Genesis · chapter 2 · verse 24
Genesis 2:24 in Kannada
ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Aadadarinda manushyanu tanna tandetaayigalannu bittu tanna hendatiyannu serikolluvanu; avaru onde shareera vaagiruvaru.idallade aa manushyanu avana hendatiyu ibbaru bettaleyaagiddaroo naachikollalilla.
Genesis 2:24 in English
- King James Version (KJV)
- Therefore shall a man leave his father and his mother, and shall cleave unto his wife: and they shall be one flesh.
- World English Bible (WEB)
- Therefore a man will leave his father and his mother, and will join with his wife, and they will be one flesh.
- American Standard Version (ASV)
- Therefore shall a man leave his father and his mother, and shall cleave unto his wife: and they shall be one flesh.
- Bible in Basic English (BBE)
- For this cause will a man go away from his father and his mother and be joined to his wife; and they will be one flesh.
- Darby Translation (DBY)
- Therefore shall a man leave his father and his mother, and cleave to his wife; and they shall become one flesh.
- Webster's Bible (WBS)
- Therefore shall a man leave his father and his mother, and shall cleave to his wife: and they shall be one flesh.
- Young's Literal Translation (YLT)
- therefore doth a man leave his father and his mother, and hath cleaved unto his wife, and they have become one flesh.
Read in context
- 22ಕರ್ತನಾದ ದೇವರು ಮನುಷ್ಯನಿಂದ ತಕ್ಕೊಂಡ ಪಕ್ಕೆಯ ಎಲು ಬನ್ನು ಸ್ತ್ರೀಯಾಗಮಾಡಿ ಅವಳನ್ನು ಅವನ ಬಳಿಗೆ ತಂದನು.
- 23ಆಗ ಆದಾಮನು--ಇವಳು ಈಗ ನನ್ನ ಎಲುಬುಗಳ ಎಲುಬೂ ನನ್ನ ಮಾಂಸದ ಮಾಂಸವೂ ಆಗಿದ್ದಾಳೆ; ಇವಳು ನರನಿಂದ ತೆಗೆಯ ಲ್ಪಟ್ಟದ್ದರಿಂದ ನಾರಿಯೆಂದು ಕರೆಯಲ್ಪಡುವಳು ಅಂದನು.
- 24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- 25ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
Cross references
- Matthew 19:3–9 ಮತ್ತಾಯನು 19:3–9ಆಗ ಫರಿಸಾಯರು ಸಹ ಆತನನ್ನು ಶೋಧಿಸುವದ ಕ್ಕಾಗಿ ಆತನ ಬಳಿಗೆ ಬಂದು -- ಒಬ್ಬ ಮನುಷ್ಯನು ಯಾವ ಕಾರಣದಿಂದಲಾದರೂ ತನ್ನ ಹೆಂಡತಿಯನ್ನು ಬಿಟ್ಟು ಬಿಡುವದು ಅವನಿಗೆ ನ್ಯಾಯವೋ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ-- ಆದಿಯಲ್ಲಿ ಉಂಟುಮಾಡಿದಾತನು ಅವರನ್ನು ಗಂಡು ಹೆಣ್ಣಾಗಿ ಉಂಟುಮಾಡಿದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಹೀಗೆ ಅವರಿಬ್ಬರೂ ಒಂದೇ ಶರೀರ ವಾಗಿರುವರು ಎಂದು ಹೇಳಿದ್ದನ್ನು ನೀವು ಓದ ಲಿಲ್ಲವೋ? ಆದದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿ ಸಿದ್ದನ್ನು ಮನುಷ್ಯನು ಅಗಲಿಸಬಾರದು ಎಂದು ಹೇಳಿ ದನು. ಅದಕ್ಕೆ ಅವರು ಆತನಿಗೆ--ಹೀಗಾದರೆ ತ್ಯಾಗ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಯಾಕೆ ಅಪ್ಪಣೆಕೊಟ್ಟನು ಎಂದು ಕೇಳಿದರು. ಆತನು ಅವರಿಗೆ--ಮೋಶೆಯು ನಿಮ್ಮ ಹೃದಯದ ಕಾಠಿಣ್ಯತೆಯ ದೆಸೆಯಿಂದ ನಿಮ್ಮ ಹೆಂಡತಿ ಯರನ್ನು ಬಿಟ್ಟುಬಿಡುವದಕ್ಕೆ ಅಪ್ಪಣೆಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ ಅಂದನು. ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.
- Ephesians 5:28–31 ಎಫೆಸದವರಿಗೆ 5:28–31ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು.
- Mark 10:6–12 ಮಾರ್ಕನು 10:6–12ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು ಅವರನ್ನು ಗಂಡು ಹೆಣ್ಣಾಗಿ ಮಾಡಿದನು. ಈ ಕಾರಣದಿಂದ ಒಬ್ಬ ಮನುಷ್ಯನು ತನ್ನ ತಂದೆಯನ್ನೂ ತಾಯಿಯನ್ನೂ ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು; ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸದಿರಲಿ ಅಂದನು. ಆತನ ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಆತನಿಗೆ ತಿರಿಗಿ ಕೇಳಿದರು. ಅದಕ್ಕೆ ಆತನು ಅವರಿಗೆ-- ಯಾವನಾದರೂ ತನ್ನ ಹೆಂಡತಿ ಯನ್ನು ಬಿಟ್ಟು ಬಿಟ್ಟು ಇನ್ನೊಬ್ಬಳನ್ನು ಮದುವೆಯಾದರೆ ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿ ದ್ದಾನೆ. ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ ಅಂದನು.
- Romans 7:2 ರೋಮಾಪುರದವರಿಗೆ 7:2ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ.
- 1 Peter 3:1–7 1 ಪೇತ್ರನು 3:1–7ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ ನಿಮ್ಮ ನಿರ್ಮಲವಾದ ಮತ್ತು ಭಯಭರಿತವಾದ ನಡತೆಯನ್ನು ಅವರು ನೋಡಲಿ. ಜಡೆ ಹೆಣೆದುಕೊ ಳ್ಳುವದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವದೂ ಇಲ್ಲವೆ ಉಡಿಗೆಗಳನ್ನು ಧರಿಸಿಕೊಳ್ಳುವದೂ ಈ ಹೊರ ಗಣ ಅಲಂಕಾರವು ಬೇಡ. ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ. ಪೂರ್ವಕಾಲದಲ್ಲಿ ದೇವರ ಮೇಲೆ ನಂಬಿಕೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಆಲಂಕರಿಸಿಕೊಂಡರು; ಅವರು ತಮ್ಮ ತಮ್ಮ ಗಂಡಂ ದಿರಿಗೆ ಅಧೀನರಾಗಿದ್ದರು. ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ; ನೀವು ಒಳ್ಳೇದನ್ನು ಮಾಡುವದಾದರೆ ಯಾವ ಭೀತಿಗೂ ಗಾಬರಿ ಪಡುವದಿಲ್ಲ. ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
- 1 Corinthians 7:2–4 1 ಕೊರಿಂಥದವರಿಗೆ 7:2–4ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ. ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರ ವಿಲ್ಲ; ಆದರೆ ಗಂಡನಿಗುಂಟು. ಹಾಗೆಯೇ ಪುರುಷನಿಗೆ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ; ಆದರೆ ಹೆಂಡತಿಗುಂಟು.
- 1 Corinthians 6:16–17 1 ಕೊರಿಂಥದವರಿಗೆ 6:16–17ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ. ಆದರೆ ಕರ್ತನನ್ನು ಸೇರಿಕೊಳ್ಳುವವನು ಒಂದೇ ಆತ್ಮವಾಗಿದ್ದಾನೆ.
- Proverbs 31:10 ಜ್ಞಾನೋಕ್ತಿಗಳು 31:10ಗುಣವತಿಯಾದ ಸ್ತ್ರೀಯನ್ನು ಯಾವನು ಕಂಡು ಕೊಂಡಾನು? ಅವಳ ಕ್ರಯ ಹವಳಕ್ಕಿಂತಲೂ ಅಮೂ ಲ್ಯವೇ.
- Malachi 2:14–16 ಮಲಾಕಿಯ 2:14–16ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- 1 Corinthians 7:10–11 1 ಕೊರಿಂಥದವರಿಗೆ 7:10–11ಮದುವೆ ಮಾಡಿಕೊಂಡಿರು ವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆ ಏನಂದರೆ--ಹೆಂಡತಿಯು ಗಂಡನನ್ನು ಬಿಟ್ಟು ಅಗಲ ಬಾರದು. ಒಂದು ವೇಳೆ ಅಗಲಿದರೂ ಮದುವೆ ಯಿಲ್ಲದೆ ಇರಬೇಕು, ಇಲ್ಲವೆ ಗಂಡನ ಸಂಗಡ ಸಮಾ ಧಾನವಾಗಬೇಕು; ಗಂಡನು ಹೆಂಡತಿಯನ್ನು ಬಿಡ ಬಾರದು.
- Proverbs 12:4 ಜ್ಞಾನೋಕ್ತಿಗಳು 12:4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ನಾಚಿಕೆಪಡಿಸುವವಳು ಅವನ ಎಲುಬುಗಳಿಗೆ ಕೊಳೆ ಯುವಿಕೆಯಂತೆ ಇರುವಳು.
- Psalm 45:10 ಕೀರ್ತನೆಗಳು 45:10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.