Galatians · chapter 3 · verse 29
Galatians 3:29 in Kannada
ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Neevu kristanavaraagiddare abrahaamana santatiyavaru vaagdaanakkanusaaravaagi baadhyaroo aagiddeeri.
Galatians 3:29 in English
- King James Version (KJV)
- And if ye [be] Christ’s, then are ye Abraham’s seed, and heirs according to the promise.
- World English Bible (WEB)
- If you are Christ’s, then you are Abraham’s offspring and heirs according to promise.
- American Standard Version (ASV)
- And if ye are Christ’s, then are ye Abraham’s seed, heirs according to promise.
- Bible in Basic English (BBE)
- And if you are Christ's, then you are Abraham's seed, and yours is the heritage by the right of God's undertaking given to Abraham.
- Darby Translation (DBY)
- but if ye [are] of Christ, then ye are Abraham's seed, heirs according to promise.
- Webster's Bible (WBS)
- And if ye [are] Christ's, then are ye Abraham's seed, and heirs according to the promise.
- Young's Literal Translation (YLT)
- and if ye [are] of Christ then of Abraham ye are seed, and according to promise — heirs.
Read in context
- 27ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ.
- 28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
Cross references
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Romans 9:7–8 ರೋಮಾಪುರದವರಿಗೆ 9:7–8ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Galatians 3:7 ಗಲಾತ್ಯದವರಿಗೆ 3:7ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ.
- Romans 8:17 ರೋಮಾಪುರದವರಿಗೆ 8:17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- Galatians 4:22–31 ಗಲಾತ್ಯದವರಿಗೆ 4:22–31ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ. ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು. ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Romans 4:16–21 ರೋಮಾಪುರದವರಿಗೆ 4:16–21ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು. ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ. ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- Titus 3:7 ತೀತನಿಗೆ 3:7ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Galatians 4:7 ಗಲಾತ್ಯದವರಿಗೆ 4:7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Revelation 21:7 ಪ್ರಕಟನೆ 21:7ಜಯಹೊಂದುವವನು ಎಲ್ಲವುಗಳಿಗೆ ಬಾಧ್ಯನಾಗುವನು; ನಾನು ಅವನ ದೇವರಾಗಿರುವೆನು. ಅವನು ನನ್ನ ಮಗನಾಗಿರುವನು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Romans 4:12–14 ರೋಮಾಪುರದವರಿಗೆ 4:12–14ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- 2 Corinthians 10:7 2 ಕೊರಿಂಥದವರಿಗೆ 10:7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.