Galatians · chapter 3 · verse 26
Galatians 3:26 in Kannada
ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
Neevellaru krista yesu vinallittiruva nambikeya moolaka devara makkalaagi ddeeri.
Galatians 3:26 in English
- King James Version (KJV)
- For ye are all the children of God by faith in Christ Jesus.
- World English Bible (WEB)
- For you are all children of God, through faith in Christ Jesus.
- American Standard Version (ASV)
- For ye are all sons of God, through faith, in Christ Jesus.
- Bible in Basic English (BBE)
- Because you are all sons of God through faith in Christ Jesus.
- Darby Translation (DBY)
- for ye are all God's sons by faith in Christ Jesus.
- Webster's Bible (WBS)
- For ye are all children of God by faith in Christ Jesus.
- Young's Literal Translation (YLT)
- for ye are all sons of God through the faith in Christ Jesus,
Read in context
- 24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- 25ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- 26ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ.
- 27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Cross references
- Ephesians 1:5 ಎಫೆಸದವರಿಗೆ 1:5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 2 Corinthians 6:18 2 ಕೊರಿಂಥದವರಿಗೆ 6:18ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- John 1:12–13 ಯೋಹಾನನು 1:12–13ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.
- Galatians 4:5–6 ಗಲಾತ್ಯದವರಿಗೆ 4:5–6ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- 1 John 3:1–2 1 ಯೋಹಾನನು 3:1–2ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ. ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- Romans 8:14–17 ರೋಮಾಪುರದವರಿಗೆ 8:14–17ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ. ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ. ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ. ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Philippians 2:15 ಫಿಲಿಪ್ಪಿಯವರಿಗೆ 2:15ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- Ephesians 5:1 ಎಫೆಸದವರಿಗೆ 5:1ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Hebrews 2:10–15 ಇಬ್ರಿಯರಿಗೆ 2:10–15ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು. ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ. ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.