Genesis · chapter 10 · verse 15
Genesis 10:15 in Kannada
ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
Kaanaananinda tanna chochchala maganaada seedonanoo hetanoo
Genesis 10:15 in English
- King James Version (KJV)
- And Canaan begat Sidon his firstborn, and Heth,
- World English Bible (WEB)
- Canaan became the father of Sidon (his firstborn), Heth,
- American Standard Version (ASV)
- And Canaan begat Sidon his first-born, and Heth,
- Bible in Basic English (BBE)
- And Canaan was the father of Zidon, who was his oldest son, and Heth,
- Darby Translation (DBY)
- — And Canaan begot Sidon, his firstborn, and Heth,
- Webster's Bible (WBS)
- And Canaan begat Sidon his first-born, and Heth,
- Young's Literal Translation (YLT)
- And Canaan hath begotten Sidon his first-born, and Heth,
Read in context
- 13ಮಿಚ್ರಯಿಮ್ಯನಿಂದ ಲೂದ್ಯರೂ ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
- 14ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಹುಟ್ಟಿದರು. ಇವರಿಂದ ಫಿಲಿಷ್ಟಿಯರು ಹೊರಬಂದರು.
- 15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- 16ಯೆಬೂಸಿಯನೂ ಅಮೋರಿಯನೂ ಗಿರ್ಗಾಷಿಯನೂ
- 17ಹಿವ್ವಿಯನೂ ಅರ್ಕಿಯನೂ ಸೀನಿಯನೂ
Cross references
- Numbers 34:2–15 ಅರಣ್ಯಕಾಂಡ 34:2–15ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ. ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- Exodus 34:11 ವಿಮೋಚನಕಾಂಡ 34:11ನಾನು ಈ ಹೊತ್ತು ನಿನಗೆ ಆಜ್ಞಾಪಿಸುವದನ್ನು ಅನುಸರಿಸು; ಇಗೋ, ಅಮೋರಿಯರನ್ನೂ ಕಾನಾನ್ಯ ರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿನ್ನ ಎದುರಿನಿಂದ ಹೊರಡಿಸಿ ಬಿಡುತ್ತೇನೆ.
- Genesis 15:18–21 ಆದಿಕಾಂಡ 15:18–21ಅದೇ ದಿನದಲ್ಲಿ ಕರ್ತನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು--ಐಗುಪ್ತದ ನದಿಯಿಂದ ಮಹಾನದಿಯಾದ ಯೂಫ್ರೇಟೀಸ್ ನದಿಯ ವರೆಗೆ ವಾಸಿಸುವ ಕೇನಿಯರೂ ಕೆನಿಜೀಯರೂ ಕದ್ಮೋನಿ ಯರೂ ಹಿತ್ತಿಯರೂ ಪೆರಿಜೀಯರೂ ರೆಫಾಯರೂಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು. ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ ಅಂದನು.
- 1 Chronicles 1:13 1 ಪೂರ್ವಕಾಲವೃತ್ತಾಂತ 1:13ಕಾನಾನನು ತನ್ನ ಚೊಚ್ಚಲ ಮಗನಾದ ಸೀದೋನ ನನ್ನೂ
- Genesis 23:3 ಆದಿಕಾಂಡ 23:3ತರುವಾಯ ಅಬ್ರಹಾಮನು (ತನ್ನ ಹೆಂಡತಿಯ) ಶವದ ಬಳಿಯಿಂದ ಎದ್ದು ಹೇತನ ಮಕ್ಕಳ ಸಂಗಡ ಮಾತನಾಡಿದ್ದೇನಂದರೆ--
- 2 Samuel 11:3 2 ಸಮುವೇಲನು 11:3ಆ ಸ್ತ್ರೀಯು ಮಹಾಸೌಂದರ್ಯ ರೂಪವುಳ್ಳವಳಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವದಕ್ಕೆ--ಕಳುಹಿಸಿದಾಗ ಒಬ್ಬನು--ಅವಳು ಹಿತ್ತಿಯನಾದ ಊರೀಯನ ಹೆಂಡತಿಯಾಗಿರುವ ಎಲೀಯಾಮನ ಮಗಳಾದ ಬತ್ಷೆಬೆಯಲ್ಲವೋ ಅಂದನು.
- Joshua 11:8 ಯೆಹೋಶುವ 11:8ಕರ್ತನು ಅವರನ್ನು ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಅವರನ್ನು ಹೊಡೆದು ದೊಡ್ಡ ಚೀದೋನಿನವರೆಗೂ ಮಿಸ್ರೆಫೋತ್ಮಯೀಮಿನ ವರೆಗೂ ಮೂಡಲಲ್ಲಿರುವ ಮಿಚ್ಪೆಯ ತಗ್ಗಿನ ವರೆಗೂ ಹಿಂದಟ್ಟಿ ಅವರಲ್ಲಿ ಒಬ್ಬನ ನ್ನಾದರೂ ಉಳಿಸದೆ ಅವರನ್ನು ಹೊಡೆದುಬಿಟ್ಟರು.
- Genesis 28:3–20 ಆದಿಕಾಂಡ 28:3–20ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ, ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ ಅಂದನು. ಇಸಾಕನು ಯಾಕೋಬನನ್ನು ಕಳುಹಿಸಿದಾಗ ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿಯಾದ ರೆಬೆಕ್ಕಳ ಸಹೋದರನಾದ ಅರಾಮಿನವನಾದ ಬೆತೊ ವೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು. ಇಸಾಕನು ಯಾಕೋಬನನ್ನು ಆಶೀರ್ವದಿಸಿ ಅವನಿಗೆ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ ಅವನಿಗೆ--ನೀನು ಕಾನಾನ್ಯರ ಕುಮಾರ್ತೆಯರಲ್ಲಿ ಹೆಂಡತಿಯನ್ನು ತಕ್ಕೊಳ್ಳಬಾರದು ಎಂದು ಆಜ್ಞಾಪಿಸಿದ್ದನ್ನೂ ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಏಸಾವನು ನೋಡಿ ದಾಗ ಕಾನಾನ್ಯರ ಕುಮಾರ್ತೆಯರು ತನ್ನ ತಂದೆಯಾದ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ತಿಳಿದು ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಗ ಯಾಕೋಬನು ಬೇರ್ಷೆಬದಿಂದ ಖಾರಾ ನಿನ ಕಡೆಗೆ ಹೊರಟನು. ಅವನು ಒಂದು ಸ್ಥಳಕ್ಕೆ ಸೇರಿದಾಗ ಸೂರ್ಯಾಸ್ತಮಾನವಾದದ್ದರಿಂದ ಅಲ್ಲಿ ಇಳುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದುಕೊಂಡು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲಿ ಮಲಗಿಕೊಂಡನು. ಆಗ ಅವನು ಕನಸು ಕಂಡನು. ಇಗೋ, ಏಣಿಯು ಭೂಮಿಯ ಮೇಲೆ ನಿಲ್ಲಿಸಲ್ಪಟ್ಟಿತ್ತು. ಅದರ ತುದಿಯು ಆಕಾಶಕ್ಕೆ ಮುಟ್ಟಿತ್ತು. ಇಗೋ, ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು. ಇಗೋ, ಕರ್ತನು ಅದರ ಮೇಲೆ ನಿಂತುಕೊಂಡು ಹೇಳಿದ್ದೇನಂದರೆ--ನಿನ್ನ ತಂದೆ ಯಾದ ಅಬ್ರಹಾಮನ ಕರ್ತನಾದ ದೇವರೂ ಇಸಾಕನ ದೇವರೂ ನಾನೇ, ನೀನು ಮಲಗಿರುವ ಭೂಮಿಯನ್ನು ನಿನಗೂ ನಿನ್ನ ಸಂತತಿಗೂ ಕೊಡುವೆನು. ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು. ಇಗೋ, ನಾನು ನಿನ್ನ ಸಂಗಡ ಇದ್ದು ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ ಈ ದೇಶಕ್ಕೆ ನಿನ್ನನ್ನು ತಿರಿಗಿ ಬರಮಾಡುವೆನು. ಯಾಕಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವ ವರೆಗೆ ನಿನ್ನನ್ನು ಬಿಡುವದಿಲ್ಲ ಅಂದನು. ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚತ್ತು--ನಿಶ್ಚಯವಾಗಿ ಈ ಸ್ಥಳದಲ್ಲಿ ಕರ್ತನು ಇದ್ದಾನೆ. ಇದನ್ನು ನಾನು ಅರಿಯಲಿಲ್ಲ ಅಂದನು. ಅವನು ಭಯಪಟ್ಟು--ಈ ಸ್ಥಳವು ಎಷ್ಟೋ ಭಯಂಕರ ವಾದದ್ದು; ಇದು ದೇವರ ಮನೆಯೇ ಹೊರತು ಬೇರೆಯಲ್ಲ; ಇದೇ ಪರಲೋಕದ ಬಾಗಿಲು ಅಂದನು. ಯಾಕೋಬನು ಬೆಳಿಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನೆಟ್ಟು ಅದರ ಮೇಲೆ ಎಣ್ಣೆಯನ್ನು ಹೊಯ್ದನು. ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು. ಆಗ ಯಾಕೋಬನು ಪ್ರಮಾಣಮಾಡಿ ಹೇಳಿದ್ದೇ ನಂದರೆ--ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ರೊಟ್ಟಿಯನ್ನೂ ಹೊದಿಯುವದಕ್ಕೆ ವಸ್ತ್ರ ವನ್ನೂ ನನಗೆ ಕೊಟ್ಟು
- Genesis 49:13 ಆದಿಕಾಂಡ 49:13ಜೆಬೂಲೂನನು ಸಮುದ್ರದ ರೇವಿನಲ್ಲಿ ವಾಸಿಸು ವನು; ಅವನು ಹಡಗುಗಳ ರೇವೂ ಆಗಿರುವನು. ಅವನ ಮೇರೆಯು ಚೀದೋನಿಗೆ ಮುಟ್ಟುವದು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Isaiah 23:4 ಯೆಶಾಯ 23:4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- Joshua 12:8–24 ಯೆಹೋಶುವ 12:8–24ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ-- ಯೆರಿಕೋವಿನ ಅರಸನು ಒಬ್ಬನು; ಬೇತೇಲ್ ಬಳಿಯಲ್ಲಿರುವ ಆಯಿಯ ಅರಸನು ಒಬ್ಬನು; ಯೆರೂಸಲೇಮಿನ ಅರಸನು ಒಬ್ಬನು; ಹೆಬ್ರೋನಿನ ಅರಸನು ಒಬ್ಬನು; ಯರ್ಮೂತಿನ ಅರಸನು ಒಬ್ಬನು; ಲಾಕೀಷಿನ ಅರಸನು ಒಬ್ಬನು; ಎಗ್ಲೋನಿನ ಅರಸನು ಒಬ್ಬನು; ಗೆಜೆರಿನ ಅರಸನು ಒಬ್ಬನು; ದೆಬೀರಿನ ಅರಸನು ಒಬ್ಬನು; ಗೆದೆರಿನ ಅರಸನು ಒಬ್ಬನು; ಹೊರ್ಮದ ಅರಸನು ಒಬ್ಬನು; ಅರಾದಿನ ಅರಸನು ಒಬ್ಬನು; ಲಿಬ್ನದ ಅರಸನು ಒಬ್ಬನು; ಅದುಲ್ಲಾಮದ ಅರಸನು ಒಬ್ಬನು; ಮಕ್ಕೇದದ ಅರಸನು ಒಬ್ಬನು; ಬೇತೇಲಿನ ಅರಸನು ಒಬ್ಬನು; ತಪ್ಪೂಹದ ಅರಸನು ಒಬ್ಬನು; ಹೇಫೆರಿನ ಅರಸನು ಒಬ್ಬನು; ಅಫೇಕದ ಅರಸನು ಒಬ್ಬನು; ಲಷ್ಷಾರೋನಿನ ಅರಸನು ಒಬ್ಬನು; ಮಾದೋನಿನ ಅರಸನು ಒಬ್ಬನು; ಹಾಚೋರಿನ ಅರಸನು ಒಬ್ಬನು; ಶಿಮ್ರೋನ್ಮೆರೋನಿನ ಅರಸನು ಒಬ್ಬನು; ಅಕ್ಷಾಫಿನ ಅರಸನು ಒಬ್ಬನು; ತಾನಕದ ಅರಸನು ಒಬ್ಬನು; ಮೆಗಿದ್ದೋವಿನ ಅರಸನು ಒಬ್ಬನು; ಕೆದೆಷಿನ ಅರಸನು ಒಬ್ಬನು; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು ಒಬ್ಬನು; ದೋರ್ ಪ್ರಾಂತ್ಯದಲ್ಲಿರುವ ದೋರಿನ ಅರಸನು ಒಬ್ಬನು; ಗಿಲ್ಗಾಲಿನ ಜನಾಂಗಗಳ ಅರಸನು ಒಬ್ಬನು;ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು. ತಿರ್ಚದ ಅರಸನು ಒಬ್ಬನು; ಒಟ್ಟು ಮೂವತ್ತೊಂದು ಅರಸರುಗಳು.