Genesis · chapter 14 · verse 18
Genesis 14:18 in Kannada
ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
Saalemina arasanaada melkeechedekanu rottiyannoo draakshaa rasavannoo tandanu. Ivanu mahonnatanaada devara yaajakanu.
Genesis 14:18 in English
- King James Version (KJV)
- And Melchizedek king of Salem brought forth bread and wine: and he [was] the priest of the most high God.
- World English Bible (WEB)
- Melchizedek king of Salem brought out bread and wine. He was priest of God Most High.
- American Standard Version (ASV)
- And Melchizedek king of Salem brought forth bread and wine: and he was priest of God Most High.
- Bible in Basic English (BBE)
- And Melchizedek, king of Salem, the priest of the Most High God, took bread and wine,
- Darby Translation (DBY)
- And Melchisedec king of Salem brought out bread and wine. And he was priest of the Most High God.
- Webster's Bible (WBS)
- And Melchisedek, king of Salem, brought forth bread and wine: and he [was] the priest of the most high God.
- Young's Literal Translation (YLT)
- And Melchizedek king of Salem hath brought out bread and wine, and he [is] priest of God Most High;
Read in context
- 16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.
- 17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- 18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- 19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- 20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
Cross references
- Psalm 110:4 ಕೀರ್ತನೆಗಳು 110:4ನೀನು ಎಂದೆಂದಿಗೂ ಮೆಲ್ಕೀಜೆದೇಕನ ತರದ ಯಾಜಕನಾಗಿದ್ದೀ ಎಂದು ಕರ್ತನು ಆಣೆಯಿಟ್ಟು ನುಡಿ ದಿದ್ದಾನೆ; ಪಶ್ಚಾತ್ತಾಪಪಡನು.
- Hebrews 5:6 ಇಬ್ರಿಯರಿಗೆ 5:6ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Hebrews 5:10 ಇಬ್ರಿಯರಿಗೆ 5:10ಆತನು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆಂದು ಕರೆಯಲ್ಪಟ್ಟನು.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- Psalm 57:2 ಕೀರ್ತನೆಗಳು 57:2ಮಹೋನ್ನತನಾದ ದೇವರಿಗೆ, ನನಗೋಸ್ಕರ ಕಾರ್ಯ ಗಳನ್ನು ಸಫಲಮಾಡುವ ದೇವರನ್ನೇ, ಕೂಗುತ್ತೇನೆ.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Hebrews 7:10–22 ಇಬ್ರಿಯರಿಗೆ 7:10–22ಹೇಗೆಂದರೆ ಮೆಲ್ಕಿಜೆದೇಕನು ಲೇವಿಯ ಮೂಲ ಪುರಷನನ್ನು ಎದುರುಗೊಂಡಾಗ ಇವನಲ್ಲಿ ಲೇವಿಯು ಅಡಕ ವಾಗಿದ್ದನು. ಲೇವಿಯ ಯಾಜಕತ್ವದಿಂದ ಸಂಪೂರ್ಣ ಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿ ಜೆದೇಕನ ತರಹದ ಬೇರೊಬ್ಬ ಯಾಜಕನು ಎದ್ದೇಳು ವದು ಅವಶ್ಯವೇನಿತ್ತು? (ಅದರಲ್ಲಿ ಜನರು ನ್ಯಾಯ ಪ್ರಮಾಣವನ್ನು ಹೊಂದಿದರು). ಯಾಜಕತ್ವವು ಬೇರೆಯಾದರೆ ನ್ಯಾಯಪ್ರಮಾಣವು ಕೂಡ ಬೇರೆ ಯಾಗುವದು ಅಗತ್ಯ. ಇವು ಯಾವಾತನ ವಿಷಯ ದಲ್ಲಿ ಹೇಳಲ್ಪಟ್ಟಿವೆಯೋ ಆತನು ಬೇರೊಂದು ಗೋತ್ರಕ್ಕೆ ಸಂಬಂಧಪಟ್ಟವನು; ಆ ಗೋತ್ರದವರಲ್ಲಿ ಒಬ್ಬನೂ ಯಜ್ಞವೇದಿಯ ಬಳಿಯಲ್ಲಿ ಸೇವೆಮಾಡಿದ್ದಿಲ್ಲ. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ. ಮೆಲ್ಕಿಜೆದೇಕನ ಹೋಲಿಕೆಗನುಸಾರ ಇನ್ನೊಬ್ಬ ಯಾಜಕನು ಏಳುತ್ತಾನೆಂಬದು ಇನ್ನು ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ. ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ. ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Matthew 26:26–29 ಮತ್ತಾಯನು 26:26–29ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು. ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
- Acts 7:48 ಅಪೊಸ್ತಲರ ಕೃತ್ಯಗಳು 7:48ಆದರೂ ಮಹೋನ್ನತನು ಕೈಯಿಂದ ಕಟ್ಟಿದ ಆಲಯಗಳಲ್ಲಿ ವಾಸಮಾಡುವಾತನಲ್ಲ. ಯಾಕಂದರೆ--
- Ruth 3:10 ರೂತಳು 3:10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- Psalm 7:17 ಕೀರ್ತನೆಗಳು 7:17ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.