Galatians · chapter 5 · verse 18
Galatians 5:18 in Kannada
ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
Aadare neevu aatmaninda nadisikolluvavaraadare nyaayapramaa nakke adheenaralla.
Galatians 5:18 in English
- King James Version (KJV)
- But if ye be led of the Spirit, ye are not under the law.
- World English Bible (WEB)
- But if you are led by the Spirit, you are not under the law.
- American Standard Version (ASV)
- But if ye are led by the Spirit, ye are not under the law.
- Bible in Basic English (BBE)
- But if you are guided by the Spirit, you are not under the law.
- Darby Translation (DBY)
- but if ye are led by the Spirit, ye are not under law.
- Webster's Bible (WBS)
- But if ye are led by the Spirit, ye are not under the law.
- Young's Literal Translation (YLT)
- and if by the Spirit ye are led, ye are not under law.
Read in context
- 16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- 17ಶರೀರದಾಶೆಯು ಆತ್ಮನಿಗೆ ವಿರುದ್ಧ ವಾಗಿದೆ. ಆತ್ಮನು ಶರೀರಕ್ಕೆ ವಿರುದ್ಧವಾಗಿದ್ದಾನೆ. ನೀವು ಮಾಡಲಿಚ್ಛಿಸುವದನ್ನು ಮಾಡದಂತೆ ಇವು ಒಂದ ಕ್ಕೊಂದು ವಿರೋಧವಾಗಿವೆ.
- 18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- 19ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ
- 20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
Cross references
- Romans 6:14–15 ರೋಮಾಪುರದವರಿಗೆ 6:14–15ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ. ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- Romans 8:14 ರೋಮಾಪುರದವರಿಗೆ 8:14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- Proverbs 8:20 ಜ್ಞಾನೋಕ್ತಿಗಳು 8:20ನೀತಿಯ ಮಾರ್ಗದಲ್ಲಿ ನ್ಯಾಯದ ದಾರಿಗಳ ಮಧ್ಯದಲ್ಲಿ ನಾನು ನಡಿಸುತ್ತೇನೆ.
- Galatians 5:25 ಗಲಾತ್ಯದವರಿಗೆ 5:25ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- Galatians 5:16 ಗಲಾತ್ಯದವರಿಗೆ 5:16ನಾನು ಹೇಳುವದೇನಂದರೆ, ಆತ್ಮನನ್ನು ಅನು ಸರಿಸಿ ನಡೆದುಕೊಳ್ಳಿರಿ; ಆಗ ನೀವು ಶರೀರಭಾವದ ಅಭಿಲಾಷೆಯನ್ನು ಎಷ್ಟು ಮಾತ್ರಕ್ಕೂ ನೆರವೇರಿಸು ವದಿಲ್ಲ.
- Ezekiel 36:27 ಯೆಹೆಜ್ಕೇಲನು 36:27ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
- Galatians 4:5–6 ಗಲಾತ್ಯದವರಿಗೆ 4:5–6ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು. ನೀವು ಪುತ್ರ ರಾಗಿರುವದರಿಂದ--ಅಪ್ಪಾ, ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ದೇವರು ನಿಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Isaiah 48:16–18 ಯೆಶಾಯ 48:16–18ನನ್ನ ಸವಿಾಪಕ್ಕೆ ಬಂದು ಇದನ್ನು ಕೇಳಿರಿ; ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಅಂದಿನಿಂದಲೂ ಅಲ್ಲಿ ನಾನು ಇದ್ದೇನೆ; ಈಗ ದೇವರಾದ ಕರ್ತನು ಆತನ ಆತ್ಮ ದೊಡನೆ ನನ್ನನ್ನು ಕಳುಹಿಸಿದ್ದಾನೆ. ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ. ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
- 1 Timothy 1:9 1 ತಿಮೊಥೆಯನಿಗೆ 1:9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ
- Psalm 143:8–10 ಕೀರ್ತನೆಗಳು 143:8–10ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ. ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ. ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ.