Genesis · chapter 12 · verse 1
Genesis 12:1 in Kannada
ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
Aaga kartanu abraamanige--neenu ninna deshadolagindaloo bandhu galindaloo ninna tandeya maneyindaloo hora bandu naanu ninage torisuva deshakke hogu.
Genesis 12:1 in English
- King James Version (KJV)
- Now the LORD had said unto Abram, Get thee out of thy country, and from thy kindred, and from thy father’s house, unto a land that I will shew thee:
- World English Bible (WEB)
- Now the LORD said to Abram, “Leave your country, and your relatives, and your father’s house, and go to the land that I will show you.
- American Standard Version (ASV)
- Now Jehovah said unto Abram, Get thee out of thy country, and from thy kindred, and from thy father’s house, unto the land that I will show thee:
- Bible in Basic English (BBE)
- Now the Lord said to Abram, Go out from your country and from your family and from your father's house, into the land to which I will be your guide:
- Darby Translation (DBY)
- And Jehovah had said to Abram, Go out of thy land, and from thy kindred, and from thy father's house, to the land that I will shew thee.
- Webster's Bible (WBS)
- Now the LORD had said to Abram, Depart from thy country, and from thy kindred, and from thy father's house, to a land that I will show thee:
- Young's Literal Translation (YLT)
- And Jehovah saith unto Abram, 'Go for thyself, from thy land, and from thy kindred, and from the house of thy father, unto the land which I shew thee.
Read in context
- 1ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
- 2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- 3ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
Cross references
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Acts 7:2–6 ಅಪೊಸ್ತಲರ ಕೃತ್ಯಗಳು 7:2–6ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು. ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು. ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- Nehemiah 9:7 ನೆಹೆಮೀಯ 9:7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Joshua 24:2–3 ಯೆಹೋಶುವ 24:2–3ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;
- Luke 14:26–33 ಲೂಕನು 14:26–33ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು. ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು. ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ? ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ? ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
- Genesis 11:31–32 ಆದಿಕಾಂಡ 11:31–32ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು. ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Genesis 15:7 ಆದಿಕಾಂಡ 15:7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- Ezekiel 33:24 ಯೆಹೆಜ್ಕೇಲನು 33:24ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Psalm 45:10–11 ಕೀರ್ತನೆಗಳು 45:10–11ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- Isaiah 41:9 ಯೆಶಾಯ 41:9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.