದೇವರ ಆಲಯದಲ್ಲಿರುವ ಕೆಲಸ ದವರನ್ನು ನಡಿಸಲು ಎದ್ದು ನಿಂತರು.
- 10ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು.
- 11ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು.
- 12ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
Cross references
- 1 Chronicles 25:1–7 1 ಪೂರ್ವಕಾಲವೃತ್ತಾಂತ 25:1–7ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು.
- 1 Chronicles 15:24 1 ಪೂರ್ವಕಾಲವೃತ್ತಾಂತ 15:24ಯಾಜಕರಾದ ಶೆಬನ್ಯನೂ ಯೋಷಾಫಾಟನೂ ನೆತನೇಲ್ನೂ ಅಮಾಸೈಯು ಜೆಕರ್ಯನೂ ಬೆನಾಯನೂ ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು; ಒಬೇದೆ ದೋಮನೂ ಯೆಹೀಯನೂ ಮಂಜೂಷಕ್ಕೆ ದ್ವಾರ ಪಾಲಕರಾಗಿದ್ದರು.
- 1 Samuel 22:18 1 ಸಮುವೇಲನು 22:18ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- 1 Chronicles 16:42 1 ಪೂರ್ವಕಾಲವೃತ್ತಾಂತ 16:42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
- 1 Chronicles 23:5 1 ಪೂರ್ವಕಾಲವೃತ್ತಾಂತ 23:5ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು; ನಾಲ್ಕು ಸಾವಿರ ಮಂದಿ ಸ್ತುತಿಸುವದಕ್ಕೆ ದಾವೀದನು ಸಿದ್ಧಮಾಡಿದ ವಾದ್ಯಗಳಿಂದ ಕರ್ತನನ್ನು ಸ್ತುತಿಸಿದರು.
- Zechariah 4:10 ಜೆಕರ್ಯ 4:10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- 2 Chronicles 35:15 2 ಪೂರ್ವಕಾಲವೃತ್ತಾಂತ 35:15ದಾವೀದನೂ ಆಸಾ ಫನೂ ಹೇಮಾನನೂ ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು; ಹಾಗೆಯೇ ದ್ವಾರಪಾಲಕರು ಪ್ರತಿಯೊಂದು ಬಾಗಲಲ್ಲಿ ಇದ್ದರು; ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು; ಯಾಕಂದರೆ ಅವರ ಸಹೋದರರಾದ ಲೇವಿಯರು ಅವರ ನಿಮಿತ್ತ ಸಿದ್ಧಮಾಡಿದರು.
- 1 Chronicles 16:37 1 ಪೂರ್ವಕಾಲವೃತ್ತಾಂತ 16:37ಕರ್ತನ ಒಡಂಬಡಿಕೆಯ ಮಂಜೂಷದ ಮುಂದೆ ದಾವೀದನು ಬಿಟ್ಟವರು ಯಾರಂದರೆ--ಪ್ರತಿ ದಿವಸದ ಕಾರ್ಯದ ಪ್ರಕಾರ ಯಾವಾಗಲೂ ಮಂಜೂಷದ ಮುಂದೆ ಸೇವೆಮಾಡಲು ಆಸಾಫನನ್ನೂ ಅವನ ಸಹೋ ದರರನ್ನೂ;
- 1 Chronicles 15:27 1 ಪೂರ್ವಕಾಲವೃತ್ತಾಂತ 15:27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.
- 1 Chronicles 6:31–48 1 ಪೂರ್ವಕಾಲವೃತ್ತಾಂತ 6:31–48ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು.
- 2 Chronicles 29:25–26 2 ಪೂರ್ವಕಾಲವೃತ್ತಾಂತ 29:25–26ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು. ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರುವಾಗ
- 1 Chronicles 16:4–7 1 ಪೂರ್ವಕಾಲವೃತ್ತಾಂತ 16:4–7ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು. ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
Original words (Hebrew)
- builders · H1129בָּנָה bânâh
- foundation · H3245יָסַד yâçad
- temple · H1964הֵיכָל hêykâl
- set · H5975עָמַד ʻâmad
- priests · H3548כֹּהֵן kôhên
- apparel · H3847לָבַשׁ lâbash
- trumpets · H2689חֲצֹצְרָה chătsôtsᵉrâh
- Levites · H3881לֵוִיִּי Lêvîyîy
- sons · H1121בֵּן bên
- Asaph · H623אָסָף ʼÂçâph
- cymbals · H4700מְצֵלֶת mᵉtsêleth
- praise · H1984הָלַל hâlal
- ordinance · H3027יָד yâd
- David · H1732דָּוִד Dâvid
- king · H4428מֶלֶךְ melek
- Israel · H3478יִשְׂרָאֵל Yisrâʼêl