Genesis · chapter 18 · verse 30
Genesis 18:30 in Kannada
ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
Avanu-- kartanige kopabaarade irali; naanu maatanaa duttene--ondu vele alli moovattu mandi sikkaaru andaaga aatanu--nanage alli moovattu mandi sikkidare naashamaaduvadilla andanu.
Genesis 18:30 in English
- King James Version (KJV)
- And he said [unto him], Oh let not the Lord be angry, and I will speak: Peradventure there shall thirty be found there. And he said, I will not do [it], if I find thirty there.
- World English Bible (WEB)
- He said, “Oh don’t let the Lord be angry, and I will speak. What if there are thirty found there?” He said, “I will not do it if I find thirty there.”
- American Standard Version (ASV)
- And he said, Oh let not the Lord be angry, and I will speak: peradventure there shall thirty be found there. And he said, I will not do it, if I find thirty there.
- Bible in Basic English (BBE)
- And he said, Let not the Lord be angry with me if I say, What if there are thirty there? And he said, I will not do it if there are thirty.
- Darby Translation (DBY)
- And he said, Oh, let not the Lord be angry that I speak! Perhaps there may be thirty found there. And he said, I will not do it if I find thirty there.
- Webster's Bible (WBS)
- And he said, Oh, let not the LORD be angry, and I will speak: Peradventure there will thirty be found there. And he said, I will not do [it], if I find thirty there.
- Young's Literal Translation (YLT)
- And he saith, 'Let it not be, I Pray thee, displeasing to the Lord, and I speak: peradventure there are found there thirty?' and He saith, 'I do [it] not, if I find there thirty.'
Read in context
- 28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.
- 29ಅಬ್ರಹಾಮನು ಆತನ ಸಂಗಡ ಇನ್ನೂ ಮಾತನಾಡಿ--ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಅಂದನು. ಅದಕ್ಕೆ ಆತನು--ನಾಲ್ವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವದಿಲ್ಲ ಅಂದನು.
- 30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
- 31ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
- 32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Cross references
- Job 40:4 ಯೋಬನು 40:4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- Isaiah 55:8–9 ಯೆಶಾಯ 55:8–9ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ; ಇಲ್ಲವೆ ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ ಎಂದು ಕರ್ತನು ಹೇಳುತ್ತಾನೆ. ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.
- Psalm 10:17 ಕೀರ್ತನೆಗಳು 10:17ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.
- Genesis 44:18 ಆದಿಕಾಂಡ 44:18ಯೆಹೂದನು ಅವನ ಸವಿಾಪಕ್ಕೆ ಬಂದು--ಓ ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವದಕ್ಕೆ ನಿನ್ನ ದಾಸನಿಗೆ ಅಪ್ಪಣೆ ಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಯಾಕಂದರೆ ನೀನು ಫರೋ ಹನಿಗೆ ಸಮಾನನು.
- Psalm 9:12 ಕೀರ್ತನೆಗಳು 9:12ಆತನು ರಕ್ತಾಪರಾಧವನ್ನು ವಿಚಾರಿಸುವಾಗ ಅವರನ್ನು ಜ್ಞಾಪಕಮಾಡಿಕೊಳ್ಳುವನು; ಆತನು ದೀನರ ಕೂಗನ್ನು ಮರೆತುಬಿಡನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Hebrews 12:28–29 ಇಬ್ರಿಯರಿಗೆ 12:28–29ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
- Judges 6:39 ನ್ಯಾಯಸ್ಥಾಪಕರು 6:39ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Esther 4:11–16 ಎಸ್ತೇರಳು 4:11–16ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು. ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು. ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ. ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.