Ezra · chapter 5 · verse 12
Ezra 5:12 in Kannada
ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
Aadare namma tandegalu paralokada devarige kopavannu ebbisida taruvaaya aatanu avarannu baabelina arasanaagidda kasdeeyara deshadavanaada nebooka dnechcharana kaiyalli oppisikottanu. Avanu ee aalayavannu haalumaadi janarannu baabelige takkondu hodanu.
Ezra 5:12 in English
- King James Version (KJV)
- But after that our fathers had provoked the God of heaven unto wrath, he gave them into the hand of Nebuchadnezzar the king of Babylon, the Chaldean, who destroyed this house, and carried the people away into Babylon.
- World English Bible (WEB)
- But after our fathers had provoked the God of heaven to wrath, he gave them into the hand of Nebuchadnezzar king of Babylon, the Chaldean, who destroyed this house and carried the people away into Babylon.
- American Standard Version (ASV)
- But after that our fathers had provoked the God of heaven unto wrath, he gave them into the hand of Nebuchadnezzar king of Babylon, the Chaldean, who destroyed this house, and carried the people away into Babylon.
- Bible in Basic English (BBE)
- But when the God of heaven was moved to wrath by our fathers, he gave them up into the hands of Nebuchadnezzar, king of Babylon, the Chaldaean, who sent destruction on this house and took the people away into Babylon.
- Darby Translation (DBY)
- But after that our fathers had provoked the God of the heavens to wrath, he gave them into the hand of Nebuchadnezzar king of Babylon, the Chaldean, and he destroyed this house, and carried the people away unto Babylon.
- Webster's Bible (WBS)
- But after that our fathers had provoked the God of heaven to wrath, he gave them into the hand of Nebuchadnezzar the king of Babylon, the Chaldean, who destroyed this house, and carried the people away into Babylon.
- Young's Literal Translation (YLT)
- but after that our fathers made the God of heaven angry, he gave them into the hand of Nebuchadnezzar king of Babylon the Chaldean, and this house he destroyed, and the people he removed to Babylon;
Read in context
- 10ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು.
- 11ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ.
- 12ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು.
- 13ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು.
- 14ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ--
Cross references
- Daniel 9:5 ದಾನಿಯೇಲನು 9:5ನಾವು ಪಾಪ ಅಕ್ರಮವನ್ನು ಮಾಡಿದ್ದೇವೆ; ಇದಲ್ಲದೆ ಕೆಟ್ಟವರಾಗಿ ನಡೆದು ತಿರುಗಿಬಿದ್ದಿದ್ದೇವೆ; ಅಂದರೆ ನಿನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ಬಿಟ್ಟುಹೋಗಿದ್ದೇವೆ.
- 2 Chronicles 36:16–17 2 ಪೂರ್ವಕಾಲವೃತ್ತಾಂತ 36:16–17ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು. ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Nehemiah 9:26–27 ನೆಹೆಮೀಯ 9:26–27ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು. ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
- 2 Kings 24:2 2 ಅರಸುಗಳು 24:2ಆದರೆ ಕರ್ತನು ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನ್ಯರ ಗುಂಪುಗಳನ್ನೂ ಅವನ ಮೇಲೆ ಕಳುಹಿಸಿದನು. ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ ಯೆಹೂದವನ್ನು ನಾಶ ಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.
- Jeremiah 39:1–14 ಯೆರೆಮೀಯ 39:1–14ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು. ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು; ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು. ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು. ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು. ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು. ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು. ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- 2 Chronicles 36:6–10 2 ಪೂರ್ವಕಾಲವೃತ್ತಾಂತ 36:6–10ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬೆಲಿಗೆ ಒಯ್ಯುವ ಹಾಗೆ ಅವನಿಗೆ ಸಂಕೋಲೆಗಳನ್ನು ಹಾಕಿಸಿದನು. ಇದಲ್ಲದೆ ನೆಬೂಕದ್ನೆಚ್ಚರನು ಕರ್ತನ ಮನೆಯ ಪಾತ್ರೆಗಳಲ್ಲಿ ಕೆಲವನ್ನು ಬಾಬೆಲಿಗೆ ತಕ್ಕೊಂಡು ಹೋಗಿ ಬಾಬೆಲಿ ನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು. ಆದರೆ ಯೆಹೋಯಾಕೀಮನ ಮಿಕ್ಕಾದ ಕ್ರಿಯೆಗಳೂ ಅವನು ಮಾಡಿದ ಅಸಹ್ಯಗಳೂ ಅವನಲ್ಲಿ ಕಂಡು ಕೊಂಡದ್ದೂ ಇಗೋ, ಅವು ಇಸ್ರಾಯೇಲ್ ಯೆಹೂದದ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಆಳಿದನು. ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
- 2 Chronicles 34:24–25 2 ಪೂರ್ವಕಾಲವೃತ್ತಾಂತ 34:24–25ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ ಯೆಹೂದದ ಅರಸನ ಮುಂದೆ ಅವರು ಓದಿದ ಪುಸ್ತಕದಲ್ಲಿ ಬರೆ ಯಲ್ಪಟ್ಟ ಎಲ್ಲಾ ಶಾಪಗಳನ್ನೂ ಬರಮಾಡುವೆನು. ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
- 1 Kings 9:6–9 1 ಅರಸುಗಳು 9:6–9ನೀವಾದರೂ ನಿಮ್ಮ ಮಕ್ಕಳಾದರೂ ನಾನು ನಿಮ್ಮ ಮುಂದೆ ಇಟ್ಟ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳದೆ ನನ್ನ ಕಡೆಯಿಂದ ಹೊರಟುಹೋಗಿ ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು. ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- 2 Kings 24:10–17 2 ಅರಸುಗಳು 24:10–17ಆ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕ ದ್ನೆಚರನ ಸೇವಕರು ಯೆರೂಸಲೇಮಿಗೆ ವಿರೋಧವಾಗಿ ಬಂದಾಗ ಆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಪಟ್ಟಣಕ್ಕೆ ವಿರೋಧವಾಗಿ ಬಂದನು; ಅವನ ಸೇವಕರು ಅದನ್ನು ಮುತ್ತಿಗೆ ಹಾಕಿದರು. ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು. ಕರ್ತನು ಹೇಳಿದ ಪ್ರಕಾರವೇ ಅವನು ಅಲ್ಲಿಂದ ಕರ್ತನ ಮನೆಯ ಎಲ್ಲಾ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕರ್ತನ ಮನೆಯಲ್ಲಿ ಮಾಡಿದ ಬಂಗಾರದ ಎಲ್ಲಾ ಪಾತ್ರೆಗಳನ್ನೂ ತುಂಡು ತುಂಡಾಗಿ ಕತ್ತರಿಸಿಬಿಟ್ಟನು. ಅವನು ಯೆರೂಸಲೇಮಿನವರೆಲ್ಲರನ್ನೂ ಎಲ್ಲಾ ಪ್ರಧಾನರನ್ನೂ ಎಲ್ಲಾ ಸ್ಥಿತಿಯುಳ್ಳ ಪರಾಕ್ರಮಶಾಲಿ ಗಳನ್ನೂ ಹತ್ತು ಸಾವಿರ ಸೆರೆಯವರನ್ನೂ ಮತ್ತು ಎಲ್ಲಾ ಕೌಶಲ್ಯಗಾರರನ್ನೂ ಕಮ್ಮಾರರನ್ನೂ ಅಲ್ಲಿಂದ ಒಯ್ದನು; ದೇಶದ ಬಡವರ ಹೊರತು ಉಳಿದವರು ಯಾರೂ ಅಲ್ಲಿ ಇರಲಿಲ್ಲ. ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು. ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.
- Psalm 106:40 ಕೀರ್ತನೆಗಳು 106:40ಆಗ ಕರ್ತನ ಕೋಪವು ಆತನ ಜನರಿಗೆ ವಿರೋಧವಾಗಿ ಉರಿ ಯಿತು; ಆತನು ತನ್ನ ಸ್ವಂತ ಬಾಧ್ಯತೆಯನ್ನು ಅಸಹ್ಯಿಸಿ ಕೊಂಡು
- Jeremiah 5:29 ಯೆರೆಮೀಯ 5:29ಇವುಗಳ ನಿಮಿತ್ತ ನಾನು ವಿಚಾರಿಸುವದಿಲ್ಲವೋ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
Original words (Hebrew)
- But · H3861לָהֵן lâhên
- after · H4481מִן min
- fathers · H2אַב ʼab
- provoked · H7265רְגַז rᵉgaz
- God · H426אֱלָהּ ʼĕlâhh
- heaven · H8065שָׁמַיִן shâmayin
- wrath · H7265רְגַז rᵉgaz
- gave · H3052יְהַב yᵉhab
- them · H1994הִמּוֹ himmôw
- hand · H3028יַד yad
- Nebuchadnezzar · H5020נְבוּכַדְנֶצַּר Nᵉbûwkadnetstsar
- king · H4430מֶלֶךְ melek
- Babylon · H895בַּבֶל Babel
- Chaldean · H3679כַּסְדַּי Kaçday
- destroyed · H5642סְתַר çᵉthar
- this · H1836דֵּן dên
- house · H1005בַּיִת bayith
- carried · H1541גְּלָה gᵉlâh
- people · H5972עַם ʻam
- away · H1541גְּלָה gᵉlâh
- Babylon · H895בַּבֶל Babel