Genesis · chapter 14 · verse 7
Genesis 14:7 in Kannada
ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
Avaru hintirugi kaadesh emba enmishpaatige bandu amaalekyara ellaa bailannu hachachontaamarinalli vaasavaagidda amoriyarannoo sanharisidaru.
Genesis 14:7 in English
- King James Version (KJV)
- And they returned, and came to En-mishpat, which [is] Kadesh, and smote all the country of the Amalekites, and also the Amorites, that dwelt in Hazezon-tamar.
- World English Bible (WEB)
- They returned, and came to En Mishpat (also called Kadesh), and struck all the country of the Amalekites, and also the Amorites, that lived in Hazazon Tamar.
- American Standard Version (ASV)
- And they returned, and came to En-mishpat (the same is Kadesh), and smote all the country of the Amalekites, and also the Amorites, that dwelt in Hazazon-tamar.
- Bible in Basic English (BBE)
- Then they came back to En-mishpat (which is Kadesh), making waste all the country of the Amalekites and of the Amorites living in Hazazon-tamar.
- Darby Translation (DBY)
- And they returned, and came to En-mishpat, which is Kadesh, and smote all the country of the Amalekites, and also the Amorites that dwelt at Hazazon-Tamar.
- Webster's Bible (WBS)
- And they returned, and came to En-mishpat, which [is] Kadesh, and smote all the country of the Amalekites, and also the Amorites, that dwelt in Hazezontamar.
- Young's Literal Translation (YLT)
- and they turn back and come in unto En-Mishpat, which [is] Kadesh, and smite the whole field of the Amalekite, and also the Amorite who is dwelling in Hazezon-Tamar.
Read in context
- 5ಹದಿನಾಲ್ಕನೆಯ ವರುಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ ಹಾಮಿನಲ್ಲಿ ಜೂಜ್ಯರನ್ನೂ ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ
- 6ಅವರ ಬೆಟ್ಟ ವಾದ ಸೇಯಾರಿನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸವಿಾಪವಾದ ಏಲ್ಪಾರಾನಿನ ವರೆಗೂ ಅವರನ್ನು ಸಂಹರಿಸಿದರು.
- 7ಅವರು ಹಿಂತಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು ಅಮಾಲೆಕ್ಯರ ಎಲ್ಲಾ ಬೈಲನ್ನು ಹಚಚೋನ್ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಸಂಹರಿಸಿದರು.
- 8ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಾಮಿನ ಅರಸನೂ ಚೋಗ ರೆಂಬ ಬೇಲದ ಅರಸನೂ ಹೊರಟು
- 9ಏಲಾಮಿನ ಅರಸನಾದ ಕೆದೊರ್ಲಗೋಮರನಿಗೂ ಜನಾಂಗಗಳ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸನಾದ ಅಮ್ರಾಫೆಲನಿಗೂ ಎಲ್ಲಸಾರಿನ ಅರಸನಾದ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಐದು ಮಂದಿ ಅರಸರು ನಾಲ್ವರು ಅರಸರಿಗೆ ವಿರೋಧವಾಗಿದ್ದರು.
Cross references
- 2 Chronicles 20:2 2 ಪೂರ್ವಕಾಲವೃತ್ತಾಂತ 20:2ಆಗ ಕೆಲವರು ಬಂದು ಯೆಹೋಷಾಫಾಟನಿಗೆ--ಸಮು ದ್ರದ ಆಚೆಯಿಂದ ನಿನಗೆ ವಿರೋಧವಾಗಿ ಅರಾಮಿನ ಬಹುಗುಂಪು ಈ ಕಡೆ ಬರುತ್ತದೆ; ಇಗೋ, ಅವರು ಏಂಗೆದಿ ಎಂಬ ಹಚೆಚೋನ್ ತಾಮಾರಿನಲ್ಲಿ ಇದ್ದಾ ರೆಂದು ತಿಳಿಸಿದರು.
- Genesis 16:14 ಆದಿಕಾಂಡ 16:14ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
- Genesis 20:1 ಆದಿಕಾಂಡ 20:1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.
- Numbers 24:20 ಅರಣ್ಯಕಾಂಡ 24:20ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು.
- 1 Samuel 15:1–35 1 ಸಮುವೇಲನು 15:1–35ಸಮುವೇಲನು ಸೌಲನಿಗೆ--ಕರ್ತನು ತನ್ನ ಜನರಾದ ಇಸ್ರಾಯೇಲ್ಯರ ಮೇಲೆ ನಿನ್ನನ್ನು ಅರಸನನ್ನಾಗಿ ಅಭಿಷೇಕಿಸಲು ನನ್ನನ್ನು ಕಳುಹಿಸಿದನು. ಈಗ ನೀನು ಕರ್ತನ ಮಾತುಗಳನ್ನು ಕೇಳು. ಸೈನ್ಯ ಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲ್ಯರು ಐಗುಪ್ತದಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿದ್ದು ನಾನು ನೆನಸಿಕೊಂಡಿ ದ್ದೇನೆ. ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು. ಆಗ ಸೌಲನು ತೆಲಾಯಾಮಿನಲ್ಲಿ ಜನರನ್ನು ಕೂಡಿಸಿ ಲೆಕ್ಕ ಮಾಡಿದನು. ಇಸ್ರಾಯೇಲ್ಯರ ಕಾಲ್ಬಲವು ಎರಡು ಲಕ್ಷ ಜನವೂ ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು. ಸೌಲನು ಅಮಾಲೇಕ್ಯರ ಪಟ್ಟಣ ದವರೆಗೂ ಬಂದು ತಗ್ಗಿನಲ್ಲಿ ಹೊಂಚಿಹಾಕಿದ್ದನು. ಕೇನ್ಯರಿಗೆ ಅವನು ಹೇಳಿದ್ದೇನಂದರೆ--ಇಸ್ರಾಯೇ ಲ್ಯರು ಐಗುಪ್ತದಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ ನೀವು ಅವರ ಮಧ್ಯ ದಲ್ಲಿಂದ ಹೊರಟು ಹೋಗಿರಿ ಅಂದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು. ಆಗ ಸೌಲನು ಹವೀಲಾದಿಂದ ಐಗುಪ್ತಕ್ಕೆ ಎದುರಾಗಿರುವ ಶೂರಿಗೆ ಹೋಗುವ ಮೇರೆಯ ವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು. ಆದರೆ ಸಮಸ್ತ ಜನರನ್ನು ಕತ್ತಿಯಿಂದ ಸಂಪೂರ್ಣ ನಾಶಮಾಡಿದನು. ಸೌಲನು ಮತ್ತು ಜನರು ಅಗಾಗನನ್ನೂ ಪಶುಕುರಿಗಳಲ್ಲಿ ಮೇಲ್ತರವಾದ ವುಗಳನ್ನೂ ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದನು. ಆದರೆ ತಿರಸ್ಕರಿಸಲ್ಪಡತಕ್ಕ ಕನಿಷ್ಠವಾದವು ಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು. ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಹಿಂಬಾಲಿಸುವದನ್ನು ಬಿಟ್ಟು ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ ಅಂದನು. ಅದಕ್ಕೆ ಸಮುವೇಲನು ದುಃಖಪಟ್ಟವನಾಗಿ ರಾತ್ರಿಯೆಲ್ಲಾ ಕರ್ತನಿಗೆ ಮೊರೆಯಿಟ್ಟನು. ಆದರೆ ಸಮುವೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಸೌಲನು ಕರ್ಮೆಲಿಗೆ ಬಂದು, ಇಗೋ, ತನಗಾಗಿ ಒಂದು ಸ್ಥಳವನ್ನು ಪ್ರತ್ಯೇಕಿಸಿದನೆಂದೂ ಅಲ್ಲಿಂದ ಸುತ್ತಿಕೊಂಡು ದಾಟಿ ಗಿಲ್ಗಾಲಿಗೆ ಹೋದನೆಂದೂ ಸಮುವೇಲನಿಗೆ ತಿಳಿಸಲ್ಪಟ್ಟಿತು. ಸಮುವೇಲನು ಸೌಲನ ಬಳಿಗೆ ಬಂದಾಗ ಸೌಲನು ಅವನಿಗೆ--ನಿನಗೆ ಕರ್ತನ ಆಶೀರ್ವಾದವಾಗಲಿ; ನಾನು ಕರ್ತನ ಆಜ್ಞೆಯನ್ನು ಈಡೇರಿಸಿದೆನು ಅಂದನು. ಆಗ ಸಮುವೇಲನು ಅವನಿಗೆ--ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು ಅಂದನು. ಅದಕ್ಕೆ ಸೌಲನು--ಜನರು ಅಮಾಲೇಕ್ಯರ ಬಳಿಯಿಂದ ತಕ್ಕೊಂಡು ಬಂದವುಗಳು; ನಿನ್ನ ದೇವ ರಾದ ಕರ್ತನಿಗೆ ಬಲಿಯನ್ನು ಅರ್ಪಿಸುವದಕ್ಕೋಸ್ಕರ ಮೇಲ್ತರವಾದ ಪಶು ಕುರಿಗಳನ್ನು ಉಳಿಸಿಟ್ಟು ಮಿಕ್ಕಾದ ವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು ಅಂದನು. ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು. ಸಮುವೇಲನು--ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ಮಾಡಲ್ಪಟ್ಟಿಯಲ್ಲವೋ? ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿ ಅಭಿಷೇಕಿಸಿ ದನಲ್ಲವೋ? ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ ಅವರು ತೀರಿಹೋಗುವ ವರೆಗೂ ಅವರ ಸಂಗಡ ಯುದ್ಧಮಾಡಬೇಕೆಂದು ಕರ್ತನು ನಿನ್ನನ್ನು ಕಳುಹಿಸಿದನು. ಹೀಗಿರುವಾಗ ನೀನು ಯಾಕೆ ಕರ್ತನ ಮಾತಿಗೆ ವಿಧೇಯನಾಗದೆ ಕೊಳ್ಳೆಯ ಮೇಲೆ ಬಿದ್ದು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ ಅಂದನು. ಆಗ ಸೌಲನು ಸಮುವೇಲನಿಗೆ--ಹೌದು, ನಾನು ಕರ್ತನ ಮಾತಿಗೆ ವಿಧೇಯನಾಗಿ, ಕರ್ತನು ನನ್ನನ್ನು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು. ಆದರೆ ಜನರು ನಿನ್ನ ದೇವರಾದ ಕರ್ತನಿಗೆ ಗಿಲ್ಗಾಲಿ ನಲ್ಲಿ ಬಲಿ ಕೊಡುವದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣ ವಾಗಿ ನಾಶಮಾಡಬೇಕೆಂದಿರುವ ಕುರಿ ಪಶುಗಳಲ್ಲಿ ಮೇಲ್ತರವಾದವುಗಳನ್ನು ಹಿಡುಕೊಂಡು ಬಂದರು ಅಂದನು. ಅದಕ್ಕೆ ಸಮುವೇಲನು--ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ? ಇಗೋ, ಬಲಿಗಿಂತ ವಿಧೇಯವಾಗುವದು ಟಗರುಗಳ ಕೊಬ್ಬಿಗಿಂತ ಆಲೈಸುವದು ಉತ್ತಮವಾಗಿರುವದು. ಎದುರು ಬೀಳುವದು ಕಣಿ ಹೇಳುವಂತೆ ಪಾಪ ವಾಗಿದೆ, ಹಟವು ದುಷ್ಟತನ ಮತ್ತು ವಿಗ್ರಹಾರಾಧನೆಗಳ ಹಾಗೆ ಇದೆ. ನೀನು ಕರ್ತನ ವಾಕ್ಯವನ್ನು ತಿರಸ್ಕಾರ ಮಾಡಿದ್ದರಿಂದ ಆತನು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕಾರ ಮಾಡಿಬಿಟ್ಟನು ಅಂದನು. ಆಗ ಸೌಲನು ಸಮುವೇಲನಿಗೆ--ನಾನು ಕರ್ತನ ವಾಕ್ಯವನ್ನೂ ನಿನ್ನ ಮಾತುಗಳನ್ನೂ ವಿಾರಿ ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು. ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು. ಆದಕ್ಕೆ ಸಮುವೇಲನು ಸೌಲನಿಗೆ--ನಾನು ನಿನ್ನ ಸಂಗಡ ಹಿಂತಿರುಗಿ ಬರುವದಿಲ್ಲ; ಯಾಕಂದರೆ ನೀನು ಕರ್ತನ ವಾಕ್ಯವನ್ನು ತಿರಸ್ಕಾರಮಾಡಿದಿ; ಕರ್ತನು ನಿನ್ನನ್ನು ಇಸ್ರಾಯೇಲ್ಯರ ಮೇಲೆ ಅರಸನಾಗಿರದ ಹಾಗೆ ತಿರ ಸ್ಕಾರ ಮಾಡಿಬಿಟ್ಟನು. ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು. ಆಗ ಸಮುವೇಲನು ಅವನಿಗೆನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಕರ್ತನು ಈ ಹೊತ್ತು ಕಿತ್ತು ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟನು. ಇಸ್ರಾ ಯೇಲಿನ ನಿತ್ಯ ಬಲವಾದಾತನು ಸುಳ್ಳು ಹೇಳುವಾತ ನಲ್ಲ, ಪಶ್ಚಾತ್ತಾಪಪಡುವಾತನೂ ಅಲ್ಲ. ಯಾಕಂದರೆ ಆತನು ಪಶ್ಚಾತ್ತಾಪಪಡುವಂತೆ ಮನುಷ್ಯನಲ್ಲ ಅಂದನು. ಅದಕ್ಕವನು--ನಾನು ಪಾಪವನ್ನು ಮಾಡಿದೆನು; ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನನ್ನು ಗೌರವಿಸು ನಾನು ನಿನ್ನ ದೇವರಾದ ಕರ್ತನನ್ನು ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ ಅಂದನು. ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು. ಸಮುವೇಲನು--ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ ಅಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ--ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತೆಂದು ಅಂದು ಕೊಂಡನು. ಆದರೆ ಸಮುವೇಲನು ಅವನಿಗೆನಿನ್ನ ಕತ್ತಿಯು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗ ಮಾಡಿತೋ ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು ಎಂದು ಹೇಳಿ ಸಮುವೇಲನು ಗಿಲ್ಗಾಲಿನಲ್ಲಿ ಕರ್ತನ ಮುಂದೆ ಅಗಾಗನನ್ನು ತುಂಡು ತುಂಡಾಗಿ ಮಾಡಿಬಿಟ್ಟನು. ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು. ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Numbers 20:1 ಅರಣ್ಯಕಾಂಡ 20:1ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಜಿನ್ ಎಂಬ ಅರಣ್ಯಕ್ಕೆ ಮೊದಲನೇ ತಿಂಗಳಿನಲ್ಲಿ ಬಂದರು; ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಸತ್ತು ಅಲ್ಲೇ ಹೂಣಲ್ಪಟ್ಟಳು.
- Genesis 36:12 ಆದಿಕಾಂಡ 36:12ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
- Deuteronomy 1:19 ಧರ್ಮೋಪದೇಶಕಾಂಡ 1:19ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು.
- Numbers 14:45 ಅರಣ್ಯಕಾಂಡ 14:45ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ ಕಾನಾ ನ್ಯರೂ ಇಳಿದು ಅವರನ್ನು ಹೊಡೆದು ಹೊರ್ಮಾದ ವರೆಗೆ ಅಟ್ಟಿಬಿಟ್ಟರು.
- Deuteronomy 1:46 ಧರ್ಮೋಪದೇಶಕಾಂಡ 1:46ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
- 1 Samuel 30:1–31 1 ಸಮುವೇಲನು 30:1–31ದಾವೀದನೂ ಅವನ ಜನರೂ ಮೂರನೇದಿವಸದಲ್ಲಿ ಚಿಕ್ಲಗಿಗೆ ಬಂದು ಸೇರುವಷ್ಟರಲ್ಲಿ ಏನಾಯಿತಂದರೆ, ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ ಚಿಕ್ಲಗಿನ ಮೇಲೆಯೂ ಬಂದು ಬಿದ್ದು ಚಿಕ್ಲಗನ್ನು ಹೊಡೆದು ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರ ನ್ನಾದರೂ ಕಿರಿಯರನ್ನಾದರೂ ಕೊಂದುಹಾಕದೆ ಅವ ರನ್ನು ಸೆರೆಯಾಗಿ ತೆಗೆದುಕೊಂಡು ತಮ್ಮ ಮಾರ್ಗ ವಾಗಿ ಹೊರಟುಹೋದರು. ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು. ದಾವೀದನೂ ಅವನ ಸಂಗಡವಿದ್ದ ಜನರೂ ಅಳುವದಕ್ಕೆ ತಮ್ಮಲ್ಲಿ ಶಕ್ತಿ ಇಲ್ಲದೆ ಹೋಗುವವರೆಗೂ ಗಟ್ಟಿಯಾಗಿ ಅತ್ತರು. ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೇಲಿನವಳಾದ ಅಹೀನೋವಮಳೂ ಕರ್ಮೆಲಿನವಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಒಯ್ಯ ಲ್ಪಟ್ಟರು. ಆದರೆ ಜನರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕುಮಾರ ಕುಮಾರ್ತೆಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ ಅವನು ಬಹಳ ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ದಾವೀದನು ಕರ್ತನಾದ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. ಆಗ ದಾವೀದನು ಅಹೀಮೆಲೆಕನ ಮಗನಾದ ಎಬ್ಯಾತಾರನೆಂಬ ಯಾಜಕ ನಿಗೆ--ನೀನು ದಯಮಾಡಿ ಏಫೋದನ್ನು ನನಗಾಗಿ ತಕ್ಕೊಂಡು ಬಾ ಅಂದನು. ಹಾಗೆಯೇ ಎಬ್ಯಾತಾರನು ಎಫೋದನ್ನು ದಾವೀದನ ಬಳಿಗೆ ತಂದನು. ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು. ಆಗ ದಾವೀದನೂ ಅವನ ಸಂಗಡ ಇದ್ದ ಆರು ನೂರು ಜನರೂ ಹೋದರು; ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ ಹಿಂದುಳಿದವರು ಅಲ್ಲಿ ನಿಂತರು. ದಾವೀದನು, ತಾನೂ ನಾನೂರು ಜನರೂ ಹಿಂದಟ್ಟಿಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದದರಿಂದ ಇನ್ನೂರು ಜನರು ಅಲ್ಲಿ ನಿಂತರು. ಅವರು ಒಬ್ಬ ಐಗುಪ್ತ್ಯನನ್ನು ಅಡವಿಯಲ್ಲಿ ಕಂಡುಕೊಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿಕೊಟ್ಟರು; ಅವನು ತಿಂದನು. ಅವನಿಗೆ ನೀರನ್ನು ಕುಡಿಸಿ ಅಂಜೂರದ ಫಲದ ಅಡೆಯಲ್ಲಿ ಒಂದು ತುಂಡನ್ನೂ ಒಣಗಿದ ಎರಡು ದ್ರಾಕ್ಷೇ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದು ಪ್ರಾಣದಲ್ಲಿ ಚೇತರಿಸಿ ಕೊಂಡನು. ಯಾಕಂದರೆ ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ. ದಾವೀದನು ಅವನನ್ನು--ನೀನು ಯಾರವನು? ನೀನು ಎಲ್ಲಿಯವನು ಎಂದು ಕೇಳಿದಾಗ ಅವನು--ನಾನು ಒಬ್ಬ ಅಮಾಲೇಕ್ಯನ ಸೇವಕನಾದ ಐಗುಪ್ತದೇಶದ ಯೌವನಸ್ಥನು. ಈ ಮೂರು ದಿವಸ ನಾನು ರೋಗದಲ್ಲಿ ಬಿದ್ದದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು. ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು. ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು. ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು. ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ. ಅಮಾ ಲೇಕ್ಯರು ತಕ್ಕೊಂಡು ಹೋದದ್ದನ್ನೆಲ್ಲಾ ದಾವೀದನು ಬಿಡಿಸಿಕೊಂಡನು. ತನ್ನ ಇಬ್ಬರು ಹೆಂಡತಿಯರನ್ನು ದಾವೀದನು ಬಿಡಿಸಿಕೊಂಡನು. ಅವರು ತಕ್ಕೊಂಡು ಹೋದ ಕಿರಿಯರ ಹಿರಿಯರಲ್ಲಾದರೂ ಕುಮಾರ ಕುಮಾರ್ತೆಯರಲ್ಲಾದರೂ ಕೊಳ್ಳೆಯಾದ ಯಾವ ವಸ್ತು ಗಳಲ್ಲಾದರೂ ಒಂದೂ ಕೊರತೆ ಇಲ್ಲದ ಹಾಗೆ ದಾವೀ ದನು ಎಲ್ಲವನ್ನೂ ತಿರಿಗಿ ತಕ್ಕೊಂಡನು. ಇದಲ್ಲದೆ ದಾವೀದನು ಅವರ ಎಲ್ಲಾ ಕುರಿ ಪಶುಗಳ ಮಂದೆಗ ಳನ್ನು ಹಿಡಿದನು; ಅವುಗಳನ್ನು ಇವರು ತಮ್ಮ ಪಶು ಗಳಿಗೆ ಮುಂದಾಗಿ ಹೊಡಕೊಂಡು ಹೋಗುತ್ತಾಇವು ದಾವೀದನ ಕೊಳ್ಳೆ ಎಂದು ಅಂದುಕೊಂಡರು. ದಾವೀದನ ಹಿಂದೆ ಬರಲಾರದೆ ದಣಿದಿದ್ದರಿಂದ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ ಅವರು ದಾವೀದನನ್ನೂ ಅವನ ಸಂಗಡ ಇದ್ದ ಜನ ರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ ಅವರ ಕ್ಷೇಮಸಮಾಚಾರವನ್ನು ಕೇಳಿದನು. ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು. ಅದಕ್ಕೆ ದಾವೀದನು--ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿ ಕೊಟ್ಟ ಕರ್ತನು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು? ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಾಮಗ್ರಿಯ ಬಳಿಯಲ್ಲಿ ಕಾದಿರುವವನ ಪಾಲೂ ಇರಲಿ; ಅವರು ಸಮವಾಗಿ ಪಾಲು ಮಾಡಿಕೊಳ್ಳಬೇಕು. ಹಾಗೆಯೇ ಅವನು ಆ ದಿವಸ ಮೊದಲ್ಗೊಂಡು ಇಂದಿನ ವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ ಕಟ್ಟಳೆಯಾಗಿಯೂ ಮಾಡಿದನು. ಆದರೆ ದಾವೀದನು ಚಿಕ್ಲಗಿಗೆ ಬಂದಾಗ ಅವನು ಕೊಳ್ಳೆಮಾಡಿದವುಗಳಲ್ಲಿ ತನ್ನ ಸ್ನೇಹಿತರಾದ ಯೆಹೂ ದದ ಹಿರಿಯರಿಗೆ ಕೆಲವನ್ನು ಕಳುಹಿಸಿ--ಇಗೋ, ಕರ್ತನ ಶತ್ರುಗಳ ಕೊಳ್ಳೆಯಲ್ಲಿ ಇವು ನಿಮಗೆ ಬಹು ಮಾನವೆಂದು ಹೇಳಿದನು. ಯಾರಂದರೆ--ಬೇತೇಲಿ ನಲ್ಲಿರುವವರಿಗೂ ದಕ್ಷಿಣ ರಾಮೋತಿನಲ್ಲಿರುವವರಿಗೂ ಯತ್ತೀರಿನಲ್ಲಿರುವವರಿಗೂ ಅರೋಯೇರಿನಲ್ಲಿರುವ ವರಿಗೂ ಸಿಪ್ಮೋತಿನಲ್ಲಿರುವವರಿಗೂ ಎಷ್ಟೆಮೋವದ ಲ್ಲಿರುವವರಿಗೂ ರಾಕಾಲಿನಲ್ಲಿರುವವರಿಗೂ ಎರಹ್ಮೇ ಲಿಯರ ಪಟ್ಟಣಗಳಲ್ಲಿರುವವರಿಗೂ ಕೇನ್ಯರ ಪಟ್ಟಣ ಗಳಲ್ಲಿರುವವರಿಗೂ ಹೊರ್ಮದಲ್ಲಿರುವವರಿಗೂ ಬೋರಾಷಾನಿನಲ್ಲಿರುವವರಿಗೂ ಅತಾಕಿನಲ್ಲಿರುವವರಿಗೂಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು. ಹೆಬ್ರೋನಿನಲ್ಲಿರುವವರಿಗೂ ದಾವೀ ದನೂ ಅವನ ಜನರೂ ಸಂಚರಿಸುತ್ತಿದ್ದ ಎಲ್ಲಾ ಸ್ಥಳ ಗಳಲ್ಲಿರುವವರಿಗೂ ಕಳುಹಿಸಿದನು.
- Joshua 15:62 ಯೆಹೋಶುವ 15:62ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
Original words (Hebrew)
- returned · H7725שׁוּב shûwb
- came · H935בּוֹא bôwʼ
- to · H413אֵל ʼêl
- En-mishpat · H5880עֵין מִשְׁפָּט ʻÊyn Mishpâṭ
- Kadesh · H6946קָדֵשׁ Qâdêsh
- smote · H5221נָכָה nâkâh
- country · H7704שָׂדֶה sâdeh
- Amalekites · H6003עֲמָלֵקִי ʻĂmâlêqîy
- Amorites · H567אֱמֹרִי ʼĔmôrîy
- dwelt · H3427יָשַׁב yâshab
- Hazezon-tamar · H2688חַצְצוֹן תָּמָר Chatsᵉtsôwn Tâmâr