Genesis · chapter 18 · verse 21
Genesis 18:21 in Kannada
ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
Naanu ilidu hogi nanna balige banda adara koogina prakaarave avaru maadiddaaro illavo endu nodi tilukolluvenu andanu.
Genesis 18:21 in English
- King James Version (KJV)
- I will go down now, and see whether they have done altogether according to the cry of it, which is come unto me; and if not, I will know.
- World English Bible (WEB)
- I will go down now, and see whether their deeds are as bad as the reports which have come to me. If not, I will know.”
- American Standard Version (ASV)
- I will go down now, and see whether they have done altogether according to the cry of it, which is come unto me; and if not, I will know.
- Bible in Basic English (BBE)
- I will go down now, and see if their acts are as bad as they seem from the outcry which has come to me; and if they are not, I will see.
- Darby Translation (DBY)
- I will go down now, and see whether they have done altogether according to the cry of it, which is come to me; and if not, I will know [it].
- Webster's Bible (WBS)
- I will go down now, and see whether they have done altogether according to the cry of it, which is come to me; and if not, I will know.
- Young's Literal Translation (YLT)
- I go down now, and see whether according to its cry which is coming unto Me they have done completely — and if not — I know;'
Read in context
- 19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- 20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- 21ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಅದರ ಕೂಗಿನ ಪ್ರಕಾರವೇ ಅವರು ಮಾಡಿದ್ದಾರೋ ಇಲ್ಲವೋ ಎಂದು ನೋಡಿ ತಿಳುಕೊಳ್ಳುವೆನು ಅಂದನು.
- 22ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಕರ್ತನ ಮುಂದೆ ನಿಂತುಕೊಂಡಿದ್ದನು.
- 23ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ?
Cross references
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Genesis 11:5 ಆದಿಕಾಂಡ 11:5ಆಗ ನರಪುತ್ರರು ಕಟ್ಟುವ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಕರ್ತನು ಇಳಿದು ಬಂದನು.
- Joshua 22:22 ಯೆಹೋಶುವ 22:22ದೇವಾದಿ ದೇವರಾದ ಕರ್ತನೇ, ದೇವಾದಿ ದೇವರಾದ ಕರ್ತನೇ ತಿಳಿದಿದ್ದಾನೆ. ಇಸ್ರಾಯೇಲ್ಯರಿಗೂ ತಿಳಿಯುವದು. ಇದು ತಿರುಗಿ ಬೀಳುವದರಿಂದಲಾದರೂ ಕರ್ತನಿಗೆ ವಿರೋಧವಾಗಿ ಅಪರಾಧಮಾಡುವದರಿಂದಲಾದರೂ ಆಗಿದ್ದರೆ ನಮ್ಮನ್ನು ಈಹೊತ್ತು ರಕ್ಷಿಸಬಾರದು.
- Deuteronomy 8:2 ಧರ್ಮೋಪದೇಶಕಾಂಡ 8:2ನೀನು ತಗ್ಗಿಸಿಕೊಳ್ಳುವ ನಿಮಿತ್ತವೂ ಹೃದಯದಲ್ಲಿ ಇರುವದನ್ನು ಅಂದರೆ ನೀನು ಆತನ ಆಜ್ಞೆಗಳನ್ನು ಕಾಪಾಡುವಿಯೋ ಇಲ್ಲವೋ ಎಂದು ತಿಳುಕೊಳ್ಳುವ ದಕ್ಕೂ ನಿನ್ನ ದೇವರಾದ ಕರ್ತನು ನಿನ್ನನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಬೇಕು.
- Jeremiah 17:10 ಯೆರೆಮೀಯ 17:10ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.
- Zephaniah 1:12 ಚೆಫನ್ಯ 1:12ಆ ಕಾಲದಲ್ಲಿ ಆಗುವದೇನಂದರೆ--ನಾನು ಯೆರೂಸಲೇಮನ್ನು ದೀಪಗಳಿಂದ ಶೋಧಿಸುವೆನು; ಕರ್ತನು ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡು ವದಿಲ್ಲವೆಂದು ತಮ್ಮ ಹೃದಯಗಳಲ್ಲಿ ಅನ್ನುವವರಾಗಿ ಮರೆಯಾದವುಗಳ ಮೇಲೆ ಕಟ್ಟಿಕೊಂಡಿರುವ ಮನುಷ್ಯ ರನ್ನು ದಂಡಿಸುವೆನು.
- Genesis 11:7 ಆದಿಕಾಂಡ 11:7ಆದದರಿಂದ ನಾವು ಇಳಿದು ಹೋಗಿ ಅವರು ಒಬ್ಬರ ಮಾತು ಒಬ್ಬರು ತಿಳಿಯದ ಹಾಗೆ ಅವರ ಭಾಷೆಯನ್ನು ಗಲಿಬಿಲಿ ಮಾಡೋಣ ಅಂದನು.
- Luke 16:15 ಲೂಕನು 16:15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- Exodus 33:5 ವಿಮೋಚನಕಾಂಡ 33:5ಕರ್ತನು ಮೋಶೆಗೆ--ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು--ನೀವು ಬಗ್ಗದ ಕುತ್ತಿಗೆಯುಳ್ಳ ಜನರು, ನಾನು ಕ್ಷಣಮಾತ್ರದಲ್ಲಿ ನಿಮ್ಮೊಳಗೆ ಬಂದು ನಿಮ್ಮನ್ನು ನಿರ್ಮೂಲಮಾಡುವೆನು. ಹೀಗಿರುವದರಿಂದ ನಾನು ನಿಮಗೆ ಏನು ಮಾಡಬೇಕೋ ಅದನ್ನು ತಿಳುಕೊಳ್ಳು ವಂತೆ ನಿಮ್ಮ ಆಭರಣಗಳನ್ನು ಈಗ ನಿಮ್ಮಿಂದ ತೆಗೆದು ಬಿಡಿರಿ ಎಂದು ಹೇಳು ಅಂದನು.
- Psalm 139:1–24 ಕೀರ್ತನೆಗಳು 139:1–24ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ. ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ. ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ. ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ? ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು. ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು. ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ. ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು. ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ. ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ. ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ. ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ? ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ. ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು. ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
- Deuteronomy 13:3 ಧರ್ಮೋಪದೇಶಕಾಂಡ 13:3ಆ ಪ್ರವಾದಿಯ ಇಲ್ಲವೆ ಕನಸು ಕಾಣುವವನ ಮಾತುಗಳನ್ನು ಕೇಳಬಾರದು. ನಿಮ್ಮ ದೇವರಾದ ಕರ್ತನು ನಿಮ್ಮನ್ನು ಶೋಧಿಸಿ ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣ ಪ್ರಾಣದಿಂದಲೂ ನಿಮ್ಮ ದೇವರಾದ ಕರ್ತನನ್ನು ಪ್ರೀತಿ ಮಾಡುತ್ತೀರೇನೋ ಎಂದು ಪರೀಕ್ಷಿಸುತ್ತಾನೆ.
- Micah 1:3 ಮೀಕ 1:3ಇಗೋ, ಕರ್ತನು ತನ್ನ ಸ್ಥಾನದಿಂದ ಹೊರಡುತ್ತಾನೆ; ಆತನು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ತುಳಿಯುವನು.