Genesis · chapter 16 · verse 2
Genesis 16:2 in Kannada
ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
Aaga saarayalu abraamanige--igo, makka lannu heradante kartanu nanage addimaadiddaane. Aadadarinda neenu nanna daasiya balige hogu; ondu vele avalinda naanu makkalannu padeya bahudu endu bedikondalu. Abraamanu saarayala maatannu kelidanu.
Genesis 16:2 in English
- King James Version (KJV)
- And Sarai said unto Abram, Behold now, the LORD hath restrained me from bearing: I pray thee, go in unto my maid; it may be that I may obtain children by her. And Abram hearkened to the voice of Sarai.
- World English Bible (WEB)
- Sarai said to Abram, “See now, the LORD has restrained me from bearing. Please go in to my servant. It may be that I will obtain children by her.” Abram listened to the voice of Sarai.
- American Standard Version (ASV)
- And Sarai said unto Abram, Behold now, Jehovah hath restrained me from bearing; go in, I pray thee, unto my handmaid; it may be that I shall obtain children by her. And Abram hearkened to the voice of Sarai.
- Bible in Basic English (BBE)
- And Sarai said to Abram, See, the Lord has not let me have children; go in to my servant, for I may get a family through her. And Abram did as Sarai said.
- Darby Translation (DBY)
- And Sarai said to Abram, Behold now, Jehovah has shut me up, that I do not bear. Go in, I pray thee, to my maidservant: it may be that I shall be built up by her. And Abram hearkened to the voice of Sarai.
- Webster's Bible (WBS)
- And Sarai said to Abram, Behold, now, the LORD hath restrained me from bearing: I pray thee go in to my maid; it may be that I may obtain children by her. And Abram hearkened to the voice of Sarai.
- Young's Literal Translation (YLT)
- and Sarai saith unto Abram, 'Lo, I pray thee, Jehovah hath restrained me from bearing, go in, I pray thee, unto my handmaid; perhaps I am built up from her;' and Abram hearkeneth to the voice of Sarai.
Read in context
- 1ಅಬ್ರಾಮನ ಹೆಂಡತಿಯಾದ ಸಾರಯಳು ಅವನಿಂದ ಮಕ್ಕಳನ್ನು ಪಡೆಯಲಿಲ್ಲ. ಆಕೆಗೆ ಹಾಗರಳೆಂಬ ಐಗುಪ್ತದೇಶದ ದಾಸಿಯು ಇದ್ದಳು.
- 2ಆಗ ಸಾರಯಳು ಅಬ್ರಾಮನಿಗೆ--ಇಗೋ, ಮಕ್ಕ ಳನ್ನು ಹೆರದಂತೆ ಕರ್ತನು ನನಗೆ ಅಡ್ಡಿಮಾಡಿದ್ದಾನೆ. ಆದದರಿಂದ ನೀನು ನನ್ನ ದಾಸಿಯ ಬಳಿಗೆ ಹೋಗು; ಒಂದು ವೇಳೆ ಅವಳಿಂದ ನಾನು ಮಕ್ಕಳನ್ನು ಪಡೆಯ ಬಹುದು ಎಂದು ಬೇಡಿಕೊಂಡಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.
- 3ಅಬ್ರಾಮನು ಕಾನಾನ್ದೇಶದಲ್ಲಿ ಹತ್ತು ವರುಷ ವಾಸಿಸಿದ ತರುವಾಯ ಅಬ್ರಾಮನ ಹೆಂಡತಿಯಾದ ಸಾರಯಳು ಐಗುಪ್ತದ ತನ್ನ ದಾಸಿಯಾದ ಹಾಗರಳನ್ನು ತನ್ನ ಗಂಡನಾದ ಅಬ್ರಾಮನಿಗೆ ಹೆಂಡತಿಯಾಗಿರುವದಕ್ಕೆ ಕೊಟ್ಟಳು.
- 4ಅವನು ಹಾಗರಳನ್ನು ಕೂಡಿದಾಗ ಗರ್ಭಿಣಿ ಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ ಅವಳ ಯಜಮಾನಿಯು ಅವಳ ದೃಷ್ಟಿಯಲ್ಲಿ ತಿರಸ್ಕರಿಸ ಲ್ಪಟ್ಟಳು.
Cross references
- Exodus 21:4 ವಿಮೋಚನಕಾಂಡ 21:4ಅವನ ಯಜಮಾನನು ಅವನಿಗೆ ಕೊಟ್ಟ ಹೆಂಡತಿಯು ಅವನಿಗೆ ಕುಮಾರರನ್ನೂ ಕುಮಾರ್ತೆಯರನ್ನೂ ಹೆತ್ತಿದ್ದರೆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನವ ರಾಗಿರಬೇಕು. ಅವನು ಒಬ್ಬನಾಗಿಯೇ ಹೋಗಬೇಕು.
- Genesis 3:17 ಆದಿಕಾಂಡ 3:17ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ.
- Genesis 18:10 ಆದಿಕಾಂಡ 18:10ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Genesis 20:18 ಆದಿಕಾಂಡ 20:18ಕರ್ತನು ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರೂ ಬಂಜೆಯರಾಗುವಂತೆ ಮಾಡಿದ್ದನು.
- Genesis 25:21 ಆದಿಕಾಂಡ 25:21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- Genesis 30:22 ಆದಿಕಾಂಡ 30:22ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿ ಕೊಂಡನು. ದೇವರು ಆಕೆಯನ್ನು ಆಲೈಸಿ ಆಕೆಯ ಗರ್ಭವನ್ನು ತೆರೆದನು.
- Genesis 17:16 ಆದಿಕಾಂಡ 17:16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- Psalm 127:3 ಕೀರ್ತನೆಗಳು 127:3ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Genesis 30:2–4 ಆದಿಕಾಂಡ 30:2–4ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿ ಕೊಂಡು--ನಿನಗೆ ಗರ್ಭ ಫಲವನ್ನು ಕೊಡದ ದೇವರ ಸ್ಥಾನದಲ್ಲಿ ನಾನಿದ್ದೇನೋ ಅಂದನು. ಅದಕ್ಕೆ ಆಕೆಯು--ಇಗೋ, ನನ್ನ ದಾಸಿಯಾದ ಬಿಲ್ಹಳು ಇದ್ದಾಳೆ. ಅವಳ ಬಳಿಗೆ ಹೋಗು; ಅವಳು ನನ್ನ ಮೊಣಕಾಲಿನ ಮೇಲೆ ಹೆರುವಳು, ಅವಳಿಂದ ನನಗೆ ಮಕ್ಕಳಾಗುವರು ಅಂದಳು. ಹೀಗೆ ಅವನಿಗೆ ತನ್ನ ದಾಸಿಯಾದ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳ ಬಳಿಗೆ ಹೋದನು.
- Genesis 30:9–10 ಆದಿಕಾಂಡ 30:9–10ಲೇಯಳು ತಾನು ಹೆರುವದು ನಿಂತಿತೆಂದು ತಿಳಿದು ತನ್ನ ದಾಸಿಯಾದ ಜಿಲ್ಪಳನ್ನು ತಕ್ಕೊಂಡು ಯಾಕೋಬ ನಿಗೆ ಹೆಂಡತಿಯಾಗಿ ಕೊಟ್ಟಳು. ಲೇಯಳ ದಾಸಿ ಯಾದ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.
- Genesis 3:12 ಆದಿಕಾಂಡ 3:12ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.
- Genesis 3:1–6 ಆದಿಕಾಂಡ 3:1–6ಕರ್ತನಾದ ದೇವರು ಮಾಡಿದ ಅಡವಿಯ ಎಲ್ಲಾ ಮೃಗಗಳಿಗಿಂತ ಸರ್ಪವು ಯುಕ್ತಿ ಯುಳ್ಳದ್ದಾಗಿತ್ತು. ಅದು ಸ್ತ್ರೀಗೆ--ನೀವು ತೋಟ ದಲ್ಲಿರುವ ಯಾವ ಮರದ ಫಲವನ್ನು ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ ಎಂದು ಕೇಳಿತು. ಆಗ ಸ್ತ್ರೀಯು ಸರ್ಪಕ್ಕೆ--ತೋಟದ ಮರಗಳ ಫಲಗಳನ್ನು ನಾವು ತಿನ್ನಬಹುದು. ಆದರೆ ತೋಟದ ಮಧ್ಯದಲ್ಲಿ ರುವ ಮರದ ಫಲದ ವಿಷಯದಲ್ಲಿ ದೇವರು--ನೀವು ಸಾಯದ ಹಾಗೆ ಅದನ್ನು ತಿನ್ನಲೂ ಬಾರದು, ಮುಟ್ಟಲೂ ಬಾರದು ಎಂದು ಹೇಳಿದ್ದಾನೆ ಅಂದಳು. ಸರ್ಪವು ಸ್ತ್ರೀಗೆ--ನೀವು ಖಂಡಿತವಾಗಿ ಸಾಯುವದಿಲ್ಲ; ನೀವು ಅದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯ ಲ್ಪಡುವವೆಂದೂ ನೀವು ಒಳ್ಳೇದರ ಕೆಟ್ಟದರ ಭೇದವನ್ನು ಅರಿತವರಾಗಿ ದೇವರುಗಳ ಹಾಗೆ ಇರುವಿರೆಂದೂ ದೇವರಿಗೆ ತಿಳಿದಿದೆ ಎಂದು ಹೇಳಿತು. ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
Original words (Hebrew)
- Sarai · H8297שָׂרַי Sâray
- said · H559אָמַר ʼâmar
- Abram · H87אַבְרָם ʼAbrâm
- me · H6113עָצָר ʻâtsâr
- bearing · H3205יָלַד yâlad
- in · H935בּוֹא bôwʼ
- maid · H8198שִׁפְחָה shiphchâh
- may · H194אוּלַי ʼûwlay
- children · H1129בָּנָה bânâh
- Abram · H87אַבְרָם ʼAbrâm
- hearkened · H8085שָׁמַע shâmaʻ
- voice · H6963קוֹל qôwl
- Sarai · H8297שָׂרַי Sâray