Genesis · chapter 10 · verse 19
Genesis 10:19 in Kannada
ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
Kaanaanyara mereyu seedoni ninda geraarina maargavaagi gaajaada varege sodom gomora admaa cheboyim maargavaagi leshaada varegoo iruttade.
Genesis 10:19 in English
- King James Version (KJV)
- And the border of the Canaanites was from Sidon, as thou comest to Gerar, unto Gaza; as thou goest, unto Sodom, and Gomorrah, and Admah, and Zeboim, even unto Lasha.
- World English Bible (WEB)
- The border of the Canaanites was from Sidon—as you go toward Gerar—to Gaza—as you go toward Sodom, Gomorrah, Admah, and Zeboiim—to Lasha.
- American Standard Version (ASV)
- And the border of the Canaanite was from Sidon, as thou goest toward Gerar, unto Gaza; as thou goest toward Sodom and Gomorrah and Admah and Zeboiim, unto Lasha.
- Bible in Basic English (BBE)
- Their country stretching from Zidon to Gaza, in the direction of Gerar; and to Lasha, in the direction of Sodom and Gomorrah and Admah and Zeboiim.
- Darby Translation (DBY)
- And the border of the Canaanite was from Sidon, as one goes to Gerar, up to Gazah; as one goes to Sodom, and Gomorrah, and Admah, and Zeboim, up to Lesha.
- Webster's Bible (WBS)
- And the border of the Canaanites was from Sidon, as thou comest to Gerar, to Gaza; as thou goest to Sodom and Gomorrah, and Admah, and Zeboim, even to Lashah.
- Young's Literal Translation (YLT)
- And the border of the Canaanite is from Sidon, [in] thy coming towards Gerar, unto Gaza; [in] thy coming towards Sodom, and Gomorrah, and Admah, and Zeboim, unto Lasha.
Read in context
- 17ಹಿವ್ವಿಯನೂ ಅರ್ಕಿಯನೂ ಸೀನಿಯನೂ
- 18ಅರ್ವಾದಿಯನೂ ಚೆಮಾರಿಯನೂ ಹಮಾತಿಯನೂ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
- 19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- 21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
Cross references
- Genesis 14:2 ಆದಿಕಾಂಡ 14:2ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು.
- Genesis 19:24–25 ಆದಿಕಾಂಡ 19:24–25ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು. ಹೀಗೆ ಆತನು ಆ ಪಟ್ಟಣಗಳನ್ನೂ ಎಲ್ಲಾ ಮೈದಾನವನ್ನೂ ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಹಾಳುಮಾಡಿದನು.
- Joshua 12:7–8 ಯೆಹೋಶುವ 12:7–8ಆದರೆ ಯೊರ್ದನಿಗೆ ಪಶ್ಚಿಮದಲ್ಲಿ ಲೆಬನೋ ನಿನ ತಗ್ಗಿನಲ್ಲಿರುವ ಬಾಲಾದ್ ಮೊದಲುಗೊಂಡು ಸೇಯಾರಿಗೆ ಏರಿಹೋಗುವ ಹಾಲಾಕ್ ಬೆಟ್ಟದ ವರೆಗೆ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಬೈಲಿನಲ್ಲಿಯೂ ನೀರು ಬುಗ್ಗೆಗಳ ಸ್ಥಳಗಳಲ್ಲಿಯೂ ಅರಣ್ಯದಲ್ಲಿಯೂ ದಕ್ಷಿಣದಲ್ಲಿಯೂ ಯೆಹೋಶುವನು ಇಸ್ರಾಯೇಲಿನ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಪಾಲು ಇಟ್ಟ ದೇಶವಾದಂಥ ಹಿತ್ತಿಯರ ಅಮೋರಿಯರ ಕಾನಾನ್ಯರ ಪೆರಿಜ್ಜೀಯರ ಹಿವ್ವೀಯರ ಯೆಬೂಸಿಯರ ದೇಶದಲ್ಲಿದ್ದ ಯೆಹೋಶು ವನೂ ಇಸ್ರಾಯೇಲ್ ಮಕ್ಕಳೂ ಹೊಡೆದುಬಿಟ್ಟ ಅರಸರು ಯಾರಂದರೆ--
- Genesis 26:1 ಆದಿಕಾಂಡ 26:1ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.
- Genesis 18:20 ಆದಿಕಾಂಡ 18:20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- Jeremiah 25:20 ಯೆರೆಮೀಯ 25:20ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ
- Numbers 34:2–15 ಅರಣ್ಯಕಾಂಡ 34:2–15ನೀನು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ--ನೀವು ಕಾನಾನ್ ದೇಶದೊಳಗೆ ಬರುವಾಗ ನಿಮಗೆ ಸ್ವಾಸ್ತ್ಯಕ್ಕಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು. ಹೇಗೆ ಅಂದರೆ ನಿಮ್ಮ ದಕ್ಷಿಣ ಕಡೆಯು ಜಿನ್ ಅರಣ್ಯದಿಂದ ಎದೋಮಿಗೆ ಅನುಸಾರವಾಗಿರಬೇಕು; ನಿಮ್ಮ ದಕ್ಷಿಣ ಮೇರೆಯು ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು. ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ ಜಿನ್ಗೆ ಹಾದು ಕಾದೇಶ್ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು ಅಲ್ಲಿಂದ ಹಚರದ್ದಾರಿಗೆ ಹೊರಟು ಅಚ್ಮೋನಿಗೆ ಹಾದು ಹೋಗಬೇಕು. ಮೇರೆ ಅಚ್ಮೋನಿನಿಂದ ಐಗುಪ್ತದ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು. ಪಶ್ಚಿಮದ ಮೇರೆಯಾದರೆ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು; ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವದು. ನಿಮ್ಮ ಉತ್ತರ ಮೇರೆ ಯಾವದಂದರೆ--ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದ ವರೆಗೂ ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು ಜಿಫ್ರೋನಿಗೆ ಹೋಗಿ ಹಚರೇನಾನಿನಲ್ಲಿ ಮುಗಿಯಲಿ; ಇದು ನಿಮ್ಮ ಉತ್ತರ ಮೇರೆ. ಪೂರ್ವದ ಮೇರೆಗೋಸ್ಕರ ಹಚರೇನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ. ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ. ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು. ಮೋಶೆಯು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾ ಪಿಸಿ--ನೀವು ಚೀಟಿನಿಂದ ಸ್ವಾಧೀನಪಡಿಸಿಕೊಳ್ಳ ಬೇಕಾದ ದೇಶವು ಒಂಭತ್ತುವರೆ ಗೋತ್ರಗಳಿಗೆ ಕೊಡ ಬೇಕೆಂದು ಕರ್ತನು ಆಜ್ಞಾಪಿಸಿದ ದೇಶವು ಇದೇ. ರೂಬೇನನ ಮಕ್ಕಳ ಗೋತ್ರವೂ ಗಾದನ ಮಕ್ಕಳ ಗೋತ್ರವೂ ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸ್ವಾಸ್ತ್ಯವನ್ನು ಪಡೆದುಕೊಂಡಿದ್ದಾರೆ. ಎರಡೂವರೆ ಗೋತ್ರಗಳು ತಮ್ಮ ಸ್ವಾಸ್ತ್ಯವನ್ನು ಯೊರ್ದನಿನ ಈಚೆಯಲ್ಲಿ ಯೆರಿ ಕೋವಿಗೆ ಸೂರ್ಯನು ಉದಯಿಸುವ ಪೂರ್ವ ದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ ಎಂದು ಹೇಳಿದನು.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- Judges 16:1 ನ್ಯಾಯಸ್ಥಾಪಕರು 16:1ಆಗ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು ಅವಳ ಬಳಿಗೆ ಹೋದನು.
- Deuteronomy 32:8 ಧರ್ಮೋಪದೇಶಕಾಂಡ 32:8ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Joshua 14:1–15 ಯೆಹೋಶುವ 14:1–15ಅವರ ಯಾಜಕನಾದ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲ್ ಮಕ್ಕಳ ಗೋತ್ರಗಳ ತಂದೆಗಳ ಮುಖ್ಯಸ್ಥರೂ ಅವರಿಗೆ ಬಾಧ್ಯತೆಯಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲ್ ಮಕ್ಕಳು ಬಾಧ್ಯ ವಾಗಿ ಹೊಂದಿದ ದೇಶಗಳು ಇವೇ. ಅವರ ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಭತ್ತೂವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಬಾಧ್ಯವಾಗಿ ಪಾಲು ಹಂಚಿದರು. ಮೋಶೆಯು ಯೊರ್ದನಿಗೆ ಆಚೆ ಎರಡುವರೆ ಗೋತ್ರಗಳಿಗೆ ಬಾಧ್ಯತೆಯನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಬಾಧ್ಯತೆಯನ್ನೂ ಕೊಡಲಿಲ್ಲ; ಯೋಸೇಫನ ಮಕ್ಕಳಾದ ಮನಸ್ಸೆಯೂ ಎಫ್ರಾಯಾಮನೂ ಎರಡು ಗೋತ್ರಗಳಾಗಿದ್ದರು. ಅವರು ಲೇವಿಯರಿಗೆ ದೇಶದಲ್ಲಿ ಪಾಲು ಕೊಡಲಿಲ್ಲ; ವಾಸಮಾಡುವ ಪಟ್ಟಣಗಳನ್ನೂ ಪಶುಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ ಪ್ರಾಂತ್ಯಗಳನ್ನೂ ಮಾತ್ರ ಕೊಟ್ಟರು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು. ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ; ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು. ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು. ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು. ಈಗ ಇಗೋ, ಕರ್ತನು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲ್ ಮಕ್ಕಳು ಅರಣ್ಯದಲ್ಲಿ ಸಂಚರಿಸಿದ ನಾಲ್ವತ್ತೈದು ವರುಷ ಕರ್ತನು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾನೆ. ಈಗ ಇಗೋ, ನಾನು ಇಂದು ಎಂಭತ್ತೈದು ವರುಷ ಪ್ರಾಯದವನಾಗಿದ್ದೇನೆ. ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ. ಆದದರಿಂದ ಕರ್ತನು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು. ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬ ನನ್ನು ಆಶೀರ್ವದಿಸಿ ಅವನಿಗೆ ಹೆಬ್ರೋನನ್ನು ಬಾಧ್ಯತೆ ಯಾಗಿ ಕೊಟ್ಟನು. ಹೀಗೆಯೇ ಕೆನೆಜ್ಯನಾದ ಯೆಫು ನ್ನೆಯ ಮಗನಾದ ಕಾಲೇಬನು ಇಸ್ರಾಯೇಲಿನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿ ದ್ದರಿಂದ ಹೆಬ್ರೋನು ಇಂದಿನ ವರೆಗೂ ಅವನ ಬಾಧ್ಯತೆ ಯಾಯಿತು.ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು. ಹೆಬ್ರೋನಿನ ಹೆಸರು ಮೊದಲು ಕಿರ್ಯತ್ಅರ್ಬ; ಈ ಹೆಸರು ಅನಾಕ್ಯರಲ್ಲಿ ಒಬ್ಬ ದೊಡ್ಡ ಮನುಷ್ಯನದು. ದೇಶವು ಯುದ್ಧವಿಲ್ಲದೆ ಶಾಂತವಾಯಿತು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
Original words (Hebrew)
- border · H1366גְּבוּל gᵉbûwl
- Canaanites · H3669כְּנַעַנִי Kᵉnaʻanîy
- Sidon · H6721צִידוֹן Tsîydôwn
- comest · H935בּוֹא bôwʼ
- Gerar · H1642גְּרָר Gᵉrâr
- Gaza · H5804עַזָּה ʻAzzâh
- goest · H935בּוֹא bôwʼ
- Sodom · H5467סְדֹם Çᵉdôm
- Gomorrah · H6017עֲמֹרָה ʻĂmôrâh
- Admah · H126אַדְמָה ʼAdmâh
- Zeboim · H6636צְבֹאִים Tsᵉbôʼîym
- Lasha · H3962לֶשַׁע Leshaʻ