Genesis · chapter 13 · verse 16
Genesis 13:16 in Kannada
ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
Ninna santatiyannu bhoomiya dhoolinashtu maaduvenu. Bhoomiya dhoolannu obbanu lekkisabahudaadare ninna santaanavu saha lekkisalpaduvadu.
Genesis 13:16 in English
- King James Version (KJV)
- And I will make thy seed as the dust of the earth: so that if a man can number the dust of the earth, [then] shall thy seed also be numbered.
- World English Bible (WEB)
- I will make your offspring as the dust of the earth, so that if a man can count the dust of the earth, then your offspring may also be counted.
- American Standard Version (ASV)
- And I will make thy seed as the dust of the earth: so that if a man can number the dust of the earth, then may thy seed also be numbered.
- Bible in Basic English (BBE)
- And I will make your children like the dust of the earth, so that if the dust of the earth may be numbered, then will your children be numbered.
- Darby Translation (DBY)
- And I will make thy seed as the dust of the earth, so that if any one can number the dust of the earth, thy seed also will be numbered.
- Webster's Bible (WBS)
- And I will make thy seed as the dust of the earth: so that if a man can number the dust of the earth, [then] shall thy seed also be numbered.
- Young's Literal Translation (YLT)
- And I have set thy seed as dust of the earth, so that, if one is able to number the dust of the earth, even thy seed is numbered;
Read in context
- 14ಲೋಟನು ಅಬ್ರಾಮನಿಂದ ಅಗಲಿದ ಮೇಲೆ ಕರ್ತನು ಅವನಿಗೆ--ನಿನ್ನ ಕಣ್ಣುಗಳನ್ನು ಎತ್ತಿ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ನೋಡು.
- 15ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
- 16ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು.
- 17ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- 18ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
Cross references
- Numbers 23:10 ಅರಣ್ಯಕಾಂಡ 23:10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- Genesis 28:14 ಆದಿಕಾಂಡ 28:14ನಿನ್ನ ಸಂತತಿಯು ಭೂಮಿಯ ಧೂಳಿನಷ್ಟು ಆಗುವದು; ನೀನು ಪಶ್ಚಿಮ ಪೂರ್ವ ಉತ್ತರ ದಕ್ಷಿಣಗಳಿಗೆ ಹರಡಿಕೊಳ್ಳುತ್ತೀ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಕುಲದವರು ಆಶೀರ್ವದಿಸಲ್ಪ ಡುವರು.
- Genesis 32:12 ಆದಿಕಾಂಡ 32:12ನಾನು --ನಿನಗೆ ಖಂಡಿತ ವಾಗಿ ಒಳ್ಳೆಯದನ್ನು ಮಾಡುವೆನು, ನಿನ್ನ ಸಂತತಿಯನ್ನು ಎಣಿಸುವದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು ಎಂದು ಹೇಳಿದಿಯಲ್ಲಾ ಎಂದು ಬೇಡಿಕೊಂಡನು.
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Romans 4:16–18 ರೋಮಾಪುರದವರಿಗೆ 4:16–18ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ (ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆ ಯಾಗಿ ನೇಮಿಸಿದ್ದೇನೆ ಎಂದು ಬರೆದಿರುವ ಪ್ರಕಾರ) ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲ ದ್ದನ್ನು ಇರುವದಾಗಿ ಕರೆಯುವವನಾಗಿಯೂ ಆಗಿದ್ದಾ ನೆಂದು ದೇವರ ಮುಂದೆ ಅಬ್ರಹಾಮನು ನಂಬಿದನು. ಅವನು ತಾನು ಅನೇಕ ಜನಾಂಗಗಳಿಗೆ ತಂದೆಯಾಗಿ ರುವನೆಂಬ ನಿರೀಕ್ಷೆಗೆ ಆಸ್ಪದವಿಲ್ಲದಿರುವಾಗಲೂ--ನಿನ್ನ ಸಂತಾನವು ಹೀಗಾಗುವದು ಎಂದು ಹೇಳಲ್ಪಟ್ಟಂತೆ ನಿರೀಕ್ಷಿಸಿ ನಂಬಿದನು.
- 1 Kings 3:8 1 ಅರಸುಗಳು 3:8ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು.
- Genesis 15:5 ಆದಿಕಾಂಡ 15:5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- Genesis 28:3 ಆದಿಕಾಂಡ 28:3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
- Exodus 1:7 ವಿಮೋಚನಕಾಂಡ 1:7ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು.
- Genesis 46:3 ಆದಿಕಾಂಡ 46:3ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.