Galatians · chapter 3 · verse 12
Galatians 3:12 in Kannada
ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
Nyaayapramaanakke nambikeyu aadhaara valla. Aadare--adara kriyegalannu maaduvavane avugala moolaka badukuvanu embade.
Galatians 3:12 in English
- King James Version (KJV)
- And the law is not of faith: but, The man that doeth them shall live in them.
- World English Bible (WEB)
- The law is not of faith, but, “The man who does them will live by them.”
- American Standard Version (ASV)
- and the law is not of faith; but, He that doeth them shall live in them.
- Bible in Basic English (BBE)
- And the law is not of faith; but, He who does them will have life by them.
- Darby Translation (DBY)
- but the law is not on the principle of faith; but, He that shall have done these things shall live by them.
- Webster's Bible (WBS)
- And the law is not of faith: but, The man that doeth them shall live by them.
- Young's Literal Translation (YLT)
- and the law is not by faith, but — 'The man who did them shall live in them.'
Read in context
- 10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- 11ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು.
- 12ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ.
- 13ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- 14ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
Cross references
- Leviticus 18:5 ಯಾಜಕಕಾಂಡ 18:5ಆದದರಿಂದ ನೀವು ನನ್ನ ನಿಯಮಗಳನ್ನೂ ನಿರ್ಣಯಗಳನ್ನೂ ಕೈಕೊಳ್ಳಿರಿ. ಒಬ್ಬನು ಅವುಗಳನ್ನು ಮಾಡಿದರೆ ಅವನು ಅವುಗಳಲ್ಲಿ ಜೀವಿಸುವನು; ನಾನೇ ಕರ್ತನು.
- Romans 10:5–6 ರೋಮಾಪುರದವರಿಗೆ 10:5–6ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ. ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
- Nehemiah 9:29 ನೆಹೆಮೀಯ 9:29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.
- Romans 4:14 ರೋಮಾಪುರದವರಿಗೆ 4:14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- Luke 10:25–28 ಲೂಕನು 10:25–28ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು. ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು. ಅದಕ್ಕೆ ಅವನು ಪ್ರತ್ಯುತ್ತರವಾಗಿ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯ ದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂ ದಲೂ ಪ್ರೀತಿಸಬೇಕು; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಅಂದನು. ಆಗ ಆತನು ಅವನಿಗೆ--ನೀನು ಸರಿಯಾಗಿ ಉತ್ತರ ಕೊಟ್ಟಿದ್ದೀ; ಅದರಂತೆಯೇ ಮಾಡು, ಆಗ ನೀನು ಬದುಕುವಿ ಅಂದನು.
- Ezekiel 20:11 ಯೆಹೆಜ್ಕೇಲನು 20:11ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Romans 4:4–5 ರೋಮಾಪುರದವರಿಗೆ 4:4–5ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- Romans 11:6 ರೋಮಾಪುರದವರಿಗೆ 11:6ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ.
- Matthew 19:17 ಮತ್ತಾಯನು 19:17ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು.
- Romans 9:30–32 ರೋಮಾಪುರದವರಿಗೆ 9:30–32ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು. ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ. ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Ezekiel 20:13 ಯೆಹೆಜ್ಕೇಲನು 20:13ಆದರೆ ಇಸ್ರಾಯೇಲಿನ ಮನೆತನದವರು ಅರಣ್ಯದಲ್ಲಿಯೂ ನನಗೆ ವಿರುದ್ಧ ವಾಗಿ ತಿರುಗಿಬಿದ್ದರು; ಆಜ್ಞಾವಿಧಿಗಳನ್ನು ಅನುಸರಿಸುವ ಮನುಷ್ಯನು ಬದುಕುವನು. ಅವುಗಳಲ್ಲಿ ನಡೆಯದೆ ನನ್ನ ನ್ಯಾಯಗಳನ್ನು ಅಸಡ್ಡೆ ಮಾಡಿ ನನ್ನ ಸಬ್ಬತ್ ದಿನಗಳನ್ನು ಸಹ ಬಹಳವಾಗಿ ಅಪವಿತ್ರಪಡಿಸಿದರು; ಆಗ ನಾನು ಅವರ ಮೇಲೆ ನನ್ನ ರೋಷದಿಂದ ದಹಿಸಿಬಿಡುವೆನೆಂದು ಹೇಳಿದೆನು.