Genesis · chapter 19 · verse 5
Genesis 19:5 in Kannada
ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
Avaru lotanannu karedu ee raatriyalli ninna balige banda manushyaru elli? Avarannu namma balige horage tegedukondu baa; naavu avarannu ariyabeku endu avanige helidaru.
Genesis 19:5 in English
- King James Version (KJV)
- And they called unto Lot, and said unto him, Where [are] the men which came in to thee this night? bring them out unto us, that we may know them.
- World English Bible (WEB)
- They called to Lot, and said to him, “Where are the men who came in to you this night? Bring them out to us, that we may have sex with them.”
- American Standard Version (ASV)
- and they called unto Lot, and said unto him, Where are the men that came in to thee this night? bring them out unto us, that we may know them.
- Bible in Basic English (BBE)
- And crying out to Lot, they said, Where are the men who came to your house this night? Send them out to us, so that we may take our pleasure with them.
- Darby Translation (DBY)
- And they called to Lot, and said to him, Where are the men that have come in to thee to-night? bring them out to us that we may know them.
- Webster's Bible (WBS)
- And they called to Lot, and said to him, Where [are] the men who came in to thee this night? bring them out to us, that we may know them.
- Young's Literal Translation (YLT)
- and they call unto Lot and say to him, 'Where [are] the men who have come in unto thee to-night? bring them out unto us, and we know them.'
Read in context
- 3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- 4ಆದರೆ ಅವರು ಮಲಗುವದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರ ವರೆಗೆ ಜನರೆಲ್ಲಾ ಪ್ರತಿಯೊಂದು ಮೂಲೆಯಿಂದ ಕೂಡಿ ಮನೆಯನ್ನು ಸುತ್ತಿಕೊಂಡರು.
- 5ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
- 6ಆಗ ಲೋಟನು ಅವರ ಬಳಿಗೆ ಹೊರಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು--
- 7ನನ್ನ ಸಹೋದರರೇ, ಈ ಅತಿದುಷ್ಟ ತನವನ್ನು ಮಾಡಬೇಡಿರಿ.
Cross references
- Judges 19:22 ನ್ಯಾಯಸ್ಥಾಪಕರು 19:22ಅವರು ತಮ್ಮ ಹೃದಯವನ್ನು ಸಂತೋಷ ಪಡಿಸಿ ಕೊಳ್ಳುತ್ತಿರುವ ವೇಳೆಯಲ್ಲಿ ಇಗೋ, ಆ ಪಟ್ಟಣದ ಮನುಷ್ಯರಲ್ಲಿ ಬೆಲಿಯಾಳನ ಕೆಲವು ಕುಮಾರರು ಆ ಮನೆಯನ್ನು ಸುತ್ತಿಕೊಂಡು ಕದವನ್ನು ಬಡಿದು ಆ ಮನೆಯ ಯಜಮಾನನಾದ ಮುದುಕನಿಗೆ--ನಿನ್ನ ಮನೆಯಲ್ಲಿ ಬಂದ ಆ ಮನುಷ್ಯನನ್ನು ನಾವು ತಿಳು ಕೊಳ್ಳುವ ಹಾಗೆ, ಅವನನ್ನು ಹೊರಗೆ ತಾ ಎಂದು ಹೇಳಿದರು.
- Isaiah 3:9 ಯೆಶಾಯ 3:9ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Romans 1:26–27 ರೋಮಾಪುರದವರಿಗೆ 1:26–27ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.
- Leviticus 18:22 ಯಾಜಕಕಾಂಡ 18:22ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.
- Ezekiel 16:51 ಯೆಹೆಜ್ಕೇಲನು 16:51ಸಮಾರ್ಯವೆಂಬಾಕೆಯು ಸಹ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದಿ, ನೀನು ಮಾಡಿದ ಲೆಕ್ಕವಿಲ್ಲ ದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
- 1 Corinthians 6:9 1 ಕೊರಿಂಥದವರಿಗೆ 6:9ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು
- Matthew 11:23–24 ಮತ್ತಾಯನು 11:23–24ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- 1 Timothy 1:10 1 ತಿಮೊಥೆಯನಿಗೆ 1:10ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
- Ezekiel 16:49 ಯೆಹೆಜ್ಕೇಲನು 16:49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
- Romans 1:23–24 ರೋಮಾಪುರದವರಿಗೆ 1:23–24ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;