Genesis · chapter 12 · verse 10
Genesis 12:10 in Kannada
ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
Aaga aa deshadalli bara untaadaddarinda abraamanu aiguptadalli pravaasiyaagiruvadakke ilidu hodanu. Yaakandare baravu aa deshadalli ghoravaagittu.
Genesis 12:10 in English
- King James Version (KJV)
- And there was a famine in the land: and Abram went down into Egypt to sojourn there; for the famine [was] grievous in the land.
- World English Bible (WEB)
- There was a famine in the land. Abram went down into Egypt to live as a foreigner there, for the famine was severe in the land.
- American Standard Version (ASV)
- And there was a famine in the land: and Abram went down into Egypt to sojourn there; for the famine was sore in the land.
- Bible in Basic English (BBE)
- And because there was little food to be had in that land, he went down into Egypt.
- Darby Translation (DBY)
- And there was a famine in the land. And Abram went down to Egypt to sojourn there, for the famine was grievous in the land.
- Webster's Bible (WBS)
- And there was a famine in the land: and Abram went down into Egypt to dwell there; for the famine [was] grievous in the land.
- Young's Literal Translation (YLT)
- And there is a famine in the land, and Abram goeth down towards Egypt to sojourn there, for the famine [is] grievous in the land;
Read in context
- 8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- 9ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.
- 10ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.
- 11ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.
- 12ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.
Cross references
- Genesis 43:1 ಆದಿಕಾಂಡ 43:1ದೇಶದಲ್ಲಿ ಬರವು ಘೋರವಾಗಿತ್ತು.
- Genesis 26:1–3 ಆದಿಕಾಂಡ 26:1–3ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ ದೇಶದಲ್ಲಿ ಮತ್ತೊಂದು ಬರ ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು. ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು. ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- 2 Kings 6:25 2 ಅರಸುಗಳು 6:25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
- 2 Kings 8:1–2 2 ಅರಸುಗಳು 8:1–2ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು. ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರುಷ ವಾಸವಾಗಿದ್ದಳು.
- Genesis 42:5 ಆದಿಕಾಂಡ 42:5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
- Acts 7:11 ಅಪೊಸ್ತಲರ ಕೃತ್ಯಗಳು 7:11ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- 2 Kings 4:38 2 ಅರಸುಗಳು 4:38ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ ದೇಶ ದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಕ್ಕಳು ಅವನ ಮುಂದೆ ಕುಳಿತಿರುವಾಗ ಅವನು ತನ್ನ ಸೇವಕನಿಗೆನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು ಪ್ರವಾದಿಗಳ ಮಕ್ಕಳಿಗೋಸ್ಕರ ಆಹಾರವನ್ನು ಬೇಯಿಸು ಅಂದನು.
- Ruth 1:1 ರೂತಳು 1:1ನ್ಯಾಯಾಧಿಪತಿಗಳು ಆಳುತ್ತಿದ್ದ ಆ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
- 1 Kings 17:1–18 1 ಅರಸುಗಳು 17:1–18ಗಿಲ್ಯಾದಿನ ನಿವಾಸಿಗಳಲ್ಲಿ ತಿಷ್ಬೀಯನಾದ ಎಲೀಯನು ಅಹಾಬನಿಗೆ--ಯಾವಾತನ ಸಮ್ಮುಖದಲ್ಲಿ ನಿಲ್ಲುತ್ತೇನೋ ಆ ಇಸ್ರಾಯೇಲಿನ ದೇವ ರಾದ ಕರ್ತನ ಜೀವದಾಣೆ, ನನ್ನ ಮಾತಿನ ಪ್ರಕಾರ ವಲ್ಲದೆ ಈ ವರ್ಷಗಳಲ್ಲಿ ಮಂಜೂ ಮಳೆಯೂ ಬೀಳು ವದಿಲ್ಲ ಅಂದನು. ಕರ್ತನ ಮಾತು ಅವನಿಗೆ ಉಂಟಾಗಿ--ನೀನು ಈ ಸ್ಥಳವನ್ನು ಬಿಟ್ಟು ಪೂರ್ವ ದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿ ಯಲ್ಲಿ ಅಡಗಿಕೊಂಡಿರು. ನೀನು ಆ ಹಳ್ಳದ ನೀರನ್ನು ಕುಡಿಯುವಿ; ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ ಎಂದು ಹೇಳಿದನು. ಅವನು ಹೋಗಿ ಕರ್ತನ ಮಾತಿನ ಹಾಗೆಯೇ ಮಾಡಿದನು; ಅಂದರೆ ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸ ವಾಗಿದ್ದನು. ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು. ಸ್ವಲ್ಪ ಕಾಲವಾದ ಮೇಲೆ ಏನಾಯಿ ತಂದರೆ, ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು. ಕರ್ತನ ವಾಕ್ಯವು ಅವನಿಗೆ ಉಂಟಾಗಿ-- ನೀನೆದ್ದು ಚೀದೋನಿಗೆ ಸೇರಿದ ಚಾರೆಪ್ತಾಕ್ಕೆ ಹೋಗಿ ಅಲ್ಲಿ ವಾಸವಾಗಿರು; ಇಗೋ, ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ ಅಂದನು. ಹಾಗೆಯೆ ಅವನೆದ್ದು ಚಾರೆಪ್ತಾಕ್ಕೆ ಹೋಗಿ ಪಟ್ಟಣದ ಬಾಗಿಲ ಬಳಿಗೆ ಬಂದಾಗ ಇಗೋ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು--ನೀನು ದಯಮಾಡಿ ಕುಡಿ ಯುವದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತಕ್ಕೊಂಡುಬಾ ಅಂದನು. ಅವಳು ತಕ್ಕೊಂಡು ಬರಲು ಹೋಗು ತ್ತಿರುವಾಗ ಅವನು ಅವಳನ್ನು ಕರೆದು--ನೀನು ದಯ ಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತಕ್ಕೊಂಡು ಬಾ ಅಂದನು. ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು. ಆಗ ಎಲೀಯನು ಅವಳಿಗೆ--ಭಯಪಡಬೇಡ; ನೀನು ಹೋಗಿ ನಿನ್ನ ಮಾತಿನ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿ ಮಾಡಿ, ನನ್ನ ಬಳಿಗೆ ತಕ್ಕೊಂಡು ಬಾ; ತರು ವಾಯ ನಿನಗೂ ನಿನ್ನ ಮಗನಿಗೂ ಸಿದ್ದಮಾಡಿಕೋ. ಕರ್ತನು ಭೂಮಿಯ ಮೇಲೆ ಮಳೆಯನ್ನು ಕೊಡುವ ವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ; ತಂಬಿಗೆಯಲ್ಲಿರುವ ಎಣ್ಣೆಯು ಮುಗಿಯುವದಿಲ್ಲ ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳು ತ್ತಾನೆ ಅಂದನು. ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿ, ಅವಳೂ ಇವನೂ ಅವಳ ಮನೆಯವರೂ ಅನೇಕ ದಿವಸ ತಿಂದರು. ಕರ್ತನು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ ತಂಬಿಗೆ ಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು. ಇವುಗಳ ತರುವಾಯ ಏನಾಯಿತಂದರೆ, ಮನೆಯ ಯಜಮಾನಳಾದ ಆ ಸ್ತ್ರೀಯ ಮಗನು ರೋಗದಲ್ಲಿ ಬಿದ್ದು ಅವನಲ್ಲಿ ಶ್ವಾಸವು ನಿಂತುಹೋಗುವಂತೆ ಅವನ ರೋಗವು ಅಧಿಕವಾಗಿತ್ತು. ಆಗ ಅವಳು ಎಲೀಯ ನಿಗೆ--ಓ ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವ ದಕ್ಕೂ ನನ್ನ ಮಗನು ಸಾಯುವದಕ್ಕೂ ನನ್ನ ಬಳಿಗೆ ಬಂದಿಯೋ ಅಂದಳು.
- 2 Kings 7:1–8 2 ಅರಸುಗಳು 7:1–8ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು. ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು. ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು? ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು. ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ. ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು. ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ ಕುದುರೆಗಳನ್ನೂ ಕತ್ತೆಗಳನ್ನೂ ಬಿಟ್ಟು ಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋದರು. ಆ ಕುಷ್ಠರೋಗಿಗಳು ದಂಡಿನ ಅಂಚಿನ ವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿ ಬಂಗಾರವನ್ನೂ ವಸ್ತ್ರಗಳನ್ನೂ ತೆಗೆದುಕೊಂಡು ಹೋಗಿ ಬಚ್ಚಿಟ್ಟರು; ತಿರಿಗಿ ಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡು ಹೋಗಿ ಬಚ್ಚಿಟ್ಟರು.
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Psalm 105:13 ಕೀರ್ತನೆಗಳು 105:13ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು.