Genesis · chapter 10 · verse 22
Genesis 10:22 in Kannada
ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
Shemana makkalu yaarandare, elaam ashshoor arpakshad lood araam.
Genesis 10:22 in English
- King James Version (KJV)
- The children of Shem; Elam, and Asshur, and Arphaxad, and Lud, and Aram.
- World English Bible (WEB)
- The sons of Shem were: Elam, Asshur, Arpachshad, Lud, and Aram.
- American Standard Version (ASV)
- The sons of Shem: Elam, and Asshur, and Arpachshad, and Lud, and Aram.
- Bible in Basic English (BBE)
- These are the sons of Shem: Elam and Asshur and Arpachshad and Lud and Aram.
- Darby Translation (DBY)
- The sons of Shem: Elam, and Asshur, and Arphaxad, and Lud, and Aram.
- Webster's Bible (WBS)
- The children of Shem; Elam, and Ashur, and Arphaxad, and Lud, and Aram.
- Young's Literal Translation (YLT)
- Sons of Shem [are] Elam, and Asshur, and Arphaxad, and Lud, and Aram.
Read in context
- 20ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ ತಮ್ಮ ದೇಶಗಳಲ್ಲಿಯೂ ಜನಾಂಗ ಗಳಲ್ಲಿಯೂ ಇರುವ ಹಾಮನ ಕುಮಾರರು.
- 21ಯೆಬೆರನ ಮಕ್ಕಳೆಲ್ಲರ ತಂದೆಯೂ ಹಿರಿಯನಾದ ಯೆಫೆತನ ಸಹೋದರನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
- 22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- 23ಅರಾಮನ ಮಕ್ಕಳು ಯಾರಂದರೆ, ಊಸ್ ಹೂಲ್ ಗೆತೆರ್ ಮಷ್ ಇವರೇ.
- 24ಅರ್ಪಕ್ಷದನಿಂದ ಶೆಲಹನು ಹುಟ್ಟಿದನು. ಶೆಲಹ ನಿಂದ ಎಬರನು ಹುಟ್ಟಿದನು.
Cross references
- Isaiah 66:19 ಯೆಶಾಯ 66:19ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- 1 Chronicles 1:17–27 1 ಪೂರ್ವಕಾಲವೃತ್ತಾಂತ 1:17–27ಶೇಮನ ಮಕ್ಕಳು--ಏಲಾಮನು ಅಶ್ಯೂರನು, ಅರ್ಪಕ್ಷದನು, ಲೂದನು, ಅರಾಮನು, ಊಚನು, ಹೂಲನು, ಗೆತೆರನು, ಮೆಷಕನು. ಅರ್ಪಕ್ಷದನು ಶೆಲಹನನ್ನು ಪಡೆದನು; ಶೆಲಹನು ಏಬೆರನನ್ನು ಪಡೆ ದನು. ಏಬೆರನಿಗೆ ಇಬ್ಬರು ಕುಮಾರರು ಹುಟ್ಟಿದರು. ಒಬ್ಬನಿಗೆ ಪೆಲೆಗನೆಂದು ಹೆಸರಿಡಲ್ಪಟ್ಟಿತು; ಯಾಕಂದರೆ ಅವನ ದಿವಸಗಳಲ್ಲಿ ಭೂಮಿಯು ವಿಭಾಗಿಸಲ್ಪಟ್ಟಿತು, ಅವನ ತಮ್ಮನ ಹೆಸರು ಯೊಕ್ತಾನನು. ಯೊಕ್ತಾನನು ಅಲ್ಮೋದಾದನನ್ನೂ, ಶೇಲೆಫನನ್ನೂ, ಹಚರ್ಮಾ ವೇತನನ್ನೂ, ಯೆರಹನನ್ನೂ, ಹದೋರಾಮನನ್ನೂ, ಊಜಾಲನನ್ನೂ, ದಿಕ್ಲನನ್ನೂ, ಏಬಾಲನನ್ನೂ, ಅಬೀ ಮಾಯೇಲನನ್ನೂ, ಶೆಬಾನನ್ನೂ, ಓಫೀರನನ್ನೂ ಹವೀಲಾನನ್ನೂ, ಯೋಬಾಬನನ್ನೂ ಪಡೆದನು. ಇವ ರೆಲ್ಲರು ಯೊಕ್ತಾನನ ಮಕ್ಕಳು. ಶೇಮನು ಅರ್ಪಕ್ಷದನು, ಶೆಲಹನು, ಏಬೆ ರನು, ಪೆಲೆಗನು, ರೆಯೂ, ಸೆರೂಗನು, ನಾಹೋ ರನು, ತೆರಹನು; ಅಬ್ರಹಾಮನೆಂಬ ಅಬ್ರಾಮನು.
- Genesis 14:1–9 ಆದಿಕಾಂಡ 14:1–9ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಸಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಜನಾಂಗಗಳ ಅರಸನಾದ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನಂದರೆ, ಇವರು ಸೊದೋಮಿನ ಅರಸನಾದ ಬೆರಗನೂ ಗೊಮೋರದ ಅರಸನಾದ ಬಿರ್ಶಗನೂ ಅದ್ಮಾಹದ ಅರಸನಾದ ಶಿನಾಬನಿಗೂ ಚೆಬೋಯಾಮಿನ ಅರಸನಾದ ಶಮೇಬರನಿಗೂ ಬೇಲ ಎಂಬ ಚೋಗರದ ಅರಸನಿಗೂ ವಿರೋಧವಾಗಿ ಯುದ್ದಮಾಡಿದರು. ಇವರೆಲ್ಲರು ಉಪ್ಪಿನ ಸಮುದ್ರ ವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿ ಬಂದರು. ಅವರು ಹನ್ನೆರಡು ವರುಷ ಕೆದೊರ್ಲ ಗೋಮರನಿಗೆ ಸೇವೆಮಾಡಿ ಹದಿಮೂರನೆಯ ವರುಷ ದಲ್ಲಿ ತಿರಿಗಿ ಬಿದ್ದರು. ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು. ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು. ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Genesis 9:26 ಆದಿಕಾಂಡ 9:26ಶೇಮನ ದೇವ ರಾದ ಕರ್ತನು ಸ್ತುತಿಸಲ್ಪಡಲಿ; ಕಾನಾನನು ಅವನಿಗೆ ದಾಸನಾಗಿರಲಿ.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
- Isaiah 22:6 ಯೆಶಾಯ 22:6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- Numbers 23:7 ಅರಣ್ಯಕಾಂಡ 23:7ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ.
- Acts 2:9 ಅಪೊಸ್ತಲರ ಕೃತ್ಯಗಳು 2:9ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
- Jeremiah 49:34–39 ಯೆರೆಮೀಯ 49:34–39ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ-- ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ. ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ. ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು. ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ. ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- 2 Kings 15:19 2 ಅರಸುಗಳು 15:19ಆದರೆ ಅಶ್ಶೂರದ ಅರಸನಾದ ಪೂಲನು ದೇಶದ ಮೇಲೆ ಬಂದನು. ಆಗ ಮೆನಹೇಮನು ರಾಜ್ಯವನ್ನು ತನ್ನ ಕೈಯಲ್ಲಿ ಧೃಢಪಡಿಸಲು ಅವನ ಕೈ ತನ್ನ ಸಂಗಡ ಇರುವ ಹಾಗೆ ಪೂಲನಿಗೆ ಸಾವಿರ ಬೆಳ್ಳಿ ತಲಾಂತು ಗಳನ್ನು ಕೊಟ್ಟನು.