Genesis · chapter 10 · verse 21
Genesis 10:21 in Kannada
ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
Yeberana makkalellara tandeyoo hiriyanaada yephetana sahodaranoo aagiruva shemanige saha makkalu huttidaru.
Genesis 10:21 in English
- King James Version (KJV)
- Unto Shem also, the father of all the children of Eber, the brother of Japheth the elder, even to him were [children] born.
- World English Bible (WEB)
- Children were also born to Shem (the elder brother of Japheth), the father of all the children of Eber.
- American Standard Version (ASV)
- And unto Shem, the father of all the children of Eber, the elder brother of Japheth, to him also were children born.
- Bible in Basic English (BBE)
- And Shem, the older brother of Japheth, the father of the children of Eber, had other sons in addition.
- Darby Translation (DBY)
- And to Shem — to him also were [sons] born; he is the father of all the sons of Eber, the brother of Japheth the elder.
- Webster's Bible (WBS)
- To Shem also, the father of all the children of Eber, the brother of Japheth the elder, even to him were [children] born.
- Young's Literal Translation (YLT)
- As to Shem, father of all sons of Eber, brother of Japheth the elder, he hath also begotten:
Read in context
- 19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- 20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- 21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- 22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- 23ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
Cross references
- Numbers 24:24 ಅರಣ್ಯಕಾಂಡ 24:24ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.
- Genesis 11:10–26 ಆದಿಕಾಂಡ 11:10–26ಶೇಮನ ವಂಶಾವಳಿಗಳು ಇವೇ; ಶೇಮನು ನೂರು ವರುಷದವನಾಗಿದ್ದಾಗ ಅಂದರೆ ಪ್ರಳಯವಾಗಿ ಎರಡು ವರುಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು. ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ ಶೇಮನು ಐನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಅರ್ಪಕ್ಷದನು ಮೂವತ್ತೈದು ವರುಷದವನಾ ಗಿದ್ದಾಗ ಅವನಿಂದ ಶೆಲಹನು ಹುಟ್ಟಿದನು. ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಶೆಲಹನು ಮೂವತ್ತು ವರುಷದವನಾಗಿದ್ದಾಗ ಅವನಿಂದ ಎಬರನು ಹುಟ್ಟಿದನು. ಶೆಲಹನಿಂದ ಎಬರನು ಹುಟ್ಟಿದ ಮೇಲೆ ಶೆಲಹನು ನಾನೂರ ಮೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎಬರನು ಮೂವತ್ತುನಾಲ್ಕು ವರುಷದವ ನಾಗಿದ್ದಾಗ ಅವನಿಂದ ಪೆಲೆಗನು ಹುಟ್ಟಿದನು. ಎಬರನಿಂದ ಪೆಲೆಗನು ಹುಟ್ಟಿದ ಮೇಲೆ ಎಬರನು ನಾನೂರ ಮೂವತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಪೆಲೆಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ರೆಗೂವನು ಹುಟ್ಟಿದನು. ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ ಪೆಲೆಗನು ಇನ್ನೂರ ಒಂಭತ್ತು ವರುಷ ಬದುಕಿದನು. ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.