Galatians · chapter 5 · verse 14
Galatians 5:14 in Kannada
ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
Ninna nereyavanannu ninnanteye preetisu emba onde maatinalli nyaayapramaanavelaa neraveruttade.
Galatians 5:14 in English
- King James Version (KJV)
- For all the law is fulfilled in one word, [even] in this; Thou shalt love thy neighbour as thyself.
- World English Bible (WEB)
- For the whole law is fulfilled in one word, in this: “You shall love your neighbor as yourself.”
- American Standard Version (ASV)
- For the whole law is fulfilled in one word, [even] in this: Thou shalt love thy neighbor as thyself.
- Bible in Basic English (BBE)
- For all the law is made complete in one word, even in this, Have love for your neighbour as for yourself.
- Darby Translation (DBY)
- For the whole law is fulfilled in one word, in Thou shalt love thy neighbour as thyself;
- Webster's Bible (WBS)
- For all the law is fulfilled in one word, [even] in this, Thou shalt love thy neighbor as thyself.
- Young's Literal Translation (YLT)
- for all the law in one word is fulfilled — in this: 'Thou shalt love thy neighbour as thyself;'
Read in context
- 12ನಿಮ್ಮನ್ನು ಕಳವಳಪಡಿಸುವವರು ಛೇದಿಸ ಲ್ಪಡುವದೇ ನನ್ನ ಇಷ್ಟ.
- 13ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
- 14ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು ಎಂಬ ಒಂದೇ ಮಾತಿನಲ್ಲಿ ನ್ಯಾಯಪ್ರಮಾಣವೆಲಾ ನೆರವೇರುತ್ತದೆ.
- 15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- 16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
Cross references
- Matthew 7:12 ಮತ್ತಾಯನು 7:12ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ.
- Leviticus 19:18 ಯಾಜಕಕಾಂಡ 19:18ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆಮುಯ್ಯಿ ತೀರಿಸದವ ನಾಗಿಯೂ ಸೇಡು ತೀರಿಸದೆಯೂ ಇರು. ಆದರೆ ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು; ನಾನೇ ಕರ್ತನು.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- Romans 13:8–10 ರೋಮಾಪುರದವರಿಗೆ 13:8–10ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ. ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ. ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- John 13:34 ಯೋಹಾನನು 13:34ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಒಂದು ಹೊಸ ಆಜ್ಞೆಯನ್ನು ನಾನು ನಿಮಗೆ ಕೊಡುತ್ತೇನೆ--ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.
- Mark 12:31 ಮಾರ್ಕನು 12:31ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
- Matthew 22:39–40 ಮತ್ತಾಯನು 22:39–40ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು.
- Leviticus 19:34 ಯಾಜಕಕಾಂಡ 19:34ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೆ ಹುಟ್ಟಿದವನಂತಿರಲಿ, ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಯಾಕಂದರೆ ನೀವು ಐಗುಪ್ತದೇಶದಲ್ಲಿ ಪರಕೀಯರಾಗಿದ್ದಿರಿ; ನಿಮ್ಮ ದೇವರಾ ಗಿರುವ ಕರ್ತನು ನಾನೇ.
- 1 Timothy 1:5 1 ತಿಮೊಥೆಯನಿಗೆ 1:5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
- James 2:8–11 ಯಾಕೋಬನು 2:8–11ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Matthew 19:18–19 ಮತ್ತಾಯನು 19:18–19ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು. ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- Mark 12:33 ಮಾರ್ಕನು 12:33ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.