Genesis · chapter 15 · verse 7
Genesis 15:7 in Kannada
ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
Aatanu avanige--ee deshavannu baadhyavaagi ninage koduvadakke kaldeeyara oorninda ninnannu horage tanda kartanu naane endu helidanu.
Genesis 15:7 in English
- King James Version (KJV)
- And he said unto him, I [am] the LORD that brought thee out of Ur of the Chaldees, to give thee this land to inherit it.
- World English Bible (WEB)
- He said to Abram, “I am the LORD who brought you out of Ur of the Chaldees, to give you this land to inherit it.”
- American Standard Version (ASV)
- And he said unto him, I am Jehovah that brought thee out of Ur of the Chaldees, to give thee this land to inherit it.
- Bible in Basic English (BBE)
- And he said to him, I am the Lord, who took you from Ur of the Chaldees, to give you this land for your heritage.
- Darby Translation (DBY)
- And he said to him, I am Jehovah who brought thee out of Ur of the Chaldeans, to give thee this land to possess it.
- Webster's Bible (WBS)
- And he said to him, I [am] the LORD that brought thee out of Ur of the Chaldees, to give thee this land to inherit it.
- Young's Literal Translation (YLT)
- And He saith unto him, 'I [am] Jehovah who brought thee out from Ur of the Chaldees, to give to thee this land to possess it;'
Read in context
- 5ಕರ್ತನು ಅವನನ್ನು ಹೊರಗೆ ಕರಕೊಂಡು ಬಂದು--ಈಗ ನೀನು ಆಕಾಶವನ್ನು ದೃಷ್ಟಿಸಿ ನಕ್ಷತ್ರ ಗಳನ್ನು ಲೆಕ್ಕಿಸಶಕ್ತನಾದರೆ ಅವುಗಳನ್ನು ಲೆಕ್ಕಿಸು ಅಂದನು. ಆತನು ಅವನಿಗೆ--ಅದರಂತೆಯೇ ನಿನ್ನ ಸಂತತಿಯು ಆಗುವದು ಎಂದು ಅವನಿಗೆ ಹೇಳಿದನು.
- 6ಅಬ್ರಾ ಮನು ಕರ್ತನಲ್ಲಿ ನಂಬಿಕೆಯಿಟ್ಟನು. ಆತನು ಅದನ್ನು ಅವನಿಗೆ ನೀತಿ ಎಂದು ಎಣಿಸಿದನು.
- 7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- 8ಅದಕ್ಕೆ ಅವನು--ದೇವರಾದ ಕರ್ತನೇ, ನಾನು ಅದನ್ನು ಬಾಧ್ಯವಾಗಿ ಹೊಂದುವೆನೆಂದು ಯಾವದ ರಿಂದ ತಿಳುಕೊಳ್ಳಲಿ ಅಂದನು.
- 9ಅದಕ್ಕೆ ಆತನು ಅಬ್ರಾಮನಿಗೆ--ಮೂರು ಮೂರು ವರುಷದ ಕಡಸು ಆಡು ಟಗರುಗಳನ್ನೂ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳದ ಮರಿಯನ್ನೂ ನನಗಾಗಿ ತೆಗೆದುಕೋ ಅಂದನು.
Cross references
- Genesis 12:1 ಆದಿಕಾಂಡ 12:1ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
- Acts 7:2–4 ಅಪೊಸ್ತಲರ ಕೃತ್ಯಗಳು 7:2–4ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ-- ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು. ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
- Psalm 105:44 ಕೀರ್ತನೆಗಳು 105:44ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು.ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ.
- Genesis 13:15–17 ಆದಿಕಾಂಡ 13:15–17ನೀನು ನೋಡುವ ದೇಶ ವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು. ನಿನ್ನ ಸಂತತಿಯನ್ನು ಭೂಮಿಯ ಧೂಳಿನಷ್ಟು ಮಾಡುವೆನು. ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ ನಿನ್ನ ಸಂತಾನವು ಸಹ ಲೆಕ್ಕಿಸಲ್ಪಡುವದು. ಎದ್ದು ಭೂಮಿಯ ಉದ್ದಗಲದ ಪ್ರಕಾರ ಅದರಲ್ಲಿ ತಿರುಗಾಡು. ನಾನು ನಿನಗೆ ಅದನ್ನು ಕೊಡುವೆನು ಅಂದನು.ಆಗ ಅಬ್ರಾಮನು ತನ್ನ ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನ ಲ್ಲಿರುವ ಮಮ್ರೆಯ ಮೈದಾನಕ್ಕೆ ಬಂದು ಅಲ್ಲಿ ವಾಸವಾಗಿದ್ದನು. ಅವನು ಅಲ್ಲಿ ಕರ್ತನಿಗೆ ಬಲಿ ಪೀಠವನ್ನು ಕಟ್ಟಿದನು.
- Psalm 105:42 ಕೀರ್ತನೆಗಳು 105:42ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು.
- Romans 4:13 ರೋಮಾಪುರದವರಿಗೆ 4:13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
- Nehemiah 9:7–8 ನೆಹೆಮೀಯ 9:7–8ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು ಅವನ ಹೃದಯವು ನಿನ್ನ ಮುಂದೆ ನಂಬಿಕೆಯುಳ್ಳದ್ದೆಂದು ಕಂಡುಕೊಂಡು ಕಾನಾನ್ಯರೂ ಹಿತ್ತಿಯರೂ ಅಮೋರಿ ಯರೂ ಪೆರಿಜ್ಜೀಯರೂ ಯೆಬೂಸಿಯರೂ ಗಿರ್ಗಾಷಿ ಯರೂ ಇವರ ದೇಶವನ್ನು ಅವನ ಸಂತಾನಕ್ಕೆ ಕೊಡುವ ಹಾಗೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿ; ನೀನು ಸತ್ಯವಂತನಾಗಿರುವದರಿಂದ ನಿನ್ನ ವಾಕ್ಯಗಳನ್ನು ಈಡೇರಿಸಿದಿ.
- Genesis 12:7 ಆದಿಕಾಂಡ 12:7ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.
- Psalm 105:11 ಕೀರ್ತನೆಗಳು 105:11ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.
- Genesis 11:28–31 ಆದಿಕಾಂಡ 11:28–31ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.