Genesis · chapter 10 · verse 11
Genesis 10:11 in Kannada
ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
Aa deshadolaginda ashshooranu horatu ninave rehobot emba pattana, kelaha,
Genesis 10:11 in English
- King James Version (KJV)
- Out of that land went forth Asshur, and builded Nineveh, and the city Rehoboth, and Calah,
- World English Bible (WEB)
- Out of that land he went into Assyria, and built Nineveh, Rehoboth Ir, Calah,
- American Standard Version (ASV)
- Out of that land he went forth into Assyria, and builded Nineveh, and Rehoboth-Ir, and Calah,
- Bible in Basic English (BBE)
- From that land he went out into Assyria, building Nineveh with its wide streets and Calah,
- Darby Translation (DBY)
- From that land went out Asshur, and built Nineveh, and Rehoboth-Ir, and Calah,
- Webster's Bible (WBS)
- Out of that land went forth Ashur, and built Nineveh, and the city Rehoboth, and Calah,
- Young's Literal Translation (YLT)
- from that land he hath gone out to Asshur, and buildeth Nineveh, even the broad places of the city, and Calah,
Read in context
- 9ಅವನು ಕರ್ತನ ಮುಂದೆ ಬಲಿಷ್ಠನಾದ ಬೇಟೆಗಾರನಾಗಿದ್ದನು. ಆದದರಿಂದ--ಕರ್ತನ ಮುಂದೆ ಬಲಿಷ್ಠನಾದ ಬೇಟೆ ಗಾರನಾಗಿದ್ದ ನಿಮ್ರೋದನು ಎಂಬ ಮಾತು ಹೇಳ ಲ್ಪಟ್ಟಿತು.
- 10ಶಿನಾರ್ ದೇಶದಲ್ಲಿರುವ ಬಾಬೆಲ್ ಯೆರೆಕ್ ಅಕ್ಕದ್ ಕಲ್ನೇ ಎಂಬವು ಅವನ ಪ್ರಾರಂಭದ ರಾಜ್ಯ ಗಳಾಗಿದ್ದವು.
- 11ಆ ದೇಶದೊಳಗಿಂದ ಅಶ್ಶೂರನು ಹೊರಟು ನಿನವೆ ರೆಹೋಬೋತ್ ಎಂಬ ಪಟ್ಟಣ, ಕೆಲಹ,
- 12ನಿನವೆಗೂ ಕೆಲಹಕ್ಕೂ ಮಧ್ಯದಲ್ಲಿರುವ ದೊಡ್ಡ ಪಟ್ಟಣವಾಗಿರುವ ರೆಸೆನ್ನನ್ನು ಕಟ್ಟಿದನು.
- 13ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
Cross references
- Micah 5:6 ಮೀಕ 5:6ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು.
- Jonah 1:2 ಯೋನ 1:2ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
- Nahum 1:1 ನಹೂಮ 1:1ನಿನೆವೆಯ ಭಾರವು. ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.
- Psalm 83:8 ಕೀರ್ತನೆಗಳು 83:8ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Isaiah 37:37 ಯೆಶಾಯ 37:37ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್ಹದ್ದೋನನು ಆಳಿದನು.
- Ezekiel 27:23 ಯೆಹೆಜ್ಕೇಲನು 27:23ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು.
- Ezra 4:2 ಎಜ್ರನು 4:2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- Numbers 24:22 ಅರಣ್ಯಕಾಂಡ 24:22ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು.
- 2 Kings 19:36 2 ಅರಸುಗಳು 19:36ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
- Zephaniah 2:13 ಚೆಫನ್ಯ 2:13ಆತನು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ ಅಶ್ಶೂರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಅರಣ್ಯದಂತೆ ಒಣಗಿ ದ್ದಾಗಿಯೂ ಮಾಡುವನು.
- Nahum 3:7 ನಹೂಮ 3:7ಆಗ ಆಗುವದೇನಂದರೆ, ನಿನ್ನನ್ನು ನೋಡುವವ ರೆಲ್ಲರೂ ನಿನ್ನಿಂದ ಓಡಿಹೋಗಿ ನಿನೆವೆ ಹಾಳಾಯಿತು; ಅದಕ್ಕೆ ಯಾರು ಚಿಂತೆಪಡುವರು, ನಿನಗಾಗಿ ಆದರಿ ಸುವವರನ್ನು ನಾನು ಎಲ್ಲಿಂದ ಹುಡುಕಲಿ ಎಂದು ಹೇಳುವರು.
- Jonah 3:1–10 ಯೋನ 3:1–10ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು, ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.