Genesis · chapter 1 · verse 3
Genesis 1:3 in Kannada
ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
Aaga devaru--belakaagali annalu belakaa yitu.
Genesis 1:3 in English
- King James Version (KJV)
- And God said, Let there be light: and there was light.
- World English Bible (WEB)
- God said, “Let there be light,” and there was light.
- American Standard Version (ASV)
- And God said, Let there be light: and there was light.
- Bible in Basic English (BBE)
- And God said, Let there be light: and there was light.
- Darby Translation (DBY)
- And God said, Let there be light. And there was light.
- Webster's Bible (WBS)
- And God said, Let there be light: and there was light.
- Young's Literal Translation (YLT)
- and God saith, 'Let light be;' and light is.
Read in context
- 1ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.
- 2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- 3ಆಗ ದೇವರು--ಬೆಳಕಾಗಲಿ ಅನ್ನಲು ಬೆಳಕಾ ಯಿತು.
- 4ದೇವರು ಬೆಳಕನ್ನು ಒಳ್ಳೆಯದೆಂದು ನೋಡಿದನು; ದೇವರು ಬೆಳಕನ್ನು ಕತ್ತಲೆಯಿಂದ ಬೇರೆ ಮಾಡಿದನು.
- 5ದೇವರು ಬೆಳಕಿಗೆ ಹಗ ಲೆಂದೂ ಕತ್ತಲೆಗೆ ರಾತ್ರಿಯೆಂದೂ ಕರೆದನು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.
Cross references
- 2 Corinthians 4:6 2 ಕೊರಿಂಥದವರಿಗೆ 4:6ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- John 1:5 ಯೋಹಾನನು 1:5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ; ಆ ಕತ್ತಲು ಅದನ್ನು ಗ್ರಹಿಸಲಿಲ್ಲ.
- Isaiah 45:7 ಯೆಶಾಯ 45:7ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
- Isaiah 60:19 ಯೆಶಾಯ 60:19ಇನ್ನು ಮೇಲೆ ಸೂರ್ಯನು ನಿನಗೆ ಹಗಲಿ ನಲ್ಲಿ ಬೆಳಕಾಗಿರುವದಿಲ್ಲ, ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವದಿಲ್ಲ; ಆದರೆ ಕರ್ತನು ನಿನಗೆ ನಿತ್ಯವಾದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಪ್ರಭೆಯಾಗಿರುವನು.
- 1 John 1:5 1 ಯೋಹಾನನು 1:5ನಾವು ಆತನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವದಂದರೆ--ದೇವರು ಬೆಳಕಾಗಿದ್ದಾನೆ; ಆತನಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ ಎಂಬದೇ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- John 3:19 ಯೋಹಾನನು 3:19ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.
- Psalm 97:11 ಕೀರ್ತನೆಗಳು 97:11ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Psalm 33:6 ಕೀರ್ತನೆಗಳು 33:6ಕರ್ತನ ವಾಕ್ಯ ದಿಂದ ಆಕಾಶವೂ ಆತನ ಬಾಯಿಯ ಉಸುರಿನಿಂದ ಅದರ ಸೈನ್ಯವೆಲ್ಲವೂ ಉಂಟಾದವು.
- Psalm 148:5 ಕೀರ್ತನೆಗಳು 148:5ಕರ್ತನ ಹೆಸರನ್ನು ಅವು ಸ್ತುತಿಸಲಿ; ಆತನು ಆಜ್ಞಾ ಪಿಸಲು ಅವು ನಿರ್ಮಿಸಲ್ಪಟ್ಟವು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.