Genesis · chapter 17 · verse 16
Genesis 17:16 in Kannada
ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
Aakeyannu naanu aasheervadi suttene. Aakeyinda ninage obba maganannu saha koduttene. Haudu, janaangagala taayiyaa guvante aakeyannu aasheervadisuttene. Aakeyinda janara arasaru huttuvaru andanu.
Genesis 17:16 in English
- King James Version (KJV)
- And I will bless her, and give thee a son also of her: yea, I will bless her, and she shall be [a mother] of nations; kings of people shall be of her.
- World English Bible (WEB)
- I will bless her, and moreover I will give you a son by her. Yes, I will bless her, and she will be a mother of nations. Kings of peoples will come from her.”
- American Standard Version (ASV)
- And I will bless her, and moreover I will give thee a son of her: yea, I will bless her, and she shall be [a mother of] nations; kings of peoples shall be of her.
- Bible in Basic English (BBE)
- And I will give her a blessing so that you will have a son by her: truly my blessing will be on her, and she will be the mother of nations: kings of peoples will be her offspring.
- Darby Translation (DBY)
- And I will bless her, and I will give thee a son also of her; and I will bless her, and she shall become nations: kings of peoples shall be of her.
- Webster's Bible (WBS)
- And I will bless her, and give thee a son also by her: yea, I will bless her, and she shall be [a mother] of nations; kings of people shall proceed from her.
- Young's Literal Translation (YLT)
- and I have blessed her, and have also given to thee a son from her; and I have blessed her, and she hath become nations — kings of peoples are from her.'
Read in context
- 14ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
- 15ಇದಲ್ಲದೆ ದೇವರು ಅಬ್ರಹಾಮನಿಗೆ--ನಿನ್ನ ಹೆಂಡತಿಯಾದ ಸಾರಯಳ ವಿಷಯದಲ್ಲಾದರೋ ಆಕೆಯನ್ನು ಸಾರಯಳೆಂದು ಕರೆಯಬೇಡ; ಅವಳ ಹೆಸರು ಸಾರಾ.
- 16ಆಕೆಯನ್ನು ನಾನು ಆಶೀರ್ವದಿ ಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಹೌದು, ಜನಾಂಗಗಳ ತಾಯಿಯಾ ಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ಜನರ ಅರಸರು ಹುಟ್ಟುವರು ಅಂದನು.
- 17ಆಗ ಅಬ್ರಹಾಮನು ಅಡ್ಡಬಿದ್ದು ನಕ್ಕು-ನೂರು ವರುಷ ದವನಿಗೆ ಮಗುವು ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆರುವದುಂಟೇ ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.
- 18ಅಬ್ರಹಾ ಮನು ದೇವರಿಗೆ--ಇಷ್ಮಾಯೇಲನು ನಿನ್ನ ಎದುರಿನಲ್ಲಿ ಬದುಕಲಿ ಅಂದನು.
Cross references
- Genesis 35:11 ಆದಿಕಾಂಡ 35:11ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
- 1 Peter 3:6 1 ಪೇತ್ರನು 3:6ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ.
- Genesis 18:10–14 ಆದಿಕಾಂಡ 18:10–14ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು. ಇದಲ್ಲದೆ ಅಬ್ರಹಾಮನೂ ಸಾರಳೂ ದಿನ ಗತಿಸಿದವರಾಗಿ ಮುದುಕರಾಗಿದ್ದರು; ಸಾರಳಿಗೆ ಹೆಂಗಸರಿಗೆ ಆಗುವ ಕ್ರಮವು ನಿಂತುಹೋಗಿತ್ತು. ಆದದರಿಂದ ಸಾರಳು ತನ್ನೊಳಗೆ ನಕ್ಕು--ನಾನು ವೃದ್ಧಳಾಗಿದ್ದೇನೆ. ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರು ವಲ್ಲಿ ನನಗೆ ಸಂತೋಷವಾದೀತೇ? ಅಂದಳು. ಆಗ ಕರ್ತನು ಅಬ್ರಹಾಮನಿಗೆ--ನಾನು ಮುದಿಪ್ರಾಯದ ವಳಾಗಿ ಮಗುವನ್ನು ಹೆರುವದು ನಿಜವೋ ಎಂದು ಅಂದುಕೊಂಡು ಯಾಕೆ ಸಾರಳು ನಕ್ಕಳು? ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- Galatians 4:26–31 ಗಲಾತ್ಯದವರಿಗೆ 4:26–31ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
- Genesis 17:6 ಆದಿಕಾಂಡ 17:6ನಾನು ನಿನ್ನನ್ನು ಅತ್ಯಧಿಕವಾಗಿ ವೃದ್ಧಿ ಯಾಗಮಾಡಿ ನಿನ್ನಿಂದ ಜನಾಂಗಗಳಾಗ ಮಾಡುವೆನು; ನಿನ್ನಿಂದ ಅರಸರು ಹುಟ್ಟುವರು.
- Romans 9:9 ರೋಮಾಪುರದವರಿಗೆ 9:9ಈ ವಾಗ್ದಾನದ ಮಾತೇನಂ ದರೆ--ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು. ಆಗ ಸಾರಳಿಗೆ ಮಗನು ಇರುವನು ಎಂಬದೇ.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 24:60 ಆದಿಕಾಂಡ 24:60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.