Ezra · chapter 8 · verse 28
Ezra 8:28 in Kannada
ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
Naanu avarige--neevu kartanige parishuddharaagiddeeri. Ee saamaanugalu haageye parishuddhavu. Ee belli bangaaravu nimma tandegala devaraagiruva kartanige uchitaartha vaada arpaneyaagide.
Ezra 8:28 in English
- King James Version (KJV)
- And I said unto them, Ye [are] holy unto the LORD; the vessels [are] holy also; and the silver and the gold [are] a freewill offering unto the LORD God of your fathers.
- World English Bible (WEB)
- I said to them, “You are holy to the LORD, and the vessels are holy. The silver and the gold are a free will offering to the LORD, the God of your fathers.
- American Standard Version (ASV)
- And I said unto them, Ye are holy unto Jehovah, and the vessels are holy; and the silver and the gold are a freewill-offering unto Jehovah, the God of your fathers.
- Bible in Basic English (BBE)
- And I said to them, You are holy to the Lord and the vessels are holy: and the silver and the gold are an offering freely given to the Lord, the God of your fathers.
- Darby Translation (DBY)
- And I said to them, Ye are holy unto Jehovah; the vessels also are holy; and the silver and the gold is a voluntary offering to Jehovah the God of your fathers.
- Webster's Bible (WBS)
- And I said to them, Ye [are] holy to the LORD; the vessels [are] holy also; and the silver and the gold [are] a free-will-offering to the LORD God of your fathers.
- Young's Literal Translation (YLT)
- And I say unto them, 'Ye [are] holy to Jehovah, and the vessels [are] holy, and the silver and the gold [are] a willing-offering to Jehovah, God of your fathers;
Read in context
- 26ಅವರ ಕೈಯಲ್ಲಿ ನಾನು ಆರುನೂರ ಐವತ್ತು ತಲಾಂತು ಬೆಳ್ಳಿಯನ್ನೂ ನೂರು ತಲಾಂತು ತೂಕವಾದ ಬೆಳ್ಳಿಯ ಪಾತ್ರೆಗ ಳನ್ನೂ
- 27ನೂರು ತಲಾಂತು ಬಂಗಾರವನ್ನೂ ಸಾವಿರ ಪವನು ಬೆಲೆಯುಳ್ಳ ಇಪ್ಪತ್ತು ಬಂಗಾರದ ಬಟ್ಟಲು ಗಳನ್ನು ಬಂಗಾರದ ಹಾಗೆ ಅಮೂಲ್ಯವಾದಂಥಾ ಥಳ ಥಳಿಸುವಂಥಾ ಒಳ್ಳೇ ತಾಮ್ರದ ಎರಡು ಪಾತ್ರೆಗ ಳನ್ನೂ ತೂಗಿಕೊಟ್ಟೆನು.
- 28ನಾನು ಅವರಿಗೆ--ನೀವು ಕರ್ತನಿಗೆ ಪರಿಶುದ್ಧರಾಗಿದ್ದೀರಿ. ಈ ಸಾಮಾನುಗಳು ಹಾಗೆಯೇ ಪರಿಶುದ್ಧವು. ಈ ಬೆಳ್ಳಿ ಬಂಗಾರವು ನಿಮ್ಮ ತಂದೆಗಳ ದೇವರಾಗಿರುವ ಕರ್ತನಿಗೆ ಉಚಿತಾರ್ಥ ವಾದ ಅರ್ಪಣೆಯಾಗಿದೆ.
- 29ನೀವು ಯೆರೂಸಲೇಮಿ ನಲ್ಲಿ ಕರ್ತನ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಪಿತೃಗಳ ಪ್ರಧಾನರ ಮುಂದೆಯೂ ತೂಗುವ ವರೆಗೆ ಜಾಗ್ರತೆಯಾಗಿ ಕಾಪಾಡಿರಿ ಅಂದನು.
- 30ಹಾಗೆಯೇ ಯಾಜಕರೂ ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.
Cross references
- Leviticus 22:2–3 ಯಾಜಕಕಾಂಡ 22:2–3ಆರೋನನೊಂದಿಗೂ ಅವನ ಕುಮಾರರೊಂದಿಗೂ ಮಾತನಾಡು; ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡದಂತೆ ಇಸ್ರಾಯೇಲ್ ಮಕ್ಕಳು ನನಗೆ ಸಲ್ಲಿಸುವ ಪರಿಶುದ್ಧವಾದವುಗಳಿಂದ ಅವರು ಪ್ರತ್ಯೇಕ ವಾಗಿರಬೇಕು; ನಾನೇ ಕರ್ತನು. ಅವರಿಗೆ ನೀನು ಹೀಗೆ ಹೇಳು--ನಿಮ್ಮ ಎಲ್ಲಾ ಸಂತತಿಯ ವಂಶಾವಳಿ ಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ ಅವನು ನನ್ನ ಸನ್ನಿಧಿ ಯಿಂದ ತೆಗೆದುಹಾಕಲ್ಪಡಬೇಕು; ನಾನೇ ಕರ್ತನು.
- Leviticus 21:6–8 ಯಾಜಕಕಾಂಡ 21:6–8ಅವರು ತಮ್ಮ ಕರ್ತನಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತಮ್ಮ ದೇವರ ರೊಟ್ಟಿಯನ್ನು ಅರ್ಪಿಸುವದರಿಂದ ಅವರು ತಮ್ಮ ದೇವರ ಹೆಸರನ್ನು ಅಪವಿತ್ರಪಡಿಸದೆ ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು; ಆದಕಾರಣ ಅವರು ಪರಿಶುದ್ಧ ರಾಗಿರುವರು. ಅವರು ವ್ಯಭಿಚಾರಿಯನ್ನು ಇಲ್ಲವೆ ಅಪವಿತ್ರಳನ್ನು ಹೆಂಡತಿಯಾಗಿ ತೆಗೆದುಕೊಳ್ಳಬಾರದು; ಇಲ್ಲವೆ ಗಂಡನಿಂದ ಬಿಡಲ್ಪಟ್ಟ ಸ್ತ್ರೀಯನ್ನು ತೆಗೆದು ಕೊಳ್ಳಬಾರದು; ಅವನು ತನ್ನ ದೇವರಿಗೆ ಪರಿಶುದ್ಧ ನಾಗಿದ್ದಾನೆ. ಅವನು ನಿನ್ನ ದೇವರಿಗೆ ರೊಟ್ಟಿಯನ್ನು ಸಮರ್ಪಿಸುವ ಕಾರಣ ನೀನು ಅವನನ್ನು ಶುದ್ಧೀಕರಿಸ ಬೇಕು, ಅವನು ನನಗೆ ಪರಿಶುದ್ಧನಾಗಿರುವನು. ನಿನ್ನನ್ನು ಶುದ್ಧೀಕರಿಸುವ ಕರ್ತನಾದ ನಾನು ಪರಿಶುದ್ಧನು.
- 1 Kings 7:48–51 1 ಅರಸುಗಳು 7:48–51ಇದಲ್ಲದೆ ಕರ್ತನ ಮನೆಗೆ ಸಂಬಂಧವಾದ ಪಾತ್ರೆ ಗಳನ್ನೆಲ್ಲಾ ಸೊಲೊಮೋನನು ಮಾಡಿಸಿದನು; ಯಾವ ವಂದರೆ, ಚಿನ್ನದ ಧೂಪದ ವೇದಿ, ಸಮ್ಮುಖದ ರೊಟ್ಟಿ ಗಳನ್ನು ಇಡುವದಕ್ಕೆ ಚಿನ್ನದ ಮೇಜು, ದೈವೋಕ್ತಿಯ ಸ್ಥಾನದ ಮುಂಭಾಗದ ಬಲಪಾರ್ಶ್ವದಲ್ಲಿ ಐದು, ಎಡ ಪಾರ್ಶ್ವದಲ್ಲಿ ಐದು, ಅಪರಂಜಿಯ ದೀಪ ಸ್ತಂಭಗಳು, ಚಿನ್ನದ ಅದರ ಹೂವುಗಳು, ದೀಪಗಳು, ಚಿಮಟಗಳು, ಅಪರಂಜಿಯ ತಂಬಿಗೆಗಳು, ಕತ್ತರಿಗಳು, ಸಲಿಕೆಗಳು, ಸೌಟುಗಳು, ಅಗ್ನಿ ಪಾತ್ರೆಗಳು, ಮಹಾಪರಿಶುದ್ಧ ಸ್ಥಳ ವಾದ ಒಳಗಿನ ಮನೆಯ ಕದಗಳಿಗೋಸ್ಕರವೂ ಮಂದಿ ರವೆಂಬ ಮನೆಯ ಕದಗಳಿಗೋಸ್ಕರವೂ ಬಂಗಾರದ ಕೀಲುಗಳನ್ನೆಲ್ಲಾ ಮಾಡಿಸಿದನು.ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು. ಹೀಗೆ ಅರಸನಾ ಗಿರುವ ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ ಕೆಲಸವೆಲ್ಲಾ ತೀರಿಸಿದ ನಂತರ ತನ್ನ ತಂದೆ ಯಾದ ದಾವೀದನು ಪ್ರತಿಷ್ಟೆಮಾಡಿದ ಬೆಳ್ಳಿಯನ್ನೂ ಚಿನ್ನವನ್ನೂ ಸಾಮಾನುಗಳನ್ನೂ ತಕ್ಕೊಂಡು ಬಂದು ಕರ್ತನ ಮನೆಯ ಉಗ್ರಾಣಗಳಲ್ಲಿ ಇಟ್ಟನು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- Numbers 7:84–88 ಅರಣ್ಯಕಾಂಡ 7:84–88ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ. ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು ನೂರ ಮೂವತ್ತು ಶೇಕೆಲು. ಒಂದೊಂದು ಬಟ್ಟಲಿಗೆ ಎಪ್ಪತ್ತು, ಬೆಳ್ಳಿಯ ಎಲ್ಲಾ ವಸ್ತುಗಳಿಗೆ ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎರಡು ಸಾವಿರದ ನಾಲ್ಕು ನೂರು. ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್; ದಹನ ಬಲಿಗಾಗಿ ಇರುವ ಹೋರಿಗಳು ಹನ್ನೆರಡು, ಟಗರು ಗಳು ಹನ್ನೆರಡು, ಮೊದಲನೇ ವರುಷದ ಕುರಿಮರಿಗಳು ಹನ್ನೆರಡು, ಅವುಗಳೊಂದಿಗೆ ಆಹಾರ ಸಮರ್ಪಣೆ; ಮತ್ತು ಪಾಪದ ಬಲಿಗಾಗಿ ಆಡುಮರಿಗಳು ಹನ್ನೆ ರಡು, ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
- Numbers 4:19–20 ಅರಣ್ಯಕಾಂಡ 4:19–20ಆದರೆ ಅವರು ಅತಿ ಪರಿಶುದ್ಧವಾ ದವುಗಳನ್ನು ಸವಿಾಪಿಸುವಾಗ ಅವರು ಸಾಯದೆ ಬದುಕುವ ಹಾಗೆ ಅವರಿಗೆ ಮಾಡಬೇಕಾದದ್ದೇ ನೆಂದರೆ--ಆರೋನನೂ ಅವನ ಕುಮಾರರೂ ಒಳಗೆ ಪ್ರವೇಶಿಸಿ ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಗೂ ನೇಮಿಸಬೇಕು. ಆದರೆ ಅವರು ಸಾಯದ ಹಾಗೆ ಪರಿಶುದ್ಧವಾದವುಗಳನ್ನು ನೋಡಲು ಒಳಗೆ ಹೋಗಬಾರದು.
- Deuteronomy 33:8 ಧರ್ಮೋಪದೇಶಕಾಂಡ 33:8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- 2 Chronicles 24:14 2 ಪೂರ್ವಕಾಲವೃತ್ತಾಂತ 24:14ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.
- Numbers 7:13 ಅರಣ್ಯಕಾಂಡ 7:13ಅವನ ಅರ್ಪಣೆ ಏನಂದರೆ,--ನೂರಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲ್ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರದ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
- Numbers 4:4–15 ಅರಣ್ಯಕಾಂಡ 4:4–15ಸಭೆಯ ಗುಡಾರದಲ್ಲಿ ಕೆಹಾತನ ಮಕ್ಕಳ ಸೇವೆಯು ಅತಿ ಪರಿಶುದ್ಧವಾದದ್ದೇ. ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು. 7 ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು. ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು. ಅವರು ಅದನ್ನೂ ಅದರ ಎಲ್ಲಾ ವಸ್ತುಗಳನ್ನೂ ಕಡಲು ಹಂದಿಯ ಚರ್ಮಗಳ ಮುಚ್ಚಳ ದೊಳಗೆ ಇಟ್ಟು ಅಡ್ಡದಂಡೆಯ ಮೇಲೆ ಹಾಕಬೇಕು. ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮವನ್ನು ಮುಚ್ಚಳ ಹೊದಿಸಿ ಅದರ ಕೋಲುಗಳನ್ನು ಇಡಬೇಕು. ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವ ಸೇವೆಯ ಎಲ್ಲಾ ವಸ್ತುಗಳನ್ನು ಅವರು ತಕ್ಕೊಂಡು ನೀಲಿ ವಸ್ತ್ರದಿಂದ ಕಟ್ಟಿ ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ ಅಡ್ಡದಂಡೆಯ ಮೇಲೆ ಹಾಕಬೇಕು. ಬಲಿಪೀಠದ ಬೂದಿಯನ್ನು ತೆಗೆದು ಅದರ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಸೇವೆ ಮಾಡುವ ಎಲ್ಲಾ ವಸ್ತುಗಳನ್ನೂ ಅಗ್ನಿಪಾತ್ರೆಗಳನ್ನೂ ಮುಳ್ಳುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಬಲಿಪೀಠದ ಎಲ್ಲಾ ವಸ್ತುಗಳನ್ನೂ ಅದರ ಮೇಲಿಟ್ಟು ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹಾಕಿ ಅದರ ಕೋಲುಗಳನ್ನು ಇಡಬೇಕು. ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Ezra 1:7–11 ಎಜ್ರನು 1:7–11ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು. ಅವುಗಳ ಲೆಕ್ಕವೇನಂದರೆ--ಮೂವತ್ತು ಬಂಗಾರದ ತಟ್ಟೆಗಳು, ಸಾವಿರ ಬೆಳ್ಳಿಯ ತಟ್ಟೆಗಳು, ಇಪ್ಪತ್ತೊಂಭತ್ತು ಕತ್ತಿಗಳು, ಮೂವತ್ತು ಬಂಗಾರದ ದೊಡ್ಡ ಬಟ್ಟಲುಗಳು, ನಾನೂರ ಹತ್ತು ಬೆಳ್ಳಿಯ ಬಟ್ಟಲುಗಳು, ಸಾವಿರ ಬೇರೆ ಸಾಮಾನುಗಳು. ಬಂಗಾರ ಬೆಳ್ಳಿಯ ಸಾಮಾನುಗಳೆಲ್ಲಾ ಐದು ಸಾವಿರದ ನಾನೂರು ಇದ್ದವು.ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.