Galatians · chapter 3 · verse 25
Galatians 3:25 in Kannada
ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
Aadare nambikeyu bandiralaagi naavinnu upaadhyaayana kelage endigoo iruvavaralla.
Galatians 3:25 in English
- King James Version (KJV)
- But after that faith is come, we are no longer under a schoolmaster.
- World English Bible (WEB)
- But now that faith has come, we are no longer under a tutor.
- American Standard Version (ASV)
- But now that faith is come, we are no longer under a tutor.
- Bible in Basic English (BBE)
- But now that faith is come, we are no longer under a servant.
- Darby Translation (DBY)
- But, faith having come, we are no longer under a tutor;
- Webster's Bible (WBS)
- But after faith is come, we are no longer under a school-master.
- Young's Literal Translation (YLT)
- and the faith having come, no more under a child-conductor are we,
Read in context
- 23ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.
- 24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- 25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- 26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- 27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
Cross references
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- Hebrews 10:15–18 ಇಬ್ರಿಯರಿಗೆ 10:15–18ಪವಿ ತ್ರಾತ್ಮನು ಸಹ ಇದರ ವಿಷಯವಾಗಿ ನಮಗೆ ಸಾಕ್ಷಿ ಕೊಡುವಾತನಾಗಿದ್ದಾನೆ; ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ. ಇದಲ್ಲದೆ ಅವರ ಪಾಪಗಳನ್ನೂ ದುಷ್ಕೃತ್ಯ ಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಪಾಪವು ಪರಿಹಾರವಾದಲ್ಲಿ ಇನ್ನು ಎಂದಿಗೂ ಅದಕ್ಕಾಗಿ ಅರ್ಪಣೆ ಇರುವದಿಲ್ಲ.
- Hebrews 8:3–13 ಇಬ್ರಿಯರಿಗೆ 8:3–13ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರು ತ್ತಾನಷ್ಟೆ. ಆದದರಿಂದ ಸಮರ್ಪಿಸುವದಕ್ಕೆ ಈತನಿಗೆ ಸಹ ಏನಾದರೂ ಇರುವದು ಅವಶ್ಯವಾಗಿದೆ. ಈತನು ಇನ್ನೂ ಭೂಮಿಯ ಮೇಲೆ ಇದ್ದದ್ದೇಯಾಗಿದ್ದರೆ ಯಾಜಕ ನಾಗುವ ಹಾಗಿದ್ದಿಲ್ಲ. ಯಾಕಂದರೆ ನ್ಯಾಯಪ್ರಮಾಣದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವ ಯಾಜಕರು ಇದ್ದೇ ಇರುತ್ತಾರೆ; ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Hebrews 7:11–19 ಇಬ್ರಿಯರಿಗೆ 7:11–19ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ. ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ. ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ. ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Galatians 4:1–6 ಗಲಾತ್ಯದವರಿಗೆ 4:1–6ನಾನು ಈಗ ಹೇಳುವದೇನಂದರೆ, ಬಾಧ್ಯನು ತಾನು ಆಸ್ತಿಗೆಲ್ಲಾ ಧಣಿಯಾ ಗಿದ್ದರೂ ಬಾಲಕನಾಗಿರುವ ತನಕ ದಾಸನಿಗೂ ಅವ ನಿಗೂ ಯಾವ ಭೇದವೂ ಇಲ್ಲ. ಆದರೆ ತಂದೆಯು ನೇಮಿಸಿದ ದಿನದವರೆಗೂ ಅವನು ಶಿಕ್ಷಕರ ಮತ್ತು ಮನೆವಾರ್ತೆಯವರ ಕೈಕೆಳಗಿರುವನು. ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದ ಮೂಲ ಪಾಠಗಳಿಗೆ ಅಧೀನರಾಗಿದ್ದೆವು. ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.