Ezra 7:27 in Kannada
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
Aaga ejranu -- yeroosaleminalliruva kartana aalayavannu alankarisuvadakke ara sana hrudayadalli inthaaddannu ittu arasana mundeyoo avana salahegaarara mundeyoo arasana paraakramavulla pradhaanara mundeyoo nanage krupe maadida namma tandegala devaraagi ruva kartanu stutisalpadali.heegeye nanna devaraagiruva kartana hastavu nanna mele iddaddarinda naanu balagondu israayeli nolaginda mukhyastharannu nanna sangada hogalu koodisikondenu andanu.
Ezra 7:27 in English
- King James Version (KJV)
- Blessed [be] the LORD God of our fathers, which hath put [such a thing] as this in the king’s heart, to beautify the house of the LORD which [is] in Jerusalem:
- World English Bible (WEB)
- Blessed be the LORD, the God of our fathers, who has put such a thing as this in the king’s heart, to beautify the LORD’s house which is in Jerusalem;
- American Standard Version (ASV)
- Blessed be Jehovah, the God of our fathers, who hath put such a thing as this in the king’s heart, to beautify the house of Jehovah which is in Jerusalem;
- Bible in Basic English (BBE)
- Praise be to the Lord, the God of our fathers, who has put such a thing into the heart of the king, to make fair the house of the Lord which is in Jerusalem;
- Darby Translation (DBY)
- Blessed be Jehovah the God of our fathers, who has put [such a thing] as this in the king's heart, to beautify the house of Jehovah which is at Jerusalem;
- Webster's Bible (WBS)
- Blessed [be] the LORD God of our fathers, who hath put [such a thing] as this in the king's heart, to beautify the house of the LORD which [is] in Jerusalem:
- Young's Literal Translation (YLT)
- Blessed [is] Jehovah, God of our fathers, who hath given such a thing as this in the heart of the king, to beautify the house of Jehovah that [is] in Jerusalem,
Read in context
- 25ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
- 26ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
- 27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- 28ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
Cross references
- Ezra 6:22 ಎಜ್ರನು 6:22ಇಸ್ರಾಯೇಲ್ ದೇವ ರಾಗಿರುವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವದಕ್ಕೆ ಅಶ್ಶೂರ್ ದೇಶದ ಅರ ಸನ ಹೃದಯವನ್ನು ಅವರ ಕಡೆಗೆ ತಿರುಗಿಸಿದ್ದರಿಂದ ಕರ್ತನು ಅವರನ್ನು ಸಂತೋಷಪಡಿಸಿದನು.
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Isaiah 60:13 ಯೆಶಾಯ 60:13ಲೆಬನೋ ನಿನ ವೈಭವವು ಸುರಗಿ, ದಿಂಡುಗ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವದಕ್ಕೆ ನಿನ್ನ ಬಳಿಗೆ ಬರುವವು; ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.
- Hebrews 10:16 ಇಬ್ರಿಯರಿಗೆ 10:16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Nehemiah 2:12 ನೆಹೆಮೀಯ 2:12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- Nehemiah 2:8 ನೆಹೆಮೀಯ 2:8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- 1 Chronicles 29:10–30 1 ಪೂರ್ವಕಾಲವೃತ್ತಾಂತ 29:10–30ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ. ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು. ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ. ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು. ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು. ನಮ್ಮ ಪಿತೃಗಳಾದ ಅಬ್ರಹಾಕಮ್, ಇಸಾಕ್, ಇಸ್ರಾಯೇ ಲಿನ ದೇವರಾದ ಕರ್ತನೇ, ಇದನ್ನು ನಿನ್ನ ಜನರ ಹೃದಯದ ಯೋಚನೆಗಳ ಭಾವನೆಯಲ್ಲಿ ನಿರಂತರ ವಾಗಿ ಕಾಪಾಡಿ ಅವರ ಹೃದಯವನ್ನು ನಿನಗೆ ಸಿದ್ಧ ಮಾಡು. ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಆ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು. ದಾವೀದನು ಸಮಸ್ತ ಸಭೆಗೆ--ಈಗ ನಿಮ್ಮ ದೇವರಾದ ಕರ್ತನನ್ನು ಸ್ತುತಿಸಿರಿ ಅಂದನು. ಆಗ ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಕರ್ತ ನನ್ನು ಸ್ತುತಿಸುತ್ತಾ ತಮ್ಮ ತಲೆಗಳನ್ನು ಬಾಗಿಸಿ ಕರ್ತನನ್ನೂ ಅರಸನನ್ನೂ ಆರಾಧಿಸಿದರು. ಇದಲ್ಲದೆ ಮಾರಣೆ ದಿವಸದಲ್ಲಿ ಅವರು ಕರ್ತ ನಿಗೆ ಬಲಿಗಳನ್ನು ವಧಿಸಿ ಕರ್ತನಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ ಸಾವಿರ ಟಗರು ಗಳನ್ನೂ ಸಾವಿರ ಕುರಿಮರಿಗಳನ್ನೂ ಅವುಗಳ ಪಾನದ ಅರ್ಪಣೆಗಳನ್ನೂ ಸಮಸ್ತ ಇಸ್ರಾಯೇಲಿಗೋಸ್ಕರ ಬಹಳವಾಗಿ ಬಲಿಗಳನ್ನೂ ಅರ್ಪಿಸಿದರು. ಆ ದಿವಸದಲ್ಲಿ ಮಹಾಸಂತೋಷದಿಂದ ಕರ್ತನ ಮುಂದೆ ತಿಂದು ಕುಡಿದರು. ಎರಡನೇ ಸಾರಿ ದಾವೀದನ ಮಗನಾದ ಸೊಲೊಮೋನನನ್ನು ಅರಸನನ್ನಾಗಿ ಮಾಡಿ ಕರ್ತನ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕ ನನ್ನು ಯಾಜಕನಾಗಿಯೂ ಅಭಿಷೇಕಿಸಿದರು. ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಕರ್ತನ ಸಿಂಹಾಸನದ ಮೇಲೆ ಕುಳಿತುಕೊಂಡು ಸಫಲ ಹೊಂದಿದನು. ಸಮಸ್ತ ಇಸ್ರಾಯೇಲ್ಯರು ಅವನಿಗೆ ವಿಧೇಯರಾದರು. ಎಲ್ಲಾ ಪ್ರಧಾನರೂ ಪರಾಕ್ರಮಶಾಲಿಗಳೂ ಅರಸನಾದ ದಾವೀದನ ಸಮಸ್ತ ಕುಮಾರರೂ ಅರಸನಾದ ಸೊಲೊ ಮೋನನ ಕೆಳಗೆ ಒಪ್ಪಿಸಿಕೊಟ್ಟರು. ಇದಲ್ಲದೆ ಕರ್ತನು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ ಇಸ್ರಾಯೇ ಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸ ನಿಗಾದರೂ ಇಲ್ಲದಂಥ ರಾಜ್ಯದ ಮಹಿಮೆಯನ್ನು ಅವನಿಗೆ ಕೊಟ್ಟನು. ಈ ಪ್ರಕಾರ ಇಷಯನ ಮಗನಾದ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು. ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರುಷ. ಏಳು ವರುಷ ಹೆಬ್ರೋನಿನಲ್ಲಿ ಆಳಿದನು; ಮೂವತ್ತಮೂರು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು. ಆದರೆ ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯ ವರೆಗೆ ಅವನ ಸಮಸ್ತ ಆಳಿಕೆಯೂ ಅವನ ಪರಾಕ್ರಮವೂ ಅವನ ಮೇಲೆಯೂ ಇಸ್ರಾಯೇಲಿನ ಮೇಲೆಯೂ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಗತಿಸಿದ ಕಾಲಗಳೂಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ. ಇಗೋ, ದರ್ಶಿಯಾದ ಸಮುವೇಲನ ಪುಸ್ತಕ ದಲ್ಲಿಯೂ ಪ್ರವಾದಿಯಾದ ನಾತಾನನ ಪುಸ್ತಕ ದಲ್ಲಿಯೂ ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಬರೆಯಲ್ಪಟ್ಟಿವೆ.
- Philippians 4:10 ಫಿಲಿಪ್ಪಿಯವರಿಗೆ 4:10ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ಈ ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
- Nehemiah 7:5 ನೆಹೆಮೀಯ 7:5ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸಲ್ಪಡುವ ಹಾಗೆ ಪ್ರಮುಖರನ್ನೂ ಅಧಿಕಾರಸ್ಥರನ್ನೂ ಜನರನ್ನೂ ಕೂಡಿಸಿ ಕೊಳ್ಳಲು ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿ ಸಿದನು. ಆಗ ನಾನು ಮೊದಲಿನಲ್ಲಿ ಬಂದವರ ವಂಶಾ ವಳಿಯ ಪತ್ರಿಕೆಯನ್ನು ಕಂಡೆನು.