Genesis · chapter 21 · verse 10
Genesis 21:10 in Kannada
ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
Abra haamanige--ee daasiyannoo avala maganannoo horage haaku; ee daasiya maganu nanna maganaada isaakana sangada baadhyanaagabaaradu andalu.
Genesis 21:10 in English
- King James Version (KJV)
- Wherefore she said unto Abraham, Cast out this bondwoman and her son: for the son of this bondwoman shall not be heir with my son, [even] with Isaac.
- World English Bible (WEB)
- Therefore she said to Abraham, “Cast out this servant and her son! For the son of this servant will not be heir with my son, Isaac.”
- American Standard Version (ASV)
- Wherefore she said unto Abraham, Cast out this handmaid and her son: for the son of this handmaid shall not be heir with my son, even with Isaac.
- Bible in Basic English (BBE)
- So she said to Abraham, Send away that woman and her son: for the son of that woman is not to have a part in the heritage with my son Isaac.
- Darby Translation (DBY)
- And she said to Abraham, Cast out this handmaid and her son; for the son of this handmaid shall not inherit with my son — with Isaac.
- Webster's Bible (WBS)
- Wherefore, she said to Abraham, Cast out this bond-woman, and her son: for the son of this bond-woman shall not be heir with my son, [even] with Isaac.
- Young's Literal Translation (YLT)
- and she saith to Abraham, 'Cast out this handmaid and her son; for the son of this handmaid hath no possession with my son — with Isaac.'
Read in context
- 8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- 9ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ
- 10ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- 11ಈ ಮಾತು ಅಬ್ರಹಾಮನಿಗೆ ಅವನ ಮಗನ ದೆಸೆಯಿಂದ ಬಹು ದುಃಖಕರವಾಗಿ ತೋಚಿತು.
- 12ಆಗ ದೇವರು ಅಬ್ರಹಾಮನಿಗೆ--ಹುಡುಗನ ಮತ್ತು ದಾಸಿಯ ದೆಸೆಯಿಂದ ನಿನಗೆ ವ್ಯಥೆಯಾಗದೆ ಇರಲಿ; ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು; ಯಾಕಂದರೆ ಇಸಾಕನಲ್ಲಿ ನಿನ್ನ ಸಂತತಿಯು ಕರೆಯಲ್ಪ ಡುವದು.
Cross references
- John 8:35 ಯೋಹಾನನು 8:35ಗುಲಾಮನು ಮನೆಯಲ್ಲಿ ಯಾವಾಗಲೂ ಇರುವದಿಲ್ಲ; ಆದರೆ ಮಗನು ಯಾವಾಗಲೂ ಇರುತ್ತಾನೆ.
- Galatians 4:22–31 ಗಲಾತ್ಯದವರಿಗೆ 4:22–31ಯಾಕಂದರೆ ದಾಸಿಯಿಂದ ಒಬ್ಬನು, ಸ್ವತಂತ್ರಳಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಬರೆಯಲ್ಪಟ್ಟಿದೆ. ದಾಸಿಯಿಂದ ಹುಟ್ಟಿದವನು ಶರೀರಕ್ಕನಸುಸಾರವಾಗಿ ಹುಟ್ಟಿದನು. ಆದರೆ ಸ್ವತಂತ್ರಳಿಂದ ಹುಟ್ಟಿದವನು ವಾಗ್ದಾನದ ಮೂಲಕ ಹುಟ್ಟಿದನು. ಈ ಸಂಗತಿಗಳು ಉಪಮಾನವಾಗಿವೆ; ಹೇಗಂದರೆ, ಇವರು ಎರಡು ಒಡಂಬಡಿಕೆಗಳೆ, ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉತ್ಪನ್ನವಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದ್ದು; ಅದೇ ಹಾಗರ್. ಹಾಗರ್ ಅಂದರೆ ಅರಬಸ್ಥಾನದಲ್ಲಿ ಸೀನಾಯಿ ಪರ್ವತ. ಆಕೆಯು ಈಗಿನ ಯೆರೂಸಲೇಮ್ ಎಂಬವಳಿಗೆ ಸರಿಬೀಳುತ್ತಾಳೆ; ಹೇಗಂದರೆ, ಈಕೆಯು ತನ್ನ ಮಕ್ಕಳ ಸಹಿತ ದಾಸತ್ವದಲ್ಲಿದ್ದಾಳೆ. ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Genesis 36:6–7 ಆದಿಕಾಂಡ 36:6–7ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಕುಮಾರ ಕುಮಾರ್ತೆಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಮನುಷ್ಯರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ದನಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು ತನ್ನ ಸಹೋದರನಾದ ಯಾಕೋಬನ ಎದುರಿನಿಂದ ಮತ್ತೊಂದು ದೇಶಕ್ಕೆ ಹೋದನು. ಅವರು ಕೂಡಿ ಇರುವದಕ್ಕೆ ಆಗದಷ್ಟು ಅವರ ಸಂಪತ್ತು ಅಭಿವೃದ್ಧಿ ಯಾಗಿತ್ತು. ಅವರ ಹಿಂಡುಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
- 1 Peter 1:4 1 ಪೇತ್ರನು 1:4ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
- Genesis 25:19 ಆದಿಕಾಂಡ 25:19ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Galatians 4:7 ಗಲಾತ್ಯದವರಿಗೆ 4:7ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ; ಮಗನೆಂದ ಮೇಲೆ ಕ್ರಿಸ್ತನ ಮೂಲಕ ದೇವರಿಗೆ ಬಾಧ್ಯನೂ ಆಗಿದ್ದೀ.
- Galatians 3:18 ಗಲಾತ್ಯದವರಿಗೆ 3:18ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Genesis 17:21 ಆದಿಕಾಂಡ 17:21ಆದರೆ ಬರುವ ವರುಷ ಈ ಕಾಲದಲ್ಲಿ ಸಾರಳು ನಿನಗೆ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು ಎಂದು ಹೇಳಿದನು.
- Genesis 22:10 ಆದಿಕಾಂಡ 22:10ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವದಕ್ಕೆ ಕತ್ತಿ ತೆಗೆದುಕೊಂಡನು.