Ezra · chapter 4 · verse 15
Ezra 4:15 in Kannada
ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
Ninna tandegala vrutaantagala pustakadalli vichaarisidare ee pattanavu tirigi beeluvudendoo arasugaligoo deshagaligoo nashtamaaduvantha dendoo poorva kaaladalli adarolagiddavaru tirigi biddiddaarendoo adara nimitta ee pattanavu naashavaayitendoo neenu vrutaantagala pustakadalli kandu tiliyuvi.
Ezra 4:15 in English
- King James Version (KJV)
- That search may be made in the book of the records of thy fathers: so shalt thou find in the book of the records, and know that this city [is] a rebellious city, and hurtful unto kings and provinces, and that they have moved sedition within the same of old time: for which cause was this city destroyed.
- World English Bible (WEB)
- that search may be made in the book of the records of your fathers. You will see in the book of the records, and know that this city is a rebellious city, and hurtful to kings and provinces, and that they have started rebellions within it in the past. That is why this city was destroyed.
- American Standard Version (ASV)
- that search may be made in the book of the records of thy fathers: so shalt thou find in the book of the records, and know that this city is a rebellious city, and hurtful unto kings and provinces, and that they have moved sedition within the same of old time; for which cause was this city laid waste.
- Bible in Basic English (BBE)
- So that search may be made in the book of the records of your fathers: and you will see in the book of the records that this town has been uncontrolled, and a cause of trouble to kings and countries, and that there were outbursts against authority there in the past: for which reason the town was made waste.
- Darby Translation (DBY)
- that search may be made in the book of the annals of thy fathers: so shalt thou find in the book of the annals and know that this city is a rebellious city, which has done damage to kings and provinces, and that they have raised sedition within the same of old time, for which cause this city was destroyed.
- Webster's Bible (WBS)
- That search may be made in the book of the records of thy fathers: so wilt thou find in the book of the records, and know that this city [is] a rebellious city, and hurtful to kings and provinces, and that they have moved sedition within the same of old time: for which cause was this city destroyed.
- Young's Literal Translation (YLT)
- so that he doth seek in the book of the records of thy fathers, and thou dost find in the book of the records, and dost know, that this city [is] a rebellious city, and causing loss [to] kings and provinces, and makers of sedition [are] in its midst from the days of old, therefore hath this city been wasted.
Read in context
- 13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
- 14ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.
- 15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.
- 16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.
- 17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.
Cross references
- Ezra 4:12 ಎಜ್ರನು 4:12ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ.
- Acts 17:6–7 ಅಪೊಸ್ತಲರ ಕೃತ್ಯಗಳು 17:6–7ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ; ಯಾಸೋನನು ಅವರನ್ನು ಸೇರಿಸಿ ಕೊಂಡಿದ್ದಾನೆ; ಅವರೆಲ್ಲರು ಯೇಸುವೆಂಬ ಬೇರೊಬ್ಬ ಅರಸನು ಇದ್ದಾನೆಂದು ಹೇಳಿ ಕೈಸರನ ಆಜ್ಞೆಗಳಿಗೆ ವಿರುದ್ಧವಾಗಿ ನಡೆಯುತ್ತಾರೆ ಎಂದು ಕೂಗಿದರು.
- Jeremiah 52:3–34 ಯೆರೆಮೀಯ 52:3–34ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು. ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು. ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು. ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು. ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು. ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು. ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು. ಇದಲ್ಲದೆ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸ್ತಂಭಗಳನ್ನೂ ಗದ್ದಿಗೆಗಳನ್ನೂ ಕರ್ತನ ಆಲಯದಲ್ಲಿದ್ದ ಹಿತ್ತಾಳೆಯ ಸಮುದ್ರವನ್ನೂ ಕಸ್ದೀಯರು ಒಡೆದು ಅವುಗಳ ಹಿತ್ತಾಳೆಯನ್ನೆಲ್ಲಾ ಬಾಬೆಲಿಗೆ ತಕ್ಕೊಂಡು ಹೋದರು. ಗುಡಾಣಗಳನ್ನೂ ಸಲಿಕೆಗಳನ್ನೂ ಕತ್ತರಿಗಳನ್ನೂ ತಂಬಿಗೆಗಳನ್ನೂ ಸೌಟುಗಳನ್ನೂ ಸೇವೆಗೆ ಸಂಬಂಧವಾದ ಎಲ್ಲಾ ಹಿತ್ತಾಳೆಯ ಪಾತ್ರೆಗಳನ್ನೂ ತಕ್ಕೊಂಡರು. ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು. ಅರಸನಾದ ಸೊಲೊಮೋನನು ಕರ್ತನ ಆಲಯದಲ್ಲಿ ಮಾಡಿಸಿದ ಎರಡು ಸ್ತಂಭಗಳನ್ನೂ ಒಂದು ಸಮುದ್ರವನ್ನೂ ಗದ್ದಿಗೆಗಳ ಕೆಳಗಿದ್ದ ಹನ್ನೆರಡು ಹಿತ್ತಾಳೆಯ ಎತ್ತುಗಳನ್ನೂ ತಕ್ಕೊಂಡನು; ಈ ಎಲ್ಲಾ ಪಾತ್ರೆಗಳಿಗೆ ಲೆಕ್ಕವಿಲ್ಲದಷ್ಟು ಹಿತ್ತಾಳೆ ತೂಕವಾಗಿತ್ತು. ಸ್ತಂಭಗಳ ವಿಷಯ, ಒಂದು ಸ್ತಂಭದ ಉದ್ದವು ಹದಿನೆಂಟು ಮೊಳವಾಗಿತ್ತು, ಹನ್ನೆರಡು ಮೊಳದ ಸರಿಗೆ ಅದನ್ನು ಸುತ್ತಿಕೊಂಡಿತು; ಅದರ ದಪ್ಪ ನಾಲ್ಕು ಬೆರಳು; ಅದು ಟೊಳ್ಳಾಗಿತ್ತು. ಅದರ ಮೇಲೆ ಹಿತ್ತಾಳೆಯ ಕುಂಭ ಇತ್ತು; ಒಂದು ಕುಂಭದ ಎತ್ತರವು ಐದು ಮೊಳವಾಗಿತ್ತು. ಮತ್ತು ಕುಂಭಗಳ ಮೇಲೆ ಸುತ್ತಲಾಗಿ ಜಾಲರು ಕೆಲಸವೂ ದಾಳಿಂಬರಗಳೂ ಇದ್ದವು; ಎಲ್ಲಾ ಹಿತ್ತಾಳೆಯೇ; ಎರಡನೇ ಸ್ತಂಭವೂ ದಾಳಿಂಬರಗಳೂ ಅದರಂತೆಯೇ ಇದ್ದವು; ಒಂದು ಕಡೆಗೆ ತೊಂಭತ್ತಾರು ದಾಳಿಂಬರಗಳೂ ಇದ್ದವು; ಜಾಲರು ಕೆಲಸದ ಮೇಲೆ ಸುತ್ತಲಾಗಿದ್ದ ದಾಳಿಂಬರಗಳೆಲ್ಲಾ ನೂರು. ಕಾವಲಿನ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂವರು ದ್ವಾರಪಾಲಕರನ್ನೂ ತಕ್ಕೊಂಡನು. ಯುದ್ಧಸ್ಥರ ಮೇಲೆ ನೇಮಿಸಲ್ಪಟ್ಟಿದ್ದ ಒಬ್ಬ ಮನೇವಾರ್ತೆಯವನನ್ನೂ ಅರಸನ ಸನ್ನಿಧಾನದಲ್ಲಿ ನಿಂತವರೊಳಗೆ ಪಟ್ಟಣದಲ್ಲಿ ಸಿಕ್ಕಿದ ಏಳು ಮನುಷ್ಯರನ್ನೂ ದೇಶಸ್ಥರನ್ನೂ ದಂಡಿನವರ ಲೆಕ್ಕದಲ್ಲಿ ಸೇರಿಸಿದ ಸೈನ್ಯಾಧಿಪತಿಯ ಲೇಖಕನನ್ನೂ ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶಸ್ಥರಲ್ಲಿ ಅರುವತ್ತು ಮನುಷ್ಯರನ್ನೂ ಪಟ್ಟಣದೊಳಗಿಂದ ತಕ್ಕೊಂಡನು. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು. ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು. ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು. ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೇ ವರುಷದಲ್ಲಿ, ಹನ್ನೆರಡನೇ ತಿಂಗಳಿನ ಇಪ್ಪತ್ತೈದನೇ ದಿವಸದಲ್ಲಿ ಆದದ್ದೇನಂ ದರೆ--ಬಾಬೆಲಿನ ಅರಸನಾದ ಎವೀಲ್ಮೆರೋದಕನು ತನ್ನ ಆಳಿಕೆಯ ಮೊದಲನೇ ವರುಷದಲ್ಲಿ ಯೆಹೂದದ ಅರಸನಾದ ಯೆಹೋಯಾಖೀನನ ತಲೆಯನ್ನು ಎತ್ತಿ ಅವನನ್ನು ಸೆರೆಮನೆಯೊಳಗಿಂದ ಹೊರಗೆ ತರಿಸಿ ಅವನ ಸಂಗಡ ಕರುಣೆಯಿಂದ ಮಾತನಾಡಿ ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು. ಆಗ ಅವನು ಬದುಕಿದ ದಿನಗಳೆಲ್ಲಾ ಯಾವಾಗಲೂ ಅವನ ಮುಂದೆ ಊಟಮಾಡುತ್ತಿದ್ದನು.ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು. ಅವನ ಆಹಾರದ ವಿಷಯ ವೇನಂದರೆ--ಅವನು ಬದುಕಿದ ದಿನಗಳೆಲ್ಲಾ ಅವನು ಸಾಯುವ ದಿನದವರೆಗೆ ದಿನದಿನಕ್ಕೆ ತಕ್ಕ ಆಹಾರವು ಯಾವಾಗಲೂ ಬಾಬೆಲಿನ ಅರಸನ ಕಡೆಯಿಂದ ಕೊಡಲ್ಪಡುತ್ತಿತ್ತು.
- Nehemiah 6:6 ನೆಹೆಮೀಯ 6:6ಅದ ರಲ್ಲಿ--ನೀನೂ ಯೆಹೂದ್ಯರೂ ತಿರಿಗಿ ಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಕಟ್ಟಿಸುತ್ತಿದ್ದೀ.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
- Daniel 6:4–13 ದಾನಿಯೇಲನು 6:4–13ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು. ಆಗ ಆ ಮನುಷ್ಯರು --ಈ ದಾನಿಯೇಲನಿಗೆ ವಿರೋಧವಾಗಿ ಅವನ ದೇವರ ನ್ಯಾಯಪ್ರಮಾಣದಲ್ಲಿ ತಪ್ಪು ಸಿಗುವದೇ ಹೊರತು ನಮಗೆ ಇನ್ನೆಲ್ಲೂ ಸಿಗುವದಿಲ್ಲ ಎಂದು ಅಂದು ಕೊಂಡರು. ಆಗ ಪ್ರಧಾನರೂ ದೇಶಾಧಿಪತಿಯೂ ಅರಸನ ಬಳಿ ಕೂಡಿಬಂದು ಹೀಗೆಂದರು--ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು. ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು. ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು. ಆದಕಾರಣ ದಾರ್ಯಾವೆಷನು ಆ ಬರಹಕ್ಕೂ ನಿರ್ಣಯಕ್ಕೂ ರುಜು ಹಾಕಿದನು. ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು. ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು. ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು. ಆಗ ಅವರು ಪ್ರತ್ಯುತ್ತರವಾಗಿ ಅರಸನ ಮುಂದೆ--ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ ನೀನು ರುಜುಹಾಕಿದ ನಿರ್ಣಯವನ್ನಾದರೂ ಲಕ್ಷಿಸದೆ ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ ಅಂದರು.
- Esther 3:5–8 ಎಸ್ತೇರಳು 3:5–8ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು. ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು. ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು. ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- Nehemiah 2:19 ನೆಹೆಮೀಯ 2:19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
Original words (Hebrew)
- search · H1240בְּקַר bᵉqar
- book · H5609סְפַר çᵉphar
- records · H1799דִּכְרוֹן dikrôwn
- fathers · H2אַב ʼab
- find · H7912שְׁכַח shᵉkach
- book · H5609סְפַר çᵉphar
- records · H1799דִּכְרוֹן dikrôwn
- know · H3046יְדַע yᵉdaʻ
- this · H1791דֵּךְ dêk
- city · H7149קִרְיָא qiryâʼ
- rebellious · H4779מָרָד mârâd
- city · H7149קִרְיָא qiryâʼ
- hurtful · H5142נְזַק nᵉzaq
- kings · H4430מֶלֶךְ melek
- provinces · H4083מְדִינָה mᵉdîynâh
- moved · H5648עֲבַד ʻăbad
- sedition · H849אֶשְׁתַּדּוּר ʼeshtaddûwr
- same · H1459גַּו gav
- of · H4481מִן min
- old · H5957עָלַם ʻâlam
- time · H3118יוֹם yôwm
- for · H5922עַל ʻal
- which · H1836דֵּן dên
- this · H1791דֵּךְ dêk
- city · H7149קִרְיָא qiryâʼ
- destroyed · H2718חֲרַב chărab