Ezra · chapter 6 · verse 9
Ezra 6:9 in Kannada
ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
Idallade avaru para lokada devarige suvaasaneyulla baligalannu arpisuva haageyoo arasana praanakkoskaravoo avana makkala praanakkoskaravoo praarthane maaduva haageyoo paralokada devarige dahanabaligala nimitta
Ezra 6:9 in English
- King James Version (KJV)
- And that which they have need of, both young bullocks, and rams, and lambs, for the burnt offerings of the God of heaven, wheat, salt, wine, and oil, according to the appointment of the priests which [are] at Jerusalem, let it be given them day by day without fail:
- World English Bible (WEB)
- That which they have need of, including young bulls, rams, and lambs, for burnt offerings to the God of heaven; also wheat, salt, wine, and oil, according to the word of the priests who are at Jerusalem, let it be given them day by day without fail,
- American Standard Version (ASV)
- And that which they have need of, both young bullocks, and rams, and lambs, for burnt-offerings to the God of heaven; [also] wheat, salt, wine, and oil, according to the word of the priests that are at Jerusalem, let it be given them day by day without fail;
- Bible in Basic English (BBE)
- And whatever they have need of, young oxen and sheep and lambs, for burned offerings to the God of heaven, grain, salt, wine, and oil, whatever the priests in Jerusalem say is necessary, is to be given to them day by day regularly:
- Darby Translation (DBY)
- And that which they have need of, both young bullocks and rams and lambs, for the burnt-offerings to the God of the heavens, wheat, salt, wine, and oil, according to the appointment of the priests that are at Jerusalem, let it be given them day by day without fail;
- Webster's Bible (WBS)
- And that which they have need of, both young bullocks, and rams, and lambs, for the burnt-offerings of the God of heaven, wheat, salt, wine, and oil, according to the appointment of the priests who [are] at Jerusalem, let it be given to them day by day without fail:
- Young's Literal Translation (YLT)
- and what they are needing — both young bullocks, and rams, and lambs for burnt-offerings to the God of heaven, wheat, salt, wine, and oil according to the saying of the priests who [are] in Jerusalem — let be given to them day by day without fail,
Read in context
- 7ದೇವರ ಆಲಯದ ಗೊಡವೆಯನ್ನು ನೀವು ಬಿಡಿರಿ. ಯೆಹೂದ್ಯರ ಅಧಿಪತಿಯೂ ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.
- 8ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನಂದರೆ--ಅವರು ಅಭ್ಯಂತರ ಮಾಡಲ್ಪಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ಕಪ್ಪದಿಂದಲೇ ಈ ಮನುಷ್ಯರಿಗೆ ಖರ್ಚು ಕೊಡಲ್ಪಡಲಿ.
- 9ಇದಲ್ಲದೆ ಅವರು ಪರ ಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ ಅರಸನ ಪ್ರಾಣಕ್ಕೋಸ್ಕರವೂ ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡುವ ಹಾಗೆಯೂ ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ
- 10ಅವರಿಗೆ ಬೇಕಾದ ಹೋರಿ ಗಳೂ ಟಗರುಗಳೂ ಕುರಿಮರಿಗಳೂ ಗೋಧಿಯೂ ಉಪ್ಪೂ ದ್ರಾಕ್ಷಾರಸವೂ ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಲ್ಪಡಲಿ.
- 11ನಾನು ಕೊಡುವ ಅಪ್ಪಣೆ ಏನಂದರೆ--ಯಾವನಾದರೂ ಈ ಮಾತನ್ನು ಬದಲು ಮಾಡಿದರೆ ಅವನ ಮನೆಯಿಂದ ಮರ ಕಿತ್ತು ನೆಡಲ್ಪಡಲಿ; ಅವನು ಅದರಲ್ಲಿ ಗಲ್ಲಿಗೆ ಹಾಕಲ್ಪಡಲಿ; ಅವನ ಮನೆಯು ಇದರ ನಿಮಿತ್ತ ತಿಪ್ಪೆ ಮಾಡಲ್ಪಡಲಿ.
Cross references
- Psalm 50:9–13 ಕೀರ್ತನೆಗಳು 50:9–13ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
- Leviticus 1:10 ಯಾಜಕಕಾಂಡ 1:10ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆ ಯಿಂದಾದರೆ ಅವನು ಕುರಿಯನ್ನಾಗಲಿ ಆಡನ್ನಾಗಲಿ ದೋಷವಿಲ್ಲದ ಒಂದು ಗಂಡನ್ನು ತರಬೇಕು.
- Leviticus 2:1–16 ಯಾಜಕಕಾಂಡ 2:1–16ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು. ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು. ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ನಿನ್ನ ಕಾಣಿಕೆಯು ಬೋಗುಣಿ ಯಲ್ಲಿ ಬೇಯಿಸಿದ ಆಹಾರ ಸಮರ್ಪಣೆಯಾಗಿದ್ದರೆ ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು. ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ ಅದರ ಮೇಲೆ ಎಣ್ಣೆ ಸುರಿಯಬೇಕು; ಅದು ಆಹಾರ ಸಮರ್ಪಣೆಯಾಗಿದೆ. ನಿನ್ನ ಕಾಣಿಕೆಯು ಬಾಂಡ್ಲೆಯಲ್ಲಿ ಬೇಯಿಸಿದ ಆಹಾರ ವಾಗಿದ್ದರೆ ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು. ನೀನು ಇವುಗಳಿಂದ ಮಾಡಿದ ಆಹಾರ ಸಮರ್ಪಣೆಯನ್ನು ಕರ್ತನಿಗೆ ತರಬೇಕು; ಅದು ಯಾಜಕನಿಗೆ ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ತರುವನು. ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾದ ಆಹಾರ ಸಮರ್ಪಣೆ ಯನ್ನಾಗಿ ತೆಗೆದುಕೊಂಡು ಅದನ್ನು ಯಜ್ಞವೇದಿಯ ಮೇಲೆ ಸುಡಬೇಕು: ಅದು ಬೆಂಕಿಯಿಂದ ಮಾಡಿ ದ್ದಾಗಿದ್ದು ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ರುವದು. ಆಹಾರ ಸಮರ್ಪಣೆಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರರಿಗೂ ಆಗಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಕರ್ತನ ಸಮ ರ್ಪಣೆಗಳಲ್ಲಿ ಅತಿ ಪರಿಶುದ್ಧವಾಗಿರುವದು. ಕರ್ತನಿಗೆ ನೀನು ತರುವ ಆಹಾರ ಸಮರ್ಪಣೆಯು ಯಾವದೂ ಹುಳಿಯಿಂದ ಮಾಡಿದ್ದಾಗಿರಬಾರದು; ಕರ್ತನಿಗೆ ನೀವು ಬೆಂಕಿಯಿಂದ ಮಾಡುವ ಎಲ್ಲಾ ಸಮರ್ಪಣೆಗಳಲ್ಲಿ ಹುಳಿಯನ್ನಾಗಲಿ ಜೇನನ್ನಾಗಲಿ ಸುಡಬಾರದು. ಪ್ರಥಮ ಫಲದ ಕಾಣಿಕೆಯ ವಿಷಯ ದಲ್ಲಿಯಾದರೋ ನೀವು ಅವುಗಳನ್ನು ಕರ್ತನಿಗೆ ಸಮ ರ್ಪಿಸಬೇಕು; ಆದರೆ ಅವುಗಳನ್ನು ಯಜ್ಞವೇದಿಯ ಮೇಲೆ ಸುವಾಸನೆಗಾಗಿ ಸುಡಬಾರದು. ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು. ನೀನು ಅದರ ಮೇಲೆ ಎಣ್ಣೆಯನ್ನು ಹಾಕಿ ಅದರ ಮೇಲೆ ಸಾಂಬ್ರಾಣಿಯನ್ನು ಇಡಬೇಕು; ಅದು ಆಹಾರ ಸಮರ್ಪಣೆಯಾಗಿದೆ.ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ. ಯಾಜಕನು ಬಡಿದ ಕಾಳುಗಳಲ್ಲಿ ಸ್ವಲ್ಪ ಭಾಗವನ್ನು ಮತ್ತು ಎಣ್ಣೆಯ ಸ್ವಲ್ಪ ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿ ಯನ್ನು ಜ್ಞಾಪಕಾರ್ಥವಾಗಿ ಸುಡಬೇಕು: ಇದು ಕರ್ತ ನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.
- Leviticus 1:3–5 ಯಾಜಕಕಾಂಡ 1:3–5ಅವನ ಯಜ್ಞವು ಹಿಂಡಿನ ದಹನಬಲಿಯಾಗಿದ್ದರೆ ಅವನು ದೋಷವಿಲ್ಲದ ಗಂಡನ್ನು ಅರ್ಪಿಸಲಿ; ಅವನು ಅದನ್ನು ತನ್ನ ಸ್ವಇಚ್ಛೆಯಿಂದ ಕರ್ತನ ಮುಂದೆ ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಅರ್ಪಿಸಬೇಕು. ಅವನು ತನ್ನ ಕೈಯನ್ನು ದಹನಬಲಿಯ ತಲೆಯ ಮೇಲೆ ಇಡಬೇಕು: ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವದು. ಅವನು ಆ ಹೋರಿಯನ್ನು ಕರ್ತನ ಮುಂದೆ ವಧಿಸಬೇಕು; ಆಗ ಆರೋನನ ಕುಮಾರರಾದ ಯಾಜಕರು ರಕ್ತವನ್ನು ತಂದು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿರುವ ಯಜ್ಞವೇದಿಯ ಸುತ್ತಲೂ ಚಿಮುಕಿಸಬೇಕು.
- Mark 9:49 ಮಾರ್ಕನು 9:49ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Numbers 15:4–31 ಅರಣ್ಯಕಾಂಡ 15:4–31ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡವೂ ಇಲ್ಲವೆ ಬಲಿಯ ಸಂಗಡವೂ ಒಂದು ಕುರಿಗೋಸ್ಕರ ಹಿನ್ನಿನ ನಾಲ್ಕನೇ ಭಾಗದ ದ್ರಾಕ್ಷಾರಸವನ್ನು ಅರ್ಪಿಸಬೇಕು. ಇಲ್ಲವೆ ಟಗರಿಗೋಸ್ಕರ ಆಹಾರದ ಅರ್ಪಣೆಯಾಗಿ ಹಿನ್ನಿನ ಮೂರನೇ ಪಾಲು ಎಣ್ಣೇ ಬೆರೆಸಿದ ಹಿಟ್ಟಿನ ಎರಡು ದಶಮಾಂಶಗಳನ್ನು ನೀನು ಸಿದ್ಧಮಾಡಬೇಕು. ಪಾನದ ಅರ್ಪಣೆಯನ್ನು ಕರ್ತನಿಗೆ ಸುವಾಸನೆಗಾಗಿ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವನ್ನು ಅರ್ಪಿಸ ಬೇಕು. ನೀನು ಕರ್ತನಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾ ಧಾನದ ಅರ್ಪಣೆಗಳಿಗಾಗಿ ಕರ್ತನಿಗೆ ಹೋರಿಯನ್ನು ನೀನು ಸಿದ್ಧಮಾಡುವಾಗ ಅವನು ಆಹಾರದ ಅರ್ಪಣೆಗಾಗಿ ಅರ್ಧ ಹಿನ್ನಿನ ಎಣ್ಣೇ ಬೆರೆಸಿದ ಮೂರು ದಶಮಾಂಶದ ಹಿಟ್ಟನ್ನು ಒಂದು ಹೋರಿಯೊಂದಿಗೆ ತರಬೇಕು. ಪಾನದ ಅರ್ಪಣೆಗಾಗಿ ಅರ್ಧ ಹಿನ್ನಿನ ದ್ರಾಕ್ಷಾರಸವನ್ನು ಬೆಂಕಿಯಿಂದ ಮಾಡಿದ ಅರ್ಪಣೆ ಗಾಗಿ ಕರ್ತನಿಗೆ ಸುವಾಸನೆಯಾದ ದಹನಬಲಿಗಾಗಿ ತರಬೇಕು. ಹೀಗೆ ಅದು ಒಂದು ಹೋರಿಗೂ ಇಲ್ಲವೆ ಒಂದು ಟಗರಿಗೂ ಒಂದು ಕುರಿಮರಿಗೂ ಒಂದು ಮೇಕೆಗೂ ಮಾಡತಕ್ಕದ್ದು. ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡಬೇಕು. ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು. ನಿಮ್ಮ ಸಂಗಡ ಪ್ರಯಾಣಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ಬೆಂಕಿಯ ಅರ್ಪಣೆಯನ್ನು ಅರ್ಪಿಸುವಾಗ ನೀವು ಹೇಗೆ ಮಾಡು ತ್ತೀರೋ ಹಾಗೆಯೇ ಅವನು ಮಾಡಲಿ. ಸಭೆಗೂ ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯ ನಿಗೂ ಒಂದೇ ಕಟ್ಟಳೆ; ಇದು ನಿಮ್ಮ ಸಂತಾನಗಳಿಗೆ ನಿತ್ಯವಾದ ಕಟ್ಟಳೆ; ಕರ್ತನ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. ನಿಮಗೂ ನಿಮ್ಮ ಕೂಡ ಪ್ರಯಾಣಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು ಎಂದು ಹೇಳಿದನು. ಕರ್ತನು ಮೋಶೆಗೆ ಹೇಳಿದ್ದೇನಂದರೆ-- ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವ ರಿಗೆ--ನಾನು ನಿಮ್ಮನ್ನು ತರುವ ದೇಶಕ್ಕೆ ಬಂದು ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ನೀವು ತಪ್ಪಿ ಕರ್ತನು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ ಆತನು ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು ನಿಮ್ಮ ಸಂತತಿಗಳವರೆಗೂ ಕರ್ತನು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ ಸಭೆಯು ಕರ್ತನಿಗೆ ಸುವಾಸನೆಯಾದ ದಹನ ಬಲಿಗಾಗಿ ಒಂದು ಎಳೇ ಹೋರಿಯನ್ನೂ ಕ್ರಮದ ಪ್ರಕಾರ ಅದರ ಆಹಾರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಪಾಪ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು. ಯಾಜಕನು ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತಮಾಡಬೇಕು; ಅದು ತಿಳಿಯದೆ ಮಾಡಲಾಗಿತ್ತು. ಆದಾಗ್ಯೂ ಅವರು ಕರ್ತ ನಿಗೆ ದಹನ ಬಲಿಯಾಗಿ ತಮ್ಮ ಅರ್ಪಣೆಯನ್ನೂ ತಮ್ಮ ತಪ್ಪಿಗೋಸ್ಕರ ಪಾಪ ಬಲಿಯನ್ನೂ ಕರ್ತನ ಮುಂದೆ ತರಬೇಕು. ಆಗ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಅವರೊಳಗೆ ಪರಕೀಯನಾಗಿ ಪ್ರವಾಸಿ ಯಾಗಿರುವವನಿಗೂ ಅದು ಪರಿಹಾರವಾಗುವದು. ಯಾಕಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು. ಆದರೆ ಯಾವನಾದರೂ ತಿಳಿಯದೆ ಪಾಪ ಮಾಡಿದರೆ ಪಾಪದ ಬಲಿಗಾಗಿ ಒಂದು ವರುಷದ ಮೇಕೆಯನ್ನು ತರಬೇಕು. ತಿಳಿಯದೆ ಪಾಪಮಾಡಿ ದಂಥ ಆ ಪಾಪಮಾಡಿದವನಿಗೋಸ್ಕರ ಯಾಜಕನು ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅದು ಪರಿಹಾರವಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಇಸ್ರಾಯೇಲ್ ಮಕ್ಕಳಲ್ಲಿ ಹುಟ್ಟಿದವ ರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ನಿಮ್ಮೆಲ್ಲರಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ಆಜ್ಞೆ ಇರಬೇಕು. ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು. ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
- Exodus 29:38–42 ವಿಮೋಚನಕಾಂಡ 29:38–42ಇದಲ್ಲದೆ ಯಜ್ಞವೇದಿಯ ಮೇಲೆ ನೀನು ಅರ್ಪಿಸ ಬೇಕಾದದ್ದು ಇದೇ; ಒಂದು ವರುಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಡದೆ ಅರ್ಪಿಸಬೇಕು. ಒಂದು ಕುರಿಮರಿಯನ್ನು ಬೆಳಿಗ್ಗೆ ಅರ್ಪಿಸಬೇಕು, ಮತ್ತೊಂದನ್ನು ಸಾಯಂಕಾಲ ಅರ್ಪಿಸಬೇಕು. ಹಿನ್ನಿನ ನಾಲ್ಕನೆಯ ಒಂದು ಪಾಲಿನಷ್ಟು ಹಿಂಡಿದ ಎಣ್ಣೆ ಹೊಯಿದ ನಯವಾದ ಹಿಟ್ಟಿನ ಹತ್ತನೆಯ ಪಾಲೂ ಹಿನ್ನಿನ ನಾಲ್ಕನೆಯ ಪಾಲಿನಷ್ಟು ದ್ರಾಕ್ಷಾರಸದ ಪಾನ ದರ್ಪಣೆಯೂ ಒಂದು ಕುರಿಮರಿಯೊಂದಿಗೆ ಅರ್ಪಿಸ ಬೇಕು. ಇನ್ನೊಂದು ಕುರಿಮರಿಯನ್ನು ಸಾಯಂಕಾಲ ದಲ್ಲಿ ಅರ್ಪಿಸಬೇಕು. ಉದಯದ ಆಹಾರ ಕಾಣಿಕೆ ಯಂತೆಯೂ ಅದರ ಪಾನದರ್ಪಣೆಯಂತೆಯೂ ಇದಕ್ಕೂ ಮಾಡಿ ಕರ್ತನಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು.
- 1 Chronicles 9:29 1 ಪೂರ್ವಕಾಲವೃತ್ತಾಂತ 9:29ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು.
- Leviticus 9:2 ಯಾಜಕಕಾಂಡ 9:2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
- Numbers 28:1–29 ಅರಣ್ಯಕಾಂಡ 28:1–29ಕರ್ತನು ಮೋಶೆಯ ಸಂಗಡ ಮಾತ ನಾಡಿ-- ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ--ನನ್ನ ಸುವಾಸನೆಗೋಸ್ಕರ ಬೆಂಕಿ ಯಿಂದ ಮಾಡಿದ ಬಲಿಗಳಿಗೋಸ್ಕರವಾಗಿರುವ ನನ್ನ ರೊಟ್ಟಿಯ ಅರ್ಪಣೆಯನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವದಕ್ಕೆ ನೀವು ನೋಡಿ ಕೊಳ್ಳಿರಿ. ನೀನು ಅವರಿಗೆ ಹೇಳಬೇಕಾದದ್ದು--ನೀವು ಕರ್ತನಿಗೆ ಅರ್ಪಿಸಬೇಕಾದ ಅರ್ಪಣೆ ಏನಂದರೆನಿತ್ಯ ದಹನಬಲಿಗಾಗಿ ಪ್ರತಿದಿನ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿಮರಿಗಳು. ಒಂದು ಕುರಿಮರಿಯನ್ನು ಉದಯದಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಅರ್ಪಿಸಬೇಕು. ಆಹಾರದ ಅರ್ಪಣೆಗಾಗಿ ಹಿನ್ನಿನ ನಾಲ್ಕನೇ ಪಾಲು, ಕುಟ್ಟಿದ ಎಣ್ಣೆ ಕಲಸಿದ ಹಿಟ್ಟಿನ ಏಫದ ಹತ್ತನೇ ಪಾಲು. ಇದು ಸೀನಾಯಿ ಪರ್ವತದಲ್ಲಿ ಕರ್ತನಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು. ಒಂದು ಕುರಿಮರಿಗೆ ತಕ್ಕ ಪಾನದ ಅರ್ಪಣೆ ಹಿನ್ನಿನ ನಾಲ್ಕನೇ ಪಾಲು ಪರಿಶುದ್ಧ ಸ್ಥಳದಲ್ಲಿ ಅಮಲೇರುವ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಕರ್ತನಿಗೆ ಹೊಯಿಸಬೇಕು. ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು; ಅದರ ಆಹಾ ರದ ಅರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಉದಯದಲ್ಲಿ ಮಾಡಿದ ಹಾಗೆ ಕರ್ತನಿಗೆ ಸುವಾಸನೆ ಯಾಗುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು. ಆದರೆ ಸಬ್ಬತ್ ದಿವಸದಲ್ಲಿ ಆಹಾರದ ಅರ್ಪಣೆ ಗಾಗಿ ಮಚ್ಚೆಯಿಲ್ಲದ ಒಂದು ವರುಷದ ಎರಡು ಕುರಿ ಮರಿಗಳನ್ನೂ ಎರಡು ದಶಾಂಶಗಳಷ್ಟು ಎಣ್ಣೇ ಕಲಸಿದ ಹಿಟ್ಟನ್ನೂ ಅದಕ್ಕೆ ಪಾನದ ಅರ್ಪಣೆಯನ್ನೂ ನಿತ್ಯ ದಹನಬಲಿಯ ಹೊರತು ಪ್ರತಿ ಸಬ್ಬತ್ತಿಗೆ ತಕ್ಕ ದಹನ ಬಲಿಯೂ ಅದರ ಪಾನದ ಅರ್ಪಣೆಯೂ ಇದೇ. ನಿಮ್ಮ ತಿಂಗಳುಗಳ ಆರಂಭದಲ್ಲಿ ನೀವು ಕರ್ತನಿಗೆ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ಮಚ್ಚೆಯಿಲ್ಲದ ಒಂದು ವರುಷದ ಏಳು ಕುರಿಮರಿಗಳನ್ನೂ ಒಂದೊಂದು ಹೋರಿಗೆ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟಿನ ಮೂರು ದಶಾಂಶಗಳು; ಒಂದೊಂದು ಟಗರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಎರಡು ದಶಾಂಶಗಳು. ಒಂದೊಂದು ಕುರಿಮರಿಗೆ ಆಹಾರದ ಅರ್ಪಣೆಯಾಗಿ ಎಣ್ಣೇ ಕಲಸಿದ ಹಿಟ್ಟಿನ ಒಂದು ದಶಾಂಶವು, ಕರ್ತನಿಗೆ ಸುವಾಸನೆಯ ದಹನ ಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯು ಇದೇ. ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಅಂದರೆ ಹೋರಿಗೆ ಅರ್ಧ ಹಿನ್ನಿನ ದ್ರಾಕ್ಷಾರಸವು; ಟಗರಿಗೆ ಹಿನ್ನಿನ ಮೂರನೇ ಪಾಲು ದ್ರಾಕ್ಷಾರಸವು; ಕುರಿಮರಿಗೆ ಕಾಲು ಹಿನ್ನಿನ ದ್ರಾಕ್ಷಾರಸವು ಇರಬೇಕು; ಇದು ವರುಷಕ್ಕಿರುವ ತಿಂಗಳುಗಳಲ್ಲಿ ಒಂದೊಂದಕ್ಕೆ ತಕ್ಕ ದಹನ ಬಲಿಯಾಗಿದೆ. ಇದಲ್ಲದೆ ನಿತ್ಯ ದಹನ ಬಲಿಯ ಹೊರತು ಕರ್ತನಿಗೆ ಪಾಪ ಬಲಿಗಾಗಿ ಒಂದು ಮೇಕೆಮರಿಯನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆ ಯನ್ನೂ ಅರ್ಪಿಸಬೇಕು. ಆದರೆ ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸವು ಕರ್ತನ ಪಸ್ಕವಾಗಿರಬೇಕು. ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಮೊದಲನೇ ದಿವಸದಲ್ಲಿ ಪರಿಶುದ್ಧ ಸಭೆಯನ್ನು ಕೂಡಿಸಬೇಕು. ಯಾವ ತರವಾದ ಕಷ್ಟಕರವಾದ ಕೆಲಸ ವನ್ನು ನೀವು ಆ ದಿವಸದಲ್ಲಿ ಮಾಡಬಾರದು. ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು. ಅವುಗಳ ಆಹಾರದ ಅರ್ಪಣೆಯನ್ನೂ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶ ಗಳನ್ನೂ ಅರ್ಪಿಸಬೇಕು. ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಒಂದು ದಶಾಂಶವನ್ನು ಅರ್ಪಿಸಬೇಕು. ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಪಾಪ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು. ಇವುಗಳನ್ನು ನಿತ್ಯವಾದ ದಹನಬಲಿಯಾಗಿರುವ ಉದಯದ ದಹನಬಲಿಯ ಹೊರತಾಗಿ ನೀವು ಅರ್ಪಿಸಬೇಕು. ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೂ ದಿನ ದಿನಕ್ಕೆ ಕರ್ತನಿಗೆ ಸುವಾಸೆನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು; ಅದನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು. ಏಳನೇ ದಿವಸದಲ್ಲಿ ನಿಮಗೆ ಪರಿಶುದ್ಧವಾದ ಸಭೆಯು ಇರಬೇಕು; ಯಾವ ಕೆಲಸವನ್ನೂ ನೀವು ಮಾಡಬಾರದು. ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಕರ್ತ ನಿಗೆ ನಿಮ್ಮ ವಾರಗಳಲ್ಲಿ ಹೊಸ ಆಹಾರದ ಅರ್ಪಣೆ ಯನ್ನು ಅರ್ಪಿಸುವಾಗ ನಿಮಗೆ ಪರಿಶುದ್ಧವಾದ ಸಭೆ ಇರಬೇಕು; ಯಾವ ಕೆಲಸವನ್ನಾದರೂ ಮಾಡಬಾರದು. ನೀವು ಕರ್ತನಿಗೆ ಸುವಾಸನೆಯುಳ್ಳ ದಹನಬಲಿಗಾಗಿ ಎರಡು ಎಳೇ ಹೋರಿಗಳನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ ಅವುಗಳ ಆಹಾರದ ಅರ್ಪಣೆಗಾಗಿ ಎಣ್ಣೇ ಕಲಸಿದ ಹಿಟ್ಟನ್ನೂ ಹೋರಿಗೆ ಮೂರು ದಶಾಂಶಗಳನ್ನೂ ಟಗರಿಗೆ ಎರಡು ದಶಾಂಶಗಳನ್ನೂ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ದಶಾಂಶವನ್ನೂ
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
Original words (Hebrew)
- which · H4101מָה mâh
- of · H2818חֲשַׁח chăshach
- young · H1123בֵּן bên
- bullocks · H8450תּוֹר tôwr
- rams · H1798דְּכַר dᵉkar
- lambs · H563אִמַּר ʼimmar
- offerings · H5928עֲלָה ʻălâh
- God · H426אֱלָהּ ʼĕlâhh
- heaven · H8065שָׁמַיִן shâmayin
- wheat · H2591חִנְטָא chinṭâʼ
- salt · H4416מְלַח mᵉlach
- wine · H2562חֲמַר chămar
- oil · H4887מְשַׁח mᵉshach
- appointment · H3983מֵאמַר mêʼmar
- priests · H3549כָּהֵן kâhên
- Jerusalem · H3390יְרוּשָׁלֵם Yᵉrûwshâlêm
- be · H1934הָוָא hâvâʼ
- given · H3052יְהַב yᵉhab
- day · H3118יוֹם yôwm
- day · H3118יוֹם yôwm
- without · H3809לָא lâʼ
- fail · H7960שָׁלוּ shâlûw