Genesis · chapter 19 · verse 4
Genesis 19:4 in Kannada
ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
Aadare avaru malaguvadakkinta munche sodom pattanada janaru, hudugaru modalugondu mudukara varege janarellaa pratiyondu mooleyinda koodi maneyannu suttikondaru.
Genesis 19:4 in English
- King James Version (KJV)
- But before they lay down, the men of the city, [even] the men of Sodom, compassed the house round, both old and young, all the people from every quarter:
- World English Bible (WEB)
- But before they lay down, the men of the city, the men of Sodom, surrounded the house, both young and old, all the people from every quarter.
- American Standard Version (ASV)
- But before they lay down, the men of the city, [even] the men of Sodom, compassed the house round, both young and old, all the people from every quarter;
- Bible in Basic English (BBE)
- But before they had gone to bed, the men of the town, all the men of Sodom, came round the house, young and old, from every part of the town;
- Darby Translation (DBY)
- Before they lay down, the men of the city, the men of Sodom, surrounded the house, from the youngest to the oldest — all the people from every quarter.
- Webster's Bible (WBS)
- But before they lay down, the men of the city, [even] the men of Sodom, surrounded the house, both old and young, all the people from every quarter:
- Young's Literal Translation (YLT)
- Before they lie down, the men of the city — men of Sodom — have come round about against the house, from young even unto aged, all the people from the extremity;
Read in context
- 2ಇಗೋ, ಪ್ರಭುಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ಇಳುಕೊಂಡು ರಾತ್ರಿ ಕಳೆಯಿರಿ; ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು ಎಂದು ಬೇಡಿಕೊಂಡನು. ಅದಕ್ಕೆ ಅವರು--ಹಾಗಲ್ಲ; ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ ಅಂದರು.
- 3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- 4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
- 5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- 6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
Cross references
- Genesis 13:13 ಆದಿಕಾಂಡ 13:13ಆದರೆ ಸೊದೋಮಿನ ಮನುಷ್ಯರು ದುಷ್ಟರೂ ಕರ್ತನ ದೃಷ್ಟಿಯಲ್ಲಿ ಬಹು ಪಾಪಿಷ್ಠರೂ ಆಗಿದ್ದರು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Genesis 18:20 ಆದಿಕಾಂಡ 18:20ಕರ್ತನು--ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿರುವದರಿಂದಲೂ ಅವರ ಪಾಪವು ಘೋರವಾಗಿರುವದರಿಂದಲೂ
- Exodus 23:2 ವಿಮೋಚನಕಾಂಡ 23:2ಕೆಟ್ಟದ್ದನ್ನು ಮಾಡು ವಂತೆ ಬಹುಮಂದಿಯನ್ನು ಹಿಂಬಾಲಿಸಬೇಡ; ಇಲ್ಲವೆ ಬಹುಮಂದಿಯೊಂದಿಗೆ ನ್ಯಾಯಕ್ಕೆ ಪ್ರತಿಕೂಲವಾಗಿ ವ್ಯಾಜ್ಯದಲ್ಲಿ ಉತ್ತರಕೊಡಬೇಡ.
- Proverbs 6:18 ಜ್ಞಾನೋಕ್ತಿಗಳು 6:18ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,
- Jeremiah 5:1–6 ಯೆರೆಮೀಯ 5:1–6ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು. ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ. ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ. ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ. ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Exodus 16:2 ವಿಮೋಚನಕಾಂಡ 16:2ಆಗ ಇಸ್ರಾಯೇಲ್ ಮಕ್ಕಳ ಸಭೆಯೆಲ್ಲಾ ಅರಣ್ಯದಲ್ಲಿ ಮೋಶೆಗೂ ಆರೋನನಿಗೂ ವಿರೋಧ ವಾಗಿ ಗುಣುಗುಟ್ಟಿತು.
- Matthew 27:20–25 ಮತ್ತಾಯನು 27:20–25ಆದರೆ ಪ್ರಧಾನ ಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸು ವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹ ವನ್ನು ಒಡಂಬಡಿಸಿದರು. ಅಧಿಪತಿಯು ಪ್ರತ್ಯುತ್ತರ ವಾಗಿ ಅವರಿಗೆ--ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕನ್ನುತ್ತೀರಿ ಅನ್ನಲು ಅವರು--ಬರಬ್ಬನನ್ನು ಅಂದರು. ಪಿಲಾತನು ಅವರಿಗೆ--ಹಾಗಾದರೆ ಕ್ರಿಸ್ತನನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ ಅನ್ನಲು ಅವರೆಲ್ಲರೂ--ಅವನನ್ನು ಶಿಲುಬೆಗೆ ಹಾಕಿಸು ಎಂದು ಅವನಿಗೆ ಹೇಳಿದರು. ಆಗ ಅಧಿಪತಿಯು--ಯಾಕೆ? ಆತನು ಕೆಟ್ಟದ್ದೇನು ಮಾಡಿ ದ್ದಾನೆ ಅಂದನು. ಆದರೆ ಅವರು--ಆತನನ್ನು ಶಿಲುಬೆಗೆ ಹಾಕಿಸು ಎಂದು ಹೆಚ್ಚಾಗಿ ಕೂಗಿಕೊಂಡರು. ಪಿಲಾ ತನು ತನ್ನ ಯತ್ನ ನಡೆಯಲಿಲ್ಲ, ಗದ್ದಲವೇ ಹೆಚ್ಚಾಗುತ್ತದೆ ಎಂದು ನೋಡಿ ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು--ಈ ನೀತಿವಂತನ ರಕ್ತಕ್ಕೆ ನಾನು ನಿರಪರಾಧಿ, ಅದನ್ನು ನೀವೇ ನೋಡಿಕೊಳ್ಳಿರಿ ಅಂದನು. ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
- Romans 3:15 ರೋಮಾಪುರದವರಿಗೆ 3:15ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Micah 7:3 ಮೀಕ 7:3ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.