Genesis · chapter 1 · verse 27
Genesis 1:27 in Kannada
ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
Heege devaru manushyanannu tanna svaroopadalli srushtisidanu, devararoopadalli aatanu avanannu srushtisidanu. Aatanu avarannu gandu hennaagi srushtisidanu.
Genesis 1:27 in English
- King James Version (KJV)
- So God created man in his [own] image, in the image of God created he him; male and female created he them.
- World English Bible (WEB)
- God created man in his own image. In God’s image he created him; male and female he created them.
- American Standard Version (ASV)
- And God created man in his own image, in the image of God created he him; male and female created he them.
- Bible in Basic English (BBE)
- And God made man in his image, in the image of God he made him: male and female he made them.
- Darby Translation (DBY)
- And God created Man in his image, in the image of God created he him; male and female created he them.
- Webster's Bible (WBS)
- So God created man in his [own] image, in the image of God created he him; male and female created he them.
- Young's Literal Translation (YLT)
- And God prepareth the man in His image; in the image of God He prepared him, a male and a female He prepared them.
Read in context
- 25ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.
- 26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- 27ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- 28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- 29ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.
Cross references
- Matthew 19:4 ಮತ್ತಾಯನು 19:4ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು.
- Genesis 5:1–2 ಆದಿಕಾಂಡ 5:1–2ಆದಾಮನ ವಂಶಾವಳಿಯ ಪುಸ್ತಕವು ಇದೇ. ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ತನ್ನ ಹೋಲಿಕೆಯಲ್ಲಿ ಆತನು ಅವನನ್ನು ಉಂಟುಮಾಡಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು; ಅವರು ಸೃಷ್ಟಿಸಲ್ಪಟ್ಟ ದಿನದಲ್ಲಿ ಆತನು ಅವರನ್ನು ಆಶೀರ್ವದಿಸಿ ಅವರನ್ನು ಆದಾಮ ನೆಂದು ಕರೆದನು (ಹೆಸರಿಟ್ಟನು).
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Mark 10:6 ಮಾರ್ಕನು 10:6ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು.
- Genesis 2:21–25 ಆದಿಕಾಂಡ 2:21–25ಕರ್ತನಾದ ದೇವರು ಆದಾಮನಿಗೆ ಗಾಢನಿದ್ರೆ ಬರಮಾಡಿದ್ದರಿಂದ ಅವನು ನಿದ್ರೆಮಾಡಿದನು; ಆಗ ಆತನು ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತಕ್ಕೊಂಡು ಅದಕ್ಕೆ ಬದಲಾಗಿ ಮಾಂಸವನ್ನು ಮುಚ್ಚಿದನು. ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು. ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು. ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ. ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- Ephesians 4:24 ಎಫೆಸದವರಿಗೆ 4:24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ನೀತಿಯಲ್ಲಿಯೂ ನಿಜವಾದ ಪರಿಶುದ್ಧತೆಯಲ್ಲಿಯೂ ನಿರ್ಮಿಸಲ್ಪಟ್ಟಿದೆ.
- Psalm 139:14 ಕೀರ್ತನೆಗಳು 139:14ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Colossians 1:15 ಕೊಲೊಸ್ಸೆಯವರಿಗೆ 1:15ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಪ್ರತಿಯೊಂದು ಸೃಷ್ಟಿಗೆ ಜ್ಯೇಷ್ಠನೂ ಆಗಿದ್ದಾನೆ.
- 1 Corinthians 11:7–9 1 ಕೊರಿಂಥದವರಿಗೆ 11:7–9ಆದರೆ ಪುರುಷನು ದೇವರ ಪ್ರತಿರೂಪವೂ ಪ್ರಭಾವವೂ ಆಗಿರುವದರಿಂದ ತಲೆಯನ್ನು ಮುಚ್ಚಿ ಕೊಳ್ಳಕೂಡದು; ಸ್ತ್ರೀಯಾದರೋ ಪುರುಷನ ಪ್ರಭಾವ ವಾಗಿದ್ದಾಳೆ. ಪುರುಷನು ಸ್ತ್ರೀಯಿಂದ ನಿರ್ಮಿತ ನಾಗಲಿಲ್ಲ; ಸ್ತ್ರೀಯು ಪುರುಷನಿಂದ ನಿರ್ಮಿತವಾದಳು. ಇದಲ್ಲದೆ ಪುರುಷನು ಸ್ತ್ರೀಯ ನಿಮಿತ್ತವಾಗಿ ನಿರ್ಮಾಣವಾಗಲಿಲ್ಲ; ಆದರೆ ಸ್ತ್ರೀಯು ಪುರುಷನ ನಿಮಿತ್ತವಾಗಿ ನಿರ್ಮಾಣವಾದಳು.
- Genesis 2:18 ಆದಿಕಾಂಡ 2:18ಕರ್ತನಾದ ದೇವರು--ಮನುಷ್ಯನು ಒಂಟಿಯಾ ಗಿರುವದು ಒಳ್ಳೆಯದಲ್ಲ; ಅವನಿಗೆ ತಕ್ಕ ಸಹಕಾರಿಯನ್ನು ಮಾಡುವೆನು ಅಂದನು.
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,