Galatians · chapter 5 · verse 6
Galatians 5:6 in Kannada
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
Yaakandare yesu kristanalliruvavarige sunnati yaadaroo prayojanavilla, aagadiddaroo prayo janavilla. Preetiyinda kelasanadisuva nambike yindale prayojanavaaguttade.
Galatians 5:6 in English
- King James Version (KJV)
- For in Jesus Christ neither circumcision availeth any thing, nor uncircumcision; but faith which worketh by love.
- World English Bible (WEB)
- For in Christ Jesus neither circumcision nor uncircumcision amounts to anything, but faith working through love.
- American Standard Version (ASV)
- For in Christ Jesus neither circumcision availeth anything, nor uncircumcision; but faith working through love.
- Bible in Basic English (BBE)
- Because in Christ Jesus, having circumcision or not having circumcision are equally of no profit; but only faith working through love.
- Darby Translation (DBY)
- For in Christ Jesus neither circumcision has any force, nor uncircumcision; but faith working through love.
- Webster's Bible (WBS)
- For in Jesus Christ neither circumcision availeth any thing, nor uncircumcision; but faith which worketh by love.
- Young's Literal Translation (YLT)
- for in Christ Jesus neither circumcision availeth anything, nor uncircumcision, but faith through love working.
Read in context
- 4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.
- 5ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ.
- 6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- 7ನೀವು ಚೆನ್ನಾಗಿ ಓಡುತ್ತಿದ್ದಿರಿ, ನೀವು ಸತ್ಯಕ್ಕೆ ವಿಧೇಯರಾಗದಂತೆ ಯಾರು ನಿಮ್ಮನ್ನು ತಡೆದರು?
- 8ಈ ಪ್ರೇರಣೆಯು ನಿಮ್ಮನ್ನು ಕರೆದಾತನಿಂದ ಬಂದದ್ದಲ್ಲ.
Cross references
- Galatians 6:15 ಗಲಾತ್ಯದವರಿಗೆ 6:15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- 1 Corinthians 7:19 1 ಕೊರಿಂಥದವರಿಗೆ 7:19ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- 1 Thessalonians 1:3 1 ಥೆಸಲೊನೀಕದವರಿಗೆ 1:3ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ.
- James 2:14–26 ಯಾಕೋಬನು 2:14–26ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ? ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ? ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ? ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
- 2 Corinthians 5:14 2 ಕೊರಿಂಥದವರಿಗೆ 5:14ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಮಾಡುತ್ತದೆ; ಹೀಗೆ ಎಲ್ಲರಿಗೋಸ್ಕರ ಒಬ್ಬನು ಸತ್ತದ್ದರಿಂದ ಎಲ್ಲರೂ ಸತ್ತಂತಾಯಿತೆಂದು ನಾವು ಹೀಗೆ ನಿಶ್ಚಯಿಸಿಕೊಳ್ಳುತ್ತೇವೆ.
- Matthew 25:31–40 ಮತ್ತಾಯನು 25:31–40ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- 1 John 3:14–20 1 ಯೋಹಾನನು 3:14–20ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ.
- Galatians 3:28 ಗಲಾತ್ಯದವರಿಗೆ 3:28ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Colossians 3:11 ಕೊಲೊಸ್ಸೆಯವರಿಗೆ 3:11ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ.
- 1 John 4:18–21 1 ಯೋಹಾನನು 4:18–21ಪ್ರೀತಿಯಲ್ಲಿ ಹೆದರಿಕೆಯಿಲ್ಲ; ಆದರೆ ಪೂರ್ಣ ಪ್ರೀತಿಯು ಹೆದರಿಕೆ ಯನ್ನು ಹೊರಡಿಸಿಬಿಡುತ್ತದೆ. ಯಾಕಂದರೆ ಭಯವಿರು ವಲ್ಲಿ ಯಾತನೆಯಿರುವದು. ಭಯಪಡುವವನು ಪ್ರೀತಿ ಯಲ್ಲಿ ಸಿದ್ಧಿಗೆ ಬಂದವನಲ್ಲ. ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ. ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
Original words (Greek)
- For · G1063γάρ gár
- in · G1722ἐν en
- Jesus · G2424Ἰησοῦς Iēsoûs
- Christ · G5547Χριστός Christós
- neither · G3777οὔτε oúte
- circumcision · G4061περιτομή peritomḗ
- availeth · G2480ἰσχύω ischýō
- any · G5100τὶς tìs
- nor · G3777οὔτε oúte
- uncircumcision · G203ἀκροβυστία akrobystía
- but · G235ἀλλά allá
- faith · G4102πίστις pístis
- worketh · G1754ἐνεργέω energéō
- by · G1223διά diá
- love · G26ἀγάπη agápē