Ezra · chapter 8 · verse 36
Ezra 8:36 in Kannada
ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Avaru arasana aajnyegalannu nadiya eecheyalliruva arasana adhipatigaligoo yajamaa narigoo oppisidaru. Aaga avara janarigoo devara aalayakkoo sahaayamaadidaru.
Ezra 8:36 in English
- King James Version (KJV)
- And they delivered the king’s commissions unto the king’s lieutenants, and to the governors on this side the river: and they furthered the people, and the house of God.
- World English Bible (WEB)
- They delivered the king’s commissions to the king’s local governors and to the governors beyond the River. So they supported the people and God’s house.
- American Standard Version (ASV)
- And they delivered the king’s commissions unto the king’s satraps, and to the governors beyond the River: and they furthered the people and the house of God.
- Bible in Basic English (BBE)
- And they gave the king's orders to the king's captains and the rulers across the river, and they gave the people and the house of God the help which was needed.
- Darby Translation (DBY)
- And they delivered the king's edicts to the king's satraps, and to the governors on this side the river. And they furthered the people and the house of God.
- Webster's Bible (WBS)
- And they delivered the king's commissions to the king's lieutenants, and to the governors on this side of the river: and they furthered the people, and the house of God.
- Young's Literal Translation (YLT)
- and they give the laws of the king to the lieutenants of the king and the governors beyond the river, and they have lifted up the people and the house of God.
Read in context
- 34ಆ ತೂಕದಷ್ಟೂ ಅದೇ ಕಾಲದಲ್ಲಿ ಅದರದರ ಲೆಕ್ಕದ ಪ್ರಕಾರವೂ ತೂಕದ ಪ್ರಕಾರವೂ ಬರೆಯಲ್ಪಟ್ಟಿತು.
- 35ಸೆರೆಯಿಂದ ಬಂದು ಸೆರೆಯಾಗಿ ಒಯ್ಯಲ್ಪಟ್ಟಿದ್ದ ಅವರ ಮಕ್ಕಳು ಇಸ್ರಾಯೇಲ್ ದೇವರಿಗೆ ದಹನ ಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲ್ಯರಿ ಗೋಸ್ಕರ ಹನ್ನೆರಡು ಹೋರಿಗಳನ್ನೂ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿಮರಿಗಳನ್ನೂ ಪಾಪ ಕಳೆಯುವದಕ್ಕಾಗಿ ಹನ್ನೆರಡು ಮೇಕೆಯ ಹೋತಗ ಳನ್ನೂ ಅರ್ಪಿಸಿದರು. ಇವೆಲ್ಲಾ ಕರ್ತನಿಗೆ ದಹನಬಲಿ ಯಾಗಿತ್ತು.ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
- 36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Cross references
- Ezra 7:21–24 ಎಜ್ರನು 7:21–24ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ-- ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ. ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು? ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.
- Revelation 12:16 ಪ್ರಕಟನೆ 12:16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Ezra 6:13 ಎಜ್ರನು 6:13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
- Isaiah 56:6–7 ಯೆಶಾಯ 56:6–7ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Ezra 4:7–23 ಎಜ್ರನು 4:7–23ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು. ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿ ಯಾದ ಶಿಂಷೈಯೂ ಯೆರೂಸಲೇಮಿಗೆ ವಿರೋಧವಾಗಿ ಅರಸನಾದ ಆರ್ತಷಸ್ತನಿಗೆ-- ಮುಖ್ಯಾಧಿಕಾರಿಯಾದ ರೆಹೂಮನೂ ಶಾಸ್ತ್ರಿಯಾದ ಶಿಂಷೈಯೂ ಮಿಕ್ಕಾದ ಅವರ ಜೊತೆಗಾರರೂ ದಿನಾಯರೂ ಅಪರ್ಸತ್ಕಾ ಯರೂ ಟರ್ಪಲಾಯರೂ ಅಪಾರ್ಸಾಯರೂ ಯೆರ ಕ್ಯರೂ ಬಾಬೆಲಿನವರೂ ಶೂಷನ್ಯರೂ ದೆಹಾಯರೂ ಏಲಾಮ್ಯರೂ ಮಹಾಘನವುಳ್ಳ ಆಸೆನಪ್ಪರನು ಬರ ಮಾಡಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಮಿಕ್ಕಾದ ಜನಗಳೂ ನದಿಯ ಈಚೆಯಲ್ಲಿರುವ ಇತರ ಜನಗಳೂ-- ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿಯು--ಅರ್ತಷಸ್ತರಾಜರಿಗೆ, ಖಾವಂದರ ಸೇವಕ ರಾದ ಹೊಳೆಯ ಈಚೆಯವರು. ನಿಮ್ಮಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮಿಗೆ ಬಂದು ತಿರಿಗಿ ಬಿದ್ದ ಆ ಕೆಟ್ಟ ಪಟ್ಟಣವನ್ನು ಕಟ್ಟಿಸುತ್ತಾರೆ. ಅವರು ಅದರ ಗೋಡೆಗಳನ್ನು ಎಬ್ಬಿಸಿ ಅಸ್ತಿವಾರಗಳನ್ನು ಹೊಂದಿಸಿದ್ದಾರೆಂದು ಅರಸನಿಗೆ ತಿಳಿದಿರಲಿ. ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ. ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ. ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ. ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು. ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು. ಇಂಥ ಸಮಯದಲ್ಲಿ ನೀವು ನನಗೆ ಕಳುಹಿಸಿದ ಪತ್ರವು ನನ್ನ ಮುಂದೆ ವಿವರವಾಗಿ ಓದಲ್ಪಟ್ಟಿತು. ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು; ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ. ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು. ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.ಆಗ ಯೆರೂಸಲೇಮಿನಲ್ಲಿರುವ ದೇವರ ಆಲ ಯದ ಕೆಲಸವು ನಿಲ್ಲಿಸಲ್ಪಟ್ಟಿತು. ಪಾರಸಿಯರ ಅರಸ ನಾದ ದಾರ್ಯಾವೆಷನ ಆಳ್ವಿಕೆಯ ಎರಡನೇ ವರುಷದ ವರೆಗೆ ನಿಲ್ಲಿಸಲ್ಪಟ್ಟಿತು.
- Ezra 5:6–17 ಎಜ್ರನು 5:6–17ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆ ನೈಯೂ ಶೆತರ್ಬೋಜೆನೈಯೂ ನದಿಯ ಈಚೆಯ ಲ್ಲಿರುವ ಅಪರ್ಸತ್ಕಾಯರಾದ ಅವನ ಜೊತೆಗಾರರೂ ಅರಸನಾದ ದಾರ್ಯಾವೆಷನಿಗೆ ಬರೆದು ಕಳುಹಿಸಿದ ಪತ್ರದ ಪ್ರತಿ. ಅವರು ಅವನ ಬಳಿಗೆ ಕಳುಹಿಸಿದ ಪತ್ರದಲ್ಲಿ-- ಅರಸನಾದ ದಾರ್ಯಾವೆಷನಿಗೆ ಸಮಸ್ತ ಸಮಾ ಧಾನವು. ಅರಸನಿಗೆ ತಿಳಿಯಬೇಕಾದದ್ದೇನಂದರೆ--ನಾವು ಯೆಹೂದ್ಯರ ದೇಶದಲ್ಲಿರುವ ಮಹಾದೇವರ ಆಲಯಕ್ಕೆ ಹೋದೆವು; ಅದು ದೊಡ್ಡ ಕಲ್ಲುಗಳಿಂದ ಕಟ್ಟಲ್ಪಟ್ಟಿದೆ; ಗೋಡೆಗಳ ಮೇಲೆ ತೊಲೆಗಳು ಹೊದಿಸ ಲ್ಪಟ್ಟಿವೆ; ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಲ್ಲಿ ವೃದ್ಧಿಯಾಗುತ್ತದೆ. ಆಗ ಈ ಮನೆಯನ್ನು ಕಟ್ಟಿಸುವದಕ್ಕೂ ಈ ಗೋಡೆಗಳನ್ನು ತೀರಿಸುವದಕ್ಕೂ ನಿಮಗೆ ಅಪ್ಪಣೆಕೊಟ್ಟವರು ಯಾರೆಂದು ನಾವು ಆ ಹಿರಿಯರನ್ನು ಕೇಳಿದೆವು. ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಮನುಷ್ಯರ ಹೆಸರುಗಳನ್ನು ನಿನಗೆ ಬರೆದು ತಿಳಿಸುವ ಹಾಗೆ ಅವರ ಹೆಸರುಗಳನ್ನು ಕೇಳಿದೆವು. ಅವರು ನಮಗೆ ಕೊಟ್ಟ ಪ್ರತ್ಯುತ್ತರವೇನಂದರೆನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರುಷಗಳ ಹಿಂದೆ ಇಸ್ರಾ ಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿಸಿ ತೀರಿಸಿದ್ದ ಆಲಯವನ್ನು ನಾವು ಕಟ್ಟಿಸುತ್ತೇವೆ. ಆದರೆ ನಮ್ಮ ತಂದೆಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ತರುವಾಯ ಆತನು ಅವರನ್ನು ಬಾಬೆಲಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕ ದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಬಾಬೆಲಿಗೆ ತಕ್ಕೊಂಡು ಹೋದನು. ಆದರೆ ಬಾಬೆಲಿನ ಅರಸ ನಾದ ಕೋರೆಷನು ಮೊದಲನೇ ವರುಷದಲ್ಲಿ ಅರಸ ನಾದ ಕೋರೆಷನು ದೇವರ ಈ ಆಲಯವನ್ನು ಕಟ್ಟಲು ಆಜ್ಞೆಯನ್ನು ಕೊಟ್ಟನು. ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತಕ್ಕೊಂಡು ಬಾಬೆಲಿನ ಮಂದಿರಕ್ಕೆ ತಂದ ದೇವರ ಆಲಯದ ಬೆಳ್ಳಿಬಂಗಾರದ ಸಾಮಾನುಗಳನ್ನು ಅರಸನಾದ ಕೋರೆ ಷನು ಬಾಬೆಲಿನ ಮಂದಿರದಿಂದ ತಕ್ಕೊಂಡು ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿ ಅವ ನಿಗೆ-- ಈ ಪಾತ್ರೆಗಳನ್ನು ತೆಗೆದುಕೊಂಡು ಯೆರೂ ಸಲೇಮಿನಲ್ಲಿರುವ ಆಲಯಕ್ಕೆ ತಕ್ಕೊಂಡು ಹೋಗು; ದೇವರ ಆಲಯವು ಅದರ ಸ್ಥಳದಲ್ಲಿ ಕಟ್ಟಿಸಲ್ಪಡಲಿ ಅಂದನು. ಅಗ ಶೆಷ್ಬಚ್ಚರನು ಬಂದು ಯೆರೂಸಲೇಮಿ ನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿಸಿ ದನು. ಆ ದಿವಸದಿಂದ ಇದು ವರೆಗೂ ಅದು ಕಟ್ಟಲ್ಪ ಡುತ್ತದೆ; ಇನ್ನೂ ಮುಗಿಯಲಿಲ್ಲ ಅಂದರು.ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ. ಆದದರಿಂದ ಅರಸನಿಗೆ ಚೆನ್ನಾಗಿ ಕಾಣಿಸಿದರೆ ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ ಇಲ್ಲವೋ ಹುಡುಕು; ಬಾಬೆಲಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲ್ಪಡಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸಲಿ.
- Acts 18:27 ಅಪೊಸ್ತಲರ ಕೃತ್ಯಗಳು 18:27ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು; ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನು;ಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು.
- Esther 9:3 ಎಸ್ತೇರಳು 9:3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
Original words (Hebrew)
- delivered · H5414נָתַן nâthan
- king’s · H4428מֶלֶךְ melek
- commissions · H1881דָּת dâth
- king’s · H4428מֶלֶךְ melek
- lieutenants · H323אֲחַשְׁדַּרְפַּן ʼăchashdarpan
- governors · H6346פֶּחָה pechâh
- side · H5676עֵבֶר ʻêber
- river · H5104נָהָר nâhâr
- furthered · H5375נָשָׂא nâsâʼ
- people · H5971עַם ʻam
- house · H1004בַּיִת bayith
- God · H430אֱלֹהִים ʼĕlôhîym