Genesis · chapter 19 · verse 11
Genesis 19:11 in Kannada
ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
Baagalallidda manushyarannu kiriyarinda hiriyara varege kurudarannaagi maadidaru. Aaga avaru baagalannu kandukollalaarade besaragondaru.
Genesis 19:11 in English
- King James Version (KJV)
- And they smote the men that [were] at the door of the house with blindness, both small and great: so that they wearied themselves to find the door.
- World English Bible (WEB)
- They struck the men who were at the door of the house with blindness, both small and great, so that they wearied themselves to find the door.
- American Standard Version (ASV)
- And they smote the men that were at the door of the house with blindness, both small and great, so that they wearied themselves to find the door.
- Bible in Basic English (BBE)
- But the men who were outside the door they made blind, all of them, small and great, so that they were tired out with looking for the door.
- Darby Translation (DBY)
- And they smote the men that were at the entrance of the house with blindness, from the smallest to the greatest; and they wearied themselves to find the entrance.
- Webster's Bible (WBS)
- And they smote the men that [were] at the door of the house with blindness, both small and great: so that they wearied themselves to find the door.
- Young's Literal Translation (YLT)
- and the men who [are] at the opening of the house they have smitten with blindness, from small even unto great, and they weary themselves to find the opening.
Read in context
- 9ಆದರೆ ಅವರು--ಹಿಂದಕ್ಕೆ ಸರಿ ಎಂದು ಹೇಳಿ --ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿ ಆಗಬೇಕೆಂದಿದ್ದಾನೆ; ಈಗ ನಿನಗೆ ಅವರಿಗಿಂತ ಹೆಚ್ಚು ಕೆಟ್ಟದ್ದನ್ನು ಮಾಡುತ್ತೇವೆ ಅಂದರು. ಅವರು ಲೋಟನನ್ನು ಬಹಳವಾಗಿ ಇರುಕಿಸಿ ಬಾಗಲನ್ನು ಮುರಿಯಲು ಸವಿಾಪಕ್ಕೆ ಬಂದರು.
- 10ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
- 11ಬಾಗಲಲ್ಲಿದ್ದ ಮನುಷ್ಯರನ್ನು ಕಿರಿಯರಿಂದ ಹಿರಿಯರ ವರೆಗೆ ಕುರುಡರನ್ನಾಗಿ ಮಾಡಿದರು. ಆಗ ಅವರು ಬಾಗಲನ್ನು ಕಂಡುಕೊಳ್ಳಲಾರದೆ ಬೇಸರಗೊಂಡರು.
- 12ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
- 13ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
Cross references
- 2 Kings 6:18 2 ಅರಸುಗಳು 6:18ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
- Acts 13:11 ಅಪೊಸ್ತಲರ ಕೃತ್ಯಗಳು 13:11ಇಗೋ, ಕರ್ತನು ನಿನ್ನ ಮೇಲೆ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ಕಾಣದೆ ಇರುವಿ ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಮೊಬ್ಬಾಗಿ ಕತ್ತಲೆ ಉಂಟಾಯಿತು; ಅವನು ಕೈ ಹಿಡಿದು ನಡಿಸುವವರನ್ನು ಹುಡುಕುತ್ತಾ ತಿರುಗಾಡಿದನು.
- Jeremiah 2:36 ಯೆರೆಮೀಯ 2:36ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.
- Deuteronomy 28:28–29 ಧರ್ಮೋಪದೇಶಕಾಂಡ 28:28–29ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು. ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Ecclesiastes 10:15 ಪ್ರಸಂಗಿ 10:15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
- Isaiah 57:10 ಯೆಶಾಯ 57:10ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ ನಿರೀಕ್ಷೆಯೇ ಇಲ್ಲ ಎಂದು ಅಂದುಕೊಳ್ಳಲಿಲ್ಲ. ನಿನ್ನ ಕೈಯಲ್ಲಿರುವ ಜೀವವನ್ನು ಕಂಡುಕೊಂಡಿದ್ದೀ, ಆದದರಿಂದ ನೀನು ದುಃಖಿಸಲಿಲ್ಲ.