Galatians · chapter 5 · verse 22
Galatians 5:22 in Kannada
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
Aadare aatmana phalavenandare--preeti santosha samaadhaana deerghashaanti vinaya sadguna nambike
Galatians 5:22 in English
- King James Version (KJV)
- But the fruit of the Spirit is love, joy, peace, longsuffering, gentleness, goodness, faith,
- World English Bible (WEB)
- But the fruit of the Spirit is love, joy, peace, patience, kindness, goodness, faith,
- American Standard Version (ASV)
- But the fruit of the Spirit is love, joy, peace, longsuffering, kindness, goodness, faithfulness,
- Bible in Basic English (BBE)
- But the fruit of the Spirit is love, joy, peace, a quiet mind, kind acts, well-doing, faith,
- Darby Translation (DBY)
- But the fruit of the Spirit is love, joy, peace, long-suffering, kindness, goodness, fidelity,
- Webster's Bible (WBS)
- But the fruit of the Spirit is love, joy, peace, long-suffering, gentleness, goodness, faith,
- Young's Literal Translation (YLT)
- And the fruit of the Spirit is: Love, joy, peace, long-suffering, kindness, goodness, faith,
Read in context
- 20ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು
- 21ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.
- 22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- 23ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
- 24ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.
Cross references
- Colossians 3:12–17 ಕೊಲೊಸ್ಸೆಯವರಿಗೆ 3:12–17ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- 1 Corinthians 13:4–7 1 ಕೊರಿಂಥದವರಿಗೆ 13:4–7ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- John 15:5 ಯೋಹಾನನು 15:5ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- John 15:2 ಯೋಹಾನನು 15:2ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Philippians 4:4–9 ಫಿಲಿಪ್ಪಿಯವರಿಗೆ 4:4–9ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ. ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು. ಕಡೇದಾಗಿ ಸಹೋದರರೇ, ಸತ್ಯವಾದವುಗಳು ಯಾವವೋ ಪ್ರಾಮಾಣಿಕವಾದವುಗಳು ಯಾವವೋ ನ್ಯಾಯವಾದವುಗಳು ಯಾವವೋ ಶುದ್ಧವಾದವುಗಳು ಯಾವವೋ ಪ್ರೀತಿಕರವಾದವುಗಳು ಯಾವವೋ ಮಾನ್ಯವಾದವುಗಳು ಯಾವವೋ ಅವುಗಳನ್ನು ಮತ್ತು ಸದ್ಗುಣವನ್ನೂ ಸ್ತುತ್ಯವಾದದ್ದನ್ನೂ ಯೊ ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
- Romans 7:4 ರೋಮಾಪುರದವರಿಗೆ 7:4ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- 1 Peter 1:22 1 ಪೇತ್ರನು 1:22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.