Genesis · chapter 19 · verse 38
Genesis 19:38 in Kannada
ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Chikkavalu saha maganannu hettu avanige benammi endu hesarittalu. Indina varegoo ammonana makkalige ivane tande.
Genesis 19:38 in English
- King James Version (KJV)
- And the younger, she also bare a son, and called his name Ben-ammi: the same [is] the father of the children of Ammon unto this day.
- World English Bible (WEB)
- The younger also bore a son, and called his name Ben Ammi. He is the father of the children of Ammon to this day.
- American Standard Version (ASV)
- And the younger, she also bare a son, and called his name Ben-ammi: the same is the father of the children of Ammon unto this day.
- Bible in Basic English (BBE)
- And the younger had a son and gave him the name Ben-ammi: from him come the children of Ammon to this day.
- Darby Translation (DBY)
- And the younger, she also bore a son, and called his name Ben-ammi; the same is the father of the children of Ammon to this day.
- Webster's Bible (WBS)
- And the younger, she also bore a son, and called his name Ben-ammi: the same [is] the father of the children of Ammon to this day.
- Young's Literal Translation (YLT)
- as to the younger, she also hath born a son, and calleth his name Ben-Ammi: he [is] father of the Beni-Ammon unto this day.
Read in context
- 36ಈ ಪ್ರಕಾರ ಲೋಟನ ಇಬ್ಬರು ಕುಮಾರ್ತೆಯರು ತಮ್ಮ ತಂದೆಯಿಂದ ಗರ್ಭಿಣಿಯಾದರು.
- 37ಮೊದಲು ಹುಟ್ಟಿದವಳು ಮಗನನ್ನು ಹೆತ್ತು ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಇಂದಿನ ವರೆಗೂ ಮೋವಾಬ್ಯರಿಗೆ ಇವನೇ ತಂದೆ.ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
- 38ಚಿಕ್ಕವಳು ಸಹ ಮಗನನ್ನು ಹೆತ್ತು ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಇಂದಿನ ವರೆಗೂ ಅಮ್ಮೋನನ ಮಕ್ಕಳಿಗೆ ಇವನೇ ತಂದೆ.
Cross references
- Deuteronomy 2:19 ಧರ್ಮೋಪದೇಶಕಾಂಡ 2:19ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
- Deuteronomy 2:9 ಧರ್ಮೋಪದೇಶಕಾಂಡ 2:9ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
- 2 Samuel 10:1–19 2 ಸಮುವೇಲನು 10:1–19ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು. ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು. ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು. ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು. ದಾವೀದನು ಅದನ್ನು ಕೇಳಿದಾಗ ಅವನು ಯೋವಾಬನನ್ನೂ ಪರಾ ಕ್ರಮಶಾಲಿಗಳಾದ ಸಕಲ ಶೂರಸೈನಿಕರನ್ನು ಕಳುಹಿ ಸಿದನು. ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು. ಯೋವಾಬನು ಯುದ್ಧದ ಮುಖವು ಹಿಂದೆ ಮುಂದೆ ತನಗೆ ಎದುರಾ ಗಿರುವದನ್ನು ನೋಡಿದಾಗ ಅವನು ಇಸ್ರಾಯೇಲಿನ ಆಯಲ್ಪಟ್ಟ ಎಲ್ಲಾ ಜನರನ್ನು ಆದುಕೊಂಡು ಅರಾಮ್ಯ ರಿಗೆ ಎದುರಾಗಿ ವ್ಯೂಹಕಟ್ಟಿದನು. ಆದರೆ ಮಿಕ್ಕಾದ ವರು ಅಮ್ಮೋನನ ಮಕ್ಕಳಿಗೆದುರಾಗಿ ವ್ಯೂಹಕಟ್ಟುವ ಹಾಗೆ ಅವರನ್ನು ತನ್ನ ಸಹೋದರನಾದ ಅಬೀಷೈಯ ಕೈಯಲ್ಲಿ ಒಪ್ಪಿಸಿಕೊಟ್ಟು-- ಅರಾಮ್ಯರು ನನಗಿಂತ ಬಲವುಳ್ಳವರಾದರೆ ನೀನು ನನಗೆ ಸಹಾಯ ಕೊಡ ಬೇಕು; ಅಮ್ಮೋನನ ಮಕ್ಕಳು ನಿನಗಿಂತ ಬಲವುಳ್ಳವ ರಾದರೆ ನಾನು ಬಂದು ನಿನಗೆ ಸಹಾಯ ಮಾಡುವೆನು. ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು. ಆಗ ಯೋವಾಬನೂ ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ಯುದ್ಧ ಮಾಡುವದಕ್ಕೆ ಸವಿಾಪಕ್ಕೆ ಬಂದರು. ಅವರು ಅವನ ಎದುರಿನಿಂದ ಓಡಿಹೋದರು. ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನನ ಮಕ್ಕಳು ನೋಡಿದಾಗ ಅವರು ಅಬೀಷೈಯ ಎದುರಿನಿಂದ ಓಡಿ ಪಟ್ಟಣ ದೊಳಗೆ ಹೊಕ್ಕರು. ಆಗ ಯೋವಾಬನು ಅಮ್ಮೊನನ ಮಕ್ಕಳನ್ನು ಬಿಟ್ಟು ತಿರುಗಿ ಯೆರೂಸಲೇಮಿಗೆ ಬಂದನು. ಅರಾಮ್ಯರು ತಾವು ಇಸ್ರಾಯೇಲ್ಯರ ಮುಂದೆ ಹೊಡೆಯಲ್ಪಟ್ಟದ್ದನ್ನು ಕಂಡಾಗ ಅವರು ಒಟ್ಟಾಗಿ ಕೂಡಿದರು. ಇದಲ್ಲದೆ ಹದದೆಜೆರನು ನದಿಗೆ ಆಚೆ ಇದ್ದ ಅರಾಮ್ಯರನ್ನು ಕರೇಕಳುಹಿಸಿದ್ದರಿಂದ ಅವರು ಹೇಲಾಮಿಗೆ ಬಂದರು; ಹದದೆಜೆರನ ಸೈನ್ಯಕ್ಕೆ ಅಧಿ ಪತಿಯಾದ ಶೋಬಕನು ಅವರ ಮುಂದೆ ನಡೆದನು. ಅದು ದಾವೀದನಿಗೆ ತಿಳಿಸಲ್ಪಟ್ಟಾಗ ಅವನು ಇಸ್ರಾ ಯೇಲ್ಯರೆಲ್ಲರನ್ನು ಕೂಡಿಸಿಕೊಂಡು ಯೊರ್ದನನ್ನು ದಾಟಿ ಹೇಲಾಮಿಗೆ ಬಂದನು. ಅರಾಮ್ಯರು ದಾವೀದ ನಿಗೆದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಆಗ ಅರಾಮ್ಯರು ಇಸ್ರಾಯೇಲ್ಯರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ಮಂದಿ ಸಾರಥಿಗಳನ್ನೂ ನಾಲ್ವತ್ತು ಸಾವಿರ ಕುದುರೆ ರಾಹುತ ರನ್ನೂ ಕೊಂದು ಅವರ ಸೈನ್ಯದ ಯಜಮಾನನಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಸತ್ತನು.ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು. ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
- Nehemiah 13:1–3 ನೆಹೆಮೀಯ 13:1–3ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು. ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು. ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 1 Samuel 11:1–15 1 ಸಮುವೇಲನು 11:1–15ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು. ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರ ಕಿವಿಗಳಲ್ಲಿ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಗಟ್ಟಿಯಾಗಿ ಅತ್ತರು. ಇಗೋ; ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು--ಜನರು ಅಳುವದೇನು ಎಂದು ಕೇಳಿದನು. ಆಗ ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು. ಸೌಲನು ಈ ಮಾತು ಗಳನ್ನು ಕೇಳಿದಾಗ ದೇವರ ಆತ್ಮನು ಅವನ ಮೇಲೆ ಬಂದನು; ಅವನು ಬಹು ಕೋಪೋದ್ರೇಕಗೊಂಡವ ನಾಗಿ ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ತುಂಡು ತುಂಡಾಗಿ ಕತ್ತರಿಸಿ ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿಸೌಲನ ಹಿಂದೆಯೂ ಸಮುವೇಲನ ಹಿಂದೆಯೂ ಹೊರಡದವನ ಪಶುಗಳಿಗೆ ಈ ಪ್ರಕಾರ ಮಾಡಲ್ಪಡು ವದೆಂದು ಹೇಳಿಸಿದನು. ಆಗ ಕರ್ತನಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ ಅವರು ಒಂದೇ ಮನಸ್ಸಿನಿಂದ ಹಾಗೆಯೇ ಹೊರಟು ಬಂದರು. ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು. ಆಗ ಅವರು ಬಂದ ದೂತರಿಗೆ--ನೀವು ಗಿಲ್ಯಾದಿನ ಲ್ಲಿರುವ ಯಾಬೇಷಿನ ಜನರಿಗೆ--ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವದು ಅಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ ಅವರು ಸಂತೋಷಪಟ್ಟರು. ತರುವಾಯ ಯಾಬೇಷಿನ ಜನರು ನಾಹಾಷನಿಗೆ--ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನಿನಗೆ ಒಳ್ಳೇದಾಗಿ ತೋರುವದನ್ನೆಲ್ಲಾ ನಮಗೆ ಮಾಡು ಅಂದರು. ಆದರೆ ಮಾರನೇ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ ಬೆಳಗಿನ ಜಾವ ದಂಡಿನಲ್ಲಿ ಬಂದು ಬಿಸಿಲೇರುವವರೆಗೆ ಅಮ್ಮೋನಿಯ ರನ್ನು ಸಂಹರಿಸಿದನು. ಉಳಿದವರು ಚದರಿಹೋದರು; ಅವರಲ್ಲಿ ಒಬ್ಬರೂ ಕೂಡ ಇರಲಿಲ್ಲ. ಆಗ ಜನರು ಸಮುವೇಲನಿಗೆ--ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ; ಅವರನ್ನು ಕೊಂದು ಹಾಕುತ್ತೇವೆ ಅಂದರು. ಆಗ ಸೌಲನು--ಕರ್ತನು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನುಂಟುಮಾಡಿ ದ್ದರಿಂದ ಈ ಹೊತ್ತು ಯಾವನೂ ಕೊಲ್ಲಲ್ಪಡಬಾರದು ಅಂದನು. ಆಗ ಸಮುವೇಲನು ಜನರಿಗೆ--ನಾವು ಗಿಲ್ಗಾಲಿಗೆ ಹೋಗಿ ಅಲ್ಲಿ ರಾಜ್ಯವನ್ನು ನೂತನಪಡಿ ಸೋಣ ಬನ್ನಿರಿ ಅಂದನು.ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು. ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ ಆ ಸ್ಥಳದಲ್ಲಿ ಕರ್ತನ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ ಕರ್ತನಿಗೆ ಸಮಾ ಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲ್ಯರೂ ಬಹಳವಾಗಿ ಸಂತೋಷ ಪಟ್ಟರು.
- Nehemiah 13:23–28 ನೆಹೆಮೀಯ 13:23–28ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು. ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು; ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು. ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು. ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Psalm 83:4–8 ಕೀರ್ತನೆಗಳು 83:4–8ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Deuteronomy 23:3 ಧರ್ಮೋಪದೇಶಕಾಂಡ 23:3ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು.
- Judges 10:6–40 ನ್ಯಾಯಸ್ಥಾಪಕರು 10:6–40ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು. ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು. ಆ ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು. ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದನಿಗೆ ಬೆನ್ಯಾವಿಾನರಿಗೆ ವಿರೋಧವಾ ಗಿಯೂ ಎಫ್ರಾಯಾಮ್ ಮನೆಗೆ ವಿರೋಧವಾಗಿಯೂ ಯುದ್ಧಮಾಡುವದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹುಸಂಕಟವಾಯಿತು. ಆಗ ಇಸ್ರಾಯೇಲ್ ಮಕ್ಕಳು ಕರ್ತನಿಗೆ ಕೂಗಿ--ನಮ್ಮ ದೇವರನ್ನು ಬಿಟ್ಟು ಬಾಳನನ್ನು ಸೇವಿಸಿದ್ದರಿಂದ ನಾವು ನಿನಗೆ ವಿರೋಧವಾಗಿ ಪಾಪ ಮಾಡಿದೆವು ಅಂದರು. ಕರ್ತನು ಇಸ್ರಾಯೇಲ್ ಮಕ್ಕಳಿಗೆ--ನಾನು ನಿಮ್ಮನ್ನು ಐಗುಪ್ತ್ಯರ ಕೈಯೊಳಗಿಂದಲೂ ಅಮೋರಿಯರ ಕೈಯೊ ಳಗಿಂದಲೂ ಅಮ್ಮೋನನ ಮಕ್ಕಳ ಕೈಯೊಳಗಿಂದಲೂ ಫಿಲಿಷ್ಟಿಯರ ಕೈಯೊಳಗಿಂದಲೂ ತಪ್ಪಿಸಿಬಿಡಲಿಲ್ಲವೋ? ಇದಲ್ಲದೆ ಚೀದೋನ್ಯರೂ ಅಮಾಲೇಕ್ಯರೂ ಮಾವೋನ್ಯರೂ ನಿಮ್ಮನ್ನು ಬಾಧೆಪಡಿಸುವಾಗ ನೀವು ನನಗೆ ಕೂಗಿದ್ದರಿಂದ ನಾನು ನಿಮ್ಮನ್ನು ಅವರ ಕೈಗೆ ತಪ್ಪಿಸಿ ರಕ್ಷಿಸಿದೆನು. ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ. ನೀವು ಹೋಗಿ ನಿಮಗೆ ನೀವೇ ಆರಿಸಿಕೊಂಡ ದೇವರುಗಳಿಗೆ ಕೂಗಿರಿ; ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ ಅಂದನು. ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು. ಅಮ್ಮೋನನ ಮಕ್ಕಳು ಏಕವಾಗಿ ಕೂಡಿಕೊಂಡು ಗಿಲ್ಯಾದಿನಲ್ಲಿ ದಂಡಿಳಿದರು. ಆದರೆ ಇಸ್ರಾಯೇಲ್ ಮಕ್ಕಳು ಏಕವಾಗಿ ಕೂಡಿ ಮಿಚ್ಪೆಯಲ್ಲಿ ದಂಡಿಳಿದರು.ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು. ಆಗ ಗಿಲ್ಯಾದಿನ ಜನರೂ ಪ್ರಧಾನರೂ ಒಬ್ಬರಿ ಗೊಬ್ಬರು--ಯಾವನು ಅಮ್ಮೋನನ ಮಕ್ಕಳ ಮೇಲೆ ಯುದ್ಧಮಾಡಲಾರಂಭಿಸುವನೋ ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ನಾಯಕನಾಗಿರುವನು ಎಂದು ಮಾತ ನಾಡಿಕೊಂಡರು.
- Isaiah 11:14 ಯೆಶಾಯ 11:14ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.