Genesis · chapter 14 · verse 19
Genesis 14:19 in Kannada
ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
Ivanu abraamanannu aasheervadisi--abraamanu aakaashavannu bhoomi yannu hondiruva mahonnatanaada devarinda aasheervadisalpadali.
Genesis 14:19 in English
- King James Version (KJV)
- And he blessed him, and said, Blessed [be] Abram of the most high God, possessor of heaven and earth:
- World English Bible (WEB)
- He blessed him, and said, “Blessed be Abram of God Most High, possessor of heaven and earth.
- American Standard Version (ASV)
- And he blessed him, and said, Blessed be Abram of God Most High, possessor of heaven and earth:
- Bible in Basic English (BBE)
- And blessing him, said, May the blessing of the Most High God, maker of heaven and earth, be on Abram:
- Darby Translation (DBY)
- And he blessed him, and said, Blessed be Abram of the Most High God, possessor of heavens and earth.
- Webster's Bible (WBS)
- And he blessed him, and said, Blessed [be] Abram of the most high God, possessor of heaven and earth:
- Young's Literal Translation (YLT)
- and he blesseth him, and saith, 'Blessed [is] Abram to God Most High, possessing heaven and earth;
Read in context
- 17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.
- 18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.
- 19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.
- 20ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ನಾದ ದೇವರು ಸ್ತುತಿಹೊಂದಲಿ ಅಂದನು. ಅಬ್ರಾ ಮನು ಅವನಿಗೆ ಎಲ್ಲಾದರಲ್ಲಿ ದಶಮಭಾಗವನ್ನು ಕೊಟ್ಟನು.
- 21ಸೊದೋಮಿನ ಅರಸನು ಅಬ್ರಾಮನಿಗೆ--ಮನುಷ್ಯರನ್ನು ನನಗೆ ಕೊಡು, ಸಂಪತ್ತನ್ನು ನೀನೇ ತಕ್ಕೋ ಅಂದನು.
Cross references
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- Hebrews 7:6–7 ಇಬ್ರಿಯರಿಗೆ 7:6–7ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು. ಆಶೀರ್ವಾದ ಹೊಂದುವವ ನಿಗಿಂತ ಆಶಿರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ. 8ಇಲ್ಲಿ ಸಾಯತಕ್ಕ ಮನುಷ್ಯರು ದಶಮ ಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಅಲ್ಲಿ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವಾತನು ತಕ್ಕೊಳ್ಳುತ್ತಾನೆ.
- Ruth 3:10 ರೂತಳು 3:10ಅದಕ್ಕೆ ಅವನು ಹೇಳಿದ್ದೇನಂದರೆ ನನ್ನ ಮಗಳೇ, ಕರ್ತನಿಂದ ನಿನಗೆ ಆಶೀರ್ವಾದವಾಗಲಿ; ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದದಯೆಯು ಹೆಚ್ಚಾಗಿದೆ.
- Numbers 6:23–27 ಅರಣ್ಯಕಾಂಡ 6:23–27ನೀನು ಆರೋನನ ಸಂಗ ಡಲೂ ಅವನ ಕುಮಾರರ ಸಂಗಡಲೂ ಮಾತನಾಡಿ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- Matthew 11:25 ಮತ್ತಾಯನು 11:25ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Genesis 49:28 ಆದಿಕಾಂಡ 49:28ಇವರೆಲ್ಲಾ ಇಸ್ರಾಯೇಲನ ಹನ್ನೆರಡು ಗೋತ್ರ ಗಳು; ಅವರ ತಂದೆ ಅವರಿಗೆ ಹೇಳಿದ್ದು ಇದೇ. ಅವನು ಒಬ್ಬೊಬ್ಬನನ್ನು ಅವನವನ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Genesis 48:9–16 ಆದಿಕಾಂಡ 48:9–16ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು.
- Genesis 47:10 ಆದಿಕಾಂಡ 47:10ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.