Genesis · chapter 15 · verse 6
Genesis 15:6 in Kannada
ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
Abraa manu kartanalli nambikeyittanu. Aatanu adannu avanige neeti endu enisidanu.
Genesis 15:6 in English
- King James Version (KJV)
- And he believed in the LORD; and he counted it to him for righteousness.
- World English Bible (WEB)
- He believed in the LORD, who credited it to him for righteousness.
- American Standard Version (ASV)
- And he believed in Jehovah; and he reckoned it to him for righteousness.
- Bible in Basic English (BBE)
- And he had faith in the Lord, and it was put to his account as righteousness.
- Darby Translation (DBY)
- And he believed Jehovah; and he reckoned it to him [as] righteousness.
- Webster's Bible (WBS)
- And he believed in the LORD; and he counted it to him for righteousness.
- Young's Literal Translation (YLT)
- And he hath believed in Jehovah, and He reckoneth it to him — righteousness.
Read in context
- 4ಇಗೋ, ಕರ್ತನ ವಾಕ್ಯವು ಅವನಿಗೆ ಉಂಟಾಗಿ--ಇವನು ನಿನಗೆ ಬಾಧ್ಯನಾಗುವ ದಿಲ್ಲ. ನಿನ್ನಿಂದ ಹುಟ್ಟಿದವನೇ ನಿನಗೆ ಬಾಧ್ಯನಾಗುವನು ಅಂದನು.
- 5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- 6ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
- 7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- 8ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
Cross references
- James 2:23 ಯಾಕೋಬನು 2:23ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
- Galatians 3:6–14 ಗಲಾತ್ಯದವರಿಗೆ 3:6–14ಅಬ್ರಹಾಮನು ಸಹದೇವ ರನ್ನು ನಂಬಿದನು, ಆ ನಂಬಿಕೆಯು ಅವನಿಗೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ನೀವು ತಿಳಿದುಕೊಳ್ಳಿರಿ. ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ. ಹೀಗಿರಲಾಗಿ ನಂಬುವವರು ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುತ್ತಾರೆ. ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ. ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
- Romans 4:9 ರೋಮಾಪುರದವರಿಗೆ 4:9ಈ ಧನ್ಯತೆಯು ಸುನ್ನತಿಯಿದ್ದವರಿಗೆ ಮಾತ್ರವೋ? ಇಲ್ಲವೆ ಸುನ್ನತಿಯಿಲ್ಲದವರಿಗೂ ಆಗುತ್ತದೋ? ಯಾಕಂದರೆ ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿಯೆಂದು ಎಣಿಸಲ್ಪಟ್ಟಿತೆಂಬದಾಗಿ ನಾವು ಹೇಳುತ್ತೇವಲ್ಲಾ.
- Romans 4:20–25 ರೋಮಾಪುರದವರಿಗೆ 4:20–25ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು. ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು. ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು. ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನನ್ನು ನಂಬುವ ನಾವು ನಂಬಿಕೆಯಿಂದ ನೀತಿವಂತರೆಂದು ಎಣಿಸಲ್ಪಡುವಂತೆ ನಮಗೋಸ್ಕರವೂ ಬರೆಯಲ್ಪಟ್ಟಿದೆ.ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು. ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Romans 4:3–6 ರೋಮಾಪುರದವರಿಗೆ 4:3–6ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು. ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ; ಅದು ಸಲ್ಲತಕ್ಕದ್ದೇ. ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು. ದೇವರು ಯಾವನನ್ನು ಕ್ರಿಯೆ ಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ.
- Psalm 106:31 ಕೀರ್ತನೆಗಳು 106:31ಇದು ತಲತಲಾಂತರಕ್ಕೂ ಯುಗ ಯುಗಕ್ಕೂ ಆತನಿಗೆ ನೀತಿಯೆಂದು ಎಣಿಸಲ್ಪಟ್ಟಿತು.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Romans 4:11 ರೋಮಾಪುರದವರಿಗೆ 4:11ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು.