Ezra · chapter 4 · verse 5
Ezra 4:5 in Kannada
ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
Paarasi yara arasanaada koreshana dinagalallellaa paara siyara arasanaada daaryaaveshana aalvikeya paryantara avara yochaneyannu vyarthamaadu vadakke avarige virodhavaagi yochanaakartarannu koolige ittu kondaru.
Ezra 4:5 in English
- King James Version (KJV)
- And hired counsellors against them, to frustrate their purpose, all the days of Cyrus king of Persia, even until the reign of Darius king of Persia.
- World English Bible (WEB)
- They hired counselors against them to frustrate their purpose all the days of Cyrus king of Persia, even until the reign of Darius king of Persia.
- American Standard Version (ASV)
- and hired counsellors against them, to frustrate their purpose, all the days of Cyrus king of Persia, even until the reign of Darius king of Persia.
- Bible in Basic English (BBE)
- And they gave payment to men who made designs against them and kept them from effecting their purpose, all through the time of Cyrus, king of Persia, till Darius became king.
- Darby Translation (DBY)
- and they hired counsellors against them, to frustrate their purpose, all the days of Cyrus king of Persia, even until the reign of Darius king of Persia.
- Webster's Bible (WBS)
- And hired counselors against them, to frustrate their purpose, all the days of Cyrus king of Persia, even until the reign of Darius king of Persia.
- Young's Literal Translation (YLT)
- and are hiring against them counsellors to make void their counsel all the days of Cyrus king of Persia, even till the reign of Darius king of Persia.
Read in context
- 3ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
- 4ಆದದರಿಂದ ಆ ದೇಶದ ಜನರು ಯೆಹೂದ ಜನರ ಕೈಗಳನ್ನು ಬಲಹೀನ ಮಾಡಿ ಕಟ್ಟು ವದರಲ್ಲಿ ಅವರನ್ನು ಕಳವಳಪಡಿಸಿದರು.
- 5ಪಾರಸಿ ಯರ ಅರಸನಾದ ಕೋರೆಷನ ದಿನಗಳಲ್ಲೆಲ್ಲಾ ಪಾರ ಸಿಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಪರ್ಯಂತರ ಅವರ ಯೋಚನೆಯನ್ನು ವ್ಯರ್ಥಮಾಡು ವದಕ್ಕೆ ಅವರಿಗೆ ವಿರೋಧವಾಗಿ ಯೋಚನಾಕರ್ತರನ್ನು ಕೂಲಿಗೆ ಇಟ್ಟು ಕೊಂಡರು.
- 6ಆದರೆ ಅಹಷ್ವೇರೋಷನು ಆಳುವಾಗ ಅವನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಕಾಗದ ಬರೆದರು.
- 7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
Cross references
- Nahum 1:11 ನಹೂಮ 1:11ಕರ್ತನಿಗೆ ವಿರೋಧವಾಗಿ ದುರಾ ಲೋಚನೆ ಮಾಡಿ ಕೇಡನ್ನು ಯೋಚಿಸುವವನು ನಿನ್ನೊಳ ಗಿಂದ ಹೊರಟಿದ್ದಾನೆ.
- Acts 24:1–27 ಅಪೊಸ್ತಲರ ಕೃತ್ಯಗಳು 24:1–27ಐದು ದಿವಸಗಳಾದ ಮೇಲೆ ಮಹಾ ಯಾಜಕನಾದ ಅನನೀಯನು ಹಿರಿಯರೊಂದಿಗೂ ಒಬ್ಬಾನೊಬ್ಬ ವಾಕ್ಚಾತುರ್ಯನಾದ ತೆರ್ತುಲ್ಲ ನೆಂಬವನೊಂದಿಗೂ ಬಂದು ಪೌಲನಿಗೆ ವಿರೋಧ ವಾದದ್ದನ್ನು ಅಧಿಪತಿಗೆ ತಿಳಿಯಪಡಿಸಿದರು. ಪೌಲ ನನ್ನು ಕರೆಯಿಸಿದಾಗ ತೆರ್ತುಲ್ಲನು ಅವನ ಮೇಲೆ ತಪ್ಪು ಹೊರಿಸುವದಕ್ಕೆ ಪ್ರಾರಂಭಿಸಿ--ಮಹಾಗೌರವವುಳ್ಳ ಫೇಲಿಕ್ಸನೇ, ನಿನ್ನಿಂದ ನಾವು ಬಹು ನೆಮ್ಮದಿ ಯಾಗಿರುವದರಿಂದಲೂ ನಿನ್ನ ಪರಾಂಬರಿಕೆಯಿಂದ ಈ ಜನಾಂಗಕ್ಕೆ ಬಹು ಯೋಗ್ಯವಾದ ಕಾರ್ಯಗಳು ನಡೆಯುತ್ತಿರುವದರಿಂದಲೂ ನಾವು ಕೃತಜ್ಞತೆಯಿಂದ ಯಾವಾಗಲೂ ಎಲ್ಲಾ ಸ್ಥಳಗಳಲ್ಲಿಯೂ ಮನವರಿಕೆ ಮಾಡಿಕೊಳ್ಳುತ್ತೇವೆ. ಆದಾಗ್ಯೂ ನಾನು ನಿನ್ನನ್ನು ಹೆಚ್ಚು ಬೇಸರಗೊಳಿಸದಂತೆ ನಾವು ಹೇಳುವ ಕೆಲವು ಮಾತುಗಳನ್ನು ದಯದಿಂದ ನೀನು ಕೇಳಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ. ಯಾಕಂದರೆ ಇವನು ಉಪದ್ರವ ಕೊಡುವವನೂ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೂ ನಜರೇತಿನ ಪಂಗಡದವರ ಮುಖಂ ಡನೂ ಎಂದು ನಾವು ಕಂಡೆವು. ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು. ಆದರೆ ಮುಖ್ಯನಾಯಕನಾದ ಲೂಸ್ಯನು ನಮ್ಮ ಬಳಿಗೆ ಬಂದು ಮಹಾ ಬಲಾತ್ಕಾರದಿಂದ ಅವನನ್ನು ನಮ್ಮ ಕೈಗಳಿಂದ ಬಿಡಿಸಿ, ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು. ಅದೇ ಪ್ರಕಾರ ಇವೆಲ್ಲವುಗಳು ನಿಜವೆಂದು ಯೆಹೂ ದ್ಯರು ಸಹ ಸಮ್ಮತಿಸಿದರು ಅಂದನು. ಆಗ ಅಧಿಪತಿಯು ಪೌಲನು ಮಾತನಾಡುವದಕ್ಕೆ ಕೈಸನ್ನೆ ಮಾಡಿದಾಗ ಅವನು--ಅನೇಕ ವರುಷಗಳಿಂದ ಈ ಜನಾಂಗಕ್ಕೆ ನೀನು ನ್ಯಾಯಾಧಿಪತಿಯಾಗಿ ರುವದು ನನಗೆ ತಿಳಿದಿರುವದರಿಂದ ನಾನು ಹೆಚ್ಚು ಧೈರ್ಯದಿಂದ ಪ್ರತಿವಾದ ಮಾಡುತ್ತೇನೆ; ನಾನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿ ಹನ್ನೆರಡು ದಿವಸಗಳಾದವೆಂದು ನೀನು ತಿಳಿದುಕೊಳ್ಳಬಹುದು. ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ. ಇದಲ್ಲದೆ ಅವರು ಈಗ ನನ್ನ ಮೇಲೆ ತಪ್ಪುಹೊರಿಸುವವುಗಳು ನಿಜವೆಂದು ಸಿದ್ಧಾಂತಮಾಡಲಾರರು. ಆದರೆ ನ್ಯಾಯಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಬರೆಯಲ್ಪಟ್ಟವುಗಳೆಲ್ಲವನ್ನು ನಂಬಿಕೊಂಡು ಅವರು ಪಾಷಾಂಡವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನನ್ನ ಪಿತೃಗಳ ದೇವರನ್ನು ಆರಾಧಿಸುವವನಾಗಿದ್ದೇನೆ ಎಂದು ನಾನು ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಸತ್ತುಹೋದ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವು ಇರುವದೆಂದು ನಾನು ದೇವರ ಕಡೆಗೆ ನಿರೀಕ್ಷೆ ಇಟ್ಟಿದ್ದೇನೆ. ಅದಕ್ಕೆ ಇವರು ಸಹ ಒಪ್ಪಿ ಕೊಳ್ಳುತ್ತಾರೆ. ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು. ಆದರೆ ನನಗೆ ವಿರೋಧ ವಾಗಿ ಅವರಿಗೆ ಏನಾದರೂ ಇದ್ದಿದ್ದರೆ ಅವರು ನಿನ್ನ ಮುಂದೆ ಆಕ್ಷೇಪಿಸುವದಕ್ಕೆ ಇಲ್ಲಿ ಇರಬೇಕಾಗಿತ್ತು. ಇಲ್ಲವಾದರೆ ಆಲೋಚನಾಸಭೆಯ ಮುಂದೆ ನಾನು ನಿಂತಿದ್ದಾಗ ನನ್ನಲ್ಲಿ ಏನಾದರೂ ಕೆಟ್ಟದ್ದನ್ನು ಅವರು ಕಂಡಿದ್ದರೆ ಅದನ್ನು ಈಗಲೇ ತಿಳಿಯಪಡಿಸಲಿ. ನಾನು--ಸತ್ತವರ ಪುನರುತ್ಥಾನದ ವಿಷಯವಾಗಿ ಈ ದಿನದಲ್ಲಿ ನಿಮ್ಮಿಂದ ವಿಚಾರಿಸಲ್ಪಡುತ್ತಿದ್ದೇನೆ ಎಂದು ಅವರ ಮಧ್ಯದಲ್ಲಿ ನಿಂತುಕೊಂಡು ಕೂಗಿ ಹೇಳಿದ ಈ ಒಂದು ಕೂಗಿಗಾಗಿ ಹೊರತು ಮತ್ತೇನೂ ಅವರು ಹೇಳಲಾರರು ಅಂದನು. ಆ ಮಾರ್ಗದ ವಿಷಯವಾಗಿ ಚೆನ್ನಾಗಿ ತಿಳಿದು ಕೊಂಡಿದ್ದ ಫೇಲಿಕ್ಸನು ಇವುಗಳನ್ನು ಕೇಳಿ ವಿಷಯವನ್ನು ಮುಂದಕ್ಕೆ ಹಾಕಿಸಿ--ಮುಖ್ಯನಾಯಕನಾದ ಲೂಸ್ಯನು ಬಂದಾಗ ನಿಮ್ಮ ವಿಷಯವನ್ನು ಸಂಪೂರ್ಣವಾಗಿ ವಿಚಾರಣೆ ಮಾಡುತ್ತೇನೆ ಎಂದು ಹೇಳಿದನು. ಪೌಲನು ಕಾವಲಲ್ಲಿ ಬಿಡುವಾಗಿದ್ದು ಅವನ ಪರಿ ಚಿತರು ಉಪಚಾರ ಮಾಡುವದಕ್ಕೆ ಅವನ ಬಳಿಗೆ ಬರುವ ಯಾರನ್ನೂ ಅಡ್ಡಿ ಮಾಡಬಾರದೆಂದು ಒಬ್ಬ ಶತಾಧಿಪತಿಗೆ ಅಪ್ಪಣೆ ಕೊಟ್ಟನು. ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು. ಇದಲ್ಲದೆ ನೀತಿ ದಮೆಯ ಮತ್ತು ಮುಂದೆ ಬರುವ ನ್ಯಾಯತೀರ್ಪಿನ ವಿಷಯವಾಗಿ ಅವನು ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ನಡುಗಿ--ನೀನು ಸದ್ಯಕ್ಕೆ ಹೋಗು; ನನಗೆ ಅನುಕೂಲವಾದ ಸಮಯವು ಇರುವಾಗ ನಿನ್ನನ್ನು ನಾನು ಕರೆಯಿಸುವೆನು ಎಂದು ಉತ್ತರಕೊಟ್ಟನು. ಫೇಲಿಕ್ಸನು ಪೌಲನನ್ನು ಬಿಡಿಸುವಂತೆ ಅವನಿಂದ ತನಗೆ ಹಣ ಸಿಕ್ಕೀತೆಂದು ನಿರೀಕ್ಷಿಸಿದ ಕಾರಣ ಪದೇ ಪದೇ ಅವನನ್ನು ಕರೆಯಿಸಿ ಅವನೊಂದಿಗೆ ಸಂಭಾಷಣೆ ಮಾಡುತ್ತಿದ್ದನು.ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು. ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
- Psalm 2:1–2 ಕೀರ್ತನೆಗಳು 2:1–2ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.
- Ezra 5:5–18 ಎಜ್ರನು 5:5–18ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವ ವರೆಗೂ ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಪ್ರತ್ಯುತ್ತರವನ್ನು ಪತ್ರದಲ್ಲಿ ಕಳುಹಿಸಿದರು. ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ. ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ-- ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ. ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು. ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು. ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ. ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು. ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ-- ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು. ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ. ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
- Ezra 4:24 ಎಜ್ರನು 4:24ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
Original words (Hebrew)
- hired · H7936שָׂכַר sâkar
- counsellors · H3289יָעַץ yâʻats
- frustrate · H6565פָּרַר pârar
- purpose · H6098עֵצָה ʻêtsâh
- days · H3117יוֹם yôwm
- Cyrus · H3566כּוֹרֶשׁ Kôwresh
- king · H4428מֶלֶךְ melek
- Persia · H6539פָּרַס Pâraç
- reign · H4438מַלְכוּת malkûwth
- Darius · H1867דָּֽרְיָוֵשׁ Dârᵉyâvêsh
- king · H4428מֶלֶךְ melek
- Persia · H6539פָּרַס Pâraç