Genesis · chapter 2 · verse 3
Genesis 2:3 in Kannada
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
Devaru elaneya dinavannu aasheervadisi adannu pavitramaadidanu; yaakam dare aa dinadalli taanu srushtisida mattu maadida tanna ellaa kelasadinda vishramisikondanu.
Genesis 2:3 in English
- King James Version (KJV)
- And God blessed the seventh day, and sanctified it: because that in it he had rested from all his work which God created and made.
- World English Bible (WEB)
- God blessed the seventh day, and made it holy, because he rested in it from all his work of creation which he had done.
- American Standard Version (ASV)
- And God blessed the seventh day, and hallowed it; because that in it he rested from all his work which God had created and made.
- Bible in Basic English (BBE)
- And God gave his blessing to the seventh day and made it holy: because on that day he took his rest from all the work which he had made and done.
- Darby Translation (DBY)
- And God blessed the seventh day, and hallowed it, because that on it he rested from all his work which God had created in making it.
- Webster's Bible (WBS)
- And God blessed the seventh day, and sanctified it: because that in it he had rested from all his work which God created and made.
- Young's Literal Translation (YLT)
- And God blesseth the seventh day, and sanctifieth it, for in it He hath ceased from all His work which God had prepared for making.
Read in context
- 1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- 2ಏಳನೆಯ ದಿನದಲ್ಲಿ ದೇವರು ತಾನು ಮಾಡಿದ್ದ ತನ್ನ ಕೆಲಸವನ್ನು ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ತಾನು ಮಾಡಿದ್ದ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- 3ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
- 4ಇದೇ ಭೂಮ್ಯಾಕಾಶಗಳ ನಿರ್ಮಾಣಚರಿತ್ರೆ.
- 5ಕರ್ತನಾದ ದೇವರು ಭೂಮಿಯನ್ನೂ ಆಕಾಶಗಳನ್ನೂ ಉಂಟು ಮಾಡಿದ ದಿನದಲ್ಲಿ ಹೊಲದ ಯಾವ ಗಿಡವಾದರೂ ಭೂಮಿಯಲ್ಲಿ ಇನ್ನೂ ಬೆಳೆದಿರಲಿಲ್ಲ; ಹೊಲದ ಯಾವ ಪಲ್ಯವಾದರೂ ಇನ್ನೂ ಮೊಳೆತಿರಲಿಲ್ಲ; ಯಾಕಂದರೆ ಕರ್ತನಾದ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ; ಭೂಮಿಯನ್ನು ವ್ಯವಸಾಯ ಮಾಡು ವದಕ್ಕೆ ಮನುಷ್ಯನು ಇರಲಿಲ್ಲ.
Cross references
- Leviticus 23:3 ಯಾಜಕಕಾಂಡ 23:3ಆರು ದಿವಸ ಕೆಲಸಮಾಡಬೇಕು, ಆದರೆ ಏಳನೆಯ ದಿವಸವು ವಿಶ್ರಾಂತಿಯ ಸಬ್ಬತ್ ದಿವಸವಾಗಿ ಪರಿಶುದ್ಧ ಸಭಾಕೂಟವಾಗಿರುವದು; ನೀವು ಆ ದಿನ ದಲ್ಲಿ ಕೆಲಸಮಾಡಬಾರದು; ನಿಮ್ಮ ಎಲ್ಲಾ ನಿವಾಸಗಳಲ್ಲಿ ಅದು ಕರ್ತನ ಸಬ್ಬತ್ತಾಗಿರುವದು.
- Ezekiel 20:12 ಯೆಹೆಜ್ಕೇಲನು 20:12ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ ಅವರಿಗೂ ಗುರುತಾಗಿರುವದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.
- Mark 2:27 ಮಾರ್ಕನು 2:27ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- Exodus 31:13–17 ವಿಮೋಚನಕಾಂಡ 31:13–17ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಸಹ ಮಾತ ನಾಡಿ--ನಿಶ್ಚಯವಾಗಿ ನೀವು ನನ್ನ ಸಬ್ಬತ್ತುಗಳನ್ನು ಕೈಕೊಳ್ಳಬೇಕು. ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಗುರುತಾಗಿದೆ. ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು. ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Luke 23:56 ಲೂಕನು 23:56ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
- Exodus 35:2–3 ವಿಮೋಚನಕಾಂಡ 35:2–3ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧದಿನವಾಗಿಯೂ ಕರ್ತನಿಗೆ ವಿಶ್ರಾಂತಿಯ ಸಬ್ಬತ್ತಾಗಿಯೂ ಇರಬೇಕು. ಆ ದಿನದಲ್ಲಿ ಕೆಲಸ ಮಾಡುವವನು ಕೊಲ್ಲಲ್ಪಡಬೇಕು. ನೀವು ವಾಸಿಸುವ ಯಾವ ಸ್ಥಳದಲ್ಲಿಯಾದರೂ ಸಬ್ಬತ್ ದಿನದಲ್ಲಿ ಬೆಂಕಿಯನ್ನೂ ಹೊತ್ತಿಸಬಾರದು ಎಂದು ಹೇಳಿದನು.
- Exodus 34:21 ವಿಮೋಚನಕಾಂಡ 34:21ಆರು ದಿನಗಳು ಕೆಲಸಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ (ಏಳನೆಯ ದಿನದಲ್ಲಿ) ವಿಶ್ರಮಿಸಿಕೊಳ್ಳಬೇಕು.
- Leviticus 25:2–3 ಯಾಜಕಕಾಂಡ 25:2–3ಇಸ್ರಾಯೇಲ್ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು. ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.
- Jeremiah 17:21–27 ಯೆರೆಮೀಯ 17:21–27ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು. ನೀವು ನನ್ನನ್ನು ಜಾಗ್ರತೆಯಾಗಿ ಕೇಳಿ ಸಬ್ಬತ್ತಿನ ದಿನದಲ್ಲಿ ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತಕ್ಕೊಂಡುಬಾರದೆ ಸಬ್ಬತ್ತಿನ ದಿನದಲ್ಲಿ ಯಾವದೊಂದು ಕೆಲಸಮಾಡದೆ ಪರಿಶುದ್ಧ ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂಡ್ರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು ಯೆಹೂದದ ಮನುಷ್ಯರಾಗಿಯೂ ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು ಅವರೂ ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು; ಈ ಪಟ್ಟಣವು ಎಂದೆಂದಿಗೂ ನಿಲ್ಲು ವದು. ಇದಲ್ಲದೆ ಯೆಹೂದದ ಪಟ್ಟಣ ಗಳಿಂದಲೂ ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ ಬೆನ್ಯಾ ವಿಾನ್ ದೇಶದಿಂದಲೂ ಬೈಲಿನಿಂದಲೂ ಬೆಟ್ಟಗ ಳಿಂದಲೂ ದಕ್ಷಿಣದಿಂದಲೂ ದಹನಬಲಿಗಳನ್ನೂ ಬಲಿ ಗಳನ್ನೂ ಆಹಾರ ಅರ್ಪಣೆಗಳನ್ನೂ ಧೂಪವನ್ನೂ ತರುವರು; ಸ್ತೋತ್ರದರ್ಪಣೆಗಳನ್ನು ಕರ್ತನ ಆಲಯಕ್ಕೆ ತರುವರು.ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು. ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Nehemiah 9:14 ನೆಹೆಮೀಯ 9:14ನೀನು ಪರಿಶುದ್ಧ ಸಬ್ಬತ್ ದಿವಸವನ್ನು ಅವರಿಗೆ ತಿಳಿಸಿ ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಪ್ರಮಾಣವನ್ನೂ
- Isaiah 58:13–14 ಯೆಶಾಯ 58:13–14ನೀನು ಸಬ್ಬತ್ತಿನಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟ ವನ್ನು ಮಾಡದೇ ಹೋದರೆ ಸಬ್ಬತ್ತನ್ನು ಆನಂದಕರ ವಾದದ್ದೆಂದೂ ಕರ್ತನ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ ಸ್ವಂತ ಇಷ್ಟವನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ. ಆಗ ಕರ್ತನಲ್ಲಿ ಆನಂದಗೊಳ್ಳುವಿ; ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿ ಸುವಂತೆ ನಿನಗೆ ಮಾಡುವೆನು. ಕರ್ತನೇ ಇದನ್ನು ನುಡಿದಿದ್ದಾನೆ.
- Isaiah 56:2–7 ಯೆಶಾಯ 56:2–7ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು. ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.