Genesis · chapter 19 · verse 37
Genesis 19:37 in Kannada
ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Modalu huttidavalu maganannu hettu avanige movaab endu hesarittalu. Indina varegoo movaabyarige ivane tande.chikkavalu saha maganannu hettu avanige benammi endu hesarittalu. Indina varegoo ammonana makkalige ivane tande.
Genesis 19:37 in English
- King James Version (KJV)
- And the firstborn bare a son, and called his name Moab: the same [is] the father of the Moabites unto this day.
- World English Bible (WEB)
- The firstborn bore a son, and named him Moab. He is the father of the Moabites to this day.
- American Standard Version (ASV)
- And the first-born bare a son, and called his name Moab: the same is the father of the Moabites unto this day.
- Bible in Basic English (BBE)
- And the older daughter had a son, and she gave him the name Moab: he is the father of the Moabites to this day.
- Darby Translation (DBY)
- And the first-born bore a son, and called his name Moab: the same is the father of the Moabites to this day.
- Webster's Bible (WBS)
- And the first-born bore a son, and called his name Moab: the same [is] the father of the Moabites to this day.
- Young's Literal Translation (YLT)
- and the first-born beareth a son, and calleth his name Moab; he [is] father of Moab unto this day;
Read in context
- 35ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು; ಆಗ ಚಿಕ್ಕವಳು ಎದ್ದು ಅವನ ಸಂಗಡ ಮಲಗಿ ಕೊಂಡಳು. ಅವಳು ಮಲಗುವಾಗಲೂ ಏಳುವಾಗಲೂ ಅವನಿಗೆ ತಿಳಿಯಲಿಲ್ಲ.
- 36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
- 37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- 38ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Cross references
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- Numbers 22:1–41 ಅರಣ್ಯಕಾಂಡ 22:1–41ಇಸ್ರಾಯೇಲ್ ಮಕ್ಕಳು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾ ಬಿನ ಬೈಲುಗಳಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಇಳುಕೊಂಡರು. ಇಸ್ರಾಯೇಲ್ಯರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು. ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು. ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು. ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ-- ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು. ಆಗ ದೇವರು ಬಿಳಾಮನಿಗೆ ಹೇಳಿದ್ದೇನಂದರೆನೀನು ಅವರ ಸಂಗಡ ಹೋಗಬೇಡ; ನೀನು ಆ ಜನವನ್ನು ಶಪಿಸಬೇಡ; ಅದು ಆಶೀರ್ವದಿಸಲ್ಪಟ್ಟಿದೆ. ಆಗ ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ--ಕರ್ತನು ನಿಮ್ಮ ಸಂಗಡ ಹೋಗುವದಕ್ಕೆ ನನಗೆ ಅಪ್ಪಣೆ ಕೊಡುವದಿಲ್ಲ. ನೀವು ನಿಮ್ಮ ದೇಶಕ್ಕೆ ಹೋಗಿರಿ ಎಂದು ಹೇಳಲಾಗಿ, ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು--ಬಿಳಾಮನು ನಮ್ಮ ಸಂಗಡ ಬರಲೊಲ್ಲನು ಅಂದರು. ಆದರೆ ಬಾಲಾಕನು ತಿರಿಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಭುಗಳನ್ನು ಕಳುಹಿಸಿದನು. ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು. ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು; ನೀನು ನನಗೆ ಹೇಳುವದನ್ನೆಲ್ಲಾ ನಾನು ಮಾಡುವೆನು; ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು ಅಂದನು. ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನ ಸೇವಕರಿಗೆ ಹೇಳಿದ್ದೇನಂದರೆ--ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಯನ್ನು ಬಂಗಾರವನ್ನು ಕೊಟ್ಟರೂ ನಾನು ನನ್ನ ದೇವರಾಗಿರುವ ಕರ್ತನ ಮಾತನ್ನು ವಿಾರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು. ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು. ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು. ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು. ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು. ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು. ಆದರೆ ಕರ್ತನ ದೂತನು ದ್ರಾಕ್ಷೇತೋಟಗಳ ಹಾದಿಯಲ್ಲಿ ಈಚೆ ಆಚೆ ಗೋಡೆ ಇದ್ದಲ್ಲಿ ನಿಂತನು. ಕತ್ತೆಯು ಕರ್ತನ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು; ಅವನು ಅದನ್ನು ಹೆಚ್ಚಾಗಿ ಹೊಡೆದನು. ಆಗ ಕರ್ತನ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು. ಕತ್ತೆಯು ಕರ್ತನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು; ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು. ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು. ಬಿಳಾಮನು ಕತ್ತೆಗೆ--ನೀನು ನನಗೆ ಹಾಸ್ಯಮಾಡಿದಿಯಲ್ಲಾ? ನನ್ನ ಕೈಯಲ್ಲಿ ಕತ್ತಿ ಇದ್ದರೆ ನಾನು ಈಗಲೇ ನಿನ್ನನ್ನು ಕೊಂದುಹಾಕುತ್ತಿದ್ದೆ ಅಂದನು. ಕತ್ತೆಯು ಬಿಳಾಮನಿಗೆ ಹೇಳಿದ್ದು--ನಾನು ನಿನ್ನದಾ ದಂದಿನಿಂದ ಈ ದಿವಸದ ವರೆಗೂ ನೀನು ಹತ್ತಿಕೊಂಡ ನಿನ್ನ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ಪ್ರಕಾರ ಮಾಡಿದೆನೋ ಅಂದಿತು. ಅದಕ್ಕ ವನು--ಇಲ್ಲ ಅಂದನು. ಆಗ ಕರ್ತನು ಬಿಳಾಮನ ಕಣ್ಣುಗಳನ್ನು ತೆರೆದನು; ಅವನು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಆತನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಬೋರಲು ಬಿದ್ದನು. ಕರ್ತನ ದೂತನು ಅವನಿಗೆ ಹೇಳಿದ್ದು--ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಯಾಕೆ? ಇಗೋ, ನಿನ್ನ ಮಾರ್ಗ ನನ್ನ ಮುಂದೆ ವಕ್ರವಾಗಿರುವದರಿಂದ ನಾನು ಎದುರಾಳಿ ಯಾಗಿ ಹೊರಟೆನು. ಆ ಕತ್ತೆಯು ನನ್ನನ್ನು ನೋಡಿ ನನ್ನ ಮುಂದೆ ಈಗ ಮೂರು ಸಾರಿ ವಾರೆಯಾಗಿ ಹೋಯಿತು; ಅದು ನನ್ನ ಮುಂದೆ ವಾರೆಯಾಗಿ ಹೋಗದಿದ್ದರೆ ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದು ಹಾಕಿ ಅದನ್ನು ಪ್ರಾಣದಿಂದ ಉಳಿಸುತ್ತಿದ್ದೆನು ಅಂದನು. ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು. ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು. ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ ಅವನು ಕಡೇ ಮೇರೆಯಲ್ಲಿರುವ ಅರ್ನೋನಿನ ಆಚೆ ಯಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಅವನಿಗೆದುರಾಗಿ ಹೊರಟನು. ಬಾಲಾಕನು ಬಿಳಾಮನಿಗೆ ಹೇಳಿದ್ದೇ ನಂದರೆ--ನಾನು ನಿನ್ನನ್ನು ತೀವ್ರವಾಗಿ ಕರೇ ಕಳುಹಿಸ ಲಿಲ್ಲವೋ? ನೀನು ನನ್ನ ಬಳಿಗೆ ಯಾಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯ ವುಳ್ಳವನಲ್ಲವೋ? ಬಿಳಾಮನು ಬಾಲಾಕನಿಗೆ ಹೇಳಿದ್ದು--ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ; ಈಗ ಏನಾದರೂ ಹೇಳುವದಕ್ಕೆ ನನಗೆ ಯಾವ ಶಕ್ತಿಯಾದರೂ ಇದೆಯೋ? ನನ್ನಿಂದಾಗುವದೋ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು. ಆಗ ಬಿಳಾಮನು ಬಾಲಾಕನ ಸಂಗಡ ಹೋದನು; ಇಬ್ಬರು ಕಿರ್ಯತ್ಹುಚೋತಿಗೆ ಬಂದರು. ಬಾಲಾ ಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಬಿಳಾಮನನ್ನೂ ಅವನ ಸಂಗಡ ಇದ್ದ ಪ್ರಭುಗಳನ್ನೂ ಕಳುಹಿಸಿದನು.ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು. ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ತಕ್ಕೊಂಡು ಬಾಳನ ಎತ್ತರವಾದ ಸ್ಥಳಕ್ಕೆ ಹತ್ತಿಸಿದನು; ಅಲ್ಲಿಂದ ಅವನು ಜನರ ಕಡೇ ಭಾಗವನ್ನು ನೋಡಿದನು.
- Judges 3:1–31 ನ್ಯಾಯಸ್ಥಾಪಕರು 3:1–31ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ: ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು. ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು. ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು. ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು. ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು. ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು. ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು. ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು. ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು. ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು. ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು. ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು. ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ. ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು. ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
- 2 Samuel 8:1–18 2 ಸಮುವೇಲನು 8:1–18ಇದಾದ ಮೇಲೆ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ಅಣಗಿಸಿ ಅವರ ಕೈಯಿಂದ ಮೇತೆಗಮ್ಮವನ್ನು ತಕ್ಕೊಂಡನು. ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು. ಇದಲ್ಲದೆ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನು ತನ್ನ ಮೇರೆಯನ್ನು ಕಟ್ಟಿ ಕೊಳ್ಳುವದಕ್ಕೆ ಹೋದಾಗ ದಾವೀದನು ಯೂಫ್ರೇ ಟಿಸ್ ನದಿಯ ಬಳಿಯಲ್ಲಿ ಅವನಿಗಿದ್ದ ಸಾವಿರ ರಥ ಗಳನ್ನೂ ಏಳು ನೂರು ಕುದುರೆ ರಾಹುತರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ಹಿಡಿದು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ದುಬಿಟ್ಟನು. ಆದರೆ ದಮಸ್ಕದಲ್ಲಿರುವ ಅರಾಮ್ಯರು ಚೋಬದ ಅರಸನಾದ ಹದದೆಜೆರನಿಗೆ ಸಹಾಯಮಾಡುವದಕ್ಕೆ ಬಂದಾಗ ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದು ಹಾಕಿದನು. ತರುವಾಯ ಕಾವಲುದಂಡುಗಳನ್ನು ದಾವೀದನು ದಮಸ್ಕಕ್ಕೆ ಹೊಂದಿದ ಅರಾಮ್ಯದ ಠಾಣ ಗಳಲ್ಲಿ ಇಟ್ಟನು. ಹಾಗೆಯೇ ಅರಾಮ್ಯರು ದಾವೀದ ನಿಗೆ ದಾಸರಾಗಿ ಕಪ್ಪಗಳನ್ನು ತಂದರು; ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿ ದನು. ಆದರೆ ದಾವೀದನು ಹದದೆಜೆರನ ಸೇವಕ ರಿಗಿದ್ದ ಬಂಗಾರದ ಡಾಲುಗಳನ್ನು ತೆಗೆದುಕೊಂಡು ಅವುಗಳನ್ನು ಯೆರೂಸಲೇಮಿಗೆ ತಂದನು. ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯ ಧಿಕವಾಗಿ ಹಿತ್ತಾಳೆಯನ್ನು ತೆಗೆದುಕೊಂಡು ಬಂದನು. ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ ಅವನು ದಾವೀದನನ್ನು ವಂದಿಸುವ ದಕ್ಕೂ ಹರಸುವದಕ್ಕೂ ತನ್ನ ಮಗನಾದ ಯೋರಾಮ ನನ್ನು ಕಳುಹಿಸಿದನು; ಯಾಕಂದರೆ ತೋವಿಗೂ ಹದ ದೆಜೆರನಿಗೂ ವಿರೋಧವಾಗಿ ಯುದ್ಧಮಾಡಿದಾಗ ದಾವೀದನು ಅವನನ್ನು ಹೊಡೆದಿದ್ದನು; ಹದದೆಜೆರನಿಗೆ ತೋವು ಸಂಗಡ ಯುದ್ಧಗಳಿದ್ದವು. ಯೋರಾಮನು ಬೆಳ್ಳಿ ಬಂಗಾರ ಹಿತ್ತಾಳೆಯ ಪಾತ್ರೆಗಳನ್ನೂ ತನ್ನೊಂದಿಗೆ ತಂದನು. ಇವುಗಳನ್ನು ಅರಸನಾದ ದಾವೀದನು ವಶಮಾಡಿಕೊಂಡು ಅರಾಮ್ಯರೂ ಮೋವಾಬ್ಯರೂ ಅಮ್ಮೋನನ ಮಕ್ಕಳೂ ಫಿಲಿಷ್ಟಿಯರೂ ಅಮಾಲೇಕ್ಯರೂ ಎಂಬ ಸಕಲ ಜನಾಂಗಗಳಿಂದ ತೆಗೆದು ಪ್ರತಿಷ್ಠೆ ಮಾಡಿದ ಬೆಳ್ಳಿ ಬಂಗಾರದ ಸಂಗಡಲೂ ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಲ್ಲಿ ಕೊಳ್ಳೆ ಇಟ್ಟದರ ಸಂಗಡಲೂ ಕರ್ತನಿಗೆ ಪ್ರತಿಷ್ಠೆಮಾಡಿ ಇಟ್ಟನು. ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂತಿರುಗಿದಾಗ ಹೆಸರುಗೊಂಡನು. ಎದೋಮಿ ನಲ್ಲಿ ಕಾವಲುದಂಡುಗಳನ್ನು ಇಟ್ಟನು. ಎಲ್ಲಾ ಎದೋಮಿ ನಲ್ಲಿ ಅವನು ಕಾವಲುದಂಡುಗಳನ್ನು ಇಟ್ಟದ್ದರಿಂದ ಎದೋಮ್ಯರೆಲ್ಲರೂ ದಾವೀದನಿಗೆ ದಾಸರಾದರು. ದಾವೀದನು ಹೋದಲ್ಲೆಲ್ಲಾ ಕರ್ತನು ಅವನನ್ನು ಕಾಪಾಡಿದನು. ಹೀಗೆಯೇ ದಾವೀದನು ಎಲ್ಲಾ ಇಸ್ರಾಯೇಲಿನ ಮೇಲೆ ಆಳಿ ತನ್ನ ಎಲ್ಲಾ ಜನರಿಗೂ ನೀತಿ ನ್ಯಾಯಗಳನ್ನು ನಡಿಸುತ್ತಾ ಬಂದನು. ಚೆರೂಯಳ ಮಗನಾದ ಯೋವಾಬನು ಸೈನ್ಯಾಧಿಪತಿಯಾಗಿದ್ದನು; ಅಹೀಲೂ ದನ ಮಗನಾದ ಯೆಹೋಷಾಫಾಟನು ಲೇಖಕನಾ ಗಿದ್ದನು. ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- Deuteronomy 23:3 ಧರ್ಮೋಪದೇಶಕಾಂಡ 23:3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- Deuteronomy 2:19 ಧರ್ಮೋಪದೇಶಕಾಂಡ 2:19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Ruth 4:10 ರೂತಳು 4:10ಇದಲ್ಲದೆ ಸತ್ತವನ ಸಹೋದರರಿಂದಲೂ ಅವನ ಸ್ಥಳದ ಬಾಗಲದಿಂದಲೂ ಅವನ ಹೆಸರು ಕಡಿದು ಹಾಕಲ್ಪಡದ ಹಾಗೆ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಕೊಂಡುಕೊಂಡೆನು.
- 2 Kings 3:1–27 2 ಅರಸುಗಳು 3:1–27ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರುಷದಲ್ಲಿ ಅಹಾಬನ ಮಗನಾದ ಯೋರಾಮನು ಸಮಾರ್ಯ ದಲ್ಲಿ ಇಸ್ರಾಯೇಲ್ಯರ ಅರಸನಾಗಿ ಹನ್ನೆರಡು ವರುಷ ಆಳಿದನು. ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆ ತಾಯಿಯ ಹಾಗೂ ಅಲ್ಲ; ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು. ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು. ಮೋವಾಬಿನ ಅರಸನಾದ ಮೇಷನು ಕುರಿಮಂದೆ ಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ ಉಣ್ಣೆ ಸಹಿತವಾಗಿ ಒಂದು ಲಕ್ಷ ಟಗರುಗಳನ್ನೂ ಕಪ್ಪವಾಗಿ ಕೊಡುತ್ತಿದ್ದನು. ಅಹಾ ಬನು ಸತ್ತ ತರುವಾಯ ಏನಾಯಿತಂದರೆ, ಮೋವಾ ಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧ ವಾಗಿ ತಿರುಗಿಬಿದ್ದನು. ಆ ದಿನದಲ್ಲಿ ಯೋರಾಮನು ಸಮಾರ್ಯದಿಂದ ಹೊರಟು ಹೋಗಿ ಇಸ್ರಾಯೇಲ್ಯರನ್ನು ಲೆಕ್ಕಿಸಿದನು. ಇದಲ್ಲದೆ ಅವನು ಹೋಗಿಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾನೆ; ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವಿಯೋ ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿ ದನು. ಅದಕ್ಕವನು--ನಾನು ಬರುವೆನು; ನಾನು ನಿನ್ನ ವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳಂತೆಯೇ ಅಂದನು. ಅದಕ್ಕೆ ಯಾವ ಮಾರ್ಗವಾಗಿ ಹೋಗೋಣ ಎಂದು ಇವನು ಕೇಳಿದಾಗ ಅವನು--ಎದೋಮಿನ ಅರಣ್ಯ ಮಾರ್ಗವಾಗಿ ಅಂದನು. ಹೀಗೆಯೇ ಇಸ್ರಾಯೇಲಿನ ಅರಸನೂ ಯೆಹೂದದ ಅರಸನೂ ಎದೋಮಿನ ಅರಸನೂ ಹೊರಟು ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ ಅವರ ಹಿಂದೆ ಬಂದ ಪಶುಗಳಿಗೂ ನೀರು ಇಲ್ಲದೆ ಹೋಯಿತು. ಆಗ ಇಸ್ರಾಯೇಲಿನ ಅರಸನು -- ಅಯ್ಯೋ, ಕರ್ತನು ಈ ಮೂರು ಮಂದಿ ಅರಸುಗಳನ್ನು ಮೋವಾ ಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾನಲ್ಲಾ ಅಂದನು. ಆದರೆ ಯೆಹೋಷಾಫಾಟನು -- ಪ್ರವಾದಿಯ ಮೂಲಕವಾಗಿ ಕರ್ತನನ್ನು ಕೇಳುವ ಹಾಗೆ ಇಲ್ಲಿ ಕರ್ತನ ಪ್ರವಾದಿಯು ಯಾವನೂ ಇಲ್ಲವೋ ಅಂದನು. ಆಗ ಇಸ್ರಾಯೇಲ್ಯರ ಅರಸನ ಸೇವಕರಲ್ಲಿ ಒಬ್ಬನು ಪ್ರತ್ಯು ತ್ತರವಾಗಿ--ಎಲೀಯನ ಕೈಗಳ ಮೇಲೆ ನೀರು ಹೊಯಿದ ಶಾಫಾಟನ ಮಗನಾದ ಎಲೀಷನು ಇಲ್ಲಿದ್ದಾನೆಂದು ಹೇಳಿದನು. ಆಗ ಯೆಹೋಷಾಫಾಟನು--ಅವನ ಬಳಿ ಯಲ್ಲಿ ಕರ್ತನ ವಾಕ್ಯ ಉಂಟು ಅಂದನು. ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು. ಎಲೀ ಷನು ಇಸ್ರಾಯೇಲಿನ ಅರಸನಿಗೆ -- ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆ ತಾಯಿಯ ಪ್ರವಾದಿಗಳ ಬಳಿಗೆ ಹೋಗು ಅಂದನು. ಇಸ್ರಾಯೇ ಲಿನ ಅರಸನು ಅವನಿಗೆ--ಇಲ್ಲ, ಕರ್ತನು ಈ ಮೂರು ಮಂದಿ ಅರಸರುಗಳನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕೆ ಒಟ್ಟಾಗಿ ಕರೆದಿದ್ದಾನಲ್ಲಾ ಅಂದನು. ಆಗ ಎಲೀಷನು--ನಾನು ಯಾವಾತನ ಸಮ್ಮುಖ ದಲ್ಲಿ ನಿಂತಿರುತ್ತೇನೋ ಆ ಸೈನ್ಯಗಳ ಕರ್ತನ ಜೀವದಾಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾ ಫಾಟನ ಸಮ್ಮುಖವನ್ನು ನಾನು ಗೌರವಿಸದಿದ್ದರೆ ನಾನು ನಿನ್ನ ಕಡೆ ಕಣ್ಣಿಡುವದಿಲ್ಲ, ನೋಡುವದೂ ಇಲ್ಲ. ಆದರೆ ಈಗ ವಾದ್ಯ ಬಾರಿಸುವವನನ್ನು ನನ್ನ ಬಳಿಗೆ ಕರಕೊಂಡು ಬಾ ಅಂದನು. ಆಗ ವಾದ್ಯ ಬಾರಿಸುವ ವನು ಬಾರಿಸಿದಾಗ ಕರ್ತನ ಕೈ ಅವನ ಮೇಲೆ ಬಂತು. ಅವನು ಹೇಳಿದ್ದೇನಂದರೆ -- ಈ ತಗ್ಗನ್ನು ಹಳ್ಳ ಕೊಳ್ಳಗಳಾಗಿ ಮಾಡಿರೆಂದು ಕರ್ತನು ಹೇಳುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ನೀನು ಗಾಳಿಯನ್ನೂ ಮಳೆಯನ್ನೂ ನೋಡುವದಿಲ್ಲ; ಆದರೆ ನೀವು ನಿಮ್ಮ ದನಗಳೂ ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬಲ್ಪಡುವದು. ಇದಲ್ಲದೆ ಇದು ಕರ್ತನ ದೃಷ್ಟಿಗೆ ಅಲ್ಪವಾಗಿರುವದು; ಆತನು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಕೊಡುವನು. ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು. ಉದಯದಲ್ಲಿ ಕಾಣಿಕೆಯನ್ನು ಅರ್ಪಿಸುತ್ತಿರುವಾಗ ಏನಾಯಿತಂದರೆ, ಇಗೋ, ನೀರು ಎದೋಮಿನ ಮಾರ್ಗವಾಗಿ ಬಂದದರಿಂದ ದೇಶವು ನೀರಿನಿಂದ ತುಂಬಲ್ಪಟ್ಟಿತು. ಅರಸುಗಳು ತಮ್ಮ ಸಂಗಡ ಯುದ್ಧಮಾಡುವದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ ಅವರು ಆಯುಧ ಧರಿಸತಕ್ಕ ಯೌವನಸ್ಥರು ಮೊದಲುಗೊಂಡು ಎಲ್ಲರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು. ಮೋವಾಬ್ಯರು ಉದಯಕಾಲದಲ್ಲಿ ಎದ್ದು ಆ ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ಆ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು. ಆಗ ಅವರು--ಇದು ರಕ್ತವೇ; ಆ ಅರಸುಗಳು ತಮ್ಮ ತಮ್ಮೊ ಳಗೆ ಜಗಳವಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ; ಈಗ ಮೋವಾಬ್ಯರೇ, ಕೊಳ್ಳೆಗೆ ಬನ್ನಿರಿ ಎಂದು ಹೇಳಿ ಕೊಂಡರು. ಅವರು ಇಸ್ರಾಯೇಲಿನ ದಂಡಿಗೆ ಬಂದಾಗ ಇಸ್ರಾಯೇಲ್ಯರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಹೊಡೆದು ಮೋವಾಬ್ಯರನ್ನು ಅವರ ದೇಶದ ವರೆಗೂ ಹೊಡೆಯುತ್ತಾ ಬಂದರು. ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು. ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು. ಆಗ ಅವನು ತನಗೆ ಬದಲಾಗಿ ಆಳುವದಕ್ಕಿರುವ ತನ್ನ ಹಿರಿಯ ಮಗನನ್ನು ತಕ್ಕೊಂಡು ಅವನನ್ನು ಗೋಡೆಯ ಮೇಲೆ ದಹನ ಬಲಿಯಾಗಿ ಅರ್ಪಿಸಿದನು; ಇದರಿಂದ ಇಸ್ರಾ ಯೇಲ್ಯರ ಮೇಲೆ ಅವರಿಗೆ ಬಹು ರೌದ್ರ ಉಂಟಾದ ದರಿಂದ ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹಿಂತಿರುಗಿ ಹೋದರು.
- Numbers 21:29 ಅರಣ್ಯಕಾಂಡ 21:29ಮೋವಾಬೇ, ನಿನಗೆ ಅಯ್ಯೋ! ಓ ಕೇಮೋಷಿನ ಜನವೇ, ನಿಮಗೆ ದುರ್ಗತಿ ಉಂಟಾಯಿತಲ್ಲಾ; ಅವನು ತಪ್ಪಿಸಿಕೊಂಡ ತನ್ನ ಕುಮಾರ ಕುಮಾರ್ತೆಯರನ್ನು ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಕೊಟ್ಟನು.
- Numbers 24:1–25 ಅರಣ್ಯಕಾಂಡ 24:1–25ಆದರೆ ಇಸ್ರಾಯೇಲನ್ನು ಆಶೀರ್ವದಿಸು ವದಕ್ಕೆ ಕರ್ತನ ದೃಷ್ಟಿಗೆ ಒಳ್ಳೇದೆಂದು ಬಿಳಾಮನು ನೋಡಿದಾಗ ಅವನು ಮುಂಚಿನ ಹಾಗೆ ಶಕುನಗಳನ್ನು ಕಂಡುಕೊಳ್ಳುವದಕ್ಕೆ ಹೋಗದೆ ತನ್ನ ಮುಖವನ್ನು ಅರಣ್ಯದ ಕಡೆಗೆ ತಿರುಗಿಸಿಕೊಂಡನು. ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು. ಆಗ ಅವನು ಸಾಮ್ಯರೂಪ ವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ತೆರೆದ ಕಣ್ಣುಳ್ಳ ಪುರುಷನು ಹೇಳಿದ್ದು. ದೇವರ ಮಾತು ಗಳನ್ನು ಕೇಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು-- ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ! ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ. ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು. ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು. ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು. ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ. ಈಗ ನಿನ್ನ ಸ್ಥಳಕ್ಕೆ ಓಡಿಹೋಗು; ನಾನು ನಿನ್ನನ್ನು ಬಹು ಘನಪಡಿಸ ಬೇಕೆಂದು ಅಂದುಕೊಂಡೆನು; ಆದರೆ ಇಗೋ, ಕರ್ತನು ನಿನಗೆ ಘನಬಾರದಂತೆ ತಡೆದಿದ್ದಾನೆ ಅಂದನು. ಬಿಳಾಮನು ಬಾಲಾಕನಿಗೆ--ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ-- ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿ ಬಂಗಾರಗಳನ್ನು ಕೊಟ್ಟರೂ ನನ್ನ ಹೃದಯದಿಂದ ಒಳ್ಳೇದನ್ನಾದರೂ ಕೆಟ್ಟದ್ದನ್ನಾದರೂ ಮಾಡುವದಕ್ಕೆ ಕರ್ತನ ಆಜ್ಞೆಯನ್ನು ವಿಾರಲಾರೆನು; ಕರ್ತನು ಏನು ಹೇಳುತ್ತಾನೋ ಅದನ್ನು ಹೇಳುವೆನೆಂದು ನಾನು ಹೇಳಲಿಲ್ಲವೋ? ಇಗೋ, ನನ್ನ ಜನರ ಬಳಿಗೆ ಹೋಗುತ್ತೇನೆ; ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು. ಆಗ ಅವನು ಸಾಮ್ಯ ರೂಪವಾಗಿ--ಬೆಯೋರನ ಮಗನಾದ ಬಿಳಾಮನು ಹೇಳಿದ್ದು--ತೆರೆದ ಕಣ್ಣುಳ್ಳ ಮನುಷ್ಯನು ಹೇಳಿದ್ದು. ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು-- ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು. ಎದೋಮು ಸ್ವಾಸ್ತ್ಯವಾಗುವದು; ಸೇಯಾರು ತನ್ನ ಶತ್ರುಗಳಿಗೆ ಸ್ವಾಸ್ತ್ಯವಾಗುವದು; ಮತ್ತು ಇಸ್ರಾಯೇಲು ಪರಾಕ್ರಮ ಕಾರ್ಯ ಮಾಡುವದು, ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು; ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು ಎಂದು ಹೇಳಿದನು. ತರುವಾಯ ಅವನು ಅಮಾಲೇಕ್ಯರನ್ನು ನೋಡಿ ಸಾಮ್ಯರೂಪವಾಗಿ--ಜನಾಂಗಗಳಲ್ಲಿ ಮೊದಲನೆ ಯವನೇ ಅಮಾಲೇಕ್ಯನು; ಆದರೆ ಅವನ ಅಂತ್ಯವು ಸದಾಕಾಲಕ್ಕೆ ನಾಶವಾಗುವದು ಅಂದನು. ಬಳಿಕ ಕೇನ್ಯರನ್ನು ಅವನು ನೋಡಿ ಸಾಮ್ಯರೂಪವಾಗಿ--ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ. ಆದಾಗ್ಯೂ ಅಶ್ಶೂರ್ಯರನು ನಿನ್ನನ್ನು ಸೆರೆಯಾಗಿ ಒಯ್ಯುವ ವರೆಗೆ ಕೇನ್ಯನು ಹಾಳಾಗುವನು ಅಂದನು. ಇದಲ್ಲದೆ ಅವನು ಸಾಮ್ಯರೂಪವಾಗಿಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು? ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು. ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರಿಗಿ ಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.