Galatians · chapter 3 · verse 24
Galatians 3:24 in Kannada
ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
Naavu nambikeya moolaka neetivantarendu nirnayisalpaduvante nammannu kristana balige taruvadakkaagi nyaayapramaanavu namma upaadhyaayanantittu.
Galatians 3:24 in English
- King James Version (KJV)
- Wherefore the law was our schoolmaster [to bring us] unto Christ, that we might be justified by faith.
- World English Bible (WEB)
- So that the law has become our tutor to bring us to Christ, that we might be justified by faith.
- American Standard Version (ASV)
- So that the law is become our tutor [to bring us] unto Christ, that we might be justified by faith.
- Bible in Basic English (BBE)
- So the law has been a servant to take us to Christ, so that we might have righteousness by faith.
- Darby Translation (DBY)
- So that the law has been our tutor up to Christ, that we might be justified on the principle of faith.
- Webster's Bible (WBS)
- Wherefore the law was our school-master [to bring us] to Christ, that we might be justified by faith.
- Young's Literal Translation (YLT)
- so that the law became our child-conductor — to Christ, that by faith we may be declared righteous,
Read in context
- 22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- 23ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
- 24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- 25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- 26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
Cross references
- Romans 10:4 ರೋಮಾಪುರದವರಿಗೆ 10:4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Hebrews 10:1–14 ಇಬ್ರಿಯರಿಗೆ 10:1–14ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು. ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಯಾಕಂದರೆ ಆರಾಧನೆ ಮಾಡುವವರು ಒಂದು ಸಾರಿ ಶುದ್ಧೀಕರಿಸಲ್ಪಟ್ಟ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ. ಆದರೆ ಪ್ರತಿ ವರುಷವು ಆ ಯಜ್ಞಗಳಲ್ಲಿ ತಿರಿಗಿ ಪಾಪಗಳ ಜ್ಞಾಪಕವಾಗುವದುಂಟು. ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು. ಅಂದಿನಿಂದ ತನ್ನ ವಿರೋಧಿಗಳು ತನ್ನ ಪಾದ ಪೀಠವಾಗಿ ಮಾಡಲ್ಪಡುವ ತನಕ ಆತನು ಎದುರುನೋಡುವನು. ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Romans 7:24–25 ರೋಮಾಪುರದವರಿಗೆ 7:24–25ಅಯ್ಯೋ, ನಾನು ಎಂಥ ನಿರ್ಗತಿಕನಾದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹ ದಿಂದ ನನ್ನನ್ನು ಬಿಡಿಸುವವನು ಯಾರು?ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ. ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ; ಹೀಗೆ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೂ ಶರೀರದಿಂದ ಪಾಪವೆಂಬ ನಿಯಮಕ್ಕೂ ಆಳಾಗಿದ್ದೇನೆ.
- Galatians 2:16 ಗಲಾತ್ಯದವರಿಗೆ 2:16ಆದರೆ ಯಾವನಾದರೂ ಯೇಸು ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ಹೊರತು ನ್ಯಾಯ ಪ್ರಮಾಣದ ಕ್ರಿಯೆಗಳಿಂದ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲವೆಂಬದು ನಮಗೆ ತಿಳಿದಿರುವದ ರಿಂದ ನಾವು ಸಹ ನ್ಯಾಯ ಪ್ರಮಾಣದ ಕ್ರಿಯೆ ಗಳಿಂದಲ್ಲ, ಆದರೆ ಕ್ರಿಸ್ತನ ಮೇಲಣ ನಂಬಿಕೆಯಿಂದಲೇ ನೀತಿವಂತರೆಂದು ನಿರ್ಣಯಿ
- Matthew 5:17–18 ಮತ್ತಾಯನು 5:17–18ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Galatians 4:2–3 ಗಲಾತ್ಯದವರಿಗೆ 4:2–3ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು.
- Hebrews 7:18–19 ಇಬ್ರಿಯರಿಗೆ 7:18–19ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Galatians 3:25 ಗಲಾತ್ಯದವರಿಗೆ 3:25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- Galatians 2:19 ಗಲಾತ್ಯದವರಿಗೆ 2:19ಯಾಕಂ ದರೆ ನಾನಂತೂ ದೇವರಿಗಾಗಿ ಜೀವಿಸುವದಕ್ಕೊಸ್ಕರ ನ್ಯಾಯಪ್ರಮಾಣದ ಮೂಲಕವಾಗಿ ನ್ಯಾಯಪ್ರಮಾ ಣದ ಪಾಲಿಗೆ ಸತ್ತೆನು.
- Romans 7:7–9 ರೋಮಾಪುರದವರಿಗೆ 7:7–9ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.