Genesis · chapter 13 · verse 8
Genesis 13:8 in Kannada
ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
Abraamanu lotanige--nanagoo ninagoo nanna danakaayuvavarigoo ninna danakaayuvavarigoo jagalavirabaaradu; naavu sahodararu.
Genesis 13:8 in English
- King James Version (KJV)
- And Abram said unto Lot, Let there be no strife, I pray thee, between me and thee, and between my herdmen and thy herdmen; for we [be] brethren.
- World English Bible (WEB)
- Abram said to Lot, “Please, let there be no strife between you and me, and between your herdsmen and my herdsmen; for we are relatives.
- American Standard Version (ASV)
- And Abram said unto Lot, Let there be no strife, I pray thee, between me and thee, and between my herdsmen and thy herdsmen; for we are brethren.
- Bible in Basic English (BBE)
- Then Abram said to Lot, Let there be no argument between me and you, and between my herdmen and your herdmen, for we are brothers.
- Darby Translation (DBY)
- And Abram said to Lot, I pray thee let there be no contention between me and thee, and between my herdsmen and thy herdsmen, for we are brethren.
- Webster's Bible (WBS)
- And Abram said to Lot, Let there be no strife, I pray thee, between me and thee, and between my herdmen and thy herdmen; for we [are] brethren.
- Young's Literal Translation (YLT)
- And Abram saith unto Lot, 'Let there not, I pray thee, be strife between me and thee, and between my shepherds and thy shepherds, for we [are] men — brethren.
Read in context
- 6ಆಗ ಅವರು ಒಂದಾಗಿ ವಾಸಿಸುವ ಹಾಗೆ ಸ್ಥಳವು ಸಾಲದೆ ಹೋಯಿತು. ಯಾಕಂದರೆ ಅವರು ಒಟ್ಟಿಗೆ ವಾಸಿಸದಷ್ಟು ಅವರ ಸಂಪತ್ತು ಬಹಳವಾಗಿತ್ತು.
- 7ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.
- 8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- 9ಭೂಮಿ ಯೆಲ್ಲಾ ನಿನ್ನ ಮುಂದೆ ಇರುತ್ತದಲ್ಲವೋ? ಹಾಗಾದರೆ ನನ್ನ ಬಳಿಯಿಂದ ಪ್ರತ್ಯೇಕವಾಗು; ನೀನು ಎಡಕ್ಕೆ ಹೋದರೆ ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ ನಾನು ಎಡಕ್ಕೆ ಹೋಗುವೆನು ಅಂದನು.
- 10ಲೋಟನು ತನ್ನ ಕಣ್ಣುಗಳನ್ನು ಎತ್ತಿ ಯೊರ್ದನಿನ ಮೈದಾನವನ್ನೆಲ್ಲಾ ನೋಡಿದನು. ಯಾಕಂದರೆ ಕರ್ತನು ಸೊದೋಮನ್ನೂ ಗೊಮೋರ ವನ್ನೂ ನಾಶಮಾಡುವದಕ್ಕಿಂತ ಮುಂಚೆ ಅದೆಲ್ಲಾ ಚೋಗರಿನ ವರೆಗೆ ನೀರಾವರಿಯಾಗಿದ್ದು ಕರ್ತನ ತೋಟದಂತೆಯೂ ಐಗುಪ್ತದೇಶದಂತೆಯೂ ಇತ್ತು.
Cross references
- 1 Corinthians 6:6–7 1 ಕೊರಿಂಥದವರಿಗೆ 6:6–7ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು?
- Acts 7:26 ಅಪೊಸ್ತಲರ ಕೃತ್ಯಗಳು 7:26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 2 Peter 1:7 2 ಪೇತ್ರನು 1:7ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- 1 John 2:9–11 1 ಯೋಹಾನನು 2:9–11ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ. ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆಟಂಕವಾದದ್ದು ಏನೂ ಇಲ್ಲ. ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿ ದ್ದಾನೆ ಮತ್ತು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.
- 1 John 3:14–19 1 ಯೋಹಾನನು 3:14–19ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ. ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ? ನನ್ನ ಚಿಕ್ಕ ಮಕ್ಕಳೇ, ನೀವು ಮಾತಿನಿಂದಾಗಲಿ ನಾಲಿಗೆಯಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದ ಲ್ಲಿಯೂ ಪ್ರೀತಿಸುವವರಾಗಿರಬೇಕು. ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ.
- 1 Peter 4:8 1 ಪೇತ್ರನು 4:8ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
- 1 John 4:20–21 1 ಯೋಹಾನನು 4:20–21ಒಬ್ಬನು--ನಾನು ದೇವರನ್ನು ಪ್ರೀತಿಸುತ್ತೇನೆ ಎಂದು ಹೇಳಿ ತನ್ನ ಸಹೋದರನನ್ನು ಹಗೆ ಮಾಡಿದರೆ ಅವನು ಸುಳ್ಳುಗಾರನಾಗಿದ್ದಾನೆ. ಯಾಕಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು ಕಾಣದಿರುವ ದೇವರನ್ನು ಅವನು ಹೇಗೆ ಪ್ರೀತಿಸಾನು?ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ. ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಈ ಆಜ್ಞೆ ಯನ್ನು ನಾವು ಆತನಿಂದ ಹೊಂದಿದ್ದೇವೆ.
- Genesis 11:27–31 ಆದಿಕಾಂಡ 11:27–31ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- 1 Peter 3:8 1 ಪೇತ್ರನು 3:8ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರ್ರಿ; ಒಬ್ಬರಿಗೊಬ್ಬರು ಕರುಣೆಯುಳ್ಳವರಾಗಿದ್ದು ಸಹೋದರ ರಂತೆ ಪ್ರೀತಿಸಿರಿ; ಕನಿಕರವೂ ದೀನ ಭಾವವೂ ಉಳ್ಳವರಾಗಿರ್ರಿ.