Genesis · chapter 18 · verse 32
Genesis 18:32 in Kannada
ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Avanu--haa, kartane, ninage kopabaarade irali; innu onde saari maatanaaduttene--ondu vele alli hattu mandi sikkaaru andaaga aatanu--hattu mandigoskara naashamaadenu andanu.kartanu abrahaamana sangada maatanaadu vadannu mugisida koodale horatuhodanu. Abrahaamanu tanna sthalakke tirugikondanu.
Genesis 18:32 in English
- King James Version (KJV)
- And he said, Oh let not the Lord be angry, and I will speak yet but this once: Peradventure ten shall be found there. And he said, I will not destroy [it] for ten’s sake.
- World English Bible (WEB)
- He said, “Oh don’t let the Lord be angry, and I will speak just once more. What if ten are found there?” He said, “I will not destroy it for the ten’s sake.”
- American Standard Version (ASV)
- And he said, Oh let not the Lord be angry, and I will speak yet but this once: peradventure ten shall be found there. And he said, I will not destroy it for the ten’s sake.
- Bible in Basic English (BBE)
- And he said, O let not the Lord be angry and I will say only one word more: by chance there may be ten there. And he said, I will have mercy because of the ten.
- Darby Translation (DBY)
- And he said, Oh, let not the Lord be angry, that I speak yet but this time! Perhaps there may be ten found there. And he said, I will not destroy [it] for the ten's sake.
- Webster's Bible (WBS)
- And he said, Oh let not the LORD be angry, and I will speak yet but this once: Peradventure ten will be found there. And he said, I will not destroy [it] for ten's sake.
- Young's Literal Translation (YLT)
- And he saith, 'Let it not be, I pray Thee, displeasing to the Lord, and I speak only this time: peradventure there are found there ten?' and He saith, 'I do not destroy [it], because of the ten.'
Read in context
- 30ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು.
- 31ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು.
- 32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- 33ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
Cross references
- James 5:15–17 ಯಾಕೋಬನು 5:15–17ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು. ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Judges 6:39 ನ್ಯಾಯಸ್ಥಾಪಕರು 6:39ಗಿದ್ಯೋನನು ದೇವರಿಗೆ--ನಾನು ಇನ್ನೊಂದು ಸಾರಿ ಮಾತನಾಡುವದರಿಂದ ನಿನ್ನ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆ ಯಿಂದ ಇನ್ನೊಂದು ಸಾರಿ ನಾನು ನಿನ್ನನ್ನು ಶೋಧಿಸು ವೆನು. ಉಣ್ಣೆ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ ಅಂದನು.ಹಾಗೆಯೇ ದೇವರು ಆ ರಾತ್ರಿ ಯಲ್ಲಿ ಮಾಡಿದನು. ಉಣ್ಣೆ ಮಾತ್ರವೇ ಒಣಗಿ ಭೂಮಿಯಲ್ಲೆಲ್ಲಿಯೂ ಮಂಜು ಇತ್ತು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- 1 John 5:15–16 1 ಯೋಹಾನನು 5:15–16ನಾವು ಏನು ಬೇಡಿಕೊಂಡರೂ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬದು ನಮಗೆ ಗೊತ್ತಾಗಿದ್ದರೆ ನಾವು ಆಶಿಸಿದವುಗಳು ಆತನಿಂದ ನಮಗೆ ದೊರೆತವೆಂಬದು ನಮಗೆ ತಿಳಿದದೆ. ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವ ದನ್ನು ಕಂಡರೆ ಅವನು ಬೇಡಿಕೊಳ್ಳಲಿ; ಆಗ ಆತನು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳ ಬೇಕೆಂದು ನಾನು ಹೇ
- Micah 7:18 ಮೀಕ 7:18ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ.
- Ephesians 3:20 ಎಫೆಸದವರಿಗೆ 3:20ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದಾತನಿಗೆಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತ ರಕ್ಕೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ. ಆಮೆನ್.
- Isaiah 42:6–7 ಯೆಶಾಯ 42:6–7ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು -- ಕರ್ತನಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.
- Exodus 33:13–14 ವಿಮೋಚನಕಾಂಡ 33:13–14ಈಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕ್ಕಿದ್ದಾದರೆ ನಾನು ನಿನ್ನನ್ನು ತಿಳಿಯುವ ಹಾಗೆ ನಿನ್ನ ಮಾರ್ಗವನ್ನು ನನಗೆ ತೋರಿಸು. ಆಗ ನಿನ್ನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಿರುವದು. ಈ ಜನಾಂಗವು ನಿನ್ನ ಜನರೆಂದು ತಿಳಿದುಕೋ ಎಂದು ನಾನು ಬೇಡಿಕೊಳ್ಳುತ್ತೇನೆ ಎಂದು ಹೇಳಿದನು. ಆಗ ಆತನು--ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು ಅಂದನು.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Exodus 34:9–10 ವಿಮೋಚನಕಾಂಡ 34:9–10ಅವನು--ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದಾದರೆ ಓ ಕರ್ತನೇ, ನನ್ನ ಕರ್ತನು ನಮ್ಮ ಮಧ್ಯದಲ್ಲಿ ಬರಲಿ ಅದು ಬಗ್ಗದ ಕುತ್ತಿಗೆಯುಳ್ಳ ಜನಾಂಗವೇ ಹೌದು. ಆದಾಗ್ಯೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿನ್ನ ಸ್ವಾಸ್ಥ್ಯವಾಗಿ ತೆಗೆದುಕೋ ಅಂದನು. ಅದಕ್ಕೆ ಕರ್ತನು--ಇಗೋ, ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿ ಯಲ್ಲಿಯೂ ಯಾವ ಜನಾಂಗದಲ್ಲಿಯೂ ಮಾಡ ದಿರುವಂಥ ಅದ್ಭುತಗಳನ್ನು ನಿನ್ನ ಜನರೆಲ್ಲರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವಿಯೋ ಆ ಜನರೆಲ್ಲರು ಕರ್ತನ ಕಾರ್ಯವನ್ನು ನೋಡುವರು. ನಾನು ನಿಮಗೆ ಮಾಡುವಂಥದ್ದು ಭಯಂಕರ ವಾಗಿರುವದು.
- Isaiah 65:8 ಯೆಶಾಯ 65:8ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು.
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.